ಮುಂದಿನ ಐದು ವರ್ಷಗಳಲ್ಲಿ ಒಂಬತ್ತು ಹೊಸ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಹೀಂದ್ರಾ

ಮಹೀಂದ್ರಾ ಕಂಪನಿಯು ಎಸ್‌ಯುವಿ ಕಾರುಗಳ ಮಾರಾಟದಲ್ಲಿ ತನ್ನದೆ ಆದ ಜನಪ್ರಿಯತೆ ಹೊಂದಿದ್ದು, ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮುಂಬರುವ ಕೆಲವೇ ವರ್ಷಗಳಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಮುಂದಿನ ಐದು ವರ್ಷಗಳಲ್ಲಿ ಒಂಬತ್ತು ಹೊಸ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಹೀಂದ್ರಾ

ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ500, ಎಕ್ಸ್‌ಯುವಿ300, ಬೊಲೆರೊ, ಸ್ಕಾರ್ಪಿಯೋ ಮಾದರಿಯೊಂದಿಗೆ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಹೊಂದಿರುವ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದ್ದು, ಹೊಸ ಕಾರುಗಳ ಬಿಡುಗಡೆಗಾಗಿ ಈಗಾಗಲೇ ಕೇಂದ್ರ ಸಾರಿಗೆ ಇಲಾಖೆಯಲ್ಲಿ ನೋಂದಣಿಯನ್ನು ಕೂಡಾ ಮಾಡಲಾಗಿದೆ.

ಮುಂದಿನ ಐದು ವರ್ಷಗಳಲ್ಲಿ ಒಂಬತ್ತು ಹೊಸ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಹೀಂದ್ರಾ

ಹೊಸ ಯೋಜನೆ ಅಡಿ ಮೊದಲ ಕಾರು ಮಾದರಿಯಾಗಿ ಎಕ್ಸ್‌ಯುವಿ700 ಬಿಡುಗಡೆ ಮಾಡುವುದಾಗಿ ಅಧಿಕೃತವಾಗಿಯೇ ಮಾಹಿತಿ ಹಂಚಿಕೊಂಡಿರುವ ಮಹೀಂದ್ರಾ ಕಂಪನಿಯು ಇದೀಗ ಎಕ್ಸ್‌ಯುವಿ ಸರಣಿಯಲ್ಲಿ ಒಟ್ಟು ಐದು ಹೊಸ ಕಾರುಗಳನ್ನು ಮತ್ತು ವಿವಿಧ ಕಾರು ಸರಣಿಯಲ್ಲಿ ನಾಲ್ಕು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿರುವ ಮಾಹಿತಿ ಲಭ್ಯವಾಗಿದೆ.

ಮುಂದಿನ ಐದು ವರ್ಷಗಳಲ್ಲಿ ಒಂಬತ್ತು ಹೊಸ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಹೀಂದ್ರಾ

ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಸಾಮಾನ್ಯ ಮಾದರಿಗಳಲ್ಲದೆ ಶೇ.75 ರಷ್ಟು ಎಲೆಕ್ಟ್ರಿಕ್ ಮತ್ತು ಹೈಬ್ರಡ್ ಕಾರು ಮಾದರಿಗಳನ್ನು ಸಹ ಅಭಿವೃದ್ದಿಪಡಿಸುತ್ತಿದ್ದು, ಇಎಕ್ಸ್‌ಯುವಿ300, ಇಕೆಯುವಿ100 ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳು ರಸ್ತೆಗಿಳಿಯಲಿವೆ.

ಮುಂದಿನ ಐದು ವರ್ಷಗಳಲ್ಲಿ ಒಂಬತ್ತು ಹೊಸ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಹೀಂದ್ರಾ

ಕೇಂದ್ರ ಸಾರಿಗೆ ಇಲಾಖೆಯಲ್ಲಿ ದಾಖಲಿಸಲಾಗಿರುವ ಹಕ್ಕು ಸ್ವಾಮ್ಯ ಪ್ರತಿಯಲ್ಲಿ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ ಸರಣಿಯೊಂದರಲ್ಲೇ ಎಕ್ಸ್‌‌ಯುವಿ700 ಮಾದರಿಯ ಜೊತೆಗೆ ಎಕ್ಸ್‌ಯುವಿ100, ಎಕ್ಸ್‌‌ಯುವಿ400, ಎಕ್ಸ್‌ಯುವಿ900 ಎಸ್‌ಯುವಿ ಮತ್ತು ಎಕ್ಸ್‌ಯುವಿ900 ಎಸ್‌ಯುವಿ ಕೂಪೆ ಸೇರಿ ಒಟ್ಟು ಐದು ಎಕ್ಸ್‌ಯುವಿ ಸರಣಿ ಕಾರುಗಳನ್ನು ಬಿಡುಗಡೆ ಮಾಡುತ್ತಿದೆ.

ಮುಂದಿನ ಐದು ವರ್ಷಗಳಲ್ಲಿ ಒಂಬತ್ತು ಹೊಸ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಹೀಂದ್ರಾ

ಎಕ್ಸ್‌ಯುವಿ ಸರಣಿಯಲ್ಲಿ ಈಗಾಗಲೇ ಎಕ್ಸ್‌ಯುವಿ300 ಮತ್ತು ಎಕ್ಸ್‌ಯುವಿ500 ಕಾರುಗಳ ಮಾರಾಟ ಹೊಂದಿರುವ ಮಹೀಂದ್ರಾ ಕಂಪನಿಯು ಹೊಸ ಕಾರುಗಳ ಮೂಲಕ ಎಂಟ್ರಿ ಲೆವಲ್ ಎಸ್‌ಯುವಿ ಮಾದರಿಯೊಂದಿಗೆ ಫುಲ್ ಸೈಜ್ ಎಸ್‌ಯುವಿ ಮಾದರಿಯ ಮಾರಾಟದಲ್ಲಿ ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಲ್ಲಿದೆ.

ಮುಂದಿನ ಐದು ವರ್ಷಗಳಲ್ಲಿ ಒಂಬತ್ತು ಹೊಸ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಹೀಂದ್ರಾ

ಬಿಡುಗಡೆಯಾಗಲಿರುವ ಕಾರುಗಳಲ್ಲಿ ಎಕ್ಸ್‌ಯುವಿ100 ಮಾದರಿಯು ಕೆಯುವಿ100 ಮಾದರಿಯಲ್ಲಿ ಹೊಸ ವಿನ್ಯಾಸದಲ್ಲಿ ಮಾರಾಟವಾಗಲಿದ್ದರೆ ಹೈ ಎಂಡ್ ಮಾದರಿಯಾದ ಎಕ್ಸ್‌ಯುವಿ900 ಮಾದರಿಯ ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಗೆ ಪೈಪೋಟಿ ನೀಡಲಿದೆ.

MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಮುಂದಿನ ಐದು ವರ್ಷಗಳಲ್ಲಿ ಒಂಬತ್ತು ಹೊಸ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಹೀಂದ್ರಾ

ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ತೀವ್ರ ಬೆಳವಣಿಗೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಹಲವಾರು ಉತ್ಪಾದನಾ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದು, ಮಹೀಂದ್ರಾ ಕಂಪನಿಯು ಕೂಡಾ ಇವಿ ವಾಹನ ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಮುಂದಿನ ಐದು ವರ್ಷಗಳಲ್ಲಿ ಒಂಬತ್ತು ಹೊಸ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಹೀಂದ್ರಾ

ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿ ಮೇಲೆ ಈಗಾಗಲೇ ಭಾರೀ ಪ್ರಮಾಣದ ಹೂಡಿಕೆ ಮಾಡಿರುವ ಮಹೀಂದ್ರಾ ಕಂಪನಿಯು ಇತ್ತೀಚೆಗೆ ಹೆಚ್ಚುವರಿಯಾಗಿ ರೂ.3 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದು, ಹೊಸ ಬಂಡವಾಳದೊಂದಿಗೆ ಕಂಪನಿಯು ಇದುವರೆಗೆ ಸುಮಾರು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದಂತಾಗಿದೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಮುಂದಿನ ಐದು ವರ್ಷಗಳಲ್ಲಿ ಒಂಬತ್ತು ಹೊಸ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಹೀಂದ್ರಾ

ರೆವಾ ಎಲೆಕ್ಟ್ರಿಕ್ ಕಂಪನಿಯೊಂದಿಗೆ 2010ರಲ್ಲಿ ಮೊದಲ ಹೂಡಿಕೆಯೊಂದಿಗೆ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಕಾಲಿರಿಸಿದ ಮಹೀಂದ್ರಾ ಕಂಪನಿಯು ಇದುವರೆಗೆ ಹಲವಾರು ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸಿದ್ದು, ಇದೀಗ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ವಾಹನಗಳ ಅಭಿವೃದ್ದಿಯತ್ತ ಹೆಚ್ಚಿನ ಗಮನಹರಿಸುತ್ತಿದೆ.

Article Published On: Saturday, May 29, 2021, 15:26 [IST]
English summary
Mahindra To Launch 9 New SUVs By 2026. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+