Just In
- 1 hr ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 3 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 13 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 15 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- News
ಅಭಿವೃದ್ಧಿ ಯೋಜನೆಗಳು; ಪರಿಸರವಾದಿಗಳ ವಿರುದ್ಧ ಜನಾಕ್ರೋಶ
- Movies
ವಿಶೇಷ ಭಾನುವಾರ: ಮನೋರಂಜನಾ ಲೋಕದಲ್ಲಿ 'ಮದ-ಗಜ'ಗಳ ಕಾದಾಟ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಂಜಿನ್‌ನಲ್ಲಿ ತಾಂತ್ರಿಕ ದೋಷ- ನ್ಯೂ ಜನರೇಷನ್ ಥಾರ್ ಹಿಂಪಡೆದ ಮಹೀಂದ್ರಾ
ಮಹೀಂದ್ರಾ ಕಂಪನಿಯ ನ್ಯೂ ಜನರೇಷನ್ ಥಾರ್ ಕಾರು ಮಾರಾಟದಲ್ಲಿ ಹಲವು ಹೊಸ ದಾಖಲೆಗಳಿಗೆ ಕಾರಣವಾಗುತ್ತಿದ್ದು, ನ್ಯೂ ಜನರೇಷನ್ ಕಾರು ಮಾರಾಟದಲ್ಲಿ ಭಾರೀ ಬೇಡಿಕೆ ಸಲ್ಲಿಕೆಯಾಗುತ್ತಿರುವ ಸಂದರ್ಭದಲ್ಲೇ ಹೊಸ ಕಾರಿನ ಡೀಸೆಲ್ ಮಾದರಿಗಳಲ್ಲಿ ತಾಂತ್ರಿಕ ದೋಷ ಪತ್ತೆಯಾಗಿದೆ.

ಆಫ್ ರೋಡ್ ಕಾರುಗಳಲ್ಲೇ ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವ ನ್ಯೂ ಜನರೇಷನ್ ಥಾರ್ ಕಾರಿನ ಡೀಸೆಲ್ ಮಾದರಿಯ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾಗಿದ್ದು, ಸಮಸ್ಯೆ ಕುರಿತು ಈಗಾಗಲೇ ಗ್ರಾಹಕರಿಗೆ ಮಾಹಿತಿ ತಲುಪಿಸಿರುವ ಕಂಪನಿಯು ನಿಗದಿತ ಸಮಯದಲ್ಲಿ ತಾಂತ್ರಿಕ ಸಮಸ್ಯೆಯನ್ನು ಅಧಿಕೃತ ಡೀಲರ್ಸ್‌ಗಳಲ್ಲಿ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಸರಿಪಡಿಸಿಕೊಳ್ಳುವಂತೆ ಮನವಿ ಮಾಡಿದೆ.

ಥಾರ್ ಕಾರಿನ ಡೀಸೆಲ್ ಮಾದರಿಯಲ್ಲಿನ ಕ್ಯಾಮ್‌ಶಾಫ್ಟ್ಸ್‌ಗಳ ದೋಷದಿಂದ ಎಂಜಿನ್ ಕಾರ್ಯಕ್ಷಮತೆ ಪರಿಣಾಮ ಬೀರುತ್ತಿದ್ದು, ಈ ಕುರಿತು ಗ್ರಾಹಕರ ದೂರಗಳಿಗೆ ಸ್ವಂದಿಸಿರುವ ಕಂಪನಿಯು 1,577 ಯುನಿಟ್ ಮಾದರಿಗಳಲ್ಲಿನ ತಾಂತ್ರಿಕ ದೋಷವನ್ನು ಪತ್ತೆಹಚ್ಚಿದೆ.

2020ರ ಸೆಪ್ಟೆಂಬರ್ 7 ಮತ್ತು ಡಿಸೆಂಬರ್ 25 ಅವಧಿಯಲ್ಲಿ ನಿರ್ಮಾಣವಾದ ಥಾರ್ ಕಾರುಗಳಲ್ಲಿ ಕ್ಯಾಮ್‌ಶಾಫ್ಟ್ಸ್‌ಗಳ ದೋಷವು ಪತ್ತೆಯಾಗಿದ್ದು, ಪೆಟ್ರೋಲ್ ಮಾದರಿಗಳಲ್ಲಿನ ಕ್ಯಾಮ್‌ಶಾಫ್ಟ್ಸ್‌ಗಳ ನಿರ್ವಹಣೆಯು ಉತ್ತಮವಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಿದೆ.

