2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಮಹೀಂದ್ರಾ ಕಂಪನಿಯು ಕಳೆದ ವರ್ಷದಲ್ಲಿ ತನ್ನ ಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಈ ಮಹೀಂದ್ರಾ ಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‍ಯುವಿಗೆ ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ.

2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

2020ರ ವರ್ಷದಲ್ಲಿ ಎಕ್ಸ್‌ಯುವಿ300 ಮಾದರಿಯು ದೇಶದಲ್ಲಿ ಹೆಚ್ಚು ಮಾರಾಟವಾದ ಎಂಟನೇ ಎಸ್‍ಯುವಿಯಾಗಿದೆ. ಕಳೆದ ತಿಂಗಳು ಮಹೀಂದ್ರಾ ಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‍ಯುವಿಯ 3,974 ಯುನಿಟ್‌ಗಳು ಮಾರಾಟವಾಗಿವೆ. 2019ರ ಡಿಸೆಂಬರ್ ತಿಂಗಳಲ್ಲಿ ಎಕ್ಸ್‌ಯುವಿ300 ಮಾದರಿಯ 2,132 ಯುನಿಟ್ ಗಳನ್ನು ಮಾರಾಟವಾಗಿದೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.86 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ. ಪ್ರಸ್ತುತ ಮಹೀಂದ್ರಾ ಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.12.30 ಲಕ್ಷಗಳಾಗಿದೆ.

2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಮಹೀಂದ್ರಾ ಎಕ್ಸ್‌ಯುವಿ300 ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 110 ಬಿಹೆಚ್‍ಪಿ ಪವರ್ ಮತ್ತು 200 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಇದರ ಜೊತೆಗೆ 1.5 ಲೀಟರ್ ಆಯಿಲ್ ಬರ್ನರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 117 ಬಿಹೆಚ್‍ಪಿ ಪವರ್ ಮತ್ತು 300 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಮಹೀಂದ್ರಾ ಎಕ್ಸ್‌ಯುವಿ300 ಪ್ರತಿಸ್ಪರ್ಧಿಗಳು ಸಬ್ ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ತಮ್ಮ ಮಾದರಿಗಳಲ್ಲಿ ಗೇರ್ ಬಾಕ್ಸ್ ನಲ್ಲಿ ಹೆಚ್ಚಿನ ಆಯ್ಕೆಗಳನ್ನು ನೀಡುತ್ತಿರುವುದರಿಂದ, ಮಹೀಂದ್ರಾ ಹಿಂದೆ ಉಳಿಯಲು ಬಯಸುವುದಿಲ್ಲ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಸ್ವದೇಶಿ ಕಾರು ತಯಾರಕರಾದ ಮಹೀಂದ್ರಾ ಈಗ ಅಂತಿಮವಾಗಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಾಗಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅನ್ನು ಪರಿಚಯಿಸಲು ಸಜ್ಜಾಗಿದೆ. ಇದು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಯುನಿಟ್ ದು ನಿರೀಕ್ಷಿಸುತ್ತೇವೆ.

2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಇನ್ನು ಈ ಮಹೀಂದ್ರಾ ಕಂಪನಿಯ ಎಕ್ಸ್‌ಯುವಿ300 ಕಾಂಪ್ಯಾಕ್ಟ್ ಎಸ್‍ಯುವಿಯು ಕಳೆದ ಆರು ವರ್ಷಗಳಿಂದ ಸತತವಾಗಿ ಗ್ಲೋಬಲ್ ಎನ್‌ಸಿಎಪಿಯಲ್ಲಿ ಸುರಕ್ಷತಾ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಈ ಮಹೀಂದ್ರಾ ಎಕ್ಸ್‌ಯುವಿ300 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಕಾಂಪ್ಯಾಕ್ಟ್ ಎಸ್‍ಯುವಿಗಳಲ್ಲಿ ಒಂದಾಗಿದೆ.

MOST READ: 2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

2014 ಮತ್ತು 2020ರ ನಡುವೆ ಗ್ಲೋಬಲ್ ಎನ್‌ಸಿಎಪಿಯಲ್ಲಿ ಪರೀಕ್ಷಿಸಿದ ಎಲ್ಲಾ ಮಹೀಂದ್ರಾ ಎಕ್ಸ್‌ಯುವಿ300 ಸುರಕ್ಷಿತ 'ಮೇಡ್-ಇನ್-ಇಂಡಿಯಾ' ಕಾರು ಎಂಬ ಬೀರುದನ್ನು ಮೂಡಿಗೇರಿಸಿಕೊಂಡಿದೆ. ಕಳೆದ ಆರು ವರ್ಷಗಳಲ್ಲಿ ಗ್ಲೋಬಲ್ ಎನ್‌ಸಿಎಪಿಯಲ್ಲಿ ಟೆಸ್ಟ್ ನಡೆಸಿದ ಒಟ್ಟು 38 ವಾಹನಗಳ ನಡುವೆ ಮಹೀಂದ್ರಾ ಎಕ್ಸ್‌ಯುವಿ 300 ಅತಿ ಹೆಚ್ಚು ಸುರಕ್ಷಾತ ರೇಟಿಂಗ್ ಪಾಯಿಂಟ್ ಅನ್ನು ಪಡೆದುಕೊಂಡಿದೆ.

2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಮಹೀಂದ್ರಾ ಎಕ್ಸ್‌ಯುವಿ300 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್ ಮತ್ತು ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
Mahindra XUV300 Sales Grow By 86% In December 2020. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X