ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಡಿಯೋ ರಿವ್ಯೂ

ಮಹೀಂದ್ರಾ ಹೊಸ ಎಕ್ಸ್‌ಯುವಿ700 ಎಸ್‌ಯುವಿಯು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಗಳಿಗೆ ಭರ್ಜರಿ ಪೈಪೋಟಿ ನೀಡುವಂತಹ ಪ್ರಮುಖ ಫೀಚರ್ಸ್ ಪಡೆದುಕೊಂಡಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಆಧರಿಸಿ ಬಿಡುಗಡೆಯಾಗಲಿದೆ.

ಹೊಸ ಎಕ್ಸ್‌ಯು‌ವಿ700 ಭಾರತದಲ್ಲಿ ಬಿಡುಗಡೆಯಾಗುವ ಬಹುನಿರೀಕ್ಷಿತ ಎಸ್‌ಯುವಿಗಳಲ್ಲಿ ಒಂದಾಗಿದ್ದು, ಹೊಸ ಎಸ್‌ಯುವಿಯನ್ನು ಮಹೀಂದ್ರಾ ಕಂಪನಿಯು ಕಳೆದ ವಾರವಷ್ಟೇ ದೇಶಿಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿತ್ತು. ಹೊಸ ಎಸ್‌ಯುವಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದ್ದು, ಬಿಡುಗಡೆಗೂ ಮುನ್ನ ಡ್ರೈವ್‌ಸ್ಪಾರ್ಕ್ ತಂಡಕ್ಕೆ ಹೊಸ ಕಾರಿನ ಫಸ್ಟ್ ಚಾಲನೆಗೆ ಅವಕಾಶ ಸಿಕ್ಕಿತ್ತು. ಹಾಗಾದರೆ ಹೊಸ ಎಸ್‌ಯುವಿಯು ಈ ಹಿಂದಿನ ಎಕ್ಸ್‌ಯುವಿ500 ಮಾದರಿಗಿಂತ ಹೇಗೆ ಭಿನ್ನವಾಗಿದೆ ಮತ್ತು ಹೊಸ ಕಾರಿನ ಫೀಚರ್ಸ್‌ಗಳ ಕುರಿತಾಗಿ ಫಸ್ಟ್ ಡ್ರೈವ್ ರಿವ್ಯೂನಲ್ಲಿ ಎಲ್ಲ ಮಾಹಿತಿಗಳನ್ನು ತಿಳಿಯೋಣ.

ಹೊಸ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯು ಸಂಪೂರ್ಣವಾಗಿ ಹೊಸ ತಂತ್ರಜ್ಞಾನ, ವಿನೂತನ ವಿನ್ಯಾಸ ಮತ್ತು ಬಲಿಷ್ಠ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, ಹೊಸ ಕಾರಿನಲ್ಲಿ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೇರಿದಂತೆ ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳಲ್ಲೇ ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿದೆ.

ಹೊಸ ಎಕ್ಸ್‌‌ಯುವಿ700 ಎಸ್‌ಯುವಿ ಮಾದರಿಯ ಪ್ರಮುಖ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಎಂಎಕ್ಸ್ ಸೀರಿಸ್ ಮತ್ತು ಆಂಡ್ರಿನೊಎಕ್ಸ್ ಸೀರಿಸ್‌ ಪಡೆದುಕೊಂಡಿದೆ. ಇದರಲ್ಲಿ ಎಂಎಕ್ಸ್ ಸೀರಿಸ್ ಮಾದರಿಗಳು 5 ಸೀಟರ್‌ನೊಂದಿಗೆ ಬಿಡುಗಡೆಯಾಗಲಿದ್ದರೆ ಆಂಡ್ರಿನೊಎಕ್ಸ್ ಸೀರಿಸ್‌ ಕಾರುಗಳು 7 ಸೀಟರ್ ಸೌಲಭ್ಯದೊಂದಿಗೆ ತುಸು ಐಷಾರಾಮಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರಿನ ವಿಡಿಯೋ ರಿವ್ಯೂ

ಹೊಸ ಎಕ್ಸ್‌ಯುವಿ700 ಮಾದರಿಯಲ್ಲಿ 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ. 2.0-ಲೀಟರ್ ಪೆಟ್ರೋಲ್ ಮಾದರಿಯು 197.2-ಬಿಎಚ್‌ಪಿ, 380-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 184.4-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(ಎಂಟಿ),450-ಎನ್ಎಂ ಟಾರ್ಕ್(ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳು ಲಭ್ಯವಿದ್ದು, ಹೈ ಎಂಡ್ ಮಾದರಿಗಳಲ್ಲಿ ಮಹೀಂದ್ರಾ ಕಂಪನಿಯು 4x4 ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಜೋಡಣೆ ಮಾಡಿದೆ.

Most Read Articles

Kannada
English summary
Mahindra xuv 700 suv first drive review video
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X