Just In
- 1 hr ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 3 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 5 hrs ago
ವಾರದ ಪ್ರಮುಖ ಸುದ್ದಿ: ಏರ್‌ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 15 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
ಅಮೆರಿಕಾದಲ್ಲಿ ಇಂಡಿಯನ್ ರೆಸ್ಟೋರೆಂಟ್ ಪ್ರಾರಂಭಿಸಿದ ಪ್ರಿಯಾಂಕಾ ಚೋಪ್ರಾ: ಪೂಜೆಯ ಫೋಟೋ ವೈರಲ್
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- News
ಚಿನ್ನ ಕಳ್ಳ ಸಾಗಾಣಿಕೆ ಅನುಮಾನ; 48 ಲಕ್ಷ ವಾಚ್ ಒಡೆದ ಅಧಿಕಾರಿಗಳು!
- Sports
ಐಪಿಎಲ್ 2021: ಅಧಿಕೃತ ವೇಳಾಪಟ್ಟಿ ಬಿಡುಗಡೆ, ಮೊದಲ ಪಂದ್ಯದಲ್ಲಿ ಆರ್ಸಿಬಿಗೆ ಮುಂಬೈ ಎದುರಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಾರ್ ಕನೆಕ್ಟ್ ಟೆಕ್ನಾಲಜಿ ಹೊಂದಿರುವ ಎಕ್ಸ್‌ಯುವಿ300 ಎಟಿ ಬಿಡುಗಡೆ ಮಾಡಿದ ಮಹೀಂದ್ರಾ
ಮಹೀಂದ್ರಾ ಕಂಪನಿಯು ತನ್ನ ಜನಪ್ರಿಯ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಾದ ಎಕ್ಸ್‌ಯುವಿ300 ಮಾದರಿಯ ಪೆಟ್ರೋಲ್ ಆವೃತ್ತಿಯಲ್ಲಿ ಆಟೋಶಿಫ್ಟ್ ಟ್ರಾನ್ಸ್‌ಮಿಷನ್ ಆಯ್ಕೆ ಪರಿಚಯಿಸಿದ್ದು, ಹೊಸ ಆವೃತ್ತಿಯು ಟಾಪ್ ಎಂಡ್ ಮಾದರಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದೆ.

ಆಟೋಶಿಫ್ಟ್ ಟ್ರಾನ್ಸ್‌ಮಿಷನ್ ಆಯ್ಕೆ ಹೊಂದಿರುವ ಎಕ್ಸ್‌ಯುವಿ300 ಡಬ್ಲ್ಯು8 ಆಪ್ಷನ್ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.95 ಲಕ್ಷ ಬೆಲೆ ಹೊಂದಿದ್ದು, ಹೊಸ ಆವೃತ್ತಿಯು ಅಕ್ವಾಮರಿಯೆನ್ ಡ್ಯುಯಲ್ ಪೇಂಟ್‌ನೊಂದಿಗೆ ಹೊಸದಾಗಿ ಬ್ಲ್ಯೂ ಶೈನ್ ಪ್ಲಸ್ ಕಾರ್ ಕನೆಕ್ಟೆಡ್ ಟೆಕ್ನಾಲಜಿಯನ್ನು ಪಡೆದುಕೊಂಡಿರುವುದು ಕಂಪ್ಯಾಕ್ಟ್ ಎಸ್‌ಯುವಿ ಪ್ರಿಯರನ್ನು ಸೆಳೆಯಲಿದೆ.

ಮಹೀಂದ್ರಾ ಕಂಪನಿಯೇ ಅಭಿವೃದ್ದಿಪಡಿಸಿರುವ ಹೊಸ ಬ್ಲ್ಯೂ ಶೈನ್ ಪ್ಲಸ್ ಕಾರ್ ಕನೆಕ್ಟೆಡ್ ಟೆಕ್ನಾಲಜಿಯು ಹೊಸ ಕಾರಿಗೆ ಗರಿಷ್ಠ ಭದ್ರತೆ ಒದಗಿಸಲಿದ್ದು, ಮೊಬೈಲ್ ಅಪ್ಲಿಕೇಷನ್ ಮೂಲಕವೇ ಕಾರಿನ ಬಹುತೇಕ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಬಹುದಾಗಿದೆ.

ಬ್ಲ್ಯೂ ಶೈನ್ ಪ್ಲಸ್ ಕಾರ್ ಕನೆಕ್ಟೆಡ್ ಟೆಕ್ನಾಲಜಿಯಲ್ಲಿ 40ಕ್ಕೂ ಹೆಚ್ಚು ಫೀಚರ್ಸ್‌ಗಳಿದ್ದು, ಇ ಸಿಮ್ ಮೂಲಕ ಮೊಬೈಲ್ ಅಪ್ಲಿಕೇಷನ್‌ಗೆ ಹೊಸ ಕಾರ್ ಕನೆಕ್ಟ್ ತಂತ್ರಜ್ಞಾನವನ್ನು ಸಂಪರ್ಕಿಸಿ ನಿಯಂತ್ರಿಸಬಹುದಾಗಿದೆ.

