ಹೊಸ XUV700 ಎಸ್‌ಯುವಿ ವಿತರಣೆ ಮಾಹಿತಿ ಹಂಚಿಕೊಂಡ Mahindra

ಮಹೀಂದ್ರಾ(Mahindra) ಕಂಪನಿಯು ತನ್ನ ಹೊಸ ಎಕ್ಸ್‌ಯುವಿ700(XUV700) ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ಬಿಡುಗಡೆಯಾದ ಕೆಲವು ಗಂಟೆಗಳಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ಮೂಲಕ ಹೊಸ ದಾಖಲೆಗೆ ಕಾರಣವಾಗಿದೆ.

ಹೊಸ XUV700 ಎಸ್‌ಯುವಿ ವಿತರಣೆ ಮಾಹಿತಿ ಹಂಚಿಕೊಂಡ Mahindra

ಹೊಸ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆಗೊಳಿಸಿದ ಮೊದಲ ದಿನವೇ 25 ಸಾವಿರ ಬುಕ್ಕಿಂಗ್ ಮತ್ತು ಎರಡನೇ ದಿನದ ಬುಕ್ಕಿಂಗ್ ಅವಧಿಯಲ್ಲಿ ಮತ್ತೆ 25 ಸಾವಿರ ಬುಕ್ಕಿಂಗ್ ಪಡೆದುಕೊಳ್ಳುವ ಮೂಲಕ ಒಟ್ಟು 50 ಸಾವಿರ ಬುಕ್ಕಿಂಗ್ ಪಡೆದುಕೊಳ್ಳುವ ಮೂಲಕ ಹೊಸ ದಾಖಲೆಗೆ ಕಾರಣವಾಗಿದ್ದು, ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿಯಲ್ಲಿದೆ.

ಹೊಸ XUV700 ಎಸ್‌ಯುವಿ ವಿತರಣೆ ಮಾಹಿತಿ ಹಂಚಿಕೊಂಡ Mahindra

ಹೊಸ ಕಾರಿನ ಬೇಡಿಕೆಗೆ ಅನುಗುಣವಾಗಿ ಉತ್ಪಾದನಾ ಪ್ರಮಾಣವನ್ನು ಕೂಡಾ ಹೆಚ್ಚಿಸಿರುವ ಮಹೀಂದ್ರಾ ಕಂಪನಿಯು ಈ ತಿಂಗಳಾಂತ್ಯಕ್ಕೆ ಹೊಸ ಕಾರಿನ ವಿತರಣೆಯನ್ನು ಆರಂಭಿಸಲಿದೆ. ಕಂಪನಿಯು ಮೊದಲು ಪೆಟ್ರೋಲ್ ಮಾದರಿಯನ್ನು ವಿತರಣೆ ಮಾಡಲಿದ್ದು, ತದನಂತರ ಡೀಸೆಲ್ ಮಾದರಿಗಳನ್ನು ವಿತರಣೆ ಮಾಡಲಿದೆ.

ಹೊಸ XUV700 ಎಸ್‌ಯುವಿ ವಿತರಣೆ ಮಾಹಿತಿ ಹಂಚಿಕೊಂಡ Mahindra

ಈ ತಿಂಗಳು ಕೊನೆಯ ವಾರದಲ್ಲಿ ಪೆಟ್ರೋಲ್ ಮಾದರಿಗಳ ವಿತರಣೆಯು ಆರಂಭವಾಗಲಿದ್ದರೆ ಮುಂದಿನ ತಿಂಗಳು ನವೆಂಬರ್ ಕೊನೆಯ ವಾರದಲ್ಲಿ ಡೀಸೆಲ್ ಕಾರುಗಳ ವಿತರಣೆ ಆರಂಭವಾಗಲಿದ್ದು, ಹೊಸ ಕಾರಿನ ಬೆಲೆಯು ಮೊದಲ 25 ಸಾವಿರ ಯುನಿಟ್ ಪಡೆಯುವ ಗ್ರಾಹಕರಿಗೆ ಒಂದು ಬೆಲೆಯಾದರೆ 25 ಸಾವಿರ ಬುಕ್ಕಿಂಗ್ ನಂತರ ಕಾರು ಖರೀದಿಸಲು ಬುಕ್ಕಿಂಗ್ ಸಲ್ಲಿಸಿರುವ ಗ್ರಾಹಕರಿಗೆ ತುಸು ದುಬಾರಿಯಾಗಿರಲಿದೆ.

ಹೊಸ XUV700 ಎಸ್‌ಯುವಿ ವಿತರಣೆ ಮಾಹಿತಿ ಹಂಚಿಕೊಂಡ Mahindra

ಕಂಪನಿಯು ತನ್ನ ಕಾರು ಉತ್ಪಾದನಾ ಸಾಮರ್ಥ್ಯದ ಮೇಲೆ ವಿತರಣೆ ಮಾಡಬೇಕಿರುವುದರಿಂದ ಹೊಸ ಕಾರಿನ ಬೆಲೆಯಲ್ಲಿ ಕೆಲವು ಬದಲಾವಣೆ ಪ್ರಕಟಿಸಿದ್ದು, ಮೊದಲ 25 ಸಾವಿರ ಗ್ರಾಹಕರಿಗೆ ಅನ್ವಯವಾಗುವಂತೆ ಒಂದು ದರ ಮತ್ತು ತದನಂತರ ಬುಕ್ಕಿಂಗ್ ದಾಖಲಿಸಿದ 25 ಸಾವಿರ ಗ್ರಾಹಕರಿಗೆ ದರ ಹೆಚ್ಚಿಸಿ ಹೊಸ ದರ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ.

