ಬಿಡುಗಡೆಯ ನಂತರ ಮೊದಲ ಬಾರಿಗೆ ನ್ಯೂ ಜನರೇಷನ್ ಥಾರ್ ಬೆಲೆ ಹೆಚ್ಚಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಕಳೆದ ಅಕ್ಟೋಬರ್‌ನಲ್ಲಿ ಬಿಡುಗಡೆಗೊಳಿಸಿದ್ದ ನ್ಯೂ ಜನರೇಷನ್ ಥಾರ್ ಎಸ್‌ಯುವಿ ಕಾರಿನ ಬೆಲೆ ಏರಿಕೆ ಮಾಡಿದ್ದು, ಹೊಸ ವರ್ಷದ ಸಂಭ್ರಮದಲ್ಲಿ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ.

ನ್ಯೂ ಜನರೇಷನ್ ಥಾರ್ ಬೆಲೆ ಹೆಚ್ಚಿಸಿದ ಮಹೀಂದ್ರಾ

ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಗೊಂಡಿರುವ ಹೊಸ ಥಾರ್ ಕಾರು ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಯ ನಂತರ ಇದುವರೆಗೆ ಬರೋಬ್ಬರಿ ಸುಮಾರು 25 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದೆ. ಹೊಸ ಕಾರಿಗೆ ಹೆಚ್ಚಿನ ಪ್ರಮಾಣದ ಬೇಡಿಕೆ ಸಲ್ಲಿಕೆಯಾಗುತ್ತಿರುವ ಸಂದರ್ಭದಲ್ಲೇ ಮಹೀಂದ್ರಾ ಕಂಪನಿಯು ಕಾರಿನ ಬೆಲೆ ಹೆಚ್ಚಕ್ಕೆ ನಿರ್ಧರಿಸಿದ್ದು, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳ ನಿರ್ವಹಣೆಗಾಗಿ ಬೆಲೆ ಏರಿಕೆ ಅನಿವಾರ್ಯ ಎಂದಿದೆ.

ನ್ಯೂ ಜನರೇಷನ್ ಥಾರ್ ಬೆಲೆ ಹೆಚ್ಚಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಬಿಡುಗಡೆ ಮಾಡಿರುವ ಥಾರ್ ಹೊಸ ಕಾರಿನ ಬೆಲೆ ಪಟ್ಟಿಯಲ್ಲಿ ಬಹುತೇಕ ವೆರಿಯೆಂಟ್‌ಗಳಲ್ಲಿ ಬೆಲೆ ಏರಿಕೆಯಾಗಿದ್ದು, ಆರಂಭಿಕವಾಗಿ ರೂ. 20 ಸಾವಿರ ಮತ್ತು ಟಾಪ್ ಎಂಡ್ ಮಾದರಿಗಳು ರೂ.40 ಸಾವಿರ ತನಕ ಬೆಲೆ ಏರಿಕೆ ಪಡೆದುಕೊಂಡಿವೆ.

ನ್ಯೂ ಜನರೇಷನ್ ಥಾರ್ ಬೆಲೆ ಹೆಚ್ಚಿಸಿದ ಮಹೀಂದ್ರಾ

ಹೊಸ ದರ ಪಟ್ಟಿ ಪ್ರಕಾರ ಥಾರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.10 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.14.15 ಲಕ್ಷ ಬೆಲೆ ಹೊಂದಿದ್ದು, ಬೆಲೆ ಏರಿಕೆ ನಂತರ ತಾಂತ್ರಿಕ ಅಂಶಗಳಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ.

ವೆರಿಯೆಂಟ್‌ಗಳು ಹೊಸ ದರ ಹಳೆಯ ದರ
ಎಕ್ಸ್ (ಓ) ಪೆಟ್ರೋಲ್ ಎಂಟಿ ಸಿಟಿ ರೂ. 12,10,337 ರೂ. 11,90,000
ಎಎಕ್ಸ್ (ಓ) ಡೀಸೆಲ್ ಎಂಟಿ ಸಿಟಿ ರೂ. 12,30,337 ರೂ. 12,10,000
ಎಎಕ್ಸ್ (ಓ) ಡೀಸೆಲ್ ಎಂಟಿ ಹೆಚ್‌ಟಿ ರೂ. 12,40,337 ರೂ. 12,20,000
ಎಲ್ಎಕ್ಸ್ ಪೆಟ್ರೋಲ್ ಎಂಟಿ ಹೆಚ್‌ಟಿ ರೂ. 12,79,337 ರೂ. 12,49,000
ಎಲ್ಎಕ್ಸ್ ಡೀಸೆಲ್ ಎಂಟಿ ಸಿಟಿ ರೂ. 13,15,336 ರೂ. 12,85,000
ಎಲ್ಎಕ್ಸ್ ಡೀಸೆಲ್ ಎಂಟಿ ಹೆಚ್‌ಟಿ ರೂ. 13,25,337 ರೂ. 12,95,000
ಎಲ್ಎಕ್ಸ್ ಪೆಟ್ರೋಲ್ ಎಟಿ ಸಿಟಿ ರೂ. 13,85,337 ರೂ. 13,45,000
ಎಲ್ಎಕ್ಸ್ ಪೆಟ್ರೋಲ್ ಎಟಿ ಹೆಚ್‌ಟಿ ರೂ. 13,95,336 ರೂ. 13,55,000
ಎಲ್ಎಕ್ಸ್ ಡೀಸೆಲ್ ಎಟಿ ಸಿಟಿ ರೂ. 14,05,336 ರೂ. 13,65,000
ಎಲ್ಎಕ್ಸ್ ಡೀಸೆಲ್ ಎಟಿ ಹೆಚ್‌ಟಿ ರೂ. 14,15,338 ರೂ. 13,75,000
ನ್ಯೂ ಜನರೇಷನ್ ಥಾರ್ ಬೆಲೆ ಹೆಚ್ಚಿಸಿದ ಮಹೀಂದ್ರಾ

