ಜುಲೈ ಕೊನೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಬಹುನೀರಿಕ್ಷಿತ ಎಕ್ಸ್‌ಯುವಿ700

ಎಕ್ಸ್‌ಯುವಿ ಸರಣಿ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ಪರಿಚಯಿಸುತ್ತಿರುವ ಮಹೀಂದ್ರಾ ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಮುಂದಿನ ತಿಂಗಳು ಜುಲೈ ಕೊನೆಯಲ್ಲಿ ಖರೀದಿಗೆ ಲಭ್ಯವಿರಲಿದೆ ಎನ್ನಲಾಗಿದೆ.

ಜುಲೈ ಕೊನೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಬಹುನೀರಿಕ್ಷಿತ ಎಕ್ಸ್‌ಯುವಿ700

ಮಹೀಂದ್ರಾ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಎಕ್ಸ್‌ಯುವಿ500 ಕಾರಿನ ಹೊಸ ತಲೆಮಾರಿನ ಆವೃತ್ತಿಯನ್ನೇ ಎಕ್ಸ್‌ಯುವಿ700 ಮಾದರಿಯಾಗಿ ಮಾರಾಟ ಮಾಡಲು ನಿರ್ಧರಿಸಿದ್ದು, ಹೊಸ ಕಾರಿನ ಮಾಹಿತಿಯನ್ನು ಈಗಾಗಲೇ ಅಧಿಕೃತ ವೆಬ್‌ಸೈಟ್‌ನಲ್ಲೂ ಪ್ರದರ್ಶನಗೊಳಿಸುವ ಮೂಲಕ ಮಧ್ಯಮ ಕ್ರಮಾಂಕದ ಎಸ್‌‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಜುಲೈ ಕೊನೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಬಹುನೀರಿಕ್ಷಿತ ಎಕ್ಸ್‌ಯುವಿ700

ಹೊಸ ಎಕ್ಸ್‌ಯುವಿ700 ಬಿಡುಗಡೆ ನಂತರ ಕೆಲವು ದಿನಗಳ ಕಾಲ ಸ್ಥಗಿತಗೊಳ್ಳಲಿರುವ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಮಾದರಿಯು ಎಕ್ಸ್‌ಯುವಿ700 ಬಿಡುಗಡೆಯ ನಂತರವಷ್ಟೇ ಕೆಲವು ಬದಲಾವಣೆಗಳೊಂದಿಗೆ ಮತ್ತೆ ಮಾರುಕಟ್ಟೆ ಪ್ರವೇಶಿಸಲಿದೆ.

ಜುಲೈ ಕೊನೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಬಹುನೀರಿಕ್ಷಿತ ಎಕ್ಸ್‌ಯುವಿ700

ಹೊಸ ಎಕ್ಸ್‌ಯುವಿ700 ಕಾರು ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ವಿವಿಧ ಎಂಜಿನ್ ಆಯ್ಕೆಯಲ್ಲಿ ಒಟ್ಟು 11 ವೆರಿಯೆಂಟ್‌ಗಳನ್ನು ಪಡೆದುಕೊಳ್ಳಲಿದ್ದು, ಡೀಸೆಲ್ ಮತ್ತು ಪೆಟ್ರೋಲ್ ಮಾದರಿಗಳನ್ನು ಹೊಂದಿರುವ ಹೊಸ ಕಾರಿನಲ್ಲಿ ಡೀಸೆಲ್ ಪವರ್‌ಫುಲ್ ಎಂಜಿನ್ ಆಯ್ಕೆ ಹೊಂದಿರಲಿದೆ.

ಜುಲೈ ಕೊನೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಬಹುನೀರಿಕ್ಷಿತ ಎಕ್ಸ್‌ಯುವಿ700

2.2-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಸದ್ಯ ಕಂಪನಿಯು 180 ಬಿಎಚ್‌ಪಿ, 190 ಬಿಎಚ್‌ಪಿ ಮತ್ತು 210 ಬಿಎಚ್‌ಪಿ ಟ್ಯೂನ್ ಮೂಲಕ ಪರೀಕ್ಷೆ ನಡೆಸಲಾಗುತ್ತಿದ್ದು, ಹೊಸ ಕಾರು ಉತ್ಪಾದನಾ ಮಾದರಿಯಲ್ಲಿ 180-ಬಿಎಚ್‌ಪಿ ಮಾದರಿಯನ್ನು ಪಡೆದುಕೊಳ್ಳುವ ನೀರಿಕ್ಷೆಗಳಿವೆ.