ಹೊಸ XUV700 ಎಸ್‌ಯುವಿ ವಿತರಣೆ ಮಾಹಿತಿ ಹಂಚಿಕೊಂಡ Mahindra

50 ಸಾವಿರ ಯುನಿಟ್ ನಂತರ ಬುಕ್ಕಿಂಗ್ ದಾಖಲಿಸುತ್ತಿರುವ ಗ್ರಾಹಕರಿಗೆ ಹೊಸ ಕಾರು ಮತ್ತಷ್ಟು ದುಬಾರಿಯಾಗಿರುವ ಬಗ್ಗೆ ಕಂಪನಿಯೇ ಮಾಹಿತಿ ನೀಡಿದ್ದು, ಮೊದಲ 50 ಸಾವಿರ ಯುನಿಟ್ ವಿತರಣೆ ನಂತರವೇ ಮುಂದಿನ ಯುನಿಟ್‌ಗಳ ದರ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ಹೊಸ XUV700 ಎಸ್‌ಯುವಿ ವಿತರಣೆ ಮಾಹಿತಿ ಹಂಚಿಕೊಂಡ Mahindra

ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಮಾರಾಟಗೊಳ್ಳಲಿದ್ದು, ಬರೋಬ್ಬರಿ 21 ವೆರಿಯೆಂಟ್ ಹೊಂದಿರುವ ಹೊಸ ಕಾರಿನ ಮೊದಲ 25 ಸಾವಿರ ಯುನಿಟ್ ಖರೀದಿಸುವ ಗ್ರಾಹಕರಿಗೆ ಕಂಪನಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 22.89 ಲಕ್ಷಕ್ಕೆ ವಿತರಣೆ ಮಾಡಲಿದೆ.

ಹೊಸ XUV700 ಎಸ್‌ಯುವಿ ವಿತರಣೆ ಮಾಹಿತಿ ಹಂಚಿಕೊಂಡ Mahindra

25 ಸಾವಿರ ಯುನಿಟ್ ನಂತರ ಹೊಸ ಕಾರು ವಿತರಣೆ ಪಡೆದುಕೊಳ್ಳಲಿರುವ ಗ್ರಾಹಕರಿಗೆ ಹೊಸ ಕಾರಿನ ಬೆಲೆಯು ಆರಂಭಿಕವಾಗಿ ರೂ. 12.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 22.99 ಲಕ್ಷ ಅನ್ವಯವಾಗಲಿದೆ.

ಹೊಸ XUV700 ಎಸ್‌ಯುವಿ ವಿತರಣೆ ಮಾಹಿತಿ ಹಂಚಿಕೊಂಡ Mahindra

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳೊಂದಿಗೆ ಆಕರ್ಷಕ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಹೊಂದಿದ್ದು, ಕಂಪನಿಯೇ ಜೋಡಣೆ ಮಾಡುವ 7 ಸೀಟರ್ ಮಾದರಿಗಳನ್ನು ಹೊರತುಪಡಿಸಿ 5 ಸೀಟರ್ ಹೊಂದಿರುವ ಮಾದರಿಗಳಲ್ಲಿ 7 ಸೀಟರ್ ಬಯಸುವ ಗ್ರಾಹಕರು ಹೆಚ್ಚುವರಿ ರೂ. 70 ಸಾವಿರ ಪಾವತಿ ಮಾಡಬೇಕಾಗುತ್ತದೆ.

ಹೊಸ XUV700 ಎಸ್‌ಯುವಿ ವಿತರಣೆ ಮಾಹಿತಿ ಹಂಚಿಕೊಂಡ Mahindra

ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

ಹೊಸ XUV700 ಎಸ್‌ಯುವಿ ವಿತರಣೆ ಮಾಹಿತಿ ಹಂಚಿಕೊಂಡ Mahindra

2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(6-ಸ್ಪೀಡ್ ಎಂಟಿ),450-ಎನ್ಎಂ ಟಾರ್ಕ್(6-ಸ್ಪೀಡ್ ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಹೊಸ XUV700 ಎಸ್‌ಯುವಿ ವಿತರಣೆ ಮಾಹಿತಿ ಹಂಚಿಕೊಂಡ Mahindra

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಹೊಸ XUV700 ಎಸ್‌ಯುವಿ ವಿತರಣೆ ಮಾಹಿತಿ ಹಂಚಿಕೊಂಡ Mahindra

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಹೊಸ XUV700 ಎಸ್‌ಯುವಿ ವಿತರಣೆ ಮಾಹಿತಿ ಹಂಚಿಕೊಂಡ Mahindra

ಹಾಗೆಯೇ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ಹೊಸ XUV700 ಎಸ್‌ಯುವಿ ವಿತರಣೆ ಮಾಹಿತಿ ಹಂಚಿಕೊಂಡ Mahindra

ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

Article Published On: Monday, October 11, 2021, 16:30 [IST]
English summary
Mahindra revealed xuv700 suv delivery timeline
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+