ಹೊಸ XUV700 ಎಸ್‌ಯುವಿ ಕಾರು ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಆರಂಭಿಸಿದ Mahindra
ಮಹೀಂದ್ರಾ ಎಕ್ಸ್‌ಯುವಿ700 (Mahindra XUV700) ಎಸ್‌ಯುವಿ ಮಾದರಿಯು ಇದೇ ತಿಂಗಳಾಂತ್ಯಕ್ಕೆ ಬಿಡುಗಡೆಗೊಳ್ಳುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರು ಬಿಡುಗಡೆಗೂ ಕಂಪನಿಯ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಿದೆ.

ಎಕ್ಸ್‌ಯುವಿ700 ಕಾರು ಮಾದರಿಯ ಖರೀದಿಗಾಗಿ ಗ್ರಾಹಕರು ನೇರವಾಗಿ ಶೋರೂಂಗಳಲ್ಲಿ ಅಥವಾ ಕಂಪನಿಯ ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್ ದಾಖಲಿಸಬಹುದಾಗಿದ್ದು, ಆಸಕ್ತ ಗ್ರಾಹಕರಿಗಾಗಿ ಈಗಾಗಲೇ ಆಯ್ದ ಡೀಲರ್ಸ್‌ಗಳಲ್ಲಿ ಹೊಸ ಕಾರಿನ ಟೆಸ್ಟ್ ಡ್ರೈವ್ ಆರಂಭಿಸಲಾಗಿದೆ. ಹೊಸ ಕಾರು ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದ್ದು, ದೀಪಾವಳಿ ಹೊತ್ತಿಗೆ ಹೊಸ ಕಾರಿನ ಖರೀದಿ ಪ್ರಕ್ರಿಯೆ ಆರಂಭವಾಗಲಿದೆ.

ಎಕ್ಸ್‌ಯುವಿ700 ಕಾರು ಮಾದರಿಯು ಪ್ರಮುಖ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಎಂಜಿನ್, ಗೇರ್‌ಬಾಕ್ಸ್ ಆಯ್ಕೆ ಆಧರಿಸಿ ಸುಮಾರು 29 ವೆರಿಯೆಂಟ್‌ಗಳನ್ನು ಹೊಂದಿರಲಿದೆ. ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 11.99 ಲಕ್ಷದಿಂದ ಆರಂಭಿಕ ಬೆಲೆ ಪಡೆದುಕೊಂಡಿದ್ದು, ಶೀಘ್ರದಲ್ಲೇ ಹೊಸ ಕಾರಿನ ಟಾಪ್ ಎಂಡ್ ಮಾದರಿಯ ಬೆಲೆ ಮಾಹಿತಿ ಕೂಡಾ ಬಹಿರಂಗವಾಗಲಿದೆ.

ಎಂಎಕ್ಸ್ ಸೀರಿಸ್ ಮತ್ತು ಆಂಡ್ರಿನೊಎಕ್ಸ್ ಸೀರಿಸ್‌ಗಳೊಂದಿಗೆ ಖರೀದಿಗೆ ಲಭ್ಯವಿರಲಿರುವ ಹೊಸ ಕಾರನ್ನು ಗ್ರಾಹಕರು ತಮ್ಮ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಖರೀದಿ ಮಾಡಬಹುದಾಗಿದ್ದು, ಎಂಎಕ್ಸ್ ಸೀರಿಸ್‌ಗಿಂತಲೂ ಎಎಕ್ಸ್ ಸೀರಿಸ್ ಆವೃತ್ತಿಗಳು ಹೆಚ್ಚು ಐಷಾರಾಮಿ ಸೌಲಭ್ಯಗಳನ್ನು ಹೊಂದಿರಲಿವೆ.

ಎಕ್ಸ್‌ಯುವಿ700 ಹೊಸ ಕಾರಿನ ಆರಂಭಿಕ ಆವೃತ್ತಿಯ ಬೆಲೆಯನ್ನು ಮಹೀಂದ್ರಾ ಕಂಪನಿಯು ಈಗಾಗಲೇ ಬಹಿರಂಗ ಪಡಿಸಿದ್ದು, ಎಂಎಕ್ಸ್ ಆವೃತ್ತಿಗಳು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.99 ಲಕ್ಷ ಬೆಲೆ ಹೊಂದಿರುವುದು ಖಚಿತವಾಗಿದೆ. ಆದರೆ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳನ್ನು ಹೊಂದಿರುವ ಎಎಕ್ಸ್ ಮಾದರಿಗಳ ಬೆಲೆ ಮಾಹಿತಿ ಇನ್ನು ಲಭ್ಯವಾಗಬೇಕಿದ್ದು, ಟಾಪ್ ಆವೃತ್ತಿಯು ಆರಂಭಿಕವಾಗಿ ರೂ.15 ಲಕ್ಷದಿಂದ ರೂ. 21.69 ಲಕ್ಷ ಬೆಲೆ ಹೊಂದಿರಬಹುದು ಎನ್ನಲಾಗಿದೆ.

ಹೊಸ ಕಾರಿನ ಟಾಪ್ ಎಂಡ್‌ನಲ್ಲಿರುವ ಪ್ರಮುಖ ವೆರಿಯೆಂಟ್‌ಗಳು ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಅಂಶಗಳನ್ನು ಹೊಂದಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ವಿವಿಧ ದರ ಶ್ರೇಣಿಯಲ್ಲಿ ಹೊಸ ಕಾರನ್ನು ಆಯ್ಕೆ ಮಾಡಬಹುದಾಗಿದೆ.

