ಫಾರ್ಚೂನರ್ ಮತ್ತು ಎಂಡೀವರ್‌ಗೆ ಪೈಪೋಟಿಯಾಗಿ ಎಕ್ಸ್‌ಯುವಿ700 ಬಿಡುಗಡೆ ಮಾಡಲಿದೆ ಮಹೀಂದ್ರಾ

ಎಕ್ಸ್‌ಯುವಿ ಸರಣಿ ಎಸ್‌ಯುವಿ ಮಾರಾಟದಲ್ಲಿ ತನ್ನದೇ ಆದ ಜನಪ್ರಿಯತೆ ಹೊಂದಿರುವ ಮಹೀಂದ್ರಾ ಕಂಪನಿಯು ಎಸ್‌ಯುವಿ ಸರಣಿಯಲ್ಲಿ ಹೊಸ ಮಾದರಿಯೊಂದನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರು ಎಕ್ಸ್‌ಯುವಿ700 ಹೆಸರಿನೊಂದಿಗೆ ಬಿಡುಗಡೆಗೊಳ್ಳಲಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಎಕ್ಸ್‌ಯುವಿ700 ಬಿಡುಗಡೆ ಮಾಡಲಿದೆ ಮಹೀಂದ್ರಾ

ಮಹೀಂದ್ರಾ ಕಂಪನಿಯು ಸ್ಯಾಂಗ್‌ಯಾಂಗ್ ಕಂಪನಿಯ ಜೊತೆಗಿನ ಸಹಭಾಗಿತ್ವ ಯೋಜನೆ ಸ್ಥಗಿತದ ನಂತರ ಅಲ್ಟುರಾಸ್ ಜಿ4 ಮಾದರಿಯ ಉತ್ಪಾದನೆ ಸ್ಥಗಿತಗೊಳಿಸಲಾಗಿದ್ದು, ಅಲ್ಟುರಾಸ್ ಜಿ4 ಸ್ಥಾನಕ್ಕಾಗಿ ಮಹೀಂದ್ರಾ ಹೊಸ ಪ್ಲ್ಯಾಟ್‌ಫಾರ್ಮ್ ಮೂಲಕ ಮತ್ತೊಂದು ಫುಲ್ ಸೈಜ್ ಎಸ್‌ಯವಿ ಮಾದರಿಯನ್ನು ಅಭಿವೃದ್ದಿಗೊಳಿಸುತ್ತಿದೆ. ಹೊಸ ಎಸ್‌ಯುವಿ ಕಾರು ಮಾದರಿಯು ಅಲ್ಟುರಾಸ್ ಜಿ4 ಮಾದರಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳಲನ್ನು ಪಡೆದುಕೊಳ್ಳಲಿದ್ದು, 7 ಸೀಟರ್ ಸೌಲಭ್ಯದೊಂದಿಗೆ ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರುಗಳಿಗೆ ಪೈಪೋಟಿ ನೀಡಲಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಎಕ್ಸ್‌ಯುವಿ700 ಬಿಡುಗಡೆ ಮಾಡಲಿದೆ ಮಹೀಂದ್ರಾ

ಮಹೀಂದ್ರಾ ಹೊಸ ಎಕ್ಸ್‌ಯುವಿ700 ಮಾದರಿಯ ಉತ್ಪಾದನಾ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಿರುವ ಮಹೀಂದ್ರಾ ಕಂಪನಿಯು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಳ್ಳುತ್ತಿದ್ದು, 2022ರ ಮಧ್ಯಂತರದಲ್ಲಿ ಹೊಸ ಕಾರು ರಸ್ತೆಗಿಳಿಯಲಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಎಕ್ಸ್‌ಯುವಿ700 ಬಿಡುಗಡೆ ಮಾಡಲಿದೆ ಮಹೀಂದ್ರಾ

ಸದ್ಯಕ್ಕೆ ಹೊಸ ಕಾರಿನ ಅಧಿಕೃತ ಹೆಸರನ್ನು ಮಾತ್ರ ಬಹಿರಂಗಪಡಿಸಿರುವ ಮಹೀಂದ್ರಾ ಕಂಪನಿಯು ಡಬ್ಯು601 ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಹೊಸ ಕಾರನ್ನು ಅಭಿವೃದ್ದಿಪಡಿಸಲಿದ್ದು, ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಎಂಜಿನ್ ಆಯ್ಕೆ ಮತ್ತು ಟೆಕ್ನಾಲಜಿ ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಎಕ್ಸ್‌ಯುವಿ700 ಬಿಡುಗಡೆ ಮಾಡಲಿದೆ ಮಹೀಂದ್ರಾ

ಹೊಸ ಕಾರಿನಲ್ಲಿ ಮಹೀಂದ್ರಾ ಕಂಪನಿಯು ಆಟೊನಮಸ್ ಲೆವಲ್ 1 ಟೆಕ್ನಾಲಜಿ ಸೌಲಭ್ಯಗಳನ್ನು ನೀಡಬಹುದು ಎನ್ನಲಾಗಿದ್ದು, ಆಟೊನಮಸ್ ಲೆವಲ್ 1ರಲ್ಲಿ ಆಟೋಮ್ಯಾಟಿಕ್ ಪಾರ್ಕಿಂಗ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್ ಮತ್ತು ಅಂತರಾಷ್ಟ್ರೀಯ ಗುಣಮಟ್ಟದ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಎಕ್ಸ್‌ಯುವಿ700 ಬಿಡುಗಡೆ ಮಾಡಲಿದೆ ಮಹೀಂದ್ರಾ

ಇನ್ನು ಎಕ್ಸ್‌ಯುವಿ700 ಮಾದರಿಯಲ್ಲಿ ಮಹೀಂದ್ರಾ ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲಿ ಎಂಜಿನ್ ಆಯ್ಕೆ ನೀಡುವುದಾಗಿ ಮಾಹಿತಿ ನೀಡಿದ್ದು, ಹೊಸ ಕಾರಿಗಾಗಿ ಸಂಪೂರ್ಣವಾಗಿ ಹೊಸ ಎಂಜಿನ್ ಆವೃತ್ತಿಗಳನ್ನು ನಿರ್ಮಾಣ ಮಾಡಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಅಂತರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಎಕ್ಸ್‌ಯುವಿ700 ಬಿಡುಗಡೆ ಮಾಡಲಿದೆ ಮಹೀಂದ್ರಾ

ಹೊಸ ಕಾರನ್ನು ಪುಣೆಯಲ್ಲಿ ಚಾಕನ್ ಕಾರು ಉತ್ಪಾದನಾ ಘಟಕದಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯ ಜೊತೆಗೆ ಹೊಸ ಕಾರಿನ ಹೈ ಎಂಡ್ ಮಾದರಿಗಳಲ್ಲಿ 4x4 ಡ್ರೈವ್ ಸಿಸ್ಟಂ ಜೋಡಣೆ ಹೊಂದಿರಲಿವೆ.

ಅಂತರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಎಕ್ಸ್‌ಯುವಿ700 ಬಿಡುಗಡೆ ಮಾಡಲಿದೆ ಮಹೀಂದ್ರಾ

ಈ ಮೂಲಕ ಅಲ್ಟುರಾಸ್ ಜಿ4 ಸ್ಥಾನಕ್ಕೆ ಹೊಸ ಕಾರಿನೊಂದಿಗೆ ಎಂಟ್ರಿ ನೀಡಲು ಸಿದ್ದವಾಗಿರುವ ಮಹೀಂದ್ರಾ ಕಂಪನಿಯು ಫಾರ್ಚೂನರ್, ಎಂಡೀವರ್ ಮತ್ತು ಗ್ಲೊಸ್ಟರ್ ಕಾರುಗಳಿಗೆ ಪೈಪೋಟಿ ನೀಡುವ ತವಕದಲ್ಲಿ ಹೊಸ ಕಾರಿನ ಎಂಜಿನ್ ಆಯ್ಕೆ ಕೂಡಾ ಗಮನಸೆಳೆಯಲಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಅಂತರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಎಕ್ಸ್‌ಯುವಿ700 ಬಿಡುಗಡೆ ಮಾಡಲಿದೆ ಮಹೀಂದ್ರಾ

ಎಕ್ಸ್‌ಯವಿ700 ಮಾದರಿಯು ಸಂಪೂರ್ಣವಾಗಿ ಹೊಸ ಮಾದರಿಯಾಗಿರುವುದರಿಂದ ಹೊಸ ಕಾರಿನ ತಾಂತ್ರಿಕ ಅಂಶಗಳ ಜೋಡಣೆ ಕುರಿತಾಗಿ ಗೊಂದಗಳಿದ್ದು, ಮುಂಬರುವ ದಿನಗಳಲ್ಲಿ ಹೊಸ ಕಾರಿನ ಕುರಿತಾದ ಮತ್ತಷ್ಟು ಮಾಹಿತಿಗಳು ಲಭ್ಯವಾಗಲಿವೆ.

More from DriveSpark

Article Published On: Thursday, April 8, 2021, 12:07 [IST]
English summary
Mahindra XUV700 Name Revealed Ahead Of India Launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+