ಮುಂದಿನ ಐದು ವರ್ಷಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಮಹೀಂದ್ರಾ(Mahindra) ಕಂಪನಿಯು ಎಸ್‌ಯುವಿ ಕಾರುಗಳ ಮಾರಾಟದಲ್ಲಿ ತನ್ನದೆ ಆದ ಜನಪ್ರಿಯತೆ ಹೊಂದಿದ್ದು, ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮುಂಬರುವ ಕೆಲವೇ ವರ್ಷಗಳಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಮುಂದಿನ ಐದು ವರ್ಷಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ700, ಎಕ್ಸ್‌ಯುವಿ300, ಬೊಲೆರೊ, ಸ್ಕಾರ್ಪಿಯೋ, ಥಾರ್ ಮಾದರಿಯೊಂದಿಗೆ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಹೊಂದಿರುವ ಮಹೀಂದ್ರಾ ಕಂಪನಿಯು ಎಸ್‌ಯುವಿ ವಿಭಾಗದಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಮುಂದಿನ ಐದು ವರ್ಷಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಮಹೀಂದ್ರಾ ಕಂಪನಿಯು ನಡೆಸಿದ ಆಡಳಿತ ಮಂಡಳಿಯ ಸಭೆಯಲ್ಲಿ ಹೊಸ ಕಾರುಗಳ ಬಿಡುಗಡೆ ಕುರಿತಂತೆ ಮಹತ್ವದ ಮಾತುಕತೆ ನಡೆದ್ದು, ಮುಂದಿನ ಐದು ವರ್ಷಗಳಲ್ಲಿ ಒಟ್ಟು 13 ಕಾರುಗಳನ್ನು ಬಿಡುಗಡೆ ಮಾಡುವ ನಿರ್ಣಯ ಕೈಗೊಳ್ಳಲಾಗಿದೆ.

ಮುಂದಿನ ಐದು ವರ್ಷಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಇದರಲ್ಲಿ ಎಂಟು ಎಲೆಕ್ಟ್ರಿಕ್ ಕಾರುಗಳು ಮತ್ತು ಐದು ಸಾಮಾನ್ಯ ಕಾರು ಮಾದರಿಗಳ ಬಿಡುಗಡೆಯಾಗಲಿದ್ದು, ಎಲೆಕ್ಟ್ರಿಕ್ ಕಾರುಗಳು 2022ರಿಂದ ಹಂತ-ಹಂತವಾಗಿ ಮಾರುಕಟ್ಟೆ ಪ್ರವೇಶಿಸಲಿವೆ.

ಮುಂದಿನ ಐದು ವರ್ಷಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

2022ರಿಂದ 2027ರ ತನಕ ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿರುವ ಮಹೀಂದ್ರಾ ಕಂಪನಿಯು ಆರಂಭಿಕವಾಗಿ ಇಕೆಯುವಿ100 ನಂತರ ಇಎಕ್ಸ್‌ಯುವಿ300 ಬಿಡುಗಡೆ ಮಾಡಲಿದ್ದು, ತದನಂತರ ಮಾರುಕಟ್ಟೆಯಲ್ಲಿ ಇತರೆ ಕಾರುಗಳ ಮಾದರಿಗಳ ಎಲೆಕ್ಟ್ರಿಕ್ ಆವೃತ್ತಿಗಳನ್ನು ಪರಿಚಯಿಸಲಿದೆ.