ಎಕ್ಸ್‌ಯುವಿ700 ಕಾರು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಗಳಲ್ಲೂ ಮಾರಾಟಗೊಳ್ಳಲಿದ್ದು, ಆರಂಭಿಕ ಮಾದರಿಗಳಲ್ಲಿ MX ವೆರಿಯೆಂಟ್ ನಂತರ AX3, AX5 ಮತ್ತು AX7 ವೆರಿಯೆಂಟ್‌ಗಳು ಮಾರಾಟಗೊಳ್ಳಲಿವೆ.

ಆರಂಭಿಕ ಎಂಎಕ್ಸ್ ವೆರಿಯೆಂಟ್‌ನಲ್ಲಿ ಮಹೀಂದ್ರಾ ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್ ಎರಡು ಎಂಜಿನ್ ಆಯ್ಕೆಗಳನ್ನು ನೀಡುತ್ತಿದ್ದು, ಇದು 5 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮ್ಯಾನುವಲ್ ಆವೃತ್ತಿಯಲ್ಲಿ ಮಾತ್ರ ಮಾರಾಟವಾಗಲಿದೆಯೆಂತೆ.

ಎಎಕ್ಸ್3 ವೆರಿಯೆಂಟ್‌ಗಳು ಐದು ಆಸನ ಸೌಲಭ್ಯವನ್ನು ಮಾತ್ರ ಹೊಂದಿದ್ದು, ಇದರಲ್ಲೂ ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ. ಆದರೆ ಈ ರೂಪಾಂತರದಲ್ಲಿ ಕೇವಲ ಮ್ಯಾನುವಲ್ ಗೇರ್‌ಬಾಕ್ಸ್ ಮಾತ್ರ ಲಭ್ಯವಿರಲಿದೆಯೆಂತೆ.

ಎಎಕ್ಸ್5 ವೆರಿಯೆಂಟ್‌ಗಳು ಸಹ ಐದು ಮತ್ತು ಏಳು ಆಸನಗಳ ಆಯ್ಕೆಗಳಲ್ಲಿ ಖರೀದಿ ಲಭ್ಯವಿರಲಿದ್ದು, ಎಎಕ್ಸ್5 ಮಾದರಿಗಳಲ್ಲೂ ಕಂಪನಿಯು ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಮಾದರಿಗಳನ್ನು ಬಿಡುಗಡೆ ಮಾಡಲಿದೆ. ಜೊತೆಗೆ ಮಧ್ಯಮ ಕ್ರಮಾಂಕದಲ್ಲಿರುವ ಎಎಕ್ಸ್5 ಮಾದರಿಯ ಹೈ ಎಂಡ್ ಮಾದರಿಯಲ್ಲಿ ಕಂಪನಿಯು ಆಲ್ ವೀಲ್ಹ್ ಡ್ರೈವ್ ಸಿಸ್ಟಂ ಜೋಡಣೆ ಮಾಡಬಹುದಾಗಿದೆ.

ಇನ್ನುಳಿದಂತೆ ಎಎಕ್ಸ್7 ಟಾಪ್ ಎಂಡ್ ಮಾದರಿಯಲ್ಲಿ ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಏಳು ಆಸನ ಆವೃತ್ತಿಯನ್ನು ಮಾತ್ರ ಬಿಡುಗಡೆ ಮಾಡುತ್ತಿದ್ದು, ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಗಳನ್ನು ಹೊಂದಿರುವ ಟಾಪ್ ಎಂಡ್ ಮಾದರಿಯಲ್ಲಿ ಹೆಚ್ಚಿರುವರಿಯಾಗಿ ಹಲವಾರು ಸುಧಾರಿತ ಫೀಚರ್ಸ್‌ಗಳು ಜೋಡಣೆ ಮಾಡಲಿದೆಯೆಂತೆ.

ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(ಎಂಟಿ),450-ಎನ್ಎಂ ಟಾರ್ಕ್(ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳು ಲಭ್ಯವಿದ್ದು, ಹೈ ಎಂಡ್ ಮಾದರಿಗಳಲ್ಲಿ ಮಹೀಂದ್ರಾ ಕಂಪನಿಯು 4x4 ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಜೋಡಣೆ ಮಾಡಿದೆ.

ಹಾಗೆಯೇ ಹೊಸ ಕಾರು ವಿವಿಧ ವೆರಿಯೆಂಟ್‌ಗಳೊಂದಿಗೆ ಎಲೆಕ್ಟ್ರಿಕ್ ಬ್ಲ್ಯೂ, ಎವರೆಸ್ಟ್ ವೈಟ್, ಡ್ಯಾಜಿಂಗ್ ಸಿಲ್ವರ್, ಮಿಡ್‌ನೈಟ್ ಬ್ಲ್ಯಾಕ್ ಮತ್ತು ರೆಡ್ ರೇಂಜ್ ಬಣ್ಣಗಳ ಆಯ್ಕೆ ಹೊಂದಿದ್ದು, ಬೆಲೆ ಶ್ರೇಣಿಯ ಮೂಲಕ ಈ ಹೊಸ ಕಾರು ಸುಮಾರು 15ಕ್ಕೂ ಹೆಚ್ಚು ಕಾರುಗಳಿಗೆ ಪೈಪೋಟಿ ನೀಡಲಿದೆ.


Click it and Unblock the Notifications