ಹೊಸ ಕಾರ್ ಕನೆಕ್ಟ್ ಟೆಕ್ನಾಲಜಿ ವಾಹನ ಮಾಲೀಕರು ಲೈವ್ ವೆಹಿಕಲ್ ಟ್ರ್ಯಾಕಿಂಗ್, ರಿಮೋಟ್ ಡೋರ್ ಲಾಕ್, ಸೆಕ್ಯೂರಿಟಿ ಅಲರ್ಟ್ಸ್, ಇನ್ ಕಾರ್ ಕಂಟ್ರೋಲ್, ರಿಮೋಟ್ ನಿಯಂತ್ರಿತ ಹಜಾರ್ಡ್ ಲ್ಯಾಂಪ್, ಜಿಯೋ ಫೆನ್ಸಿಂಗ್, ವೆಹಿಕಲ್ ಇನ್‌ಫಾರ್ಮೆಷನ್ ಅಲರ್ಟ್ ಮತ್ತು ಎಮರ್ಜೆನ್ಸಿ ಅಸಿಸ್ಟ್ ಸೌಲಭ್ಯಗಳ ಮೂಲಕ ಕಾರು ನಿರ್ವಹಣೆಯನ್ನು ಮತ್ತಷ್ಟು ಸುಲಭಗೊಳಿಸಲು ಮಾಲೀಕರಿಗೆ ಸಹಕರಿಸುತ್ತದೆ.

ಅಂಡ್ರಾಯಿಡ್ ಮತ್ತು ಐಎಸ್ಒ ಸರ್ಪೊಟ್ ಮಾಡುವ ಕಾರ್ ಕನೆಕ್ಟ್ ತಂತ್ರಜ್ಞಾನವು ಗ್ರಾಹಕರ ಬಳಕೆಗೆ ಸಾಕಷ್ಟು ಸುಲಭವಾಗಿದ್ದು, ಹೊಸ ಫೀಚರ್ಸ್‌ನಲ್ಲಿರುವ ಲೈವ್ ವೆಹಿಕಲ್ ಟ್ರ್ಯಾಕಿಂಗ್ ಮತ್ತು ಜಿಯೋ ಫೆನ್ಸಿಂಗ್ ಸೌಲಭ್ಯಗಳ ಮೂಲಕ ಕಾರುಗಳ ಕಳ್ಳತನದಂತಹ ಪ್ರಕರಣಗಳನ್ನು ಅತಿ ಸುಲಭವಾಗಿ ಪತ್ತೆಹಚ್ಚಬಹುದಾಗಿದೆ.

ಲೈವ್ ವೆಹಿಕಲ್ ಟ್ರ್ಯಾಕಿಂಗ್ ಮತ್ತು ಜಿಯೋ ಫೆನ್ಸಿಂಗ್ ಸೌಲಭ್ಯಗಳನ್ನು ಬಳಕೆ ಮಾಡಿಕೊಳ್ಳುವ ಮೂಲಕ ಕಾರು ಕಳ್ಳತನಗಳನ್ನು ಸುಲಭವಾಗಿ ತಡೆಯಬಹುದಾಗಿದ್ದು, ಕಳ್ಳತನವಾದ ವಾಹನ ಚಾಲನೆ ಸ್ಥಗಿತಗೊಳಿಸಲು ಇಮ್‌ಮೊಬಿಲೈಸರ್ ಪ್ರಯೋಗಿಸಬಹುದಾಗಿದೆ.

ಇದರೊಂದಿಗೆ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ300 ಕಾರು ಮಾದರಿಯ ಮಧ್ಯಮ ಕ್ರಮಾಂಕದ ಡಬ್ಲ್ಯು6 ಮಾದರಿಯಲ್ಲಿ ಎಲೆಕ್ಟ್ರಿಕ್ ಸನ್‌ರೂಫ್ ಸೌಲಭ್ಯವನ್ನು ಸ್ಟ್ಯಾಂಡರ್ಡ್ ನೀಡಲಾಗಿದ್ದು, ಎಂಜಿನ್ ಆಯ್ಕೆಗಳು ಈ ಹಿಂದಿನ ಮಾದರಿಯಲ್ಲೇ ಮುಂದುವರಿಸಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಎಕ್ಸ್‌ಯುವಿ 300 ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸದಾಗಿ ಬಿಡುಗಡೆ ಮಾಡಲಾದ ಆಟೋಶಿಫ್ಟ್ ಟ್ರಾನ್ಸ್‌ಮಿಷನ್ ಹೊಂದಿರುವ 1.2-ಲೀಟರ್ ಪೆಟ್ರೋಲ್ ಮಾದರಿಯು 108 ಬಿಎಚ್‌ಪಿ ಮತ್ತು 200 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಡೀಸೆಲ್ ಮಾದರಿಯು 1.5-ಲೀಟರ್ ಎಂಜಿನ್‌ನೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, 114 ಬಿಎಚ್‌ಪಿ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಪ್ರಯಾಣಿಕ ಸುರಕ್ಷತೆಯಲ್ಲೂ ಎಕ್ಸ್‌ಯುವಿ300 ಕಾರು ಮುಂಚೂಣಿಯಲ್ಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ಸ್ ಹೊಂದಿರುವ ಮೊದಲ ಮಧ್ಯಮ ಕ್ರಮಾಂಕದ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾಗಿ ಹೊರಹೊಮ್ಮಿದ್ದು, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟಾಪ್ ಎಂಡ್ ಮಾದರಿಯಲ್ಲಿ 7 ಏರ್‌ಬ್ಯಾಗ್ ಸೇರಿದಂತೆ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.