ಥಾರ್ ಹೊಸ ಕಾರಿನಲ್ಲಿ ಮತ್ತೊಂದು ಪರ್ಫಾಮೆನ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಮಹೀಂದ್ರಾ ಕಂಪನಿಯು ಕಳೆದ ಅಕ್ಟೋಬರ್ 2ರಂದು ಹೊಸ ತಲೆಮಾರಿನ ಥಾರ್ ಎಸ್‌ಯುವಿ ಬಿಡುಗಡೆಯ ಮೂಲಕ ಆಫ್ ರೋಡ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಇದೀಗ ಹೊಸ ಕಾರಿನಲ್ಲಿ ಮತ್ತೊಂದು ಹೊಸ ಟರ್ಬೋ ಪೆಟ್ರೋಲ್ ವೆರಿಯೆಂಟ್ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಥಾರ್ ಪರ್ಫಾಮೆನ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಹೊಸ ತಲೆಮಾರಿನ ಥಾರ್ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ಮಹೀಂದ್ರಾ ಕಂಪನಿಯು ಶೀಘ್ರದಲ್ಲೇ ಥಾರ್ ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ವೆರಿಯೆಂಟ್ ಅನ್ನು ವಿವಿಧ ಹಂತದಲ್ಲಿ ರೋಡ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ. ಮಾಹಿತಿಗಳ ಪ್ರಕಾರ ಹೊಸ ಥಾರ್ ವೆರಿಯೆಂಟ್ 180-ಬಿಎಚ್‌ಪಿ ಉತ್ಪಾದನೆ ಮಾಡಬಲ್ಲ ಟರ್ಬೋ ಪೆಟ್ರೋಲ್ ಮಾದರಿಯಾಗಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಥಾರ್ ಪರ್ಫಾಮೆನ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ವಿವಿಧ ಹಂತದ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸುತ್ತಿರುವ ಹೊಸ ಕಾರು ಶೀಘ್ರದಲ್ಲೇ ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದ್ದು, ಥಾರ್ ಆರಂಭಿಕ ಆವೃತ್ತಿಯ ಸ್ಥಗಿತದ ನಂತರ ಹೊಸ ಎಂಟ್ರಿ ಲೆವಲ್ ಮಾದರಿಯನ್ನು ಪರಿಚಯಿಸುತ್ತಿರಬಹುದು ಎನ್ನಲಾಗಿದೆ.

ಥಾರ್ ಪರ್ಫಾಮೆನ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಇನ್ನು ಗ್ರಾಹಕರ ಬೇಡಿಕೆಯೆಂತೆ ಥಾರ್ ಆರಂಭಿಕ ಆವೃತ್ತಿಗಳಾದ ಎಎಕ್ಸ್ ಪೆಟ್ರೋಲ್ ಸ್ಟ್ಯಾಂಡರ್ಡ್ ಸಿಕ್ಸ್ ಸೀಟರ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಡೀಸೆಲ್ ಸಾಫ್ಟ್ ಟಾಪ್ ಮಾದರಿಗಳನ್ನು ಸ್ಥಗಿತಗೊಳಿಸಿರುವ ಕಂಪನಿಯು ಹೈ ಎಂಡ್ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಗಮನಹರಿಸಿದೆ.

ಥಾರ್ ಪರ್ಫಾಮೆನ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ವೆರಿಯೆಂಟ್ ಬದಲಾವಣೆ ನಂತರ ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.10 ಲಕ್ಷದಿಂದ ಟಾಪ್ ಮಾದರಿಯು ರೂ. 14.15 ಲಕ್ಷ ಬೆಲೆ ಪಡೆದುಕೊಂಡಿದ್ದು, ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಹೊಸ ಥಾರ್ ಕಾರಿಗೆ ಮತ್ತಷ್ಟು ಬೇಡಿಕೆ ಹರಿದುಬರುತ್ತಿದೆ.

ಥಾರ್ ಪರ್ಫಾಮೆನ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಆಫ್ ರೋಡಿಂಗ್ ವೈಶಿಷ್ಟ್ಯತೆಯೊಂದಿಗೆ ತನ್ನದೆ ಆದ ಜನಪ್ರಿಯೆತೆ ಹೊಂದಿರುವ ಥಾರ್ ಕಾರು ಮಾದರಿಯು ಸಾಮಾನ್ಯ ಕಾರು ಮಾದರಿಗಳಂತೆ ಬೇಡಿಕೆ ಮುಂಚೂಣಿ ಸಾಧಿಸುತ್ತಿದ್ದು, ನ್ಯೂ ಜನರೇಷನ್ ಥಾರ್ ಖರೀದಿ ಮಾಡಿರುವ ಗ್ರಾಹಕರಲ್ಲಿ ಬಹುತೇಕರು ಹೊಸದಾಗಿ ಆಫ್ ಕೌಶಲ್ಯದ ಆಸಕ್ತಿಯೊಂದಿಗೆ ಥಾರ್ ಮಾಲೀಕತ್ವ ಪಡೆದುಕೊಂಡವರಾಗಿದ್ದಾರೆ.

ಥಾರ್ ಪರ್ಫಾಮೆನ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಶೇ.57ರಷ್ಟು ಗ್ರಾಹಕರು ಹೊಸದಾಗಿ ಆಫ್ ರೋಡಿಂಗ್ ಕಾರು ಖರೀದಿ ಮಾಡುತ್ತಿರುವ ಗ್ರಾಹಕರಾಗಿದ್ದು, ಮ್ಯಾನುವಲ್‌ಗಿಂತಲೂ ಹೆಚ್ಚು ಆಟೋಮ್ಯಾಟಿಕ್ ಡೀಸೆಲ್ ಮಾದರಿಗಳಿಗೆ ಹೆಚ್ಚು ಬೇಡಿಕೆ ಹರಿದುಬಂದಿದೆ. ಹೊಸ ಥಾರ್ ಕಾರು ಮಾದರಿಯು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ.

ಥಾರ್ ಪರ್ಫಾಮೆನ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಗ್ರಾಹಕರ ಬೇಡಿಕೆಯೆಂತೆ ಥಾರ್ ಆರಂಭಿಕ ಆವೃತ್ತಿಗಳಾದ ಎಎಕ್ಸ್ ಪೆಟ್ರೋಲ್ ಸ್ಟ್ಯಾಂಡರ್ಡ್ ಸಿಕ್ಸ್ ಸೀಟರ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಡೀಸೆಲ್ ಸಾಫ್ಟ್ ಟಾಪ್ ಮಾದರಿಗಳನ್ನು ಸ್ಥಗಿತಗೊಳಿಸಿರುವ ಕಂಪನಿಯು ಹೈ ಎಂಡ್ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಗಮನಹರಿಸಿದೆ.

ಥಾರ್ ಪರ್ಫಾಮೆನ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಥಾರ್ ಪರ್ಫಾಮೆನ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

ಥಾರ್ ಪರ್ಫಾಮೆನ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಥಾರ್ ಪರ್ಫಾಮೆನ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.

Article Published On: Thursday, January 14, 2021, 12:55 [IST]
English summary
Mahindra Thar To Get More Powerful Turbocharged Petrol Engine. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+