ವಿನೂತನ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಮಹೀಂದ್ರಾ ಕಂಪನಿಯು ತನ್ನ ಬಹುನೀರಿಕ್ಷಿತ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿದ್ದು, ಅನಾವರಣಗೊಂಡಿರುವ ಹೊಸ ಕಾರು ಮುಂದಿನ ಕೆಲವೇ ದಿನಗಳಲ್ಲಿ ಮಾರುಕಟ್ಟೆಗೆ ಪ್ರವೇಶಿಸಲಿದೆ.

ವಿನೂತನ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಎಕ್ಸ್‌ಯುವಿ ಸರಣಿ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಮಹೀಂದ್ರಾ ಕಂಪನಿಯು ಹೊಸ ಎಕ್ಸ್‌ಯುುವಿ700 ಎಸ್‌ಯುವಿ ಮಾದರಿಯನ್ನು ಅಭಿವೃದ್ದಿಗೊಳಿಸಿದ್ದು, ಹೊಸ ಕಾರು ಎಕ್ಸ್‌ಯುವಿ500 ಮಾದರಿಯನ್ನು ಆಧರಿಸಿ ನಿರ್ಮಾಣಗೊಂಡಿದೆ. ಎಕ್ಸ್‌ಯುವಿ700 ಮಾದರಿಯು ಸಂಪೂರ್ಣವಾಗಿ ಹೊಸ ತಂತ್ರಜ್ಞಾನ, ವಿನೂತನ ವಿನ್ಯಾಸ ಮತ್ತು ಬಲಿಷ್ಠ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, ಹೊಸ ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳಲ್ಲೇ ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿದೆ.

ವಿನೂತನ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಎಕ್ಸ್‌‌ಯುವಿ700 ಎಸ್‌ಯುವಿ ಮಾದರಿಯ ಪ್ರಮುಖ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಎಂಎಕ್ಸ್ ಸೀರಿಸ್ ಮತ್ತು ಆಂಡ್ರಿನೊಎಕ್ಸ್ ಸೀರಿಸ್‌ ಪಡೆದುಕೊಂಡಿದೆ.

ವಿನೂತನ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಎಂಎಕ್ಸ್‌ ಸೀರಿಸ್‌ನಲ್ಲಿ ಎಂಎಕ್ಸ್ ವೆರಿಯೆಂಟ್ ಹೊಂದಿದ್ದರೆ ಆಂಡ್ರಿನೊಎಕ್ಸ್ ಸೀರಿಸ್‌‌ನಲ್ಲಿ ಎಎಕ್ಸ್3, ಎಎಕ್ಸ್5 ಮತ್ತು ಎಎಕ್ಸ್7 ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಬಿಡುಗಡೆಯಾಗಲಿದೆ.

ವಿನೂತನ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಂಡ ಮಹೀಂದ್ರಾ ಎಕ್ಸ್‌ಯುವಿ700

ವಿನೂತನ ವಿನ್ಯಾಸ ಹೊಂದಿರುವ ಹೊಸ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯಲ್ಲಿ ಆಕರ್ಷಕ ಗ್ರಿಲ್ ಜೊತೆ ವರ್ಟಿಕಲ್ ಸ್ಲಾಟ್ ಮತ್ತು ಡ್ಯುಯಲ್ ಟೋನ್ ಕ್ರೋಮ್ ಹೊಂದಿದ್ದು, ಹೊಸ ಕಾರಿಗೆ ಮತ್ತಷ್ಟು ಐಷಾರಾಮಿ ಲುಕ್ ನೀಡಲು ಬ್ರಾಂಡ್ ನ್ಯೂ ಲೋಗೋ ನೀಡಲಾಗಿದೆ.

ವಿನೂತನ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಪ್ರಯಾಣಿಕರ ಕಾರುಗಳಿಗಾಗಿ ಹಲವು ವರ್ಷಗಳ ನಂತರ ಲೋಗೋ ವಿನ್ಯಾಸವನ್ನು ಬದಲಾವಣೆಗೊಳಿಸಿರುವ ಮಹೀಂದ್ರಾ ಕಂಪನಿಯು ಮೊದಲ ಬಾರಿಗೆ ಎಕ್ಸ್‌ಯುವಿ700 ಎಸ್‌ಯುವಿಯಲ್ಲಿ ಅಳವಡಿಸಿದ್ದು, ಹೊಸ ಲೋಗೋದೊಂದಿಗೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.

ವಿನೂತನ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ವಿನೂತನ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ವಿನೂತನ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಎಕ್ಸ್‌ಯುವಿ700 ಮಾದರಿಯಲ್ಲಿ ಮೂರನೇ ಸಾಲಿನ ಆಸನವನ್ನು ನೀಡಿರುವ ಹಿನ್ನಲೆಯಲ್ಲಿ ಕಾರಿನ ವ್ಹೀಲ್ ಬೆಸೆ ವಿಸ್ತರಿಸಲಾಗಿದ್ದು, ಗ್ರಾಹಕರು ತಮ್ಮ ಅಗತ್ಯಕ್ಕೆ ಅನುಗುಣವಾಗಿ 5 ಸೀಟರ್ ಅಥವಾ 7 ಸೀಟರ್ ಮಾದರಿಯನ್ನು ಖರೀದಿ ಮಾಡಬಹುದು.

ವಿನೂತನ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಂಡ ಮಹೀಂದ್ರಾ ಎಕ್