ಮಾರಾಟದಲ್ಲಿ ತನ್ನ ಪ್ರತಿಸ್ಪರ್ಧಿ ಇಕೋಸ್ಪೋರ್ಟ್ ಎಸ್‍ಯುವಿಯನ್ನು ಹಿಂದಿಕ್ಕಿದ ಮಹೀಂದ್ರಾ ಎಕ್ಸ್‌ಯುವಿ300

ಮಹೀಂದ್ರಾ ಎಕ್ಸ್‌ಯುವಿ300 ಕಾರು ಸುರಕ್ಷತೆಗೆ ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ. ಭಾರತದಲ್ಲಿ ಪ್ರಸ್ತುತ ಮಾರಾಟದಲ್ಲಿ ಲಭ್ಯವಿರುವ ಯಾವುದೇ ಕಾರು ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ನಲ್ಲಿ ಎಕ್ಸ್‌ಯುವಿ 300 ಅನ್ನು ಮೀರಿಸುವಲ್ಲಿ ಯಶಸ್ವಿಯಾಗಲಿಲ್ಲ.

ಮಾರಾಟದಲ್ಲಿ ತನ್ನ ಪ್ರತಿಸ್ಪರ್ಧಿ ಫೋರ್ಡ್ ಇಕೋಸ್ಪೋರ್ಟ್ ಎಸ್‍ಯುವಿಯನ್ನು ಹಿಂದಿಕ್ಕಿದ ಮಹೀಂದ್ರಾ ಎಕ್ಸ್‌ಯುವಿ300

ಕಳೆದ ತಿಂಗಳ ಮಾರಾಟದಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ತನ್ನ ಪ್ರತಿಸ್ಪರ್ಧಿಗಳಲ್ಲಿ ಒಂದಾದ ಫೋರ್ಡ್ ಇಕೋಸ್ಪೋರ್ಟ್ ಅನ್ನು ಹಿಂದಿಕ್ಕಿದೆ. ಕಳೆದ ತಿಂಗಳು ಮಹೀಂದ್ರಾ ಎಕ್ಸ್‌ಯುವಿ300 ಮಾದರಿಯ 4,144 ಯುನಿಟ್ ಗಳು ಮಾರಾಟವಾಗಿವೆ. ಕಳೆದ ತಿಂಗಳಿನಲ್ಲಿ ಎಕ್ಸ್‌ಯುವಿ300 ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಎರಡನೇ ಮಹೀಂದ್ರಾ ಕಾರ್ ಆಗಿ ಹೊರಹೊಮ್ಮಿದೆ.

ಮಾರಾಟದಲ್ಲಿ ತನ್ನ ಪ್ರತಿಸ್ಪರ್ಧಿ ಫೋರ್ಡ್ ಇಕೋಸ್ಪೋರ್ಟ್ ಎಸ್‍ಯುವಿಯನ್ನು ಹಿಂದಿಕ್ಕಿದ ಮಹೀಂದ್ರಾ ಎಕ್ಸ್‌ಯುವಿ300

ಇನ್ನು ಕಳೆದ ತಿಂಗಳಿನಲ್ಲಿ ಫೋರ್ಡ್ ಇಕೋಸ್ಪೋರ್ಟ್ ಮಾದರಿಯ 3,820 ಯುನಿಟ್ ಗಳು ಮಾರಾಟವಾಗಿವೆ. ಕಳೆದ ಏಪ್ರಿಲ್ ತಿಂಗಳಿನ ಮಾರಾಟದಲ್ಲಿ ಫೋರ್ಡ್ ಇಕೋಸ್ಪೋರ್ಟ್ ಕಾರನ್ನು ಹಿಂದಿಕ್ಕುವಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ಯಶ್ವಸಿಯಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಮಾರಾಟದಲ್ಲಿ ತನ್ನ ಪ್ರತಿಸ್ಪರ್ಧಿ ಫೋರ್ಡ್ ಇಕೋಸ್ಪೋರ್ಟ್ ಎಸ್‍ಯುವಿಯನ್ನು ಹಿಂದಿಕ್ಕಿದ ಮಹೀಂದ್ರಾ ಎಕ್ಸ್‌ಯುವಿ300

ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಫೋರ್ಡ್ ಇಕೋಸ್ಪೋರ್ಟ್ ಸಬ್ ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದ ಮಾದರಿಗಳಾಗಿದೆ. ಸಬ್ ಕಾಂಪ್ಯಾಕ್ಟ್ ಎಸ್‌ಯುವಿ ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಸ್ಪರ್ಧಾತ್ಮಕ ವಿಭಾಗಗಳಲ್ಲಿ ಒಂದಾಗಿದೆ, ಪ್ರಸ್ತುತ ವಿವಿಧ ಕಾರು ಉತ್ಪಾದಕರ 8ಕ್ಕೂ ಹೆಚ್ಚು ಸಬ್ ಕಾಂಪ್ಯಾಕ್ಟ್ ಎಸ್‌ಯುವಿಗಳು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ.

ಮಾರಾಟದಲ್ಲಿ ತನ್ನ ಪ್ರತಿಸ್ಪರ್ಧಿ ಫೋರ್ಡ್ ಇಕೋಸ್ಪೋರ್ಟ್ ಎಸ್‍ಯುವಿಯನ್ನು ಹಿಂದಿಕ್ಕಿದ ಮಹೀಂದ್ರಾ ಎಕ್ಸ್‌ಯುವಿ300

ಮಹೀಂದ್ರಾ ಎಕ್ಸ್‌ಯುವಿ300 ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯ ಬಗ್ಗೆ ಹೇಳುವುದಾದರೆ, ಇದರಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 110 ಬಿಹೆಚ್‍ಪಿ ಪವರ್ ಮತ್ತು 200 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮಾರಾಟದಲ್ಲಿ ತನ್ನ ಪ್ರತಿಸ್ಪರ್ಧಿ ಫೋರ್ಡ್ ಇಕೋಸ್ಪೋರ್ಟ್ ಎಸ್‍ಯುವಿಯನ್ನು ಹಿಂದಿಕ್ಕಿದ ಮಹೀಂದ್ರಾ ಎಕ್ಸ್‌ಯುವಿ300

ಇದರ ಜೊತೆಗೆ 1.5 ಲೀಟರ್ ಆಯಿಲ್ ಬರ್ನರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 117 ಬಿಹೆಚ್‍ಪಿ ಪವರ್ ಮತ್ತು 300 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಮಾರಾಟದಲ್ಲಿ ತನ್ನ ಪ್ರತಿಸ್ಪರ್ಧಿ ಫೋರ್ಡ್ ಇಕೋಸ್ಪೋರ್ಟ್ ಎಸ್‍ಯುವಿಯನ್ನು ಹಿಂದಿಕ್ಕಿದ ಮಹೀಂದ್ರಾ ಎಕ್ಸ್‌ಯುವಿ300

ಇಕೋಸ್ಪೋರ್ಟ್ ಕಾಂಪ್ಯಾಕ್ಟ್ ಎಸ್‌ಯುವಿಯ ಬಗ್ಗೆ ಹೇಳುವುದಾದರೆ, ಇದು ಹೊಸ ಎಸ್‌ಇ ವೆರಿಯೆಂಟ್ ಅನ್ನು ಸಹ ಪಡೆದುಕೊಂಡಿತು, ಇದು ಟೈಲ್‌ಗೇಟ್ ಮೌಂಟಡ್ ಸ್ಪೇರ್ ವ್ಹೀಲ್ ಅನ್ನು ಹೊಂದಿಲ್ಲ. ಇಕೋಸ್ಪೋರ್ಟ್ ಕಾಂಪ್ಯಾಕ್ಟ್ ಎಸ್‌ಯುವಿಯ ಟೈಟಾನಿಯಂ ವೆರಿಯೆಂಟ್ ಅನ್ನು ಫೋರ್ಡ್ ಶೀಘ್ರದಲ್ಲೇ ಹೊಸ ನವೀಕರಿಸಲಿದೆ ಎಂದು ವರದಿಯಾಗಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಮಾರಾಟದಲ್ಲಿ ತನ್ನ ಪ್ರತಿಸ್ಪರ್ಧಿ ಫೋರ್ಡ್ ಇಕೋಸ್ಪೋರ್ಟ್ ಎಸ್‍ಯುವಿಯನ್ನು ಹಿಂದಿಕ್ಕಿದ ಮಹೀಂದ್ರಾ ಎಕ್ಸ್‌ಯುವಿ300

2021ರ ಫೋರ್ಡ್ ಇಕೋಸ್ಪೋರ್ಟ್ ಕಾಂಪ್ಯಾಕ್ಟ್ ಎಸ್‌ಯುವಿಯ ಟೈಟಾನಿಯಂ ವೆರಿಯೆಂಟ್‌ನಲ್ಲಿ ಹೊಸ ಫೀಚರ್ಸ್ ನೀಡಬಹುದು. ಇನ್ನು 2021ರ ಫೋರ್ಡ್ ಇಕೋಸ್ಪೋರ್ಟ್ ಟೈಟಾನಿಯಂ ಎಸ್ ವೆರಿಯೆಂಟ್ ಪರಿಷ್ಕೃತ ಫ್ರಂಟ್ ಬಂಪರ್, ಹೊಸ ಎಲ್ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್ ಗಳು, ಎಲ್ಇಡಿ ಟೈಲ್-ಲ್ಯಾಂಪ್ ಗಳು ಮತ್ತು ಕೆಲವು ವಿನ್ಯಾಸ ಬದಲಾವಣೆಗಳನ್ನು ಸ್ವೀಕರಿಸಲಿದೆ ಎಂದು ನಿರೀಕ್ಷಿಸುತ್ತೇವೆ.

ಮಾರಾಟದಲ್ಲಿ ತನ್ನ ಪ್ರತಿಸ್ಪರ್ಧಿ ಫೋರ್ಡ್ ಇಕೋಸ್ಪೋರ್ಟ್ ಎಸ್‍ಯುವಿಯನ್ನು ಹಿಂದಿಕ್ಕಿದ ಮಹೀಂದ್ರಾ ಎಕ್ಸ್‌ಯುವಿ300

2021ರ ಫೋರ್ಡ್ ಇಕೋಸ್ಪೋರ್ಟ್ ಎಸ್‌ಯುವಿಯು ಎರಡು ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದು ಬಿಎಸ್ 6 ಪ್ರೇರಿತ 1.5-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಗಿದೆ.ಇದರಲ್ಲಿ 1.5-ಲೀಟರ್ ಪೆಟ್ರೋಲ್ ಎಂಜಿನ್ 120 ಬಿಹೆಚ್‍ಪಿ ಪವರ್ ಮತ್ತು 149 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಮಾರಾಟದಲ್ಲಿ ತನ್ನ ಪ್ರತಿಸ್ಪರ್ಧಿ ಫೋರ್ಡ್ ಇಕೋಸ್ಪೋರ್ಟ್ ಎಸ್‍ಯುವಿಯನ್ನು ಹಿಂದಿಕ್ಕಿದ ಮಹೀಂದ್ರಾ ಎಕ್ಸ್‌ಯುವಿ300

ಇನ್ನು ನವೀಕರಿಸಿದ 1.5-ಲೀಟರ್ ಡೀಸೆಲ್ ಎಂಜಿನ್ 99 ಬಿಎಚ್‌ಪಿ ಮತ್ತು 215 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ. ಟಾಪ್ ಎಂಡ್ ಮಾದರಿಯಲ್ಲಿರುವ ಟೈಟಾನಿಯಂ ಪ್ಲಸ್ ಮಾದರಿಯಲ್ಲಿ ಮಾತ್ರವೇ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

Most Read Articles

Kannada
English summary
Mahindra XUV300 Beats Ford EcoSport In April 2021 Sales. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X