ಜೆ ವಿನ್ಯಾಸದ ಹೆಡ್‌ಲೈಟ್ಸ್, ಟೈಲ್‌ಲೈಟ್ಸ್ ಹೊಂದಿರುವ ಎಕ್ಸ್‌ಯುವಿ700 ಟೀಸರ್ ಬಿಡುಗಡೆ
ಬಹುನೀರಿಕ್ಷಿತ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯು ಶೀಘ್ರದಲ್ಲೇ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದ್ದು, ಹೊಸ ಕಾರಿನ ಹೆಡ್‌ಲೈಟ್ಸ್ ಟೀಸರ್ ಬಿಡುಗಡೆ ಮಾಡಿದೆ.

ಹೊಸ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಕಾರಿನ ಹೊಸ ತಲೆಮಾರಿನ ಆವೃತ್ತಿಯಾಗಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಯಾಗುತ್ತಿದೆ. ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾಗಿ ಒಂದೊಂದೆ ಮಾಹಿತಿಗಳನ್ನು ಹಂಚಿಕೊಳ್ಳುತ್ತಿರುವ ಮಹೀಂದ್ರಾ ಕಂಪನಿಯು ಇದೀಗ ಜೆ ವಿನ್ಯಾಸದ ಹೆಡ್‌ಲೈಟ್ಸ್ ಟೀಸರ್ ಬಿಡುಗಡೆ ಮಾಡಿದೆ.

ಮಹೀಂದ್ರಾ ಕಂಪನಿಯು ಹೊಸ ಎಸ್‌ಯುವಿಯಲ್ಲಿ ಮಹತ್ವದ ಬದಲಾವಣೆಗಾಗಿ ಬಲಿಷ್ಠ ವಿನ್ಯಾಸದೊಂದಿಗೆ ಆಕರ್ಷಕ ಫೀಚರ್ಸ್‌ಗಳನ್ನು ಜೋಡಣೆ ಮಾಡಿದ್ದು, ವರ್ಟಿಕಲ್ ಗ್ರಿಲ್ ಸ್ಲಾಟ್ ಜೊತೆ ಜೆ ಆಕಾರದಲ್ಲಿರುವ ಎಲ್ಇಡಿ ಹೆಡ್‌ಲೈಟ್ಸ್ ಹೊಸ ಕಾರಿಗೆ ಮತ್ತಷ್ಟು ಮೆರಗು ನೀಡಲಿದೆ.

ಜೊತೆಗೆ ಹೊಸ ಕಾರಿನಲ್ಲಿ ಎಲ್ಇಡಿ ಫಾಗ್ ಲ್ಯಾಂಪ್, ಸಿಲ್ವರ್ ಕೋಟ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, ಡ್ಯುಯಲ್ ಟೋನ್ ಹೊಂದಿರುವ ಮಲ್ಟಿ ಸ್ಪೋರ್ಕ್ ಅಲಾಯ್ ವ್ಹೀಲ್, ಸ್ಪೋರ್ಟಿ ರಿಯರ್ ಬಂಪರ್, ಅಂಡರ್ ಬಾಡಿ ಫ್ಲಕ್ಸ್ ಸ್ಕೀಡ್ ಪ್ಲೇಟ್, ಬೂಟ್ ಲಿಡ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಜೋಡಿಸಲಾಗಿದೆ.

6 ಸೀಟರ್ ಜೊತೆಗೆ 7 ಸೀಟರ್ ಆಯ್ಕೆ ಹೊಂದಿರುವ ಹೊಸ ಕಾರು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಪಡೆದುಕೊಳ್ಳಲಿದ್ದು, ಮೂರನೇ ಸಾಲಿನ ಆಸನ ಸೌಲಭ್ಯಕ್ಕಾಗಿ ಎಕ್ಸ್‌ಯುವಿ500 ಮಾದರಿಗಿಂತಲೂ ಹೆಚ್ಚಿನ ವೀಲ್ಹ್‌ಬೆಸ್ ನೀಡಲಾಗಿದೆ.

