Just In
- 1 hr ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- News
ಪಶ್ಚಿಮ ಬಂಗಾಳ ಕಾಶ್ಮೀರವಾದರೆ ತಪ್ಪೇನು ಹೇಳಿ; ಸುವೇಂದುಗೆ ಒಮರ್ ತಿರುಗೇಟು
- Movies
ದೀದಿ ಸಾಮ್ರಾಜ್ಯದಲ್ಲಿ ಕಮಲದ ಕೈ ಹಿಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Sports
ಐಪಿಎಲ್ 2021: ಅಧಿಕೃತ ವೇಳಾಪಟ್ಟಿ ಬಿಡುಗಡೆ, ಮೊದಲ ಪಂದ್ಯದಲ್ಲಿ ಆರ್ಸಿಬಿಗೆ ಮುಂಬೈ ಎದುರಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಗೆ ಸಜ್ಜಾದ ಮಹೀಂದ್ರಾ ಎಕ್ಸ್‌ಯುವಿ300 ಪೆಟ್ರೋಲ್ ಆಟೋಮ್ಯಾಟಿಕ್ ವೆರಿಯೆಂಟ್
ನ್ಯೂ ಜನರೇಷನ್ ಮಹೀಂದ್ರಾ ಥಾರ್ ಎಸ್‍ಯುವಿ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲವನ್ನು ಮೂಡಿಸಿದೆ. ಈ ಐಕಾನಿಕ್-ಆಫ್ ರೋಡರ್ ಮಹೀಂದ್ರಾ ಥಾರ್ ಎಸ್‍ಯುವಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಇದರ ನಡುವೆ ಮಹೀಂದ್ರಾ ತನ್ನ ಇತರ ಜನಪ್ರಿಯ ಎಸ್‍ಯುವಿಗಳನ್ನು ನವೀಕರಿಸಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಸಬ್ ಕಾಂಪ್ಯಾಕ್ಟ್ ಎಸ್‌ಯುವಿ ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಸ್ಪರ್ಧಾತ್ಮಕ ವಿಭಾಗಗಳಲ್ಲಿ ಒಂದಾಗಿದೆ, ಪ್ರಸ್ತುತ ವಿವಿಧ ಕಾರು ಉತ್ಪಾದಕರ 8ಕ್ಕೂ ಹೆಚ್ಚು ಸಬ್ ಕಾಂಪ್ಯಾಕ್ಟ್ ಎಸ್‌ಯುವಿಗಳು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಇದರಿಂದ ಮಹೀಂದ್ರಾ ಕಂಪನಿಯು ಸಬ್ ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ತಮ್ಮ ಎಕ್ಸ್‌ಯುವಿ300 ಮಾದರಿಯನ್ನು ಪೆಟ್ರೋಲ್ ಆಟೋಮ್ಯಾಟಿಕ್ ವೆರಿಯೆಂಟ್ ನಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ. ಈ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಪೆಟ್ರೋಲ್ ಆಟೋಮ್ಯಾಟಿಕ್ ವೆರಿಯೆಂಟ್ ಮುಂದಿನ ತಿಂಗಳು ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

ಮಹೀಂದ್ರಾ ಎಕ್ಸ್‌ಯುವಿ300 ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 110 ಬಿಹೆಚ್‍ಪಿ ಪವರ್ ಮತ್ತು 200 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಇದರ ಜೊತೆಗೆ 1.5 ಲೀಟರ್ ಆಯಿಲ್ ಬರ್ನರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 117 ಬಿಹೆಚ್‍ಪಿ ಪವರ್ ಮತ್ತು 300 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಮಹೀಂದ್ರಾ ಎಕ್ಸ್‌ಯುವಿ300 ಪ್ರತಿಸ್ಪರ್ಧಿಗಳು ಸಬ್ ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ತಮ್ಮ ಮಾದರಿಗಳಲ್ಲಿ ಗೇರ್ ಬಾಕ್ಸ್ ನಲ್ಲಿ ಹೆಚ್ಚಿನ ಆಯ್ಕೆಗಳನ್ನು ನೀಡುತ್ತಿರುವುದರಿಂದ, ಮಹೀಂದ್ರಾ ಹಿಂದೆ ಉಳಿಯಲು ಬಯಸುವುದಿಲ್ಲ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ

ಸ್ವದೇಶಿ ಕಾರು ತಯಾರಕರಾದ ಮಹೀಂದ್ರಾ ಈಗ ಅಂತಿಮವಾಗಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಾಗಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅನ್ನು ಪರಿಚಯಿಸಲು ಸಜ್ಜಾಗಿದೆ. ಇದು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಯುನಿಟ್ ಎಂದು ನಿರೀಕ್ಷಿಸುತ್ತೇವೆ.

ಇನ್ನು ಈ ಮಹೀಂದ್ರಾ ಕಂಪನಿಯ ಎಕ್ಸ್‌ಯುವಿ300 ಕಾಂಪ್ಯಾಕ್ಟ್ ಎಸ್‍ಯುವಿಯು ಕಳೆದ ಹಲವು ವರ್ಷಗಳಿಂದ ಸತತವಾಗಿ ಗ್ಲೋಬಲ್ ಎನ್‌ಸಿಎಪಿಯಲ್ಲಿ ಸುರಕ್ಷತಾ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಈ ಮಹೀಂದ್ರಾ ಎಕ್ಸ್‌ಯುವಿ300 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಕಾಂಪ್ಯಾಕ್ಟ್ ಎಸ್‍ಯುವಿಗಳಲ್ಲಿ ಒಂದಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

2014 ಮತ್ತು 2020ರ ನಡುವೆ ಗ್ಲೋಬಲ್ ಎನ್‌ಸಿಎಪಿಯಲ್ಲಿ ಪರೀಕ್ಷಿಸಿದಎಲ್ಲಾ ಮಹೀಂದ್ರಾ ಎಕ್ಸ್‌ಯುವಿ300 ಸುರಕ್ಷಿತ 'ಮೇಡ್-ಇನ್-ಇಂಡಿಯಾ' ಕಾರು ಎಂಬ ಬೀರುದನ್ನು ಮೂಡಿಗೇರಿಸಿಕೊಂಡಿದೆ. ಕಳೆದ ಆರು ವರ್ಷಗಳಲ್ಲಿ ಗ್ಲೋಬಲ್ ಎನ್‌ಸಿಎಪಿಯಲ್ಲಿ ಟೆಸ್ಟ್ ನಡೆಸಿದ ಒಟ್ಟು 38 ವಾಹನಗಳ ನಡುವೆ ಮಹೀಂದ್ರಾ ಎಕ್ಸ್‌ಯುವಿ 300 ಅತಿ ಹೆಚ್ಚು ಸುರಕ್ಷಾತ ರೇಟಿಂಗ್ ಪಾಯಿಂಟ್ ಅನ್ನು ಪಡೆದುಕೊಂಡಿದೆ.

ಮಹೀಂದ್ರಾ ಎಕ್ಸ್‌ಯುವಿ300 ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್ ಮತ್ತು ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಗೆ ಪೈಪೋಟಿಯನ್ನು ನೀಡುತ್ತದೆ.