ಫೆಬ್ರವರಿ ತಿಂಗಳಿನಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಎಸ್‍ಯುವಿ ಮಾರಾಟದಲ್ಲಿ ಶೇ.134ರಷ್ಟು ಹೆಚ್ಚಳ

ಜನಪ್ರಿಯ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ಕಳೆದ ತಿಂಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ. ಕಳೆದ ತಿಂಗಳು ಒಟ್ಟಾರೆ ಮಾರಾಟಲ್ಲಿ ಶೇ.43 ರಷ್ಟು ಬೆಳವಣಿಗೆಯನ್ನು ಸಾಧಿಸುವಲ್ಲಿ ಮಹೀಂದ್ರಾ ಕಂಪನಿಯು ಯಶಸ್ವಿಯಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಎಸ್‍ಯುವಿ ಮಾರಾಟದಲ್ಲಿ ಶೇ.134ರಷ್ಟು ಹೆಚ್ಚಳ

ಮಹೀಂದ್ರಾ ಕಂಪನಿಯ ಒಟ್ಟು ಮಾರಾಟದಲ್ಲಿ ಸ್ಕಾರ್ಪಿಯೋ ಎಸ್‍ಯುವಿಯು ಉತ್ತಮ ಕೊಡುಗೆಯನ್ನು ನೀಡಿದೆ, ಕಳೆದ ತಿಂಗಳಲ್ಲಿ ಸ್ಕಾರ್ಪಿಯೋ ಎಸ್‍ಯುವಿಯ 3,532 ಯುನಿಟ್‌ಗಳು ಮಾರಾಟವಾಗಿವೆ. ಮಹೀಂದ್ರಾ ಕಂಪನಿಯ ಸರಣಿಯಲ್ಲಿ ಅತಿ ಹೆಚ್ಚು ಮಾರಾಟವಾದ ಎರಡನೇ ಮಾದರಿಯಾಗಿದೆ. ಮೊದಲ ಸ್ಥಾನವನ್ನು ಬೊಲೆರೊ ಪಡೆದುಕೊಂಡಿದೆ. ಕಳೆದ ತಿಂಗಳು ಬೊಲೆರೊ ಎಸ್‍ಯುವಿಯ 4,843 ಯುನಿಟ್‌ಗಳು ಮಾರಾಟವಾಗಿವೆ.

ಫೆಬ್ರವರಿ ತಿಂಗಳಿನಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಎಸ್‍ಯುವಿ ಮಾರಾಟದಲ್ಲಿ ಶೇ.134ರಷ್ಟು ಹೆಚ್ಚಳ

ಕಳೆದ ವರ್ಷದ ಫೆಬ್ರವರಿ ತಿಂಗಳಲ್ಲಿ ಸ್ಕಾರ್ಪಿಯೋದ ಒಟ್ಟು 1,505 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಸ್ಕಾರ್ಪಿಯೋ ಶೇ.134.68 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಫೆಬ್ರವರಿ ತಿಂಗಳಿನಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಎಸ್‍ಯುವಿ ಮಾರಾಟದಲ್ಲಿ ಶೇ.134ರಷ್ಟು ಹೆಚ್ಚಳ

ಮಹೀಂದ್ರಾ ಸ್ಕಾರ್ಪಿಯೋ ಎಸ್‍ಯುವಿ ಬಗ್ಗೆ ಹೇಳುವುದಾದರೆ, ಈ ಎಸ್‍ಯುವಿಯು ಬಹಳ ದೀರ್ಘಕಾಲದಿಂದ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಭಾರತೀಯ ಮಾರುಕಟ್ಟೆಯ ಜನಪ್ರಿಯ ಎಸ್‍ಯುವಿಗಳಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಕೂಡ ಒಂದಾಗಿದೆ. ಮಹೀಂದ್ರಾ ಕಂಪನಿಯ ಸರಣಿಯ ಕಾರು ಮಾರಾಟದಲ್ಲಿ ಸ್ಕಾರ್ಪಿಯೋ ಎಸ್‍‍ಯುವಿಯ ಕೊಡುಗೆಯು ದೊಡ್ಡದು.

