ಕ್ರ್ಯಾಶ್‌ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ

ಮಹೀಂದ್ರಾ(Mahindra) ಹೊಸ ಎಕ್ಸ್‌ಯುವಿ700(XUV700) ಎಸ್‌ಯುವಿ ಮಾದರಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಹೊಸ ಕಾರು ಇದೀಗ ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ಸ್ ತನ್ನದಾಗಿಸಿಕೊಂಡಿದೆ.

ಕ್ರ್ಯಾಶ್‌ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ

ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಎಕ್ಸ್‌ಯುವಿ300 ನಂತರ ಎಕ್ಸ್‌ಯುುವಿ700 ಮಾದರಿಯು ಗರಿಷ್ಠ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ಎರಡನೇ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಹಲವಾರು ಸೇಫ್ಟಿ ಫೀಚರ್ಸ್ ಹೊಂದಿರುವ ಹೊಸ ಎಕ್ಸ್‌ಯುವಿ700 ಮಾದರಿಯು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ.

ಕ್ರ್ಯಾಶ್‌ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ

ಪ್ರಯಾಣಿಕ ವಾಹನಗಳ ಸುರಕ್ಷತೆ ಕುರಿತು ಜಾಗತಿಕ ಮಟ್ಟದ ಅಭಿಯಾನ ಕೈಗೊಂಡಿರುವ ಗ್ಲೊಬಲ್ ಎಸ್‌ಸಿಎಪಿ ಸಂಸ್ಥೆಯು ಭಾರತದಲ್ಲಿ #SAFERCARSFORINDIA ಅಭಿಯಾನದಡಿ ಹೊಸ ಕಾರುಗಳ ಸುರಕ್ಷತೆಯನ್ನು ಸುಧಾರಿಸಲು ಕಾರಣವಾಗಿದೆ.

ಕ್ರ್ಯಾಶ್‌ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ

ಮಹೀಂದ್ರಾ ನಿರ್ಮಾಣದ ಹೊಸ ಕಾರುಗಳು ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್‌ಟೆಸ್ಟಿಂಗ್‌ನಲ್ಲಿ ಹೊಸ ದಾಖಲೆಗೆ ಕಾರಣವಾಗುತ್ತಿದ್ದು, ಎಕ್ಸ್‌ಯುವಿ700 ಮಾದರಿಯು ಕೂಡಾ ವಯಸ್ಕ ಪ್ರಯಾಣಿಕರ ಸುರಕ್ಷತೆಗಾಗಿ ನೀಡುವ 17 ಅಂಕಗಳಲ್ಲಿ 16.03 ಅಂಕಗಳನ್ನು ಮತ್ತು ಮಕ್ಕಳ ಸುರಕ್ಷತೆಗಾಗಿ ನೀಡಲಾಗುವ 49 ಅಂಕಗಳಲ್ಲಿ 41.66 ಅಂಕಗಳೊಂದಿಗೆ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದೆ.

ಕ್ರ್ಯಾಶ್‌ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ

ಹೊಸ ಎಕ್ಸ್‌ಯುವಿ700 ಮಾದರಿಯಲ್ಲಿ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

ಕ್ರ್ಯಾಶ್‌ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ

ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಗಾಗಿ ಇದುವರೆಗೆ ಸುಮಾರು 70 ಸಾವಿರ ಯುನಿಟ್‌ಗಳಿಗೆ ಬುಕ್ಕಿಂಗ್ ಸ್ವಿಕರಿಸಿದ್ದು, ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.

ಕ್ರ್ಯಾಶ್‌ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 22.89 ಲಕ್ಷ ಬೆಲೆ ಹೊಂದಿದೆ.

ಕ್ರ್ಯಾಶ್‌ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ

ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

ಕ್ರ್ಯಾಶ್‌ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ

ಹೊಸ ಕಾರು ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳೊಂದಿಗೆ ಆಕರ್ಷಕ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಹೊಂದಿದ್ದು, ಕಂಪನಿಯೇ ಜೋಡಣೆ ಮಾಡುವ 7 ಸೀಟರ್ ಮಾದರಿಗಳನ್ನು ಹೊರತುಪಡಿಸಿ 5 ಸೀಟರ್ ಹೊಂದಿರುವ ಮಾದರಿಗಳಲ್ಲಿ 7 ಸೀಟರ್ ಬಯಸುವ ಗ್ರಾಹಕರು ಹೆಚ್ಚುವರಿ ರೂ. 70 ಸಾವಿರ ಪಾವತಿ ಮಾಡಬೇಕಾಗುತ್ತದೆ.

ಕ್ರ್ಯಾಶ್‌ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಕ್ರ್ಯಾಶ್‌ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಕ್ರ್ಯಾಶ್‌ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ

ಹಾಗೆಯೇ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ಕ್ರ್ಯಾಶ್‌ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ

ಕಳೆದ ತಿಂಗಳು ಕೊನೆಯ ವಾರದಲ್ಲಿ ಹೊಸ ಕಾರಿನ ವಿತರಣೆಯು ಆರಂಭವಾಗಿದ್ದು, ನವೆಂಬರ್ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಕಾರು ವಿತರಣೆಯಾಗಲಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕಂಪನಿಯು ಉತ್ಪಾದನಾ ಪ್ರಮಾಣವನ್ನು ದ್ವಿಗುಣಗೊಳಿಸಿದ್ದು, ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಕ್ರ್ಯಾಶ್‌ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ

ಎಕ್ಸ್‌ಯುವಿ700 ಮಾದರಿಯು ಎಂಜಿ ಹೆಕ್ಟರ್, ಟಾಟಾ ಸಫಾರಿ ಮತ್ತು ಹ್ಯುಂಡೈ ಅಲ್ಕಾಜರ್ ಮಾದರಿಗಳಿಗೆ ಹೆಚ್ಚಿನ ಸ್ಪರ್ಧೆ ನೀಡುತ್ತಿದ್ದು, ಬೆಲೆ ಮತ್ತು ಎಂಜಿನ್ ಆಯ್ಕೆ ವಿಚಾರದಲ್ಲಿ ಎಕ್ಸ್‌ಯುವಿ700 ಗ್ರಾಹಕರನ್ನು ಆಕರ್ಷಿಸುತ್ತಿದೆ.

Article Published On: Wednesday, November 10, 2021, 17:30 [IST]
English summary
Mahindra xuv700 suv 5 star rating in global ncap test details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+