Just In
- 11 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 12 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 13 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 13 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯ ನಂತರ ಮೊದಲ ಬಾರಿಗೆ ನ್ಯೂ ಜನರೇಷನ್ ಥಾರ್ ಬೆಲೆ ಹೆಚ್ಚಿಸಿದ ಮಹೀಂದ್ರಾ
ಮಹೀಂದ್ರಾ ಕಂಪನಿಯು ಕಳೆದ ಅಕ್ಟೋಬರ್ನಲ್ಲಿ ಬಿಡುಗಡೆಗೊಳಿಸಿದ್ದ ನ್ಯೂ ಜನರೇಷನ್ ಥಾರ್ ಎಸ್ಯುವಿ ಕಾರಿನ ಬೆಲೆ ಏರಿಕೆ ಮಾಡಿದ್ದು, ಹೊಸ ವರ್ಷದ ಸಂಭ್ರಮದಲ್ಲಿ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ.
ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಗೊಂಡಿರುವ ಹೊಸ ಥಾರ್ ಕಾರು ಎಸ್ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಯ ನಂತರ ಇದುವರೆಗೆ ಬರೋಬ್ಬರಿ ಸುಮಾರು 25 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದೆ. ಹೊಸ ಕಾರಿಗೆ ಹೆಚ್ಚಿನ ಪ್ರಮಾಣದ ಬೇಡಿಕೆ ಸಲ್ಲಿಕೆಯಾಗುತ್ತಿರುವ ಸಂದರ್ಭದಲ್ಲೇ ಮಹೀಂದ್ರಾ ಕಂಪನಿಯು ಕಾರಿನ ಬೆಲೆ ಹೆಚ್ಚಕ್ಕೆ ನಿರ್ಧರಿಸಿದ್ದು, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳ ನಿರ್ವಹಣೆಗಾಗಿ ಬೆಲೆ ಏರಿಕೆ ಅನಿವಾರ್ಯ ಎಂದಿದೆ.
ಮಹೀಂದ್ರಾ ಕಂಪನಿಯು ಬಿಡುಗಡೆ ಮಾಡಿರುವ ಥಾರ್ ಹೊಸ ಕಾರಿನ ಬೆಲೆ ಪಟ್ಟಿಯಲ್ಲಿ ಬಹುತೇಕ ವೆರಿಯೆಂಟ್ಗಳಲ್ಲಿ ಬೆಲೆ ಏರಿಕೆಯಾಗಿದ್ದು, ಆರಂಭಿಕವಾಗಿ ರೂ. 20 ಸಾವಿರ ಮತ್ತು ಟಾಪ್ ಎಂಡ್ ಮಾದರಿಗಳು ರೂ.40 ಸಾವಿರ ತನಕ ಬೆಲೆ ಏರಿಕೆ ಪಡೆದುಕೊಂಡಿವೆ.
ಹೊಸ ದರ ಪಟ್ಟಿ ಪ್ರಕಾರ ಥಾರ್ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.10 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.14.15 ಲಕ್ಷ ಬೆಲೆ ಹೊಂದಿದ್ದು, ಬೆಲೆ ಏರಿಕೆ ನಂತರ ತಾಂತ್ರಿಕ ಅಂಶಗಳಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ.
ವೆರಿಯೆಂಟ್ಗಳು | ಹೊಸ ದರ | ಹಳೆಯ ದರ |
ಎಕ್ಸ್ (ಓ) ಪೆಟ್ರೋಲ್ ಎಂಟಿ ಸಿಟಿ | ರೂ. 12,10,337 | ರೂ. 11,90,000 |
ಎಎಕ್ಸ್ (ಓ) ಡೀಸೆಲ್ ಎಂಟಿ ಸಿಟಿ | ರೂ. 12,30,337 | ರೂ. 12,10,000 |
ಎಎಕ್ಸ್ (ಓ) ಡೀಸೆಲ್ ಎಂಟಿ ಹೆಚ್ಟಿ | ರೂ. 12,40,337 | ರೂ. 12,20,000 |
ಎಲ್ಎಕ್ಸ್ ಪೆಟ್ರೋಲ್ ಎಂಟಿ ಹೆಚ್ಟಿ | ರೂ. 12,79,337 | ರೂ. 12,49,000 |
ಎಲ್ಎಕ್ಸ್ ಡೀಸೆಲ್ ಎಂಟಿ ಸಿಟಿ | ರೂ. 13,15,336 | ರೂ. 12,85,000 |