ಹೊಸ ಕಾರಿನಲ್ಲಿ ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳಾದ ಆಟೋ ಬೂಸ್ಟರ್ ಹೆಡ್‌ಲ್ಯಾಂಪ್, ಸೆಗ್ಮೆಂಟ್ ಫಸ್ಟ್ ಲಾರ್ಜ್ ಸನ್‌ರೂಫ್, ಡ್ರೈವರ್ ಡ್ರಾವ್ಸಿನೆಸ್ ಡಿಟೆಕ್ಷನ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳಿದ್ದು, ಸ್ಮಾರ್ಟ್ ಏರ್ ಫಿಲ್ಟರ್ ಟೆಕ್ನಾಲಜಿಯು ಹೊಸ ಕಾರಿನ ಪ್ರಮುಖ ಆಕರ್ಷಣೆಯಾಗಲಿದೆ.

ಹೊಸ ಎಕ್ಸ್‌ಯುವಿ700 ಕಾರು ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ವಿವಿಧ ಎಂಜಿನ್ ಆಯ್ಕೆಯಲ್ಲಿ ಒಟ್ಟು 11 ವೆರಿಯೆಂಟ್‌ಗಳನ್ನು ಪಡೆದುಕೊಳ್ಳಲಿದ್ದು, ಡೀಸೆಲ್ ಮತ್ತು ಪೆಟ್ರೋಲ್ ಮಾದರಿಗಳನ್ನು ಹೊಂದಿರುವ ಹೊಸ ಕಾರಿನಲ್ಲಿ ಪವರ್‌ಫುಲ್ ಎಂಜಿನ್ ಆಯ್ಕೆ ಹೊಂದಿರಲಿದೆ.

2.2-ಲೀಟರ್ ಡೀಸೆಲ್ ಎಂಜಿನ್ ಮಾದರಿಯು 180-ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದ್ದರೆ ಹೊಸದಾಗಿ ನೀಡಲಾಗುತ್ತಿರುವ 2.0-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 210 ಬಿಎಚ್‌ಪಿ ಉತ್ಪಾದನಾ ಮಾದರಿಯಾಗುವ ಸಾಧ್ಯತೆಗಳಿವೆ.

ಈ ಮೂಲಕ ಮಹೀಂದ್ರಾ ಕಂಪನಿಯು 5 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್‌ಯುವಿ500 ಮತ್ತು 7 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್‌ಯುವಿ700 ಮಾರಾಟ ಮಾಡಲಿದ್ದು, ಇತ್ತೀಚೆಗೆ ಟಾಟಾ ಸಫಾರಿ, ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿರುವ ಹಿನ್ನಲೆಯಲ್ಲಿ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಈ ಬದಲಾವಣೆ ತರುತ್ತಿದೆ.

ಹೊಸ ಕಾರು ಮಾದರಿಯನ್ನು ಕಳೆದ ವರ್ಷವೇ ಥಾರ್ ನ್ಯೂ ಜನರೇಷನ್ ನಂತರ ಬಿಡುಗಡೆ ಮಾಡಬೇಕಿದ್ದ ಮಹೀಂದ್ರಾ ಕಂಪನಿಯು ಕೋವಿಡ್ ಪರಿಣಾಮ ಮುಂದೂಡಿಕೆ ಮಾಡುತ್ತಲೇ ಬಂದಿದ್ದು, ಇದೀಗ ಅಂತಿಮ ಹಂತದ ಬಿಡುಗಡೆಯ ಸಿದ್ದತೆಯಲ್ಲಿದೆ. ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15.51 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.20.03 ಲಕ್ಷ ಬೆಲೆ ಹೊಂದಿದ್ದು, ನ್ಯೂ ಜನರೇಷನ್ ಮಾದರಿಯು ಹಳೆಯ ಆವೃತ್ತಿಗಿಂತ ಹೆಚ್ಚುವರಿಯಾಗಿ ರೂ. 80 ಸಾವಿರದಿಂದ ರೂ. 1.50 ಲಕ್ಷದಷ್ಟು ದುಬಾರಿಯಾಗಿರಲಿದೆ.


Click it and Unblock the Notifications