ಬೇಡಿಕೆ ಹೆಚ್ಚಿದ ಹಿನ್ನಲೆಯಲ್ಲಿ ಥಾರ್ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲಿದೆ ಮಹೀಂದ್ರಾ
ಮಹೀಂದ್ರಾ ನ್ಯೂ ಜನರೇಷನ್ ಥಾರ್ ಎಸ್‌ಯುವಿ ಕಾರು ಮಾದರಿಯು ಬಿಡುಗಡೆಯಾದ ನಂತರ ಇದುವರೆಗೆ 40 ಸಾವಿರ ಬುಕ್ಕಿಂಗ್ ಪಡೆದುಕೊಂಡಿದ್ದು, ಬುಕ್ಕಿಂಗ್ ನಂತರ ಗ್ರಾಹಕರ ವಿತರಣೆಯ ಅವಧಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 6 ತಿಂಗಳಿನಿಂದ 10 ತಿಂಗಳಿಗೆ ನಿಗದಿಪಡಿಸಲಾಗಿದೆ.

ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಿರುವ ಹೊಸ ಥಾರ್ ಮಾದರಿಗೆ ದಿನಂಪ್ರತಿ 200ರಿಂದ 250 ಗ್ರಾಹಕರು ಸರಾಸರಿಯಾಗಿ ಹೊಸ ಕಾರಿಗೆ ಬುಕ್ಕಿಂಗ್ ದಾಖಲಿಸುತ್ತಿದ್ದು, ಬೇಡಿಕೆಗೆ ಅನುಗುಣವಾಗಿ ಹೊಸ ಕಾರನ್ನು ಪೂರೈಸಲು ಉತ್ಪಾದನಾ ಪ್ರಮಾಣವನ್ನು ಎರಡನೇ ಬಾರಿಗೆ ಹೆಚ್ಚಳ ಮಾಡಲಾಗುತ್ತಿದೆ. ಈ ಹಿಂದೆ ಮಹೀಂದ್ರಾ ಕಂಪನಿಯು ನಾಸಿಕ್‌ನಲ್ಲಿರುವ ತನ್ನ ಎರಡನೇ ಕಾರು ಉತ್ಪಾದನಾ ಘಟಕದಲ್ಲಿ ಪ್ರತಿ ತಿಂಗಳು ಕೇವಲ 2 ಸಾವಿರ ಯುನಿಟ್ ಉತ್ಪಾದನಾ ಸಾಮರ್ಥ್ಯ ಹೊಂದಿತ್ತು. ಬೇಡಿಕೆ ಹೆಚ್ಚಿದ ಹಿನ್ನಲೆಯಲ್ಲಿ ಕಳೆದ ಜನವರಿ ಆರಂಭದಲ್ಲಿ ಥಾರ್ ಉತ್ಪಾದನೆಯನ್ನು 2 ಸಾವಿರದಿಂದ 3 ಸಾವಿರ ಯುನಿಟ್‌ಗೆ ಹೆಚ್ಚಳ ಮಾಡಲಾಗುತ್ತಿತ್ತು.

3 ಸಾವಿರ ಯುನಿಟ್ ಹೆಚ್ಚಳದ ನಂತರ ಗ್ರಾಹಕರ ಕಾಯುವಿಕೆ ಅವಧಿಯು ಹೆಚ್ಚುತ್ತಲೇ ಇದ್ದು, ಹೆಚ್ಚು ಕಾಯುವಿಕೆಯ ಅವಧಿಯಿಂದ ಗ್ರಾಹಕರನ್ನು ಕಳೆದುಕೊಳ್ಳಬಹುದಾದ ಭೀತಿ ಕಂಪನಿಯನ್ನು ಕಾಡುತ್ತಿದೆ. ಈ ಹಿನ್ನಲೆಯಲ್ಲಿ ಕಾರು ಉತ್ಪಾದನೆಯನ್ನು ಹೆಚ್ಚಿಸಲು ನಿರ್ಧರಿಸಿರುವ ಮಹೀಂದ್ರಾ ಕಂಪನಿಯು ಮಾರ್ಚ್‌ನಿಂದ ಹೊಸ ಸೌಲಭ್ಯಗಳ ಅಳವಡಿಕೆಯೊಂದಿಗೆ ಉತ್ಪಾದನೆಯನ್ನು ಹೆಚ್ಚಿಸಲು ನಿರ್ಧರಿದೆ.

ಪ್ರತಿ ತಿಂಗಳು ಸರಾಸರಿಯಾಗಿ ನಾಲ್ಕು ಸಾವಿರ ಯುನಿಟ್ ಉತ್ಪಾದನೆಯ ಗುರಿಹೊಂದಿರುವ ಮಹೀಂದ್ರಾ ಕಂಪನಿಯು ಕಡಿಮೆ ಕಾಯುವಿಕೆ ಅವಧಿಯೊಂದಿಗೆ ಗ್ರಾಹಕರ ವಿತರಣೆಯನ್ನು ಹೆಚ್ಚಿಸಲು ನಿರ್ಧರಿಸಿದ್ದು, ಉತ್ಪಾದನೆ ಹೆಚ್ಚಳದೊಂದಿಗೆ ಕಾಯುವಿಕೆಯ ಅವಧಿಯಲ್ಲಿ ಸಾಕಷ್ಟು ಕಡಿತವಾಗಲಿದೆ.

ಇನ್ನು ಹೊಸ ತಲೆಮಾರಿನ ಆಫ್ ರೋಡಿಂಗ್ ವೈಶಿಷ್ಟ್ಯತೆಯೊಂದಿಗೆ ತನ್ನದೆ ಆದ ಜನಪ್ರಿಯೆತೆ ಹೊಂದುತ್ತಿರುವ ಥಾರ್ ಕಾರು ಮಾದರಿಯು ಸಾಮಾನ್ಯ ಕಾರು ಮಾದರಿಗಳಂತೆ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ. ಗ್ರಾಹಕರ ಬೇಡಿಕೆಯೆಂತೆ ಥಾರ್ ಆರಂಭಿಕ ಆವೃತ್ತಿಗಳಾದ ಎಎಕ್ಸ್ ಪೆಟ್ರೋಲ್ ಸ್ಟ್ಯಾಂಡರ್ಡ್ ಸಿಕ್ಸ್ ಸೀಟರ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಡೀಸೆಲ್ ಸಾಫ್ಟ್ ಟಾಪ್ ಮಾದರಿಗಳನ್ನು ಸ್ಥಗಿತಗೊಳಿಸಿರುವ ಕಂಪನಿಯು ಹೈ ಎಂಡ್ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಗಮನಹರಿಸಿದೆ.

ವೆರಿಯೆಂಟ್ ಬದಲಾವಣೆ ನಂತರ ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.10 ಲಕ್ಷದಿಂದ ಟಾಪ್ ಮಾದರಿಯು ರೂ. 14.15 ಲಕ್ಷ ಬೆಲೆ ಪಡೆದುಕೊಂಡಿದ್ದು, ಅತ್ಯುತ್ತಮ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ.

ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.
MOST READ: ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.


Click it and Unblock the Notifications