ಎಲ್ಎಕ್ಸ್ ಡೀಸೆಲ್ ಎಂಟಿ ಹೆಚ್ಟಿ | ರೂ. 13,25,337 | ರೂ. 12,95,000 |
ಎಲ್ಎಕ್ಸ್ ಪೆಟ್ರೋಲ್ ಎಟಿ ಸಿಟಿ | ರೂ. 13,85,337 | ರೂ. 13,45,000 |
ಎಲ್ಎಕ್ಸ್ ಪೆಟ್ರೋಲ್ ಎಟಿ ಹೆಚ್ಟಿ | ರೂ. 13,95,336 | ರೂ. 13,55,000 |
ಎಲ್ಎಕ್ಸ್ ಡೀಸೆಲ್ ಎಟಿ ಸಿಟಿ | ರೂ. 14,05,336 | ರೂ. 13,65,000 |
ಎಲ್ಎಕ್ಸ್ ಡೀಸೆಲ್ ಎಟಿ ಹೆಚ್ಟಿ | ರೂ. 14,15,338 | ರೂ. 13,75,000 |
ಇನ್ನು ಗ್ಲೊಬಲ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಹೊಸ ಥಾರ್ ಕಾರಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿರುವ ಮಹೀಂದ್ರಾ ಕಂಪನಿಯು ಬೇಡಿಕೆಗೆ ತಕ್ಕಂತೆ ಉತ್ಪಾದನೆಯನ್ನು ಹೆಚ್ಚಳ ಮಾಡಿದ್ದು, ಮಾಹಾರಾಷ್ಟ್ರದಲ್ಲಿರುವ ನಾಸಿಕ್ ಕಾರು ಘಟಕದಲ್ಲಿ ಉತ್ಪಾದನಾ ಪ್ರಮಾಣವನ್ನು ಪ್ರತಿ ತಿಂಗಳು 2 ಸಾವಿರ ಯುನಿಟ್ನಿಂದ 3 ಸಾವಿರ ಯುನಿಟ್ಗಳಿಗೆ ಹೆಚ್ಚಳ ಮಾಡಲಾಗಿದೆ.
ಆಫ್ ರೋಡಿಂಗ್ ವೈಶಿಷ್ಟ್ಯತೆಯೊಂದಿಗೆ ತನ್ನದೆ ಆದ ಜನಪ್ರಿಯೆತೆ ಹೊಂದಿರುವ ಥಾರ್ ಕಾರು ಮಾದರಿಯು ಸಾಮಾನ್ಯ ಕಾರು ಮಾದರಿಗಳಂತೆ ಬೇಡಿಕೆ ಮುಂಚೂಣಿ ಸಾಧಿಸುತ್ತಿದ್ದು, ನ್ಯೂ ಜನರೇಷನ್ ಥಾರ್ ಖರೀದಿ ಮಾಡಿರುವ ಗ್ರಾಹಕರಲ್ಲಿ ಬಹುತೇಕರು ಹೊಸದಾಗಿ ಆಫ್ ಕೌಶಲ್ಯದ ಆಸಕ್ತಿಯೊಂದಿಗೆ ಥಾರ್ ಮಾಲೀಕತ್ವ ಪಡೆದುಕೊಂಡವರಾಗಿದ್ದಾರೆ.
ಶೇ.57ರಷ್ಟು ಗ್ರಾಹಕರು ಹೊಸದಾಗಿ ಆಫ್ ರೋಡಿಂಗ್ ಕಾರು ಖರೀದಿ ಮಾಡುತ್ತಿರುವ ಗ್ರಾಹಕರಾಗಿದ್ದು, ಮ್ಯಾನುವಲ್ಗಿಂತಲೂ ಹೆಚ್ಚು ಆಟೋಮ್ಯಾಟಿಕ್ ಡೀಸೆಲ್ ಮಾದರಿಗಳಿಗೆ ಹೆಚ್ಚು ಬೇಡಿಕೆ ಹರಿದುಬಂದಿದೆ. ಹೊಸ ಥಾರ್ ಕಾರು ಮಾದರಿಯು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ.
ಗ್ರಾಹಕರ ಬೇಡಿಕೆಯೆಂತೆ ಥಾರ್ ಆರಂಭಿಕ ಆವೃತ್ತಿಗಳಾದ ಎಎಕ್ಸ್ ಪೆಟ್ರೋಲ್ ಸ್ಟ್ಯಾಂಡರ್ಡ್ ಸಿಕ್ಸ್ ಸೀಟರ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಡೀಸೆಲ್ ಸಾಫ್ಟ್ ಟಾಪ್ ಮಾದರಿಗಳನ್ನು ಸ್ಥಗಿತಗೊಳಿಸಿರುವ ಕಂಪನಿಯು ಹೈ ಎಂಡ್ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಗಮನಹರಿಸಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ
ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.
ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್ಬೋರ್ಡ್ನೊಂದಿಗೆ ಆ್ಯಪಲ್ ಕಾರ್ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.
ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.