ಸ್ಮಾರ್ಟ್ ಡೋರ್ ಹ್ಯಾಂಡಲ್ ಪಡೆದುಕೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಬಹುನೀರಿಕ್ಷಿತ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯು ಅಗಸ್ಟ್ ಅಂತ್ಯಕ್ಕೆ ಅಧಿಕೃತವಾಗಿ ಬಿಡುಗಡೆಗೊಳ್ಳುವ ಸಿದ್ದತೆಯಲ್ಲಿದ್ದು, ಹೊಸ ಕಾರು ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಸ್ಮಾರ್ಟ್ ಡೋರ್ ಹ್ಯಾಂಡಲ್ ಪಡೆದುಕೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಎಕ್ಸ್‌ಯುವಿ700 ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಎಕ್ಸ್‌ಯುವಿ500 ಮಾದರಿಯ ನ್ಯೂ ಜನರೇಷನ್ ಮಾದರಿಯಾಗಿ ಬಿಡುಗಡೆಗೊಳ್ಳುತ್ತಿದ್ದು, ಮಹೀಂದ್ರಾ ಕಂಪನಿಯು ಹೊಸ ಕಾರಿನಲ್ಲಿ ಹಲವಾರು ಹೊಸ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ಜೋಡಣೆ ಮಾಡಿದೆ. ಹೊಸ ಕಾರು ಮುಂಬರುವ ಅಗಸ್ಟ್ ಹೊತ್ತಿಗೆ ಬಿಡುಗಡೆಯಾಗಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಪ್ರೀಮಿಯಂ ಮಾದರಿಯಾಗಿರಲಿದೆ.

ಸ್ಮಾರ್ಟ್ ಡೋರ್ ಹ್ಯಾಂಡಲ್ ಪಡೆದುಕೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಬಲಿಷ್ಠ ಎಂಜಿನ್ ಆಯ್ಕೆ ಪಡೆದುಕೊಳ್ಳಲಿರುವ ಹೊಸ ಎಕ್ಸ್‌ಯುವಿ700 ಕಾರು ಮಾದರಿಯಲ್ಲಿ ಮಹೀಂದ್ರಾ ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳನ್ನು ಜೋಡಣೆ ಮಾಡಿದ್ದು, ಆಸಕ್ತ ಗ್ರಾಹಕರಿಗಾಗಿ ಸೇಫ್ಟಿ ಫೀಚರ್ಸ್‌ಗಳನ್ನು ವೈಯಕ್ತಿಕರಣಗೊಳಿಸುವ ಆಯ್ಕೆಯನ್ನು ಸಹ ನೀಡಿದೆ.

ಸ್ಮಾರ್ಟ್ ಡೋರ್ ಹ್ಯಾಂಡಲ್ ಪಡೆದುಕೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಕಾರಿನ ಟೀಸರ್‌ನಲ್ಲಿ ಮಹೀಂದ್ರಾ ಕಂಪನಿಯು ಈಗಾಗಲೇ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ನೀಡುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಐಷಾರಾಮಿ ಕಾರುಗಳ ಮಾದರಿಯಲ್ಲಿ ಸ್ಮಾರ್ಟ್ ಡೋರ್ ಹ್ಯಾಂಡಲ್ ನೀಡುತ್ತಿರುವ ಬಗ್ಗೆ ಹೊಸ ಟೀಸರ್ ಪ್ರಕಟಿಸಿದೆ.

ಸ್ಮಾರ್ಟ್ ಡೋರ್ ಹ್ಯಾಂಡಲ್ ಪಡೆದುಕೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಹಾಗೆಯೇ ಮೊದಲ ಟೀಸರ್‌ನಲ್ಲಿ ಹೊಸ ಕಾರಿನಲ್ಲಿ ಆಟೋ ಬೂಸ್ಟರ್ ಹೆಡ್‌ಲ್ಯಾಂಪ್ ಮತ್ತು ಸೆಗ್ಮೆಂಟ್ ಫಸ್ಟ್ ಲಾರ್ಜ್ ಸನ್‌ರೂಫ್ ಬಗೆಗೆ ಮಾಹಿತಿ ನೀಡಿದ್ದು, ಆಟೋ ಬೂಸ್ಟರ್ ಹೆಡ್‌ಲ್ಯಾಂಪ್‌ನೊಂದಿಗೆ ಕಾರು ಚಾಲನೆ ವೇಳೆ ಹೆಡ್‌ಲ್ಯಾಂಪ್ ಬೆಳಕನ್ನು ನಮ್ಮ ಅಗತ್ಯಕ್ಕೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಲು ಸಹಕಾರಿಯಾಗಿದೆ.