ಕ್ಯಾಮ್‌ಶಾಫ್ಟ್ಸ್‌ಗಳ ದೋಷವು ಕಾರುಗಳ ಪಿಕ್ಅಪ್ ಮೇಲೆ ಪರಿಣಾಮ ಉಂಟುಮಾಡುವುದಲ್ಲದೆ ಇಂಧನ ದಕ್ಷತೆಗೂ ಅದು ಹಿನ್ನಡೆ ಉಂಟು ಮಾಡಲಿದ್ದು, ಈಗಾಗಲೇ ಕಾರು ಹಿಂಪಡೆಯುವಿಕೆ ಅಭಿಯಾನದಲ್ಲಿ ತಾಂತ್ರಿಕ ದೋಷ ಸರಿಪಡಿಸಿಕೊಂಡಿರುವ ಗ್ರಾಹಕರು ಹೊಸ ಕಾರಿನ ಪರ್ಫಾಮೆನ್ಸ್ ಅನುಭವ ಹಂಚಿಕೊಳ್ಳುವ ಮೂಲಕ ಮೊದಲಿನ ಎಂಜಿನ್ ಕಾರ್ಯಕ್ಷಮತೆಗೂ ಹಾಗೂ ಸಮಸ್ಯೆಗೆ ಪರಿಹಾರ ಸಿಕ್ಕ ನಂತರದ ಎಂಜಿನ್ ಪರ್ಫಾಮೆನ್ಸ್ ಸಾಕಷ್ಟು ಸುಧಾರಣೆಯಾಗಿದೆ ಎಂದಿದ್ದಾರೆ.

ಇನ್ನು ನ್ಯೂ ಜನರೇಷನ್ ಥಾರ್ ಹೊಸ ಕಾರಿಗೆ ಇದುವರೆಗೆ ಸುಮಾರು 35 ಸಾವಿರಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ಸಲ್ಲಿಸಿದ್ದು, ಇದುವರೆಗೆ ಕಂಪನಿಯು 6 ಸಾವಿರಕ್ಕೂ ಹೆಚ್ಚು ಯುನಿಟ್‌ಗಳನ್ನ ವಿತರಣೆ ಮಾಡಿದೆ.

ವಿವಿಧ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.10 ಲಕ್ಷದಿಂದ ಟಾಪ್ ಮಾದರಿಯು ರೂ. 14.15 ಲಕ್ಷ ಬೆಲೆ ಪಡೆದುಕೊಂಡಿದೆ.

ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಹೊಸ ಥಾರ್ ಕಾರಿಗೆ ಮತ್ತಷ್ಟು ಬೇಡಿಕೆ ಹರಿದುಬರುತ್ತಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಆಫ್ ರೋಡಿಂಗ್ ವೈಶಿಷ್ಟ್ಯತೆಯೊಂದಿಗೆ ತನ್ನದೆ ಆದ ಜನಪ್ರಿಯೆತೆ ಹೊಂದಿರುವ ಥಾರ್ ಕಾರು ಮಾದರಿಯು ಸಾಮಾನ್ಯ ಕಾರು ಮಾದರಿಗಳಂತೆ ಬೇಡಿಕೆ ಮುಂಚೂಣಿ ಸಾಧಿಸುತ್ತಿದ್ದು, ನ್ಯೂ ಜನರೇಷನ್ ಥಾರ್ ಖರೀದಿ ಮಾಡಿರುವ ಗ್ರಾಹಕರಲ್ಲಿ ಬಹುತೇಕರು ಹೊಸದಾಗಿ ಆಫ್ ಕೌಶಲ್ಯದ ಆಸಕ್ತಿಯೊಂದಿಗೆ ಥಾರ್ ಮಾಲೀಕತ್ವ ಪಡೆದುಕೊಂಡವರಾಗಿದ್ದಾರೆ.

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ ಜೊತೆಗೆ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದೆ.