ಆಫ್ ರೋಡ್ ಎಸ್‌ಯುವಿ ಕಾರು ಮಾರಾಟದಲ್ಲಿ ಥಾರ್ ಕಾರಿಗೆ ಭರ್ಜರಿ ಬೇಡಿಕೆ

ಹೊಸ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಆಫ್ ರೋಡ್ ಎಸ್‌ಯುವಿ ಕಾರು ಮಾರಾಟದಲ್ಲಿ ಸದ್ದು ಮಾಡುತ್ತಿರುವ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಕಾರು ಮಾದರಿಯು ಬಿಡುಗಡೆಗೊಂಡ ಕೆಲವೇ ದಿನಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಆಫ್ ರೋಡ್ ಎಸ್‌ಯುವಿ ಕಾರು ಮಾರಾಟದಲ್ಲಿ ಥಾರ್ ಕಾರಿಗೆ ಭರ್ಜರಿ ಬೇಡಿಕೆ

ಮಹೀಂದ್ರಾ ಕಂಪನಿಯು 2020ರ ಅಕ್ಟೋಬರ್ 2ರಂದು ಥಾರ್ ಎಸ್‌ಯುವಿ ಕಾರು ಮಾದರಿಯನ್ನು ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಿತ್ತು. ಹೊಸ ಕಾರು ಇದುವರೆಗೆ ಬರೋಬ್ಬರಿ ಸುಮಾರು 55 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದ್ದು, ದಿನಂಪ್ರತಿ 250ರಿಂದ 309 ಗ್ರಾಹಕರು ಸರಾಸರಿಯಾಗಿ ಹೊಸ ಕಾರು ಖರೀದಿಗೆ ಬುಕ್ಕಿಂಗ್ ದಾಖಲಿಸುತ್ತಿದ್ದಾರೆ.

ಆಫ್ ರೋಡ್ ಎಸ್‌ಯುವಿ ಕಾರು ಮಾರಾಟದಲ್ಲಿ ಥಾರ್ ಕಾರಿಗೆ ಭರ್ಜರಿ ಬೇಡಿಕೆ

ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಹೊಸ ಥಾರ್ ಕಾರಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿರುವ ಮಹೀಂದ್ರಾ ಕಂಪನಿಯು ಕಳೆದ ಎರಡು ತಿಂಗಳ ಅವಧಿಯಲ್ಲಿ ಹೆಚ್ಚಿನ ಮಟ್ಟದ ಬುಕ್ಕಿಂಗ್ ಪಡೆದುಕೊಂಡಿದೆ.

ಆಫ್ ರೋಡ್ ಎಸ್‌ಯುವಿ ಕಾರು ಮಾರಾಟದಲ್ಲಿ ಥಾರ್ ಕಾರಿಗೆ ಭರ್ಜರಿ ಬೇಡಿಕೆ

ಬೇಡಿಕೆ ಹೆಚ್ಚಿರುವ ಹಿನ್ನಲೆಯಲ್ಲಿ ನಾಸಿಕ್ ಕಾರು ಘಟಕದಲ್ಲಿನ ಉತ್ಪಾದನಾ ಪ್ರಮಾಣವನ್ನು ಸಹ ಹೆಚ್ಚಳ ಮಾಡಲಾಗಿದ್ದು, ಬುಕ್ಕಿಂಗ್ ನಂತರ ಹೊಸ ಕಾರು ಪಡೆದುಕೊಳ್ಳಲು ಸದ್ಯ ಕನಿಷ್ಠ 5 ರಿಂದ 8 ತಿಂಗಳು ಕಾಲ ಕಾಯಲೇಬೇಕಾಗುತ್ತದೆ.

ಆಫ್ ರೋಡ್ ಎಸ್‌ಯುವಿ ಕಾರು ಮಾರಾಟದಲ್ಲಿ ಥಾರ್ ಕಾರಿಗೆ ಭರ್ಜರಿ ಬೇಡಿಕೆ

ಹೊಸ ಕಾರಿನ ಕಾಯುವಿಕೆ ಅವಧಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ನಿರ್ಧಾರವಾಗಲಿದ್ದು, ಸಾಫ್ಟ್ ಟಾಪ್ ಮಾದರಿಗಳು ಕಡಿಮೆ ಅವಧಿಯಲ್ಲಿ ವಿತರಣೆಯಾಗಲಿದ್ದರೆ ಡೀಸೆಲ್ ಆಟೋಮ್ಯಾಟಿಕ್ ಹಾರ್ಡ್ ಟಾಪ್ ಮಾದರಿಗಳ ಖರೀದಿಗೆ ಹೆಚ್ಚು ಕಾಯಬೇಕಿದೆ. ಆಫ್ ರೋಡಿಂಗ್ ವೈಶಿಷ್ಟ್ಯತೆಯೊಂದಿಗೆ ತನ್ನದೆ ಆದ ಜನಪ್ರಿಯೆತೆ ಹೊಂದಿರುವ ಥಾರ್ ಕಾರು ಮಾದರಿಯು ಸಾಮಾನ್ಯ ಕಾರು ಮಾದರಿಗಳಂತೆ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.12 ಲಕ್ಷದಿಂದ ಟಾಪ್ ಮಾದರಿಯು ರೂ. 14.17 ಲಕ್ಷ ಬೆಲೆಯೊಂದಿಗೆ ಅತ್ಯುತ್ತಮ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ.

ಆಫ್ ರೋಡ್ ಎಸ್‌ಯುವಿ ಕಾರು ಮಾರಾಟದಲ್ಲಿ ಥಾರ್ ಕಾರಿಗೆ ಭರ್ಜರಿ ಬೇಡಿಕೆ

ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.

MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಆಫ್ ರೋಡ್ ಎಸ್‌ಯುವಿ ಕಾರು ಮಾರಾಟದಲ್ಲಿ ಥಾರ್ ಕಾರಿಗೆ ಭರ್ಜರಿ ಬೇಡಿಕೆ

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

ಆಫ್ ರೋಡ್ ಎಸ್‌ಯುವಿ ಕಾರು ಮಾರಾಟದಲ್ಲಿ ಥಾರ್ ಕಾರಿಗೆ ಭರ್ಜರಿ ಬೇಡಿಕೆ

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಆಫ್ ರೋಡ್ ಎಸ್‌ಯುವಿ ಕಾರು ಮಾರಾಟದಲ್ಲಿ ಥಾರ್ ಕಾರಿಗೆ ಭರ್ಜರಿ ಬೇಡಿಕೆ

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.

More from DriveSpark

Article Published On: Saturday, May 29, 2021, 11:11 [IST]
English summary
Mahindra All-New Thar crosses 55,000 bookings. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+