ಬುಕ್ಕಿಂಗ್ ಆರಂಭವಾದ ಎರಡೇ ದಿನಗಳಲ್ಲಿ 50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700(Mahindra XUV700) ಎಸ್‌ಯುವಿ ಮಾದರಿಯು ಭಾರತೀಯ ಆಟೋ ಉದ್ಯಮದಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಹೊಸ ಕಾರಿನ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾದ ಕೇವಲ 2 ದಿನಗಳಲ್ಲಿ 50 ಸಾವಿರ ಯುನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡಿದೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ700 ಎಸ್‌ಯುವಿ ಮಾದರಿಗಾಗಿ ನಿನ್ನೆಯಿಂದ(ಅಕ್ಟೋಬರ್ 7) ರೂ. 50 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಆರಂಭಿಸಿದ್ದು, ಬುಕ್ಕಿಂಗ್ ಆರಂಭಿಸಿದ ಕೇವಲ 57 ನಿಮಿಷದಲ್ಲಿ ಸುಮಾರು 25 ಸಾವಿರ ಗ್ರಾಹಕರು ಬುಕ್ಕಿಂಗ್ ಸಲ್ಲಿಸಿದ್ದರು. ಮೊದಲ ದಿನ 25 ಸಾವಿರ ಬುಕ್ಕಿಂಗ್ ದಾಖಲಾದ ನಂತರ ಬುಕ್ಕಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಮಹೀಂದ್ರಾ ಇಂದು 10 ಗಂಟೆಗೆ ಮತ್ತೆ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಿತ್ತು. ಎರಡನೇ ಹಂತದ ಬುಕ್ಕಿಂಗ್ ಆರಂಭವಾಗುತ್ತಿದ್ದಂತೆ ಮತ್ತೆ 25 ಸಾವಿರ ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದಾರೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

ಮೊದಲ ದಿನ 57 ನಿಮಿಷಗಳಲ್ಲಿ 25 ಸಾವಿರ ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದರೆ ಎರಡನೇ ದಿನ 2 ಗಂಟೆ 8 ನಿಮಿಷಗಳಲ್ಲಿ ಮತ್ತೆ 25 ಸಾವಿರ ಗ್ರಾಹಕರು ಬುಕ್ಕಿಂಗ್ ಸಲ್ಲಿಕೆ ಮಾಡಿದ್ದು, ಕೇವಲ ಎರಡು ದಿನಗಳಲ್ಲಿ ಎಕ್ಸ್‌ಯುವಿ700 ಮಾದರಿಗೆ ಒಟ್ಟು 50 ಸಾವಿರ ಗ್ರಾಹಕರು ಬುಕ್ಕಿಂಗ್ ದಾಖಲಿಸಿದಂತಾಗಿದೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

ಉತ್ಪಾದನಾ ಸಾಮರ್ಥ್ಯದ ಮೇಲೆ ಕಾರು ವಿತರಣೆ ಮಾಡಬೇಕಿರುವುದರಿಂದ ಹೊಸ ಕಾರಿನ ಬೆಲೆಯಲ್ಲಿ ಕೆಲವು ಬದಲಾವಣೆ ಪ್ರಕಟಿಸಿರುವ ಮಹೀಂದ್ರಾ ಕಂಪನಿಯು ಮೊದಲ 25 ಸಾವಿರ ಗ್ರಾಹಕರಿಗೆ ಅನ್ವಯವಾಗುವಂತೆ ಒಂದು ದರ ಮತ್ತು ತದನಂತರ ಬುಕ್ಕಿಂಗ್ ದಾಖಲಿಸಿದ 25 ಸಾವಿರ ಗ್ರಾಹಕರಿಗೆ ದರ ಹೆಚ್ಚಿಸಿದ ಹೊಸ ದರ ಪಟ್ಟಿ ಬಿಡುಗಡೆ ಮಾಡಿದೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

50 ಸಾವಿರ ಯುನಿಟ್ ನಂತರ ಬುಕ್ಕಿಂಗ್ ದಾಖಲಿಸುತ್ತಿರುವ ಗ್ರಾಹಕರಿಗೆ ಹೊಸ ಕಾರು ಮತ್ತಷ್ಟು ದುಬಾರಿಯಾಗಿರುವ ಬಗ್ಗೆ ಕಂಪನಿಯೇ ಮಾಹಿತಿ ನೀಡಿದ್ದು, ಮೊದಲ 50 ಸಾವಿರ ಯುನಿಟ್ ವಿತರಣೆ ನಂತರವೇ ಮುಂದಿನ ಯುನಿಟ್‌ಗಳ ದರ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

ಹೊಸ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಮಾರಾಟಗೊಳ್ಳಲಿದ್ದು, ಬರೋಬ್ಬರಿ 21 ವೆರಿಯೆಂಟ್ ಹೊಂದಿರುವ ಹೊಸ ಕಾರಿನ ಮೊದಲ 25 ಸಾವಿರ ಯುನಿಟ್ ಖರೀದಿಸುವ ಗ್ರಾಹಕರಿಗೆ ಕಂಪನಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯು ರೂ. 22.89 ಲಕ್ಷಕ್ಕೆ ವಿತರಣೆಯಾಗಲಿದೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