ಜುಲೈ ಕೊನೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಬಹುನೀರಿಕ್ಷಿತ ಎಕ್ಸ್‌ಯುವಿ700

ಹೊಸ ಕಾರಿನಲ್ಲಿ ನೀಡಲಾಗುತ್ತಿರುವ ಪೆಟ್ರೋಲ್ ಎಂಜಿನ್ ಮಾಹಿತಿ ಲಭ್ಯವಿಲ್ಲವಾದರೂ ಥಾರ್ ಮಾದರಿಯಲ್ಲಿ ನೀಡಲಾಗಿರುವ 2.0-ಲೀಟರ್ ಪೆಟ್ರೋಲ್ ಹೊಂದುವ ಸಾಧ್ಯತೆಗಳಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ ವಿವಿಧ ಹಂತದ ಬಿಎಚ್‌ಪಿ ಉತ್ಪಾದನಾ ಮಾದರಿಗಳನ್ನು ಸಿದ್ದಪಡಿಸಲಾಗುತ್ತಿದೆ.

ಜುಲೈ ಕೊನೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಬಹುನೀರಿಕ್ಷಿತ ಎಕ್ಸ್‌ಯುವಿ700

ಇನ್ನು ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ500 ಮಾದರಿಯನ್ನು ಎಕ್ಸ್‌ಯುವಿ700 ಮಾದರಿಗಿಂತಲೂ ಕೆಳ ಸ್ಥಾನದಲ್ಲಿ ಮಾರಾಟಗೊಳಿಸಲು ನಿರ್ಧರಿಸಲಾಗಿದ್ದು, ಎಕ್ಸ್‌ಯುವಿ700 ಮಾದರಿಯನ್ನು 7 ಸೀಟರ್ ಮಾದರಿಯೊಂದಿಗೆ ಮತ್ತು ಎಕ್ಸ್‌ಯುವಿ500 ಮಾದರಿಯನ್ನು ಹೊಸ ಬದಲಾವಣೆಯೊಂದಿಗೆ 5 ಸೀಟರ್ ಮಾದರಿಯಾಗಿ ಮಾರಾಟಗೊಳಿಸಲಿದೆ.

ಜುಲೈ ಕೊನೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಬಹುನೀರಿಕ್ಷಿತ ಎಕ್ಸ್‌ಯುವಿ700

ಎಕ್ಸ್‌ಯುವಿ700 ಬಿಡುಗಡೆಯ ನಂತರ ಎಕ್ಸ್‌ಯುವಿ500 ಮಾದರಿಯನ್ನು ಕೆಲ ದಿನಗಳ ಕಾಲ ಸ್ಥಗಿತಗೊಳಿಸಲಿರುವ ಮಹೀಂದ್ರಾ ಕಂಪನಿಯು ಸದ್ಯ ಲಭ್ಯವಿರುವಂತಹ 7 ಸೀಟರ್ ಸೌಲಭ್ಯವನ್ನು ತೆಗೆದುಹಾಕಿ ಆರಾಮದಾಯಕ ಕ್ಯಾಬಿನ್ ರೂಂ ಹೊಂದಿರುವ 5 ಸೀಟರ್ ಮಾದರಿಯನ್ನಾಗಿ ಮರುಬಿಡುಗಡೆ ಮಾಡಲಿದೆ.

ಜುಲೈ ಕೊನೆಯಲ್ಲಿ ಬಿಡುಗಡೆಯಾಗಲಿದೆ ಮಹೀಂದ್ರಾ ಬಹುನೀರಿಕ್ಷಿತ ಎಕ್ಸ್‌ಯುವಿ700

ಈ ಮೂಲಕ 5 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್‌ಯುವಿ500 ಮತ್ತು 7 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್‌ಯುವಿ700 ಮಾರಾಟ ಮಾಡಲಿದ್ದು, ಇತ್ತೀಚೆಗೆ ಟಾಟಾ ಸಫಾರಿ, ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿರುವ ಹಿನ್ನಲೆಯಲ್ಲಿ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಈ ಬದಲಾವಣೆ ತಂದಿದೆ.

More from DriveSpark

Article Published On: Saturday, June 12, 2021, 11:04 [IST]
English summary
Mahindra Planning To Introduce XUV500 Successor XUV700 SUV In July 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+