ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ Mahindra XUV300 ಸ್ಪೋರ್ಟ್ಜ್ ವರ್ಷನ್

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಲ್ಲಿಯೇ ಅತಿ ಹೆಚ್ಚು ಸುರಕ್ಷಿತ ಕಾರು ಮಾದರಿಯೆಂಬ ಹೆಗ್ಗಳಿಕೆ ಹೊಂದಿರುವ ಮಹೀಂದ್ರಾ ಎಕ್ಸ್‌ಯುವಿ300(Mahindra XUV300) ಮಾದರಿಯು ಕಳೆದ ಕೆಲ ತಿಂಗಳಿನಿಂದ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಶೀಘ್ರದಲ್ಲೇ ಎಕ್ಸ್‌ಯುವಿ300 ಮಾದರಿಯ ಟರ್ಬೊ ವರ್ಷನ್ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೊಸ Mahindra XUV300 ಸ್ಪೋರ್ಟ್ಜ್ ವರ್ಷನ್ ಕಾರು

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಮಹೀಂದ್ರಾ ಎಕ್ಸ್‌ಯುವಿ300 ಸ್ಪೋರ್ಟ್ಜ್(XUV300 Sportz) ಆವೃತ್ತಿಯು ಇದೀಗ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಕಳೆದ ವರ್ಷವೇ ಬಿಡುಗಡೆಯಾಗಬೇಕಿದ್ದ ಹೊಸ ಕಾರು ಕೋವಿಡ್ ಪರಿಣಾಮ ಬಿಡುಗಡೆ ಮುಂದೂಡಿಕೆಯಾಗುತ್ತಾ ಇದೀಗ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೊಸ Mahindra XUV300 ಸ್ಪೋರ್ಟ್ಜ್ ವರ್ಷನ್ ಕಾರು

ಹೊಸ ಕಾರಿನಲ್ಲಿ ಸಾಮಾನ್ಯ ಮಾದರಿಯಲ್ಲಿರುವಂತೆಯೇ ಪ್ರಮುಖ ತಾಂತ್ರಿಕ ಅಂಶಗಳೊಂದಿಗೆ ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ಹೊಸದಾಗಿ ಅಭಿವೃದ್ದಿಗೊಳಿಸಲಾದ 1.2-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್‌ ಜೋಡಣೆ ಹೊಂದಿದ್ದು, ಅತಿ ಹೆಚ್ಚು ಬಿಎಚ್‌ಪಿ ಉತ್ಪಾದನಾ ವೈಶಿಷ್ಟ್ಯತೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೊಸ Mahindra XUV300 ಸ್ಪೋರ್ಟ್ಜ್ ವರ್ಷನ್ ಕಾರು

ಹೊಸದಾಗಿ ಅಭಿವೃದ್ದಿಗೊಳಿಸಲಾಗಿರುವ 1.2-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಎಂಸ್ಟಾಲಿನ್ ಎಂದು ಹೆಸರಿಸಿರುವ ಮಹೀಂದ್ರಾ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿರುವ ಸಾಮಾನ್ಯ ಮಾದರಿಯ 1.2-ಲೀಟರ್ ಪೆಟ್ರೋಲ್ ಎಂಜಿನ್‌ಗಿಂತಲೂ ಹೆಚ್ಚು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಳಿಸಲಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೊಸ Mahindra XUV300 ಸ್ಪೋರ್ಟ್ಜ್ ವರ್ಷನ್ ಕಾರು

ಹೊಸ ಎಂಜಿನ್ ಅನ್ನು ಸ್ಪೋರ್ಟ್ಜ್ ವರ್ಷನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು ಮುಂಬರುವ ದಸರಾ ವೇಳೆಗೆ ಬಿಡುಗಡೆಯಾಗಬಹುದಾಗಿದೆ. ಹೊಸ ಎಂಜಿನ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೊಸ Mahindra XUV300 ಸ್ಪೋರ್ಟ್ಜ್ ವರ್ಷನ್ ಕಾರು

ಹೊಸ ಎಂಜಿನ್ ಮಾದರಿಯು 130-ಬಿಎಚ್‌ಪಿ ಮತ್ತು 230-ಎನ್ಎಂ ಟಾರ್ಕ್ ಉತ್ಪಾದನಾ ಸಾಮಾರ್ಥ್ಯ ಪಡೆದುಕೊಂಡಿದ್ದು, ಇದು ಎಕ್ಸ್‌ಯುವಿ300 ಸಾಮಾನ್ಯ ಪೆಟ್ರೋಲ್ ಮಾದರಿಗಿಂತಲೂ 20-ಬಿಎಚ್‌ಪಿ ಹೆಚ್ಚುವರಿಯಾಗಿ ಉತ್ಪಾದನೆ ಮಾಡಬಲ್ಲದು.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೊಸ Mahindra XUV300 ಸ್ಪೋರ್ಟ್ಜ್ ವರ್ಷನ್ ಕಾರು

ಸಾಮಾನ್ಯ ಆವೃತ್ತಿಯಲ್ಲಿ ಪೆಟ್ರೋಲ್ ಮಾದರಿಯು 1.2-ಲೀಟರ್ ಎಂಜಿನ್‍‌ನೊಂದಿಗೆ 110-ಬಿಎಚ್‌ಪಿ ಸಾಮರ್ಥ್ಯವನ್ನು ಹೊಂದಿದ್ದು, ಸಾಮಾನ್ಯ ಪೆಟ್ರೋಲ್ ಆವೃತ್ತಿಗಿಂತಲೂ ಹೊಸ ಕಾರು ಹೆಚ್ಚುವರಿಯಾಗಿ ರೂ.1 ಲಕ್ಷದಿಂದ ರೂ. 1.50 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆಯಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೊಸ Mahindra XUV300 ಸ್ಪೋರ್ಟ್ಜ್ ವರ್ಷನ್ ಕಾರು

ಹಾಗೆಯೇ ಹೊಸ ಕಾರನ್ನು ಸ್ಪೋರ್ಟ್ಜ್ ಮಾದರಿಯಾಗಿ ಗುರುತಿಸಿಕೊಳ್ಳಲು ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದ್ದು, ಸ್ಪೋರ್ಟಿ ಗ್ರಾಫಿಕ್ಸ್ ಮತ್ತು ಕಾರಿನ ಒಳಭಾಗದಲ್ಲಿ ರೆಡ್ ಆಕ್ಸೆಂಟ್‌ಗಳನ್ನು ಬಳಕೆ ಮಾಡಿರುವುದು ಆಕರ್ಷಣಿವಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೊಸ Mahindra XUV300 ಸ್ಪೋರ್ಟ್ಜ್ ವರ್ಷನ್ ಕಾರು

ಹೊಸ ಕಾರಿನ ರೂಫ್ ರೈಲ್, ಸೈಡ್ ಬಾಡಿ ಕ್ಲಾಡಿಂಗ್ ಮತ್ತು ಗ್ರಿಲ್, ಹೆಡ್‌ಲ್ಯಾಂಪ್‌ಗಳು ಮತ್ತು ಪಾಗ್ ಲ್ಯಾಂಪ್ ಸುತ್ತಲೂ ಬ್ಲ್ಯಾಕ್ ಫಿನಿಶ್‌ನಂತಹ ಬ್ಲ್ಯಾಕ್ ಔಟ್ ಅಂಶಗಳಿಂದ ಎದ್ದು ಕಾಣುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೊಸ Mahindra XUV300 ಸ್ಪೋರ್ಟ್ಜ್ ವರ್ಷನ್ ಕಾರು

ಇನ್ನು ಮಹೀಂದ್ರಾ ಎಕ್ಸ್‌ಯುವಿ300 ಮಾದರಿಯು ಕಳೆದ ಕೆಲ ತಿಂಗಳಿನಿಂದ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ಮೂಲಕ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೊಸ Mahindra XUV300 ಸ್ಪೋರ್ಟ್ಜ್ ವರ್ಷನ್ ಕಾರು

2020-21ರ ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬುಕಿಂಗ್ ಪ್ರಮಾಣವು ಶೇಕಡಾ 90ರಷ್ಟು ಹೆಚ್ಚಾಗಿದ್ದು, ಪ್ರತಿ ತಿಂಗಳು ಸರಾಸರಿಯಾಗಿ 6 ಸಾವಿರ ಯುನಿಟ್‌‌ಗೆ ಬುಕ್ಕಿಂಗ್ ದಾಖಲಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೊಸ Mahindra XUV300 ಸ್ಪೋರ್ಟ್ಜ್ ವರ್ಷನ್ ಕಾರು

ಕೋವಿಡ್ ಪರಿಣಾಮ ಸದ್ಯ ಹೊಸ ಕಾರು ಮಾರಾಟವು ತುಸು ತಗ್ಗಿದ್ದರೂ ಕೂಡಾ ಇದೀಗ ಪರಿಸ್ಥಿತಿ ಸುಧಾರಿಸಿರುವುದರಿಂದ ವಿವಿಧ ಕಾರು ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮಹೀಂದ್ರಾ ಎಕ್ಸ್‌ಯುವಿ300 ಮಾದರಿಯು ಕೂಡಾ ಉತ್ತಮ ಬೇಡಿಕೆ ಪಡೆದುಕೊಂಡಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೊಸ Mahindra XUV300 ಸ್ಪೋರ್ಟ್ಜ್ ವರ್ಷನ್ ಕಾರು

ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಹೆಚ್ಚು ಸುರಕ್ಷಾ ಫೀಚರ್ಸ್ ಹೊಂದಿರುವ ಎಕ್ಸ್‌ಯುವಿ300 ಮಾದರಿಯು ಕ್ರ್ಯಾಶ್ ಟೆಸ್ಟಿಂಗ್‌ ನಲ್ಲಿ ಗರಿಷ್ಠ 5 ಸ್ಟಾರ್ ರೇಟಿಂಗ್ ಪಡೆದುಕೊಳ್ಳುವ ಮೂಲಕ ಮೊದಲ ಸೇಫ್ಟಿ ಬಜೆಟ್ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೊಸ Mahindra XUV300 ಸ್ಪೋರ್ಟ್ಜ್ ವರ್ಷನ್ ಕಾರು

ಎಕ್ಸ್‌ಯುವಿ 300 ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಖರೀದಿಗೆ ಲಭ್ಯವಿದ್ದು, 1.2-ಲೀಟರ್ ಪೆಟ್ರೋಲ್ ಮಾದರಿಯು 108 ಬಿಎಚ್‌ಪಿ ಮತ್ತು 200 ಎನ್ಎಂ ಟಾರ್ಕ್ ಮತ್ತು ಡೀಸೆಲ್ ಮಾದರಿಯು 114 ಬಿಎಚ್‌ಪಿ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೊಸ Mahindra XUV300 ಸ್ಪೋರ್ಟ್ಜ್ ವರ್ಷನ್ ಕಾರು

ಎಕ್ಸ್‌ಯುವಿ300 ಮಾದರಿಯ ಪೆಟ್ರೋಲ್ ಆವೃತ್ತಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.95 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.13.33 ಲಕ್ಷ ಬೆಲೆ ಪಡೆದುಕೊಂಡಿದ್ದು, ಹೊಸದಾಗಿ ಬಿಡುಗಡೆಯಾಗಲಿರುವ ಸ್ಪೋರ್ಟ್ಜ್ ಆವೃತ್ತಿಯು ಟಾಪ್ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದೆ.

Most Read Articles

Kannada
English summary
Mahindra xuv300 to get new turbo petrol engine soon
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X