25 ಸಾವಿರ ಯುನಿಟ್ ನಂತರ ಹೊಸ ಕಾರು ವಿತರಣೆ ಪಡೆದುಕೊಳ್ಳಲಿರುವ ಗ್ರಾಹಕರಿಗೆ ಹೊಸ ಕಾರಿನ ಬೆಲೆಯು ಆರಂಭಿಕವಾಗಿ ರೂ. 12.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.22.99 ಲಕ್ಷ ಅನ್ವಯವಾಗಲಿದೆ. 50 ಸಾವಿರ ಯುನಿಟ್ ನಂತರ ಹೊಸ ಕಾರು ಖರೀದಿಸುವ ಗ್ರಾಹಕರಿಗೆ ಇನ್ನಷ್ಟು ದುಬಾರಿಯಾಗಿರಲಿದ್ದು, 50 ಸಾವಿರ ಯುನಿಟ್ ನಂತರದ ಹೊಸ ಕಾರಿನ ದರ ಪಟ್ಟಿಯು ಮುಂಬರುವ ದಿನಗಳಲ್ಲಿ ಲಭ್ಯವಾಗಲಿದೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

ಸದ್ಯಕ್ಕೆ ದಾಖಲಾಗಿರುವ ಬುಕ್ಕಿಂಗ್ ಪ್ರಮಾಣವನ್ನು ನಿಗದಿತ ಅವಧಿಯಲ್ಲಿ ವಿತರಣೆ ಮಾಡುವ ಬೃಹತ್ ಯೋಜನೆಗೆ ಮಹೀಂದ್ರಾ ಕಂಪನಿಯು ಸಿದ್ದವಾಗಿದ್ದು, ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ಹೊಸ ಕಾರಿನ ವಿತರಣೆಯು ನಾಲ್ಕು ವಾರದಿಂದ 50 ವಾರಗಳಿಗೆ ತಲುಪಬಹುದಾಗಿದೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

ಹೊಸ ಕಾರಿನಲ್ಲಿ ಆರಂಭಿಕ ಮಾದರಿಯಾದ ಎಂಎಕ್ಸ್ ವೆರಿಯೆಂಟ್‌ನಲ್ಲಿ ಮಹೀಂದ್ರಾ ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್ ಎರಡು ಎಂಜಿನ್ ಆಯ್ಕೆಗಳನ್ನು ನೀಡುತ್ತಿದ್ದು, ಇದು 5 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮ್ಯಾನುವಲ್ ಆವೃತ್ತಿಯಲ್ಲಿ ಮಾತ್ರ ಮಾರಾಟವಾಗಲಿದೆಯೆಂತೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

ಎಎಕ್ಸ್3 ವೆರಿಯೆಂಟ್‌ಗಳು ಐದು ಆಸನ ಸೌಲಭ್ಯವನ್ನು ಮಾತ್ರ ಹೊಂದಿದ್ದು, ಇದರಲ್ಲೂ ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ. ಈ ರೂಪಾಂತರದಲ್ಲಿ ಗ್ರಾಹಕರು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದ್ದು, ಆಸಕ್ತ ಗ್ರಾಹಕರು ಈ ವೆರಿಯೆಂಟ್‌ನಲ್ಲಿ 7 ಸೀಟರ್ ಮಾದರಿಯನ್ನು ಹೆಚ್ಚುವರಿ ಬೆಲೆಯಲ್ಲಿ ಖರೀದಿಸಬಹುದು.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

ಎಎಕ್ಸ್5 ವೆರಿಯೆಂಟ್‌ಗಳು ಸಹ ಐದು ಮತ್ತು ಏಳು ಆಸನಗಳ ಆಯ್ಕೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಯು ಖರೀದಿಗೆ ಲಭ್ಯವಿರಲಿದ್ದು, ಎಎಕ್ಸ್5 ಮಾದರಿಗಳಲ್ಲೂ ಕಂಪನಿಯು ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಮಾದರಿಗಳನ್ನು ಬಿಡುಗಡೆ ಮಾಡಿದೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

ಇನ್ನುಳಿದಂತೆ ಎಎಕ್ಸ್7 ಟಾಪ್ ಎಂಡ್ ಮಾದರಿಯಲ್ಲಿ ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಏಳು ಆಸನ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಗಳನ್ನು ಹೊಂದಿರುವ ಟಾಪ್ ಎಂಡ್ ಮಾದರಿಯಲ್ಲಿ ಹೆಚ್ಚಿರುವರಿಯಾಗಿ ಹಲವಾರು ಸುಧಾರಿತ ಫೀಚರ್ಸ್‌ಗಳು ಜೋಡಣೆ ಮಾಡಿದೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

ಜೊತೆಗೆ ಎಎಕ್ಸ್7 ಮಾದರಿಯಲ್ಲಿ ಆಸಕ್ತ ಗ್ರಾಹಕರಿಗಾಗಿ ಹೈ ಎಂಡ್ ಮಾದರಿಯಲ್ಲಿ ಎಎಕ್ಸ್ 7 ಲಗ್ಷುರಿ ಮಾದರಿಯನ್ನು ಸಹ ಮಾರಾಟ ಮಾಡಲಿದ್ದು, ಹೊಸ ಕಾರಿನ ಸ್ಟ್ಯಾಂಡರ್ಡ್ 5 ಸೀಟರ್ ಮಾದರಿಗಳಲ್ಲಿ ಗ್ರಾಹಕರಿಗೆ 7 ಸೀಟರ್ ಸೌಲಭ್ಯ ಬೇಕಾದಲ್ಲಿ ಹೆಚ್ಚುವರಿಯಾಗಿ ರೂ. 70 ಸಾವಿರ ಹೆಚ್ಚುವರಿ ಪಾವತಿ ಮಾಡಬೇಕಾಗುತ್ತದೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

ಇನ್ನು ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(6-ಸ್ಪೀಡ್ ಎಂಟಿ),450-ಎನ್ಎಂ ಟಾರ್ಕ್(6-ಸ್ಪೀಡ್ ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

ಹಾಗೆಯೇ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡ Mahindra XUV700

ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

Most Read Articles

Kannada
English summary
Mahindra xuv700 suv bookings closed 50k units details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X