ಮುಂದಿನ ಐದು ವರ್ಷಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಎಲೆಕ್ಟ್ರಿಕ್ ಕಾರು ಮಾದರಿಗಳಾಗಿ ಹೊಸದಾಗಿ ಡೀಸೆಲ್ ಕಾರುಗಳ ಅಭಿವೃದ್ದಿಯನ್ನು ಹಂತ-ಹಂತವಾಗಿ ಕಡಿತಗೊಳಿಸುತ್ತಿದ್ದು, ಎಲೆಕ್ಟ್ರಿಕ್ ಕಾರು ಮಾದರಿಗಳ ಮೇಲೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಮುಂದಿನ ಐದು ವರ್ಷಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಡೀಸೆಲ್ ಕಾರುಗಳನ್ನು ತಗ್ಗಿಸಲು ಪೆಟ್ರೋಲ್ ಹೈಬ್ರಿಡ್ ಕಾರು ಮಾದರಿಗಳನ್ನು ಸಹ ಅಭಿವೃದ್ದಿಪಡಿಸುತ್ತಿದ್ದು, ಇಎಕ್ಸ್‌ಯುವಿ300, ಇಕೆಯುವಿ100 ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳು ರಸ್ತೆಗಿಳಿಯಲಿವೆ.

ಮುಂದಿನ ಐದು ವರ್ಷಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಬಿಡುಗಡೆಯಾಗಲಿರುವ ಐದು ಸಾಮಾನ್ಯ ಕಾರುಗಳಲ್ಲಿ ನ್ಯೂ ಜನರೇಷನ್ ಸ್ಕಾರ್ಪಿಯೋ ಮತ್ತು ಬೊಲೆರೊ ಸೇರಿದಂತೆ ಥಾರ್ ಹೊಸ ಆವೃತ್ತಿಯು ಬಿಡುಗಡೆಯಾಗಲಿದ್ದು, ಮತ್ತೆರಡು ಹೊಸ ಕಾರುಗಳ ನಂತರ ಡೀಸೆಲ್ ಕಾರುಗಳ ಅಭಿವೃದ್ದಿಯನ್ನು ಕಡಿತ ಮಾಡಲು ನಿರ್ಧರಿಸಿದೆ.

ಮುಂದಿನ ಐದು ವರ್ಷಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ತೀವ್ರ ಬೆಳವಣಿಗೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಹಲವಾರು ಉತ್ಪಾದನಾ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದು, ಮಹೀಂದ್ರಾ ಕಂಪನಿಯು ಕೂಡಾ ಇವಿ ವಾಹನ ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಮುಂದಿನ ಐದು ವರ್ಷಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿ ಮೇಲೆ ಈಗಾಗಲೇ ಭಾರೀ ಪ್ರಮಾಣದ ಹೂಡಿಕೆ ಮಾಡಿರುವ ಕಂಪನಿಯು ಇತ್ತೀಚೆಗೆ ಹೆಚ್ಚುವರಿಯಾಗಿ ರೂ.3 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿದ್ದು, ಹೊಸ ಬಂಡವಾಳದೊಂದಿಗೆ ಕಂಪನಿಯು ಇದುವರೆಗೆ ಸುಮಾರು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದಂತಾಗಿದೆ.

ಮುಂದಿನ ಐದು ವರ್ಷಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ರೆವಾ ಎಲೆಕ್ಟ್ರಿಕ್ ಕಂಪನಿಯೊಂದಿಗೆ 2010ರಲ್ಲಿ ಮೊದಲ ಹೂಡಿಕೆಯೊಂದಿಗೆ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಕಾಲಿರಿಸಿದ ಮಹೀಂದ್ರಾ ಕಂಪನಿಯು ಇದುವರೆಗೆ ಹಲವಾರು ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸಿದ್ದು, ಇದೀಗ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ವಾಹನಗಳ ಅಭಿವೃದ್ದಿಯತ್ತ ಹೆಚ್ಚಿನ ಗಮನಹರಿಸುತ್ತಿದೆ.

