ಕ್ರ್ಯಾಶ್ ಟೆಸ್ಟಿಂಗ್ ನಂತರ ಅತಿ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಮಹೀಂದ್ರಾ ಥಾರ್

ಮಹೀಂದ್ರಾ ಕಂಪನಿಯು ಕಳೆದ ಅಕ್ಟೋಬರ್ ಮೊದಲ ವಾರದಲ್ಲಿ ತನ್ನ ಬಹುನೀರಿಕ್ಷಿತ ಥಾರ್ ಕಾರು ಮಾದರಿಯನ್ನು ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಿತ್ತು. ಹೊಸ ಕಾರು ಇದುವರೆಗೆ ಬರೋಬ್ಬರಿ ಸುಮಾರು 25 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದ್ದು, ಬುಕ್ಕಿಂಗ್ ಸಂಖ್ಯೆ ಹೆಚ್ಚಿದಂತೆ ಗ್ರಾಹಕರ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳವಾಗುತ್ತಿದೆ.

ಕ್ರ್ಯಾಶ್ ಟೆಸ್ಟಿಂಗ್ ನಂತರ ಅತಿ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಮಹೀಂದ್ರಾ ಥಾರ್

ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಹೊಸ ಥಾರ್ ಕಾರಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿರುವ ಮಹೀಂದ್ರಾ ಕಂಪನಿಯು ಕಳೆದ ಡಿಸೆಂಬರ್ ಅವಧಿಯಲ್ಲೇ ಸುಮಾರು 6,500 ಯುನಿಟ್ ಕಾರುಗಳಿಗೆ ಗ್ರಾಹಕರು ಬುಕ್ಕಿಂಗ್ ಸಲ್ಲಿಸಿದ್ದಾರೆ. ಬೇಡಿಕೆ ಹೆಚ್ಚಿರುವ ಹಿನ್ನಲೆಯಲ್ಲಿ ನಾಸಿಕ್ ಕಾರು ಘಟಕದಲ್ಲಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದ್ದು, ಬುಕ್ಕಿಂಗ್ ನಂತರ ಹೊಸ ಕಾರು ಪಡೆದುಕೊಳ್ಳಲು ಸದ್ಯ ಕನಿಷ್ಠ 5 ರಿಂದ 8 ತಿಂಗಳು ಕಾಯಲೇಬೇಕಿದೆ.

ಕ್ರ್ಯಾಶ್ ಟೆಸ್ಟಿಂಗ್ ನಂತರ ಅತಿ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಮಹೀಂದ್ರಾ ಥಾರ್

ಕಾಯುವಿಕೆ ಅವಧಿಯು ಥಾರ್ ಕಾರಿನ ವೆರಿಯೆಂಟ್‌ಗಳಿಗೆ ಅನುಗುಣವಾಗಿ ನಿರ್ಧಾರವಾಗಲಿದ್ದು, ಸಾಫ್ಟ್ ಟಾಪ್ ಮಾದರಿಗಳು ಕಡಿಮೆ ಅವಧಿಯಲ್ಲಿ ವಿತರಣೆಯಾಗಲಿದ್ದರೆ ಡೀಸೆಲ್ ಆಟೋಮ್ಯಾಟಿಕ್ ಹಾರ್ಡ್ ಟಾಪ್ ಮಾದರಿಗಳ ಖರೀದಿಗೆ ಹೆಚ್ಚು ಕಾಯಬೇಕಿದೆ.

ಕ್ರ್ಯಾಶ್ ಟೆಸ್ಟಿಂಗ್ ನಂತರ ಅತಿ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಮಹೀಂದ್ರಾ ಥಾರ್

