Just In
- 11 hrs ago
ಹೊಸ ಫೀಚರ್ಸ್ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್ವ್ಯಾಗನ್ ಪೊಲೊ
- 13 hrs ago
ಫೋರ್ಡ್ ಮುಸ್ಟಾಂಗ್ ಕಾರಿನಂತೆ ಮಾಡಿಫೈಗೊಂಡ ಬಲೆನೊ ಸೆಡಾನ್ ಕಾರು
- 15 hrs ago
ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!
- 1 day ago
ಎಕ್ಸ್ಯುವಿ700 ಎಸ್ಯುವಿ ಕಾರಿನ ಮತ್ತಷ್ಟು ಹೊಸ ಮಾಹಿತಿ ಹಂಚಿಕೊಂಡ ಮಹೀಂದ್ರಾ
Don't Miss!
- Sports
ಐಪಿಎಲ್ 2021: ಕೊಲ್ಕತ್ತಾ ವಿರುದ್ಧದ ಸೋಲಿಗೆ ಕಾರಣ ಹೇಳಿದ ಡೇವಿಡ್ ವಾರ್ನರ್
- News
ಕರ್ಫ್ಯೂ ನಡುವೆಯೂ ಮೋಜು ಮಸ್ತಿ! ಪಾರ್ಟಿ ಮಾಡುತ್ತಿದ್ದ ಗ್ಯಾಂಗ್ ಕಂಬಿ ಹಿಂದೆ..!
- Movies
ಸೋನು ಸೂದ್ಗೆ ವಿಶೇಷ ಗೌರವ ನೀಡಿದ ಪಂಜಾಬ್ ಸರ್ಕಾರ
- Finance
ಟಾಪ್ 10ರಲ್ಲಿ 4 ಕಂಪನಿಗಳ ಮೌಲ್ಯ 1.14 ಲಕ್ಷ ಕೋಟಿ ರುಗೇರಿಕೆ
- Lifestyle
ವಾರ ಭವಿಷ್ಯ:ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಥಾರ್ ಎಸ್ಯುವಿ ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ ಮಹೀಂದ್ರಾ
ಮಹೀಂದ್ರಾ ಕಂಪನಿಯು ಕಳೆದ ವರ್ಷ ಅಕ್ಟೋಬರ್ 2ರಂದು ಹೊಸ ತಲೆಮಾರಿನ ಥಾರ್ ಎಸ್ಯುವಿ ಬಿಡುಗಡೆಯ ಮೂಲಕ ಆಫ್ ರೋಡ್ ಎಸ್ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಇದೀಗ ಹೊಸ ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಹೊಸ ತಲೆಮಾರಿನ ಥಾರ್ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ಮಹೀಂದ್ರಾ ಕಂಪನಿಯು ಶೀಘ್ರದಲ್ಲೇ ಥಾರ್ ಕಾರಿನ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ವೆರಿಯೆಂಟ್ ಅನ್ನು ಸಿಲ್ವರ್ ಬಣ್ಣದೊಂದಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ. ಆದರೆ ಹೊಸ ಮಾದರಿಯು ಕೇವಲ ಹೊಸ ಬಣ್ಣದ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆಯಾ ಅಥವಾ ಹೊಸ ವೆರಿಯೆಂಟ್ ಪಡೆದುಕೊಳ್ಳುತ್ತಾ ಎನ್ನುವ ಸ್ಪಷ್ಟ ಮಾಹಿತಿಗಳಿಲ್ಲ.

ಆದರೆ ಕೆಲವು ಮಾಹಿತಿಗಳ ಪ್ರಕಾರ ಥಾರ್ ಹೊಸ ಕಾರಿನಲ್ಲಿ ಕನ್ವರ್ಟಿಬಲ್ ಹಾರ್ಡ್ ಟಾಪ್ ಬಿಡುಗಡೆ ಮಾಡಬಹುದೆಂಬ ಮಾಹಿತಿಗಳಿದ್ದು, ಶೀಘ್ರದಲ್ಲೇ ಹೊಸ ಥಾರ್ ಮಾದರಿಯು ಅಧಿಕೃತವಾಗಿ ಖರೀದಿ ಲಭ್ಯವಾಗಲಿದೆ.

ಥಾರ್ ಆರಂಭಿಕ ಆವೃತ್ತಿಯ ಸ್ಥಗಿತದ ನಂತರ ಹೊಸ ಎಂಟ್ರಿ ಲೆವಲ್ ಮಾದರಿಯನ್ನು ಪರಿಚಯಿಸುತ್ತಿರಬಹುದು ಎನ್ನುವ ಕೆಲವು ಮಾಹಿತಿಗಳಿದ್ದು, ಹೊಸ ಮಾದರಿಯು ಮುಂಬರುವ ಕೆಲವೇ ದಿನಗಳಲ್ಲಿ ಬಿಡುಗಡೆಯ ಉದ್ದೇಶದಿಂದ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸುತ್ತಿದೆ.

ಇನ್ನು ಗ್ರಾಹಕರ ಬೇಡಿಕೆಯೆಂತೆ ಥಾರ್ ಆರಂಭಿಕ ಆವೃತ್ತಿಗಳಾದ ಎಎಕ್ಸ್ ಪೆಟ್ರೋಲ್ ಸ್ಟ್ಯಾಂಡರ್ಡ್ ಸಿಕ್ಸ್ ಸೀಟರ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಡೀಸೆಲ್ ಸಾಫ್ಟ್ ಟಾಪ್ ಮಾದರಿಗಳನ್ನು ಸ್ಥಗಿತಗೊಳಿಸಿರುವ ಕಂಪನಿಯು ಹೈ ಎಂಡ್ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಗಮನಹರಿಸಿದೆ. ವೆರಿಯೆಂಟ್ ಬದಲಾವಣೆ ನಂತರ ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.10 ಲಕ್ಷದಿಂದ ಟಾಪ್ ಮಾದರಿಯು ರೂ. 14.15 ಲಕ್ಷ ಬೆಲೆ ಪಡೆದುಕೊಂಡಿದ್ದು, ಬೆಲೆ ಬದಲಾವಣೆಯ ನಂತರ ಆರಂಭಿಕ ಕಾರು ಮಾದರಿಯು ಮತ್ತಷ್ಟು ದುಬಾರಿಯಾಗಲಿದೆ.
ಕ್ಲಾಸಿಕ್ ಬೈಕ್ ಪ್ರಿಯರಿಗಾಗಿ ಬಿಡುಗಡೆಯಾದ ರಾಯಲ್ ಎನ್ಫೀಲ್ಡ್ ಹೊಸ ಮಿಟಿಯೊರ್ 350 ಹೇಗಿದೆ? ಈ ವಿಡಿಯೋ ನೋಡಿ..
ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದೆ ಎನ್ನಬಹುದು.

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.
MOST READ: ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್ಬೋರ್ಡ್ನೊಂದಿಗೆ ಆ್ಯಪಲ್ ಕಾರ್ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ ನೀಡಲಾಗಿದೆ.

ಹಾಗೆಯೇ ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.