ಮುಂದಿನ ಐದು ವರ್ಷಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಪ್ರಯಾಣಿಕ ವಾಹನಗಳ ವಿಭಾಗದಲ್ಲಿ ಮಾತ್ರವಲ್ಲ ವಾಣಿಜ್ಯ ವಾಹನಗಳ ವಿಭಾಗದಲ್ಲೂ ಎಲೆಕ್ಟ್ರಿಕ್ ಮಾದರಿಗಳನ್ನು ಪರಿಚಯಿಸಿರುವ ಮಹೀಂದ್ರಾ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಪ್ರಮುಖ ಬದಲಾವಣೆಗಳೊಂದಿಗೆ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಮುಂದಿನ ಐದು ವರ್ಷಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಮಹೀಂದ್ರಾ ಕಂಪನಿಯು ಕೇವಲ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮಾತ್ರವಲ್ಲದೆ ಸಂಶೋಧನೆ, ವಿಶ್ವಾದ್ಯಂತ ನೂರಾರು ಇವಿ ಸ್ಟಾರ್ಟ ಅಪ್ ಕಂಪನಿಗಳಲ್ಲೂ ಹಣ ಹೂಡಿಕೆ ಮಾಡಿರುವುದು ಭವಿಷ್ಯದ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮತ್ತು ಮಾರಾಟದಲ್ಲಿ ಮಹತ್ವದ ಪಾತ್ರವಹಿಸಲಿದೆ.

ಮುಂದಿನ ಐದು ವರ್ಷಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಹೊಸ ಬಂಡವಾಳದೊಂದಿಗೆ ಇದೀಗ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಸಿದ್ದಪಡಿಸುತ್ತಿದ್ದು, ಒಂದೇ ಪ್ಲ್ಯಾಟ್‌ಫಾರ್ಮ್ ಅಡಿ ಹಲವು ವಾಹನ ಮಾದರಿಗಳನ್ನು ನಿರ್ಮಾಣ ಮಾಡುವ ಗುರಿಹೊಂದಿದೆ.

ಮುಂದಿನ ಐದು ವರ್ಷಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಮಹೀಂದ್ರಾ ಕಂಪನಿಯು ಕೆಯುವಿ100 ಎಲೆಕ್ಟ್ರಿಕ್, ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಮತ್ತು ಅಟಾಮ್ ಕ್ವಾರ್ಡ್ರಿಸೈಕಲ್ ಮಾದರಿಗಳ ಬಿಡುಗಡೆಯ ಸಿದ್ದತೆಯಲ್ಲಿದ್ದು, ಆರಂಭಿಕವಾಗಿ 2022ರಲ್ಲಿ ಆರಂಭದಲ್ಲಿ ಕೆಯುವಿ100 ಇವಿ ಮಾದರಿಯನ್ನು ತದನಂತರ ಅಟಾಮ್ ಕ್ವಾರ್ಡ್ರಿಸೈಕಲ್ ಮಾದರಿಯನ್ನು ಮತ್ತು 2023ರ ವೇಳೆಗೆ ಎಕ್ಸ್‌ಯುವಿ300 ಇವಿ ಮಾದರಿಯನ್ನು ಬಿಡುಗಡೆ ಮಾಡಲಿದೆ.

ಮುಂದಿನ ಐದು ವರ್ಷಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಇಕೆಯುವಿ100 ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 8.25 ಲಕ್ಷ ಬೆಲೆ ಹೊಂದಿದ್ದು, 15.9kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಕನಿಷ್ಠ 150 ಕಿ.ಮೀ ಮೈಲೇಜ್ ಸಾಮರ್ಥ್ಯ ಹೊಂದಿರಲಿದೆ. ಹಾಗೆಯೇ ಇಎಕ್ಸ್‌ಯುವಿ 300 ಮಾದರಿಯು ಹೆಚ್ಚಿನ ಮಟ್ಟದ ಬ್ಯಾಟರಿ ಪ್ಯಾಕ್‌ನೊಂದಿಗೆ 350ರಿಂದ 400 ಕಿ.ಮೀ ಮೈಲೇಜ್ ಪ್ರೇರಣೆ ಹೊಂದಿಲಿದ್ದು, ಇದು 2023ರ ವೇಳೆಗೆ ಮಾರುಕಟ್ಟೆ ಪ್ರವೇಶಿಸಲಿದೆ.

Article Published On: Thursday, November 11, 2021, 8:45 [IST]
English summary
Mahindra to launch 8 new electric suvs by 2027 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+