ಫೆಬ್ರವರಿ ತಿಂಗಳಿನಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಎಸ್‍ಯುವಿ ಮಾರಾಟದಲ್ಲಿ ಶೇ.134ರಷ್ಟು ಹೆಚ್ಚಳ

ಮಹೀಂದ್ರಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಸ್ಕಾರ್ಪಿಯೋ ಬಿಡುಗಡೆಗೊಳಿಸಿದ ನಂತರ ಎರಡು ಬಾರಿ ನವೀಕರಣಗೊಳಿಸಿದೆ. ಕಂಪನಿಯು ಸ್ಕಾರ್ಪಿಯೋ ಎಸ್‍‍ಯುವಿಯನ್ನು 2006ರಲ್ಲಿ ಮತ್ತು 2014ರಲ್ಲಿ ನವೀಕರಣಗೊಳಿಸಿತ್ತು.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಫೆಬ್ರವರಿ ತಿಂಗಳಿನಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಎಸ್‍ಯುವಿ ಮಾರಾಟದಲ್ಲಿ ಶೇ.134ರಷ್ಟು ಹೆಚ್ಚಳ

ಬಿಎಸ್-6 ಸ್ಕಾರ್ಪಿಯೋ ಎಸ್‍ಯುವಿಯು ಎಸ್3, ಎಸ್5, ಎಸ್7, ಎಸ್9 ಮತ್ತು ಎಸ್11 ಎಂಬ ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಎಸ್3 ರೂಪಾಂತರವು ಎಂಟ್ರಿ-ಲೆವೆಲ್ ಆದರೆ ಎಸ್11 ಟಾಪ್-ಎಂಡ್ ಎಡಬ್ಲ್ಯೂಡಿ ರೂಪಾಂತರವಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಎಸ್‍ಯುವಿ ಮಾರಾಟದಲ್ಲಿ ಶೇ.134ರಷ್ಟು ಹೆಚ್ಚಳ

ಹೊಸ ಸ್ಕಾರ್ಪಿಯೋ 2.2 ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 140 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಫೆಬ್ರವರಿ ತಿಂಗಳಿನಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಎಸ್‍ಯುವಿ ಮಾರಾಟದಲ್ಲಿ ಶೇ.134ರಷ್ಟು ಹೆಚ್ಚಳ

ಈ ಸ್ಕಾರ್ಪಿಯೋ ಎಸ್‍ಯುವಿಯಲ್ಲಿ 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರೇರ್ ಪಾರ್ಕಿಂಗ್ ಕ್ಯಾಮೆರಾ, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟರ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರೇರ್ ಎಸಿ ವೆಂಟ್ಸ್ ಗಳನ್ನು ಹೊಂದಿದೆ.

ಫೆಬ್ರವರಿ ತಿಂಗಳಿನಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಎಸ್‍ಯುವಿ ಮಾರಾಟದಲ್ಲಿ ಶೇ.134ರಷ್ಟು ಹೆಚ್ಚಳ

ಇದರೊಂದಿಗೆ ಎಮರ್ಜೆನ್ಸಿ ಕಾಲ್, ಫ್ರಂಟ್ ಫಾಗ್ ಲ್ಯಾಂಪ್, ಇಂಟಿಗ್ರೇಟಡ್ ಇಂಡೀಕೆಟರ್ ಸಿಗ್ನಲ್, ಸ್ಟೀಯರಿಂಗ್ ಮೌಂಟಡ್ ಕಂಟ್ರೋಲ್, ಆಂಟಿ-ಪಿಂಚ್ ಮತ್ತು ಒನ್-ಪ್ರೆಸ್ ರೈಸಿಂಗ್ ಡ್ರೈವರ್ ವಿಂಡೋ, ಬ್ಲೂಟೂತ್, ಯುಎಸ್‌ಬಿ ಮತ್ತು ಎಯುಎಕ್ಸ್‌ನೊಂದಿಗೆ 7.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಗೇರ್-ಶಿಫ್ಟ್ ಇಂಡೀಕೆಟರ್ಮತ್ತು ಇತರ ಫೀಚರ್ ಗಳನ್ನು ಒಳಗೊಂಡಿವೆ.

More from DriveSpark

Article Published On: Wednesday, March 10, 2021, 17:35 [IST]
English summary
Mahindra Scorpio Registers Over 134% Sales Growth. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+