ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಮಹೀಂದ್ರಾ ಕಂಪನಿಯು ತನ್ನ ಬಹುನೀರಿಕ್ಷಿತ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸುವುದರ ಜೊತೆಗೆ ಬೆಲೆ ಮಾಹಿತಿಯನ್ನು ಸಹ ಹಂಚಿಕೊಂಡಿದ್ದು, ಹೊಸ ಕಾರು ಅಚ್ಚರಿಯ ಬೆಲೆಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಎಕ್ಸ್‌ಯುವಿ ಸರಣಿ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಮಹೀಂದ್ರಾ ಕಂಪನಿಯು ಹೊಸ ಎಕ್ಸ್‌ಯುುವಿ700 ಎಸ್‌ಯುವಿ ಮಾದರಿಯನ್ನು ಅಭಿವೃದ್ದಿಗೊಳಿಸಿದ್ದು, ಹೊಸ ಕಾರು ಎಕ್ಸ್‌ಯುವಿ500 ಮಾದರಿಯನ್ನು ಆಧರಿಸಿ ನಿರ್ಮಾಣಗೊಂಡಿದೆ. ಹೊಸ ಕಾರು ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಸಂಪೂರ್ಣವಾಗಿ ಹೊಸ ತಂತ್ರಜ್ಞಾನ, ವಿನೂತನ ವಿನ್ಯಾಸ ಮತ್ತು ಬಲಿಷ್ಠ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, ಅಕ್ಟೋಬರ್ ಆರಂಭದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರಿನ ಬೆಲೆ ಮಾಹಿತಿ ಈಗಾಗಲೇ ಬಹಿರಂಗವಾಗಿದೆ.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಹೊಸ ಎಕ್ಸ್‌‌ಯುವಿ700 ಎಸ್‌ಯುವಿ ಮಾದರಿಯ ಪ್ರಮುಖ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಎಂಎಕ್ಸ್ ಸೀರಿಸ್ ಮತ್ತು ಆಂಡ್ರಿನೊಎಕ್ಸ್ ಸೀರಿಸ್‌ ಪಡೆದುಕೊಂಡಿದೆ. ಎಂಎಕ್ಸ್‌ ಸೀರಿಸ್‌ನಲ್ಲಿ ಎಂಎಕ್ಸ್ ವೆರಿಯೆಂಟ್ ಹೊಂದಿದ್ದರೆ ಆಂಡ್ರಿನೊಎಕ್ಸ್ ಸೀರಿಸ್‌‌ನಲ್ಲಿ ಎಎಕ್ಸ್3, ಎಎಕ್ಸ್5 ಮತ್ತು ಎಎಕ್ಸ್7 ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಬಿಡುಗಡೆಯಾಗಿದೆ.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಮಹೀಂದ್ರಾ ಕಂಪನಿಯು ಸದ್ಯಕ್ಕೆ 5 ಸೀಟರ್ ಸೌಲಭ್ಯ ಹೊಂದಿರುವ ಎಂಎಕ್ಸ್ ಸರಣಿಯ ಬೆಲೆಯನ್ನು ಮಾತ್ರ ಘೋಷಣೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.14.99 ಲಕ್ಷ ಬೆಲೆ ಹೊಂದಿದೆ.

ಎಕ್ಸ್‌ಯುವಿ700(5 ಸೀಟರ್ ಮ್ಯಾನುವಲ್) ಬೆಲೆ(ಎಕ್ಸ್‌ಶೋರೂಂ)
ಎಂಎಕ್ಸ್ ಪೆಟ್ರೋಲ್ ರೂ. 11.99 ಲಕ್ಷ
ಎಂಎಕ್ಸ್ ಡೀಸೆಲ್ ರೂ. 12.49 ಲಕ್ಷ
ಎಎಕ್ಸ್3 ಪೆಟ್ರೋಲ್ ರೂ. 13.99 ಲಕ್ಷ
ಎಎಕ್ಸ್5 ಪೆಟ್ರೋಲ್ ರೂ. 14.99 ಲಕ್ಷ
ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಎಂಎಕ್ಸ್ ಸರಣಿಯಲ್ಲಿರುವ ಎಕ್ಸ್‌ಯುವಿ700 ಎಸ್‌ಯುವಿಯು ಕೇವಲ ಮ್ಯಾನುವಲ್ ಆವೃತ್ತಿಯಾಗಿದ್ದು, ಒಟ್ಟು ನಾಲ್ಕು ವೆರಿಯೆಂಟ್ ಹೊಂದಿದೆ. ಎಕ್ಸ್‌ಯುವಿ700 ಮಾದರಿಯಲ್ಲಿ ಆಂಡ್ರಿನೊಎಕ್ಸ್ ಸರಣಿ ಕಾರುಗಳು ಉನ್ನತ ಮಾದರಿಗಳಾಗಿ ಮಾರಾಟಗೊಳ್ಳಲಿದ್ದು, ಎಕ್ಸ್‌ಯುವಿ500 ಮಾದರಿಯನ್ನು ತೆಗೆದುಹಾಕಲುವ ಉದ್ದೇಶದಿಂದ ಎಕ್ಸ್‌ಯುವಿ700 ಕಾರಿನಲ್ಲಿ ಬಜೆಟ್ ಬೆಲೆಯೊಂದಿಗೆ ಎಂಎಕ್ಸ್ ಸರಣಿಯನ್ನು ಪರಿಚಯಿಸಲಾಗಿದೆ.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಇನ್ನು ವಿನೂತನ ವಿನ್ಯಾಸ ಹೊಂದಿರುವ ಹೊಸ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯಲ್ಲಿ ಆಕರ್ಷಕ ಗ್ರಿಲ್ ಜೊತೆ ವರ್ಟಿಕಲ್ ಸ್ಲಾಟ್ ಮತ್ತು ಡ್ಯುಯಲ್ ಟೋನ್ ಕ್ರೋಮ್ ಹೊಂದಿದ್ದು, ಹೊಸ ಕಾರಿಗೆ ಮತ್ತಷ್ಟು ಐಷಾರಾಮಿ ಲುಕ್ ನೀಡಲು ಬ್ರಾಂಡ್ ನ್ಯೂ ಲೋಗೋ ನೀಡಲಾಗಿದೆ.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಪ್ರಯಾಣಿಕರ ಕಾರುಗಳಿಗಾಗಿ ಹಲವು ವರ್ಷಗಳ ನಂತರ ಲೋಗೋ ವಿನ್ಯಾಸವನ್ನು ಬದಲಾವಣೆಗೊಳಿಸಿರುವ ಮಹೀಂದ್ರಾ ಕಂಪನಿಯು ಮೊದಲ ಬಾರಿಗೆ ಎಕ್ಸ್‌ಯುವಿ700 ಎಸ್‌ಯುವಿಯಲ್ಲಿ ಅಳವಡಿಸಿದ್ದು, ಹೊಸ ಲೋಗೋದೊಂದಿಗೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಹೊಸ ಎಕ್ಸ್‌ಯುವಿ700 ಮಾದರಿಯಲ್ಲಿ ಮೂರನೇ ಸಾಲಿನ ಆಸನವನ್ನು ನೀಡಿರುವ ಹಿನ್ನಲೆಯಲ್ಲಿ ಕಾರಿನ ವ್ಹೀಲ್ ಬೆಸೆ ವಿಸ್ತರಿಸಲಾಗಿದ್ದು, ಗ್ರಾಹಕರು ತಮ್ಮ ಅಗತ್ಯಕ್ಕೆ ಅನುಗುಣವಾಗಿ 5 ಸೀಟರ್ ಅಥವಾ 7 ಸೀಟರ್ ಮಾದರಿಯನ್ನು ಖರೀದಿ ಮಾಡಬಹುದು.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, 5 ಸೀಟರ್ ಮಾದರಿಯು 7 ಸೀಟರ್ ಮಾದರಿಗಿಂತಲೂ ಹೆಚ್ಚಿನ ಸ್ಥಳವಾಕಾಶದೊಂದಿಗೆ ಅರಾಮದಾಯಕ ಆಸನ ಸೌಲಭ್ಯದೊಂದಿಗೆ ಹೆಚ್ಚಿನ ಮತ್ತು ಬೂಟ್‌ಸ್ಪೆಸ್ ಹೊಂದಿರಲಿದೆ.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಆದರೆ 7 ಸೀಟರ್ ಸೌಲಭ್ಯದ ಎಕ್ಸ್‌ಯುವಿ700 ಮಾದರಿಯು 5 ಸೀಟರ್ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದ್ದು, ಆಂಡ್ರಿನೊಎಕ್ಸ್ ಸೀರಿಸ್‌ ಆವೃತ್ತಿಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 15 ಲಕ್ಷದಿಂದ ರೂ. 21 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿವೆ.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಮಹೀಂದ್ರಾ ಕಂಪನಿಯು ಹೊಸ ಕಾರಿನಲ್ಲಿ ಹಲವಾರು ಹೊಸ ಮಾದರಿಯ ತಂತ್ರಜ್ಞಾನ ಸೌಲಭ್ಯಗಳನ್ನು ನೀಡಿದ್ದು, 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಎಂಜಿನ್ ಮತ್ತು ಫರ್ಪಾಮೆನ್ಸ್

ಮಹೀಂದ್ರಾ ಕಂಪನಿಯು ಹೊಸ ಎಕ್ಸ್‌ಯುವಿ700 ಮಾದರಿಯಲ್ಲಿ 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ. 2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(ಎಂಟಿ),450-ಎನ್ಎಂ ಟಾರ್ಕ್(ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳು ಲಭ್ಯವಿದ್ದು, ಹೈ ಎಂಡ್ ಮಾದರಿಗಳಲ್ಲಿ ಮಹೀಂದ್ರಾ ಕಂಪನಿಯು 4x4 ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಜೋಡಣೆ ಮಾಡಿದೆ.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಹೊಸ ಕಾರಿನ ಪರ್ಫಾಮೆನ್ಸ್‌ಗೆ ಪೂರಕವಾಗಿ ಜಿಪ್, ಜಾಪ್, ಜೂಮ್ ಮತ್ತು ಕಸ್ಟಮ್ ಎನ್ನುವ ನಾಲ್ಕು ಡ್ರೈವ್ ಮೋಡ್‌ಗಳಿದ್ದು, ಹೊಸ ಕಾರು ಐಷಾರಾಮಿ ಕಾರುಗಳಲ್ಲಿ ಕಂಡುಬರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ(ಎಡಿಎಎಸ್) ತಂತ್ರಜ್ಞಾನ ಹೊಂದಿದೆ.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಈ ಮೂಲಕ ಹೊಸ ಎಕ್ಸ್‌ಯುವಿ700 ಮಾದರಿಯ 5 ಸೀಟರ್ ಮಾದರಿಗಳು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಾದ ಹ್ಯುಂಡೈ ಕ್ರೆಟಾ, ಮಾರುತಿ ವಿಟಾರಾ ಬ್ರೆಝಾ, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡಲಿದ್ದರೆ 7 ಸೀಟರ್ ಹೊಂದಿರುವ ಎಕ್ಸ್‌ಯುವಿ700 ಮಾದರಿಯು ಹ್ಯುಂಡೈ ಅಲ್ಕಾಜರ್, ಟಾಟಾ ಸಫಾರಿ, ಎಂಜಿ ಹೆಕ್ಟರ್ ಪ್ಲಸ್ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಎಕ್ಸ್‌ಯುವಿ300 ಮಾದರಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಿರಲಿದೆ ಹೊಸ ಎಕ್ಸ್‌ಯುವಿ700 ಎಸ್‌ಯುವಿ

ಹೊಸ ಕಾರು ಮುಂಬರುವ ಅಕ್ಟೋಬರ್ ಮೊದಲ ವಾರದಲ್ಲಿ ಅಧಿಕೃತ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರಿನ ಖರೀದಿದಾಗಿ ಕಂಪನಿಯು ಈಗಾಗಲೇ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಿದೆ.

More from DriveSpark

Article Published On: Saturday, August 14, 2021, 21:36 [IST]
English summary
Mahindra xuv700 price revealed starting at rs 11 99 lakh details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+