ಇನ್ನು ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಹೊಸ ಥಾರ್ ಕಾರಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿರುವ ಮಹೀಂದ್ರಾ ಕಂಪನಿಯು ಬೇಡಿಕೆಗೆ ತಕ್ಕಂತೆ ಉತ್ಪಾದನೆಯನ್ನು ಹೆಚ್ಚಳ ಮಾಡಿದ್ದು, ಮಾಹಾರಾಷ್ಟ್ರದಲ್ಲಿರುವ ನಾಸಿಕ್ ಕಾರು ಘಟಕದಲ್ಲಿ ಉತ್ಪಾದನಾ ಪ್ರಮಾಣವನ್ನು ಪ್ರತಿ ತಿಂಗಳು 2 ಸಾವಿರ ಯುನಿಟ್‌ನಿಂದ 3 ಸಾವಿರ ಯುನಿಟ್‌ಗಳಿಗೆ ಹೆಚ್ಚಳ ಮಾಡಲಾಗಿದೆ.

ನ್ಯೂ ಜನರೇಷನ್ ಥಾರ್ ಬೆಲೆ ಹೆಚ್ಚಿಸಿದ ಮಹೀಂದ್ರಾ

ಆಫ್ ರೋಡಿಂಗ್ ವೈಶಿಷ್ಟ್ಯತೆಯೊಂದಿಗೆ ತನ್ನದೆ ಆದ ಜನಪ್ರಿಯೆತೆ ಹೊಂದಿರುವ ಥಾರ್ ಕಾರು ಮಾದರಿಯು ಸಾಮಾನ್ಯ ಕಾರು ಮಾದರಿಗಳಂತೆ ಬೇಡಿಕೆ ಮುಂಚೂಣಿ ಸಾಧಿಸುತ್ತಿದ್ದು, ನ್ಯೂ ಜನರೇಷನ್ ಥಾರ್ ಖರೀದಿ ಮಾಡಿರುವ ಗ್ರಾಹಕರಲ್ಲಿ ಬಹುತೇಕರು ಹೊಸದಾಗಿ ಆಫ್ ಕೌಶಲ್ಯದ ಆಸಕ್ತಿಯೊಂದಿಗೆ ಥಾರ್ ಮಾಲೀಕತ್ವ ಪಡೆದುಕೊಂಡವರಾಗಿದ್ದಾರೆ.

ನ್ಯೂ ಜನರೇಷನ್ ಥಾರ್ ಬೆಲೆ ಹೆಚ್ಚಿಸಿದ ಮಹೀಂದ್ರಾ

ಶೇ.57ರಷ್ಟು ಗ್ರಾಹಕರು ಹೊಸದಾಗಿ ಆಫ್ ರೋಡಿಂಗ್ ಕಾರು ಖರೀದಿ ಮಾಡುತ್ತಿರುವ ಗ್ರಾಹಕರಾಗಿದ್ದು, ಮ್ಯಾನುವಲ್‌ಗಿಂತಲೂ ಹೆಚ್ಚು ಆಟೋಮ್ಯಾಟಿಕ್ ಡೀಸೆಲ್ ಮಾದರಿಗಳಿಗೆ ಹೆಚ್ಚು ಬೇಡಿಕೆ ಹರಿದುಬಂದಿದೆ. ಹೊಸ ಥಾರ್ ಕಾರು ಮಾದರಿಯು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ.

ನ್ಯೂ ಜನರೇಷನ್ ಥಾರ್ ಬೆಲೆ ಹೆಚ್ಚಿಸಿದ ಮಹೀಂದ್ರಾ

ಗ್ರಾಹಕರ ಬೇಡಿಕೆಯೆಂತೆ ಥಾರ್ ಆರಂಭಿಕ ಆವೃತ್ತಿಗಳಾದ ಎಎಕ್ಸ್ ಪೆಟ್ರೋಲ್ ಸ್ಟ್ಯಾಂಡರ್ಡ್ ಸಿಕ್ಸ್ ಸೀಟರ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಡೀಸೆಲ್ ಸಾಫ್ಟ್ ಟಾಪ್ ಮಾದರಿಗಳನ್ನು ಸ್ಥಗಿತಗೊಳಿಸಿರುವ ಕಂಪನಿಯು ಹೈ ಎಂಡ್ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಗಮನಹರಿಸಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ನ್ಯೂ ಜನರೇಷನ್ ಥಾರ್ ಬೆಲೆ ಹೆಚ್ಚಿಸಿದ ಮಹೀಂದ್ರಾ

ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.

ನ್ಯೂ ಜನರೇಷನ್ ಥಾರ್ ಬೆಲೆ ಹೆಚ್ಚಿಸಿದ ಮಹೀಂದ್ರಾ

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ನ್ಯೂ ಜನರೇಷನ್ ಥಾರ್ ಬೆಲೆ ಹೆಚ್ಚಿಸಿದ ಮಹೀಂದ್ರಾ

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

ನ್ಯೂ ಜನರೇಷನ್ ಥಾರ್ ಬೆಲೆ ಹೆಚ್ಚಿಸಿದ ಮಹೀಂದ್ರಾ

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.

Article Published On: Monday, January 11, 2021, 9:10 [IST]
English summary
Mahindra Thar Prices Hiked By Up To Rs 40,000. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+