Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 3 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 3 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರೀ ಬೇಡಿಕೆಯ ನಡುವೆ ಬಿಡಿಭಾಗಗಳ ಕೊರತೆಯನ್ನು ಎದುರಿಸುತ್ತಿದೆ ಮಹೀಂದ್ರಾ ಥಾರ್
ಮಹೀಂದ್ರಾ ಕಂಪನಿಯು ನ್ಯೂ ಥಾರ್ ಮೂಲಕ ಮೊದಲ ಬಾರಿಗೆ ಆಫ್ ಎಸ್‌ಯುವಿ ಕಾರು ಮಾರಾಟದಲ್ಲಿ ದಾಖಲೆ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನ ಬೇಡಿಕೆ ಹೆಚ್ಚುತ್ತಿರುವ ಬೆನ್ನಲ್ಲೇ ಕಾರಿನ ಪ್ರಮುಖ ತಾಂತ್ರಿಕ ಅಂಶಗಳ ಪೂರೈಕೆಯಲ್ಲಿ ವಿಳಂಬವಾಗುತ್ತಿರುವುದು ವಿತರಣೆ ಅವಧಿಯಲ್ಲಿ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಥಾರ್ ಎಸ್‌ಯುವಿ ಕಾರು ಮಾದರಿಯನ್ನು ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ 2ನೇ ಕಾರು ಉತ್ಪಾದನಾ ಘಟಕದಲ್ಲಿ ಉತ್ಪಾದನೆ ಕೈಗೊಂಡಿರುವ ಮಹೀಂದ್ರಾ ಕಂಪನಿಯು ಬೇಡಿಕೆ ಹೆಚ್ಚಿರುವ ಹಿನ್ನಲೆಯಲ್ಲಿ ಥಾರ್ ಉತ್ಪಾದನೆಯನ್ನು ಪ್ರತಿ ತಿಂಗಳಿಗೆ 2 ಸಾವಿರ ಯುನಿಟ್‌ನಿಂದ 3 ಸಾವಿರಕ್ಕೆ ಹೆಚ್ಚಳ ಮಾಡಿದ್ದು, ಉತ್ಪಾದನೆ ಹೆಚ್ಚಳ ಮಾಡಲಾಗಿದ್ದರೂ ಹೊಸ ಕಾರಿನ ಪ್ರಮುಖ ತಾಂತ್ರಿಕ ಅಂಶಗಳ ಪೂರೈಕೆಯಲ್ಲಿ ವಿಳಂಬವಾಗುತ್ತಿರುವುದು ಕಾರಿನ ವಿತರಣೆಯ ಮೇಲೆ ಪರಿಣಾಮ ಬೀರುತ್ತಿದೆ.

ಕಾರು ಉತ್ಪಾದನಾ ಘಟಕದಲ್ಲಿ ಉತ್ಪಾದನೆ ಹೆಚ್ಚಳವಾಗಿರುವುದರಿಂದ ಪ್ರಮುಖ ತಾಂತ್ರಿಕ ಅಂಶಗಳ ಕೊರತೆಯ ನಡುವೆಯೂ ಹೊಸ ಕಾರುಗಳನ್ನು ಡೀಲರ್ಸ್ ಸ್ಟಾಕ್ ಯಾರ್ಡ್‌ಗಳಲ್ಲಿ ಹಲವು ತಾಂತ್ರಿಕ ಅಂಶಗಳ ಅಳವಡಿಕೆಯಿಲ್ಲದೆಯೇ ಸ್ಟಾಕ್ ಮಾಡುತ್ತಿರುವುದು ಕಂಡುಬಂದಿದೆ.

ಮಹೀಂದ್ರಾ ಡೀಲರ್ಸ್ ಸ್ಟಾಕ್ ಯಾರ್ಡ್‌ನಲ್ಲಿ ಹೊಸದಾಗಿ ಕಂಡುಬಂದ ಕಾರುಗಳ ಸ್ಟಾಕ್‌ನಲ್ಲಿ ಹಲವು ಕಾರುಗಳು ಇನ್ಪೋಟೈನ್‌ಮೆಂಟ್ ಜೋಡಣೆಯಿಲ್ಲದೆ ಕಂಡುಬಂದಿದ್ದು, ಬಿಡಿಭಾಗಗಳ ಪೂರೈಕೆ ನಂತರ ಜೋಡಣೆ ಮಾಡಿ ವಿತರಣೆ ಮಾಡಲಿದೆ.

