ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಎಕ್ಸ್‌ಯುವಿ700 ಎಂಎಕ್ಸ್ ವೆರಿಯೆಂಟ್ ವಿಶೇಷತೆಗಳಿವು!

ಮಹೀಂದ್ರಾ(Mahindra) ಕಂಪನಿಯು ತನ್ನ ಹೊಚ್ಚ ಹೊಸ ಎಕ್ಸ್‌ಯುವಿ700(XUV700) ಎಸ್‌ಯುವಿ ಬಿಡುಗಡೆಯೊಂದಿಗೆ ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಇದುವರೆಗೆ ಸುಮಾರು 75 ಸಾವಿರಕ್ಕೂ ಹೆಚ್ಚು ಯುನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡಿದೆ.

ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಎಕ್ಸ್‌ಯುವಿ700 ಎಂಎಕ್ಸ್ ವೆರಿಯೆಂಟ್ ವಿಶೇಷತೆಗಳಿವು!

ಹೊಸ ಎಕ್ಸ್‌ಯುವಿ700 ಕಾರು ಮಾದರಿಯನ್ನು ಮಹೀಂದ್ರಾ ಕಂಪನಿಯು ಉತ್ಪಾದನಾ ಸಾಮಾರ್ಥ್ಯದ ಆಧಾರದ ಮೇಲೆ ವಿತರಣೆಯನ್ನು ತೀವ್ರಗೊಳಿಸಿದ್ದು, ಹೊಸ ಕಾರಿನ ಕಾಯುವಿಕೆ ಅವಧಿಯು ಕನಿಷ್ಠ 4 ತಿಂಗಳಿನಿಂದ 1 ವರ್ಷ ತನಕ ತೆಗೆದುಕೊಳ್ಳಲಿದೆ. ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳನ್ನು ಹೊಂದಿದೆ.

ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಎಕ್ಸ್‌ಯುವಿ700 ಎಂಎಕ್ಸ್ ವೆರಿಯೆಂಟ್ ವಿಶೇಷತೆಗಳಿವು!

ಆಕರ್ಷಕ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಹೊಂದಿರುವ ಕಾರು 5 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿದ್ದು, 5 ಸೀಟರ್ ಹೊಂದಿರುವ ಮಾದರಿಗಳಲ್ಲಿ 7 ಸೀಟರ್ ಬಯಸುವ ಗ್ರಾಹಕರು ಹೆಚ್ಚುವರಿ ರೂ. 70 ಸಾವಿರ ಪಾವತಿ ಮಾಡಬೇಕಾಗುತ್ತದೆ.

ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಎಕ್ಸ್‌ಯುವಿ700 ಎಂಎಕ್ಸ್ ವೆರಿಯೆಂಟ್ ವಿಶೇಷತೆಗಳಿವು!

ಮಹೀಂದ್ರಾ ಕಂಪನಿಯು ಮೊದಲ 25 ಸಾವಿರ ಯುನಿಟ್‌ಗಳಿಗೆ ಮಾತ್ರ ಅನ್ವಯಿಸುವಂತೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯನ್ನು ರೂ. 22.89 ಲಕ್ಷ ಬೆಲೆ ನಿಗದಿಪಡಿಸಿದ್ದು, 25 ಸಾವಿರದಿಂದ 50 ಸಾವಿರ ಯುನಿಟ್‌ಗಳಿಗೆ ಹೆಚ್ಚುವರಿ ದರ ವಿಧಿಸುವುದಾಗಿ ಹೇಳಿಕೊಂಡಿದೆ.

ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಎಕ್ಸ್‌ಯುವಿ700 ಎಂಎಕ್ಸ್ ವೆರಿಯೆಂಟ್ ವಿಶೇಷತೆಗಳಿವು!

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕಂಪನಿಯು ಉತ್ಪಾದನಾ ಪ್ರಮಾಣವನ್ನು ದ್ವಿಗುಣಗೊಳಿಸುವ ಮೂಲಕ ವಿತರಣೆ ಪ್ರಮಾಣವನ್ನು ಹೆಚ್ಚಿಸಿದ್ದು, ಜನವರಿ 14ರ ವೇಳೆಗೆ ಕನಿಷ್ಠ 14 ಸಾವಿರ ಯುನಿಟ್ ವಿತರಣೆ ಮಾಡುವ ಯೋಜನೆಯಲ್ಲಿದೆ. ಒಟ್ಟಿನಲ್ಲಿ ಸದ್ಯಕ್ಕೆ ದಾಖಲಾಗಿರುವ ಬುಕ್ಕಿಂಗ್ ಪ್ರಮಾಣವನ್ನು ಪೂರ್ಣಗೊಳಿಸಲು ಕನಿಷ್ಠ ಒಂದು ವರ್ಷ ತೆಗೆದುಕೊಳ್ಳಬಹುದಾಗಿದ್ದು, ಬುಕ್ಕಿಂಗ್ ಮಾಡಿರುವ ಹೈ ಎಂಡ್ ಮಾದರಿಗಳು ಅತಿ ಕಡಿಮೆ ಅವಧಿಯಲ್ಲಿ ವಿತರಣೆಯಾಗಲಿದ್ದರೆ ಬೆಸ್ ವೆರಿಯೆಂಟ್‌ಗಳ ಖರೀದಿಗೆ ಹೆಚ್ಚಿನ ಸಮಯಾವಕಾಶ ಬೇಕಾಗಬಹುದಾಗಿದೆ.

ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಎಕ್ಸ್‌ಯುವಿ700 ಎಂಎಕ್ಸ್ ವೆರಿಯೆಂಟ್ ವಿಶೇಷತೆಗಳಿವು!

ಹೊಸ ಕಾರಿನ ಪ್ರತಿ ವೆರಿಯೆಂಟ್‌ನಲ್ಲೂ ಹಲವಾರು ಆಕರ್ಷಕ ಫೀಚರ್ಸ್ ನೀಡಲಾಗಿದ್ದು, ಹೊಸ ಕಾರಿನ ಎಂಎಕ್ಸ್ ಆವೃತ್ತಿಯು ಸಹ ಗ್ರಾಹಕರನ್ನು ಸೆಳೆಯುತ್ತಿದೆ. ಆರಂಭಿಕ ಮಾದರಿಗೂ ಮತ್ತು ಟಾಪ್ ಎಂಡ್ ಮಾದರಿಯ ನಡುವೆ ರೂ. 10 ಲಕ್ಷದ ತನಕ ದರ ವ್ಯತ್ಯಾಸವಿದ್ದರೂ ಕೂಡಾ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳು ಉತ್ತಮವಾಗಿವೆ.

ಟಾಪ್ ಎಂಡ್ ಮತ್ತು ಮಧ್ಯಮ ಕ್ರಮಾಂಕದ ಮಾದರಿಗಳಲ್ಲಿ ಪ್ರಮುಖ ಪ್ರೀಮಿಯಂ ಫೀಚರ್ಸ್‌ಗಳು ಆರಂಭಿಕ ಮಾದರಿಗಳಲ್ಲಿ ಇಲ್ಲವಾದರೂ ಬೆಲೆ ವಿಚಾರವಾಗಿ ಪೈಪೋಟಿ ನೀಡುವ ಪ್ರತಿಸ್ಪರ್ಧಿ ಮಾದರಿಗಳಿಗಳಿಂತಲೂ ಇದು ಉತ್ತಮವಾಗಿದೆ ಎನ್ನಬಹುದು.

ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಎಕ್ಸ್‌ಯುವಿ700 ಎಂಎಕ್ಸ್ ವೆರಿಯೆಂಟ್ ವಿಶೇಷತೆಗಳಿವು!

ಮಧ್ಯಮ ಕ್ರಮಾಂಕದಲ್ಲಿರುವ ಹೈ ಎಂಡ್ ಕಂಪ್ಯಾಕ್ಟ್ ಎಸ್‌ಯುವಿಗಳಿಗೆ ಮತ್ತು ಮಧ್ಯಮ ಕ್ರಮಾಂಕದ ಎಸ್‌ಯುವಿ ಮಿಡ್ ವೆರಿಯೆಂಟ್‌ಗಳಿಗೆ ಎಕ್ಸ್‌ಯುವಿ700 ಆರಂಭಿಕ ಆವೃತ್ತಿಯು ಉತ್ತಮ ಪೈಪೋಟಿ ನೀಡುತ್ತಿದ್ದು, ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಎಕ್ಸ್‌ಯುವಿ700 ಎಂಎಕ್ಸ್ ವೆರಿಯೆಂಟ್ ವಿಶೇಷತೆಗಳಿವು!

ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಎಕ್ಸ್‌ಯುವಿ700 ಎಂಎಕ್ಸ್ ವೆರಿಯೆಂಟ್ ವಿಶೇಷತೆಗಳಿವು!

2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(6-ಸ್ಪೀಡ್ ಎಂಟಿ),450-ಎನ್ಎಂ ಟಾರ್ಕ್(6-ಸ್ಪೀಡ್ ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಎಕ್ಸ್‌ಯುವಿ700 ಎಂಎಕ್ಸ್ ವೆರಿಯೆಂಟ್ ವಿಶೇಷತೆಗಳಿವು!

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಎಕ್ಸ್‌ಯುವಿ700 ಎಂಎಕ್ಸ್ ವೆರಿಯೆಂಟ್ ವಿಶೇಷತೆಗಳಿವು!

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಎಕ್ಸ್‌ಯುವಿ700 ಎಂಎಕ್ಸ್ ವೆರಿಯೆಂಟ್ ವಿಶೇಷತೆಗಳಿವು!

ಹಾಗೆಯೇ ಹೊಸ ಕಾರಿನ ಟಾಪ್ ಎಂಡ್ ಮಾದರಿಯಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಎಕ್ಸ್‌ಯುವಿ700 ಎಂಎಕ್ಸ್ ವೆರಿಯೆಂಟ್ ವಿಶೇಷತೆಗಳಿವು!

ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

Article Published On: Friday, December 10, 2021, 11:17 [IST]
English summary
Mahindra xuv700 mx base variant walkaround video
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+