ಎಕ್ಸ್‌ಯುವಿ700 ಮಾದರಿಯಲ್ಲಿ 6 ಸೀಟರ್ ವರ್ಷನ್ ಬಿಡುಗಡೆ ಮಾಡಲಿದೆ ಮಹೀಂದ್ರಾ

ಮಹೀಂದ್ರಾ ಕಂಪನಿಯು ತನ್ನ ಹೊಸ ಎಕ್ಸ್‌ಯುವಿ700 ಎಸ್‌ಯುವಿ ಮೂಲಕ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಯಾದ ಕೆಲವೇ ದಿನಗಳಲ್ಲಿ 75 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಮೂಲಕ ಕನಿಷ್ಠ 1 ವರ್ಷಗಳ ಕಾಯುವಿಕೆ ಅವಧಿಯನ್ನು ಹೊಂದಿದೆ.

ಎಕ್ಸ್‌ಯುವಿ700 ಮಾದರಿಯಲ್ಲಿ 6 ಸೀಟರ್ ವರ್ಷನ್ ಬಿಡುಗಡೆ ಮಾಡಲಿದೆ ಮಹೀಂದ್ರಾ

ಹೊಸ ಎಕ್ಸ್‌ಯುವಿ700 ಮಾದರಿಯನ್ನು ಮಹೀಂದ್ರಾ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಕಂಪನಿಯು ಶೀಘ್ರದಲ್ಲೇ ಹೊಸ ಕಾರು ಮಾದರಿಯಲ್ಲಿ 6 ಸೀಟರ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ಸುಳಿವು ನೀಡಿದೆ. ಮಹೀಂದ್ರಾ ಕಂಪನಿಯ ಆಂಡ್ರಿನೋಎಕ್ಸ್ ಕನೆಕ್ಟೆಡ್ ಆ್ಯಪ್‌ನಲ್ಲಿ ಹೊಸ ಮಾದರಿಯ ಆಸನ ಮಾದರಿಯನ್ನು ನೀಡಲಾಗುತ್ತಿದ್ದು, ಹೊಸ ಮಾದರಿಯು ಮುಂಬರುವ 2022ರ ಮಧ್ಯಂತರದಲ್ಲಿ ಬಿಡುಗಡೆಯಾಗಬಹುದಾಗಿದೆ.

ಎಕ್ಸ್‌ಯುವಿ700 ಮಾದರಿಯಲ್ಲಿ 6 ಸೀಟರ್ ವರ್ಷನ್ ಬಿಡುಗಡೆ ಮಾಡಲಿದೆ ಮಹೀಂದ್ರಾ

ಎಕ್ಸ್‌ಯುವಿ700 ಎಸ್‌ಯುವಿಯ 5 ಸೀಟರ್ ಮಾದರಿಯು 2+3 ವಿನ್ಯಾಸದ ಆಸನ ಸೌಲಭ್ಯವನ್ನು ಹೊಂದಿದ್ದರೆ 7 ಸೀಟರ್ ಮಾದರಿಯು 2+3+2 ಮಾದರಿಯ ಬೆಂಚ್ ಸೀಟುಗಳನ್ನು ಹೊಂದಿದೆ. ಆದರೆ ಬಿಡುಗಡೆಯಾಗಲಿರುವ 6 ಸೀಟರ್ ಮಾದರಿಯಲ್ಲಿ 2+2+2 ವಿನ್ಯಾಸದ ಆಸನ ಸೌಲಭ್ಯವನ್ನು ನೀಡಲಾಗುತ್ತಿದ್ದು, ಮಧ್ಯದಲ್ಲಿರುವ ಆಸನಗಳು ಪ್ರತ್ಯೇಕ ನಿಯಂತ್ರಣಯೊಂದಿಗೆ ಕ್ಯಾಪ್ಟನ್ ಆಸನಗಳಾಗಲಿವೆ.

ಎಕ್ಸ್‌ಯುವಿ700 ಮಾದರಿಯಲ್ಲಿ 6 ಸೀಟರ್ ವರ್ಷನ್ ಬಿಡುಗಡೆ ಮಾಡಲಿದೆ ಮಹೀಂದ್ರಾ

ಇತ್ತೀಚೆಗಿನ ಹೊಸ ಕಾರುಗಳಲ್ಲಿ ಹೆಚ್ಚಿನ ಗ್ರಾಹಕರು ಮಧ್ಯದ ಸಾಲಿನಲ್ಲಿ ಪ್ರತ್ಯೇಕ ಆಸನ ಸೌಲಭ್ಯಕ್ಕಾಗಿ ಬೇಡಿಕೆ ಸಲ್ಲಿಸುತ್ತಿದ್ದು, ಮಹೀಂದ್ರಾ ಕಂಪನಿಯು ಹೊಸ ಕಾರಿನಲ್ಲಿ 5 ಸೀಟರ್ ಮತ್ತು 7 ಸೀಟರ್ ಮಾದರಿಯೊಂದಿಗೆ 6 ಸೀಟರ್ ಮಾದರಿಯನ್ನು ಸಹ ಬಿಡುಗಡೆ ಮಾಡಲು ಮುಂದಾಗಿದೆ.

ಎಕ್ಸ್‌ಯುವಿ700 ಮಾದರಿಯಲ್ಲಿ 6 ಸೀಟರ್ ವರ್ಷನ್ ಬಿಡುಗಡೆ ಮಾಡಲಿದೆ ಮಹೀಂದ್ರಾ

ಇನ್ನು ಹೊಸ ಎಕ್ಸ್‌ಯುವಿ700 ಕಾರು ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ. ಹೊಸ ಕಾರು ಎಂಜಿ ಹೆಕ್ಟರ್, ಟಾಟಾ ಸಫಾರಿ ಮತ್ತು ಹ್ಯುಂಡೈ ಅಲ್ಕಾಜರ್ ಮಾದರಿಗಳಿಗೆ ಹೆಚ್ಚಿನ ಸ್ಪರ್ಧೆ ನೀಡುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 22.89 ಲಕ್ಷ ಬೆಲೆ ಹೊಂದಿದೆ.

ಎಕ್ಸ್‌ಯುವಿ700 ಮಾದರಿಯಲ್ಲಿ 6 ಸೀಟರ್ ವರ್ಷನ್ ಬಿಡುಗಡೆ ಮಾಡಲಿದೆ ಮಹೀಂದ್ರಾ

ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, 2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(6-ಸ್ಪೀಡ್ ಎಂಟಿ),450-ಎನ್ಎಂ ಟಾರ್ಕ್(6-ಸ್ಪೀಡ್ ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಎಕ್ಸ್‌ಯುವಿ700 ಮಾದರಿಯಲ್ಲಿ 6 ಸೀಟರ್ ವರ್ಷನ್ ಬಿಡುಗಡೆ ಮಾಡಲಿದೆ ಮಹೀಂದ್ರಾ

ಹೊಸ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳೊಂದಿಗೆ ಆಕರ್ಷಕ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಹೊಂದಿದ್ದು, ಕಂಪನಿಯೇ ಜೋಡಣೆ ಮಾಡುವ 7 ಸೀಟರ್ ಮಾದರಿಗಳನ್ನು ಹೊರತುಪಡಿಸಿ 5 ಸೀಟರ್ ಹೊಂದಿರುವ ಮಾದರಿಗಳಲ್ಲಿ 7 ಸೀಟರ್ ಬಯಸುವ ಗ್ರಾಹಕರು ಹೆಚ್ಚುವರಿ ರೂ. 70 ಸಾವಿರ ಪಾವತಿ ಮಾಡಬೇಕಾಗುತ್ತದೆ.

ಎಕ್ಸ್‌ಯುವಿ700 ಮಾದರಿಯಲ್ಲಿ 6 ಸೀಟರ್ ವರ್ಷನ್ ಬಿಡುಗಡೆ ಮಾಡಲಿದೆ ಮಹೀಂದ್ರಾ

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಎಕ್ಸ್‌ಯುವಿ700 ಮಾದರಿಯಲ್ಲಿ 6 ಸೀಟರ್ ವರ್ಷನ್ ಬಿಡುಗಡೆ ಮಾಡಲಿದೆ ಮಹೀಂದ್ರಾ

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಎಕ್ಸ್‌ಯುವಿ700 ಮಾದರಿಯಲ್ಲಿ 6 ಸೀಟರ್ ವರ್ಷನ್ ಬಿಡುಗಡೆ ಮಾಡಲಿದೆ ಮಹೀಂದ್ರಾ

ಹಾಗೆಯೇ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ಎಕ್ಸ್‌ಯುವಿ700 ಮಾದರಿಯಲ್ಲಿ 6 ಸೀಟರ್ ವರ್ಷನ್ ಬಿಡುಗಡೆ ಮಾಡಲಿದೆ ಮಹೀಂದ್ರಾ

ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

ಎಕ್ಸ್‌ಯುವಿ700 ಮಾದರಿಯಲ್ಲಿ 6 ಸೀಟರ್ ವರ್ಷನ್ ಬಿಡುಗಡೆ ಮಾಡಲಿದೆ ಮಹೀಂದ್ರಾ

ಹೊಸ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆಗೊಳಿಸಿದ ಮೊದಲ ಎರಡು ದಿನಗಳಲ್ಲಿ ಬರೋಬ್ಬರಿ 50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡಿದ್ದ ಹೊಸ ಕಾರು ಇದುವರೆಗೆ 75 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ಕಾರು ಉತ್ಪಾದನಾ ಸಾಮಾರ್ಥ್ಯದ ಆಧಾರದ ಮೇಲೆ ಹೊಸ ಕಾರಿನ ಕಾಯುವಿಕೆ ಅವಧಿಯು ಕನಿಷ್ಠ 4 ತಿಂಗಳಿನಿಂದ 1 ವರ್ಷ ತನಕ ಕಾಯಬೇಕಾಗುತ್ತದೆ.

ಎಕ್ಸ್‌ಯುವಿ700 ಮಾದರಿಯಲ್ಲಿ 6 ಸೀಟರ್ ವರ್ಷನ್ ಬಿಡುಗಡೆ ಮಾಡಲಿದೆ ಮಹೀಂದ್ರಾ

ಕಂಪನಿಯು ಇದೀಗ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕಂಪನಿಯು ಉತ್ಪಾದನಾ ಪ್ರಮಾಣವನ್ನು ದ್ವಿಗುಣಗೊಳಿಸುವ ಮೂಲಕ ವಿತರಣೆ ಪ್ರಮಾಣವನ್ನು ಹೆಚ್ಚಿಸಿದ್ದು, ಜನವರಿ 14ರ ವೇಳೆಗೆ ಕನಿಷ್ಠ 14 ಸಾವಿರ ಯುನಿಟ್ ವಿತರಣೆ ಮಾಡುವ ಯೋಜನೆಯಲ್ಲಿದೆ.

ಎಕ್ಸ್‌ಯುವಿ700 ಮಾದರಿಯಲ್ಲಿ 6 ಸೀಟರ್ ವರ್ಷನ್ ಬಿಡುಗಡೆ ಮಾಡಲಿದೆ ಮಹೀಂದ್ರಾ

ಒಟ್ಟಿನಲ್ಲಿ ಸದ್ಯಕ್ಕೆ ದಾಖಲಾಗಿರುವ ಬುಕ್ಕಿಂಗ್ ಪ್ರಮಾಣವನ್ನು ಪೂರ್ಣಗೊಳಿಸಲು ಕನಿಷ್ಠ ಒಂದು ವರ್ಷ ತೆಗೆದುಕೊಳ್ಳಬಹುದಾಗಿದ್ದು, ಬುಕ್ಕಿಂಗ್ ಮಾಡಿರುವ ಹೈ ಎಂಡ್ ಮಾದರಿಗಳು ಅತಿ ಕಡಿಮೆ ಅವಧಿಯಲ್ಲಿ ವಿತರಣೆಯಾಗಲಿದ್ದರೆ ಬೆಸ್ ವೆರಿಯೆಂಟ್‌ಗಳ ಖರೀದಿಗೆ ಹೆಚ್ಚಿನ ಸಮಯಾವಕಾಶ ಬೇಕಾಗಬಹುದಾಗಿದೆ.

Article Published On: Thursday, December 23, 2021, 8:46 [IST]
English summary
Mahindra xuv700 6 seater variant could be launched in 2022 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+