ಮಾಹಿತಿಗಳ ಪ್ರಕಾರ ಥಾರ್ ಕಾರುಗಳಿಗೆ ಇನ್ಪೊಟೈನ್‌ಮೆಂಟ್ ಸಿಸ್ಟಂ ಮಾತ್ರವಲ್ಲ ಹಲವು ಬಿಡಿಭಾಗಗಳು ಸರಿಯಾದ ಸಮಯಕ್ಕೆ ಪೂರೈಕೆಯಾಗದೆ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎನ್ನಲಾಗಿದ್ದು, ಥಾರ್ ಹೊಸ ಕಾರು ಖರೀದಿಗೆ ಸದ್ಯ ಬುಕ್ಕಿಂಗ್ ಸಲ್ಲಿಕೆ ಮಾಡಿದರೆ ಕನಿಷ್ಠ 6 ತಿಂಗಳಿನಿಂದ ಗರಿಷ್ಠ 10 ತಿಂಗಳ ಕಾಲ ಕಾಯಬೇಕಿದೆ. ಥಾರ್ ಹೊಸ ಕಾರಿಗೆ ಇದುವರೆಗೆ ಸುಮಾರು 35 ಸಾವಿರಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ಸಲ್ಲಿಸಿದ್ದು, ಇದುವರೆಗೆ ಕಂಪನಿಯು ಕೇವಲ 4 ಸಾವಿರ ಯುನಿಟ್‌ಗಿಂತಲೂ ಕಡಿಮೆ ವಿತರಣೆ ಮಾಡಿದೆ.

ಜನವರಿಯಿಂದ ಹೊಸ ಕಾರಿನ ವಿತರಣೆಯಲ್ಲಿ ಹೆಚ್ಚಳ ಮಾಡುವುದಾಗಿ ಹೇಳಿಕೊಂಡಿದ್ದ ಮಹೀಂದ್ರಾ ಕಂಪನಿಗೆ ಬಿಡಿಭಾಗಗಳ ಕೊರತೆಯು ಥಾರ್ ಮಾರಾಟ ಹೆಚ್ಚಿಸುವ ಯೋಜನೆಗೆ ಹಿನ್ನಡೆ ಉಂಟು ಮಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಬಿಡಿಭಾಗಗಳ ಪೂರೈಕೆಯು ಸಹಜ ಸ್ಥಿತಿಯತ್ತ ಮರಳಲಿದೆ ಎನ್ನಲಾಗಿದೆ.

ಕರೋನಾ ವೈರಸ್ ಪರಿಣಾಮ ಹಲವಾರು ಆಟೋ ಬಿಡಿಭಾಗಗಳ ಉತ್ಪಾದನಾ ಕಂಪನಿಗಳು ಕಾರ್ಮಿಕರ ಸಂಖ್ಯೆಯನ್ನು ತಗ್ಗಿಸಿ ಉತ್ಪಾದನಾ ಪ್ರಮಾಣವನ್ನು ಕಡಿತಗೊಳಿಸಿದ್ದವು. ಇದೀಗ ಬೇಡಿಕೆ ಹೆಚ್ಚುತ್ತಿದ್ದರೂ ಬೇಡಿಕೆ ಪೂರೈಕೆಯಲ್ಲಿ ಹಿನ್ನಡೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಕಾರ್ಮಿಕರ ಮರು ನೇಮಕವು ಹೆಚ್ಚಳವಾಗುವುದರ ಜೊತೆಗೆ ಪೂರೈಕೆಯಲ್ಲಿ ಹೆಚ್ಚಳವಾಗುವ ನೀರಿಕ್ಷೆಯಿವೆ.

ಇನ್ನು ವಿವಿಧ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.10 ಲಕ್ಷದಿಂದ ಟಾಪ್ ಮಾದರಿಯು ರೂ. 14.15 ಲಕ್ಷ ಬೆಲೆ ಪಡೆದುಕೊಂಡಿದ್ದು, ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಹೊಸ ಥಾರ್ ಕಾರಿಗೆ ಮತ್ತಷ್ಟು ಬೇಡಿಕೆ ಹರಿದುಬರುತ್ತಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಆಫ್ ರೋಡಿಂಗ್ ವೈಶಿಷ್ಟ್ಯತೆಯೊಂದಿಗೆ ತನ್ನದೆ ಆದ ಜನಪ್ರಿಯೆತೆ ಹೊಂದಿರುವ ಥಾರ್ ಕಾರು ಮಾದರಿಯು ಸಾಮಾನ್ಯ ಕಾರು ಮಾದರಿಗಳಂತೆ ಬೇಡಿಕೆ ಮುಂಚೂಣಿ ಸಾಧಿಸುತ್ತಿದ್ದು, ನ್ಯೂ ಜನರೇಷನ್ ಥಾರ್ ಖರೀದಿ ಮಾಡಿರುವ ಗ್ರಾಹಕರಲ್ಲಿ ಬಹುತೇಕರು ಹೊಸದಾಗಿ ಆಫ್ ಕೌಶಲ್ಯದ ಆಸಕ್ತಿಯೊಂದಿಗೆ ಥಾರ್ ಮಾಲೀಕತ್ವ ಪಡೆದುಕೊಂಡವರಾಗಿದ್ದಾರೆ.

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ ಜೊತೆಗೆ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದೆ.