ಬಜೆಟ್ ಬೆಲೆಯ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದವಾದ ಮಹೀಂದ್ರಾ

ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ತೀವ್ರ ಬೆಳವಣಿಗೆ ಕಂಡುಬರುತ್ತಿರುವ ಹಿನ್ನಲೆ ಹಲವಾರು ಉತ್ಪಾದನಾ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದು, ಮಹೀಂದ್ರಾ ಕಂಪನಿಯು ಕೂಡಾ ತನ್ನ ಪ್ರಮುಖ ಇವಿ ವಾಹನ ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಬಜೆಟ್ ಬೆಲೆಯ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದವಾದ ಮಹೀಂದ್ರಾ ಕಂಪನಿ

ಪ್ರಸ್ತುತ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಈಗಾಗಲೇ ಸಾಕಷ್ಟು ಮುಂಚೂಣಿ ಸಾಧಿಸಿರುವ ಮಹೀಂದ್ರಾ ಆ್ಯಂಡ್ ಮಹೀಂದ್ರಾ ಕಂಪನಿಯ ಮಹೀಂದ್ರಾ ಎಲೆಕ್ಟ್ರಿಕ್ ವಿಭಾಗವು ಮತ್ತಷ್ಟು ಹೊಸ ಇವಿ ವಾಹನ ಉತ್ಪನ್ನ ಬಿಡುಗಡೆ ಸಿದ್ದವಾಗುತ್ತಿದ್ದು, ವಾಣಿಜ್ಯ ವಾಹನಗಳ ಮಾದರಿಗಳಂತೆ ಪ್ರಯಾಣಿಕರ ಎಲೆಕ್ಟ್ರಿಕ್ ವಾಹನ ಮಾದರಿಯ ಮಾರಾಟದಲ್ಲೂ ಮುಂಚೂಣಿ ಸಾಧಿಸುವ ತವಕದಲ್ಲಿದೆ.

ಬಜೆಟ್ ಬೆಲೆಯ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದವಾದ ಮಹೀಂದ್ರಾ ಕಂಪನಿ

ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿ ಮೇಲೆ ಈಗಾಗಲೇ ಭಾರೀ ಪ್ರಮಾಣದ ಹೂಡಿಕೆ ಮಾಡಿರುವ ಕಂಪನಿಯು ಇತ್ತೀಚೆಗೆ ಹೆಚ್ಚುವರಿಯಾಗಿ ರೂ.3 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿದ್ದು, ಹೊಸ ಬಂಡವಾಳದೊಂದಿಗೆ ಕಂಪನಿಯು ಇದುವರೆಗೆ ಸುಮಾರು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದಂತಾಗಿದೆ.

ಬಜೆಟ್ ಬೆಲೆಯ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದವಾದ ಮಹೀಂದ್ರಾ ಕಂಪನಿ

ರೆವಾ ಎಲೆಕ್ಟ್ರಿಕ್ ಕಂಪನಿಯೊಂದಿಗೆ 2010ರಲ್ಲಿ ಮೊದಲ ಹೂಡಿಕೆಯೊಂದಿಗೆ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಕಾಲಿರಿಸಿದ ಮಹೀಂದ್ರಾ ಕಂಪನಿಯು ಇದುವರೆಗೆ ಹಲವಾರು ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸಿದ್ದು, ಇದೀಗ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ವಾಹನಗಳ ಅಭಿವೃದ್ದಿಯತ್ತ ಹೆಚ್ಚಿನ ಗಮನಹರಿಸುತ್ತಿದೆ.

ಬಜೆಟ್ ಬೆಲೆಯ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದವಾದ ಮಹೀಂದ್ರಾ ಕಂಪನಿ

ಪ್ರಯಾಣಿಕ ವಾಹನಗಳ ವಿಭಾಗದಲ್ಲಿ ಮಾತ್ರವಲ್ಲ ವಾಣಿಜ್ಯ ವಾಹನಗಳ ವಿಭಾಗದಲ್ಲೂ ಎಲೆಕ್ಟ್ರಿಕ್ ಮಾದರಿಗಳನ್ನು ಪರಿಚಯಿಸಿರುವ ಮಹೀಂದ್ರಾ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಪ್ರಮುಖ ಬದಲಾವಣೆಗಳೊಂದಿಗೆ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಬಜೆಟ್ ಬೆಲೆಯ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದವಾದ ಮಹೀಂದ್ರಾ ಕಂಪನಿ

ಮಹೀಂದ್ರಾ ಕಂಪನಿಯು ಕೇವಲ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮಾತ್ರವಲ್ಲದೆ ಸಂಶೋಧನೆ, ವಿಶ್ವಾದ್ಯಂತ ನೂರಾರು ಇವಿ ಸ್ಟಾರ್ಟ ಅಪ್ ಕಂಪನಿಗಳಲ್ಲೂ ಹಣ ಹೂಡಿಕೆ ಮಾಡಿರುವುದು ಭವಿಷ್ಯದ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮತ್ತು ಮಾರಾಟದಲ್ಲಿ ಮಹತ್ವದ ಪಾತ್ರವಹಿಸಲಿದೆ.

ಬಜೆಟ್ ಬೆಲೆಯ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದವಾದ ಮಹೀಂದ್ರಾ ಕಂಪನಿ

ಹೊಸ ಬಂಡವಾಳದೊಂದಿಗೆ ಇದೀಗ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಸಿದ್ದಪಡಿಸುತ್ತಿದ್ದು, ಒಂದೇ ಪ್ಲ್ಯಾಟ್‌ಫಾರ್ಮ್ ಅಡಿ ಹಲವು ವಾಹನ ಮಾದರಿಗಳನ್ನು ನಿರ್ಮಾಣ ಮಾಡುವ ಗುರಿಹೊಂದಿದೆ.

ಬಜೆಟ್ ಬೆಲೆಯ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದ ವಾದ ಮಹೀಂದ್ರಾ ಕಂಪನಿ

ಭಾರತದಲ್ಲಿ ವಿವಿಧ ಮಾದರಿಯ ಹಲವು ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಹೊಂದಿರುವ ಮಹೀಂದ್ರಾ ಎಲೆಕ್ಟ್ರಿಕ್ ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಇಕೆಯುವಿ100 ಇವಿ ಮತ್ತು ಎಕ್ಸ್‌ಯುವಿ300 ಇವಿ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಬಜೆಟ್ ಬೆಲೆಯ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದವಾದ ಮಹೀಂದ್ರಾ ಕಂಪನಿ

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಇಕೆಯುವಿ100, ಇಎಕ್ಸ್‌ಯುವಿ300 ಮತ್ತು ಅಟಾಮ್ ಕ್ವಾರ್ಡ್ರಿಸೈಕಲ್ ಮಾದರಿಗಳನ್ನು ಪ್ರದರ್ಶನ ಮಾಡಿದ್ದ ಮಹೀಂದ್ರಾ ಎಲೆಕ್ಟ್ರಿಕ್ ಕಂಪನಿಯು ಪ್ರದರ್ಶನದ ವೇಳೆ ಕೆಯುವಿ100 ಎಲೆಕ್ಟ್ರಿಕ್ ಕಾರು ಮಾದರಿಯ ಬೆಲೆ ಮಾಹಿತಿ ಮಾತ್ರವೇ ಹಂಚಿಕೊಳ್ಳುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ವಿತರಣೆ ಮಾಡುವುದಾಗಿ ಹೇಳಿಕೊಂಡಿತ್ತು.

ಬಜೆಟ್ ಬೆಲೆಯ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದವಾದ ಮಹೀಂದ್ರಾ ಕಂಪನಿ

ಆದರೆ ಕೋವಿಡ್ ಹಿನ್ನಲೆ ಲಾಕ್‌ಡೌನ್ ಮಾಡಿದ ಪರಿಣಾಮ ಹೊಸ ಎಲೆಕ್ಟ್ರಿಕ್ ವಾಹನಗಳ ಬಿಡುಗಡೆ ಯೋಜನೆಯನ್ನು ಮುಂದೂಡಿಕೆ ಮಾಡುತ್ತ ಬಂದಿರುವ ಮಹೀಂದ್ರಾ ಕಂಪನಿಯು ಇದೀಗ ಹೊಸ ಇವಿ ವಾಹನಗಳ ಬಿಡುಗಡೆಗೆ ಸಿದ್ದತೆ ನಡೆಸಿದ್ದು, ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿ ಮೊದಲ ಕಾರು ಮಾದರಿಯಾಗಿ ಇಕೆಯುವಿ100 ಮಾದರಿಯನ್ನು 2022ರ ಆರಂಭದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಲಾಗಿದೆ.

ಬಜೆಟ್ ಬೆಲೆಯ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದವಾದ ಮಹೀಂದ್ರಾ ಕಂಪನಿ

ಮಹೀಂದ್ರಾ ಕಂಪನಿಯು ಕೆಯುವಿ100 ಎಲೆಕ್ಟ್ರಿಕ್, ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಮತ್ತು ಅಟಾಮ್ ಕ್ವಾರ್ಡ್ರಿಸೈಕಲ್ ಮಾದರಿಗಳ ಬಿಡುಗಡೆಯ ಸಿದ್ದತೆಯಲ್ಲಿದ್ದು, ಆರಂಭಿಕವಾಗಿ 2022ರಲ್ಲಿ ಆರಂಭದಲ್ಲಿ ಕೆಯುವಿ100 ಇವಿ ಮಾದರಿಯನ್ನು ತದನಂತರ ಅಟಾಮ್ ಕ್ವಾರ್ಡ್ರಿಸೈಕಲ್ ಮಾದರಿಯನ್ನು ಮತ್ತು 2023ರ ವೇಳೆಗೆ ಎಕ್ಸ್‌ಯುವಿ300 ಇವಿ ಮಾದರಿಯನ್ನು ಬಿಡುಗಡೆ ಮಾಡಲಿದೆ.

ಬಜೆಟ್ ಬೆಲೆಯ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದವಾದ ಮಹೀಂದ್ರಾ ಕಂಪನಿ

ಇಕೆಯುವಿ100 ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 8.25 ಲಕ್ಷ ಬೆಲೆ ಹೊಂದಿದ್ದು, 15.9kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಕನಿಷ್ಠ 150 ಕಿ.ಮೀ ಮೈಲೇಜ್ ಸಾಮರ್ಥ್ಯ ಹೊಂದಿರಲಿದೆ.

ಬಜೆಟ್ ಬೆಲೆಯ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದವಾದ ಮಹೀಂದ್ರಾ ಕಂಪನಿ

ಹಾಗೆಯೇ ಇಎಕ್ಸ್‌ಯುವಿ 300 ಮಾದರಿಯು ಹೆಚ್ಚಿನ ಮಟ್ಟದ ಬ್ಯಾಟರಿ ಪ್ಯಾಕ್‌ನೊಂದಿಗೆ 350ರಿಂದ 400 ಕಿ.ಮೀ ಮೈಲೇಜ್ ಪ್ರೇರಣೆ ಹೊಂದಿಲಿದ್ದು, ಇದು 2023ರ ವೇಳೆಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಬಜೆಟ್ ಬೆಲೆಯ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದವಾದ ಮಹೀಂದ್ರಾ ಕಂಪನಿ

ಈ ಮೂಲಕ ಮಹೀಂದ್ರಾ ಕಂಪನಿಯು ಮಧ್ಯಮ ಗಾತ್ರದ ಎಲೆಕ್ಟ್ರಿಕ್ ಕಾರುಗಳ ಮಾರಾಟ ವಿಭಾಗದಲ್ಲಿ ಕೆಯುವಿ100 ಇವಿ ಮತ್ತು ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರು ಮಾದರಿಯೊಂದಿಗೆ 2025ರ ವೇಳೆಗೆ 5 ಲಕ್ಷ ಯುನಿಟ್ ಇವಿ ವಾಹನಗಳನ್ನು ಮಾರಾಟ ಮಾಡುವ ಗುರಿಹೊಂದಿದ್ದು, ಹೊಸ ಇವಿ ಕಾರುಗಳು ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಬದಲಾವಣೆ ತರಲಿವೆ.

Most Read Articles

Kannada
English summary
Mahindra to launch more affordable electric suv soon
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X