ಸ್ಮಾರ್ಟ್ ಡೋರ್ ಹ್ಯಾಂಡಲ್ ಪಡೆದುಕೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಇನ್ನು ಹೊಸ ಎಕ್ಸ್‌ಯುವಿ700 ಕಾರು ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ವಿವಿಧ ಎಂಜಿನ್ ಆಯ್ಕೆಯಲ್ಲಿ ಒಟ್ಟು 11 ವೆರಿಯೆಂಟ್‌ಗಳನ್ನು ಪಡೆದುಕೊಳ್ಳಲಿದ್ದು, ಡೀಸೆಲ್ ಮತ್ತು ಪೆಟ್ರೋಲ್ ಮಾದರಿಗಳನ್ನು ಹೊಂದಿರುವ ಹೊಸ ಕಾರಿನಲ್ಲಿ ಡೀಸೆಲ್ ಪವರ್‌ಫುಲ್ ಎಂಜಿನ್ ಆಯ್ಕೆ ಹೊಂದಿರಲಿದೆ.

ಸ್ಮಾರ್ಟ್ ಡೋರ್ ಹ್ಯಾಂಡಲ್ ಪಡೆದುಕೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

2.2-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಸದ್ಯ ಕಂಪನಿಯು 180 ಬಿಎಚ್‌ಪಿ, 190 ಬಿಎಚ್‌ಪಿ ಮತ್ತು 210 ಬಿಎಚ್‌ಪಿ ಟ್ಯೂನ್ ಮೂಲಕ ಪರೀಕ್ಷೆ ನಡೆಸಲಾಗುತ್ತಿದ್ದು, ಹೊಸ ಕಾರು ಉತ್ಪಾದನಾ ಮಾದರಿಯಲ್ಲಿ 180-ಬಿಎಚ್‌ಪಿ ಮಾದರಿಯನ್ನು ಪಡೆದುಕೊಳ್ಳುವ ನೀರಿಕ್ಷೆಗಳಿವೆ.

ಸ್ಮಾರ್ಟ್ ಡೋರ್ ಹ್ಯಾಂಡಲ್ ಪಡೆದುಕೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಕಾರಿನಲ್ಲಿ ನೀಡಲಾಗುತ್ತಿರುವ ಪೆಟ್ರೋಲ್ ಎಂಜಿನ್ ಮಾಹಿತಿ ಲಭ್ಯವಿಲ್ಲವಾದರೂ ಥಾರ್ ಮಾದರಿಯಲ್ಲಿ ನೀಡಲಾಗಿರುವ 2.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದುವ ಸಾಧ್ಯತೆಗಳಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ ಕಂಪನಿಯು ಡೀಸೆಲ್ ಮಾದರಿಯ ಹೈ ಎಂಡ್ ಆವೃತ್ತಿಯಲ್ಲಿ 210 ಬಿಎಚ್‌ಪಿ ಮಾದರಿಯನ್ನು ಬಿಡುಗಡೆ ಮಾಡಲಿದೆ ಎನ್ನುವ ಮಾಹಿತಿಗಳಿವೆ.

ಸ್ಮಾರ್ಟ್ ಡೋರ್ ಹ್ಯಾಂಡಲ್ ಪಡೆದುಕೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಎಕ್ಸ್‌ಯುವಿ700 ಬಿಡುಗಡೆಯ ನಂತರ ಎಕ್ಸ್‌ಯುವಿ500 ಮಾದರಿಯನ್ನು ಕೆಲ ದಿನಗಳ ಕಾಲ ಸ್ಥಗಿತಗೊಳಿಸಲಿರುವ ಮಹೀಂದ್ರಾ ಕಂಪನಿಯು ಸದ್ಯ ಲಭ್ಯವಿರುವಂತಹ 7 ಸೀಟರ್ ಸೌಲಭ್ಯವನ್ನು ತೆಗೆದುಹಾಕಿ ಆರಾಮದಾಯಕ ಕ್ಯಾಬಿನ್ ರೂಂ ಹೊಂದಿರುವ 5 ಸೀಟರ್ ಮಾದರಿಯನ್ನಾಗಿ ಮರುಬಿಡುಗಡೆ ಮಾಡಲಿದೆ.

ಸ್ಮಾರ್ಟ್ ಡೋರ್ ಹ್ಯಾಂಡಲ್ ಪಡೆದುಕೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಈ ಮೂಲಕ 5 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್‌ಯುವಿ500 ಮತ್ತು 7 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್‌ಯುವಿ700 ಮಾರಾಟ ಮಾಡಲಿದ್ದು, ಇತ್ತೀಚೆಗೆ ಟಾಟಾ ಸಫಾರಿ, ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿರುವ ಹಿನ್ನಲೆಯಲ್ಲಿ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಈ ಬದಲಾವಣೆ ತಂದಿದೆ.

Most Read Articles

Kannada
English summary
Mahindra XUV700 To Get Smart Door Handles. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X