ಆಫ್ ರೋಡಿಂಗ್ ವೈಶಿಷ್ಟ್ಯತೆಯೊಂದಿಗೆ ತನ್ನದೆ ಆದ ಜನಪ್ರಿಯೆತೆ ಹೊಂದಿರುವ ಥಾರ್ ಕಾರು ಮಾದರಿಯು ಸಾಮಾನ್ಯ ಕಾರು ಮಾದರಿಗಳಂತೆ ಬೇಡಿಕೆ ಮುಂಚೂಣಿ ಸಾಧಿಸುತ್ತಿದ್ದು, ನ್ಯೂ ಜನರೇಷನ್ ಥಾರ್ ಖರೀದಿ ಮಾಡಿರುವ ಗ್ರಾಹಕರಲ್ಲಿ ಬಹುತೇಕರು ಹೊಸದಾಗಿ ಆಫ್ ಕೌಶಲ್ಯದ ಆಸಕ್ತಿಯೊಂದಿಗೆ ಥಾರ್ ಮಾಲೀಕತ್ವ ಪಡೆದುಕೊಂಡವರಾಗಿದ್ದಾರೆ.

ಕ್ರ್ಯಾಶ್ ಟೆಸ್ಟಿಂಗ್ ನಂತರ ಅತಿ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಮಹೀಂದ್ರಾ ಥಾರ್

ಶೇ.57ರಷ್ಟು ಗ್ರಾಹಕರು ಹೊಸದಾಗಿ ಆಫ್ ರೋಡಿಂಗ್ ಕಾರು ಖರೀದಿ ಮಾಡುತ್ತಿರುವ ಗ್ರಾಹಕರಾಗಿದ್ದು, ಮ್ಯಾನುವಲ್‌ಗಿಂತಲೂ ಹೆಚ್ಚು ಆಟೋಮ್ಯಾಟಿಕ್ ಡೀಸೆಲ್ ಮಾದರಿಗಳಿಗೆ ಹೆಚ್ಚು ಬೇಡಿಕೆ ಹರಿದುಬಂದಿದೆ. ಹೊಸ ಥಾರ್ ಕಾರು ಮಾದರಿಯು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ.

ಕ್ರ್ಯಾಶ್ ಟೆಸ್ಟಿಂಗ್ ನಂತರ ಅತಿ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಮಹೀಂದ್ರಾ ಥಾರ್

ಗ್ರಾಹಕರ ಬೇಡಿಕೆಯೆಂತೆ ಥಾರ್ ಆರಂಭಿಕ ಆವೃತ್ತಿಗಳಾದ ಎಎಕ್ಸ್ ಪೆಟ್ರೋಲ್ ಸ್ಟ್ಯಾಂಡರ್ಡ್ ಸಿಕ್ಸ್ ಸೀಟರ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಡೀಸೆಲ್ ಸಾಫ್ಟ್ ಟಾಪ್ ಮಾದರಿಗಳನ್ನು ಸ್ಥಗಿತಗೊಳಿಸಿರುವ ಕಂಪನಿಯು ಹೈ ಎಂಡ್ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಗಮನಹರಿಸಿದೆ.

ಕ್ರ್ಯಾಶ್ ಟೆಸ್ಟಿಂಗ್ ನಂತರ ಅತಿ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಮಹೀಂದ್ರಾ ಥಾರ್

ವೆರಿಯೆಂಟ್ ಬದಲಾವಣೆ ನಂತರ ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.90 ಲಕ್ಷದಿಂದ ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದ್ದು, ಅತ್ಯುತ್ತಮ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ.

ಕ್ರ್ಯಾಶ್ ಟೆಸ್ಟಿಂಗ್ ನಂತರ ಅತಿ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಮಹೀಂದ್ರಾ ಥಾರ್

ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಕ್ರ್ಯಾಶ್ ಟೆಸ್ಟಿಂಗ್ ನಂತರ ಅತಿ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಮಹೀಂದ್ರಾ ಥಾರ್

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

ಕ್ರ್ಯಾಶ್ ಟೆಸ್ಟಿಂಗ್ ನಂತರ ಅತಿ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಮಹೀಂದ್ರಾ ಥಾರ್

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಕ್ರ್ಯಾಶ್ ಟೆಸ್ಟಿಂಗ್ ನಂತರ ಅತಿ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಮಹೀಂದ್ರಾ ಥಾರ್

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.

Most Read Articles

Kannada
English summary
Mahindra Thar Bookings Cross 6,500 Units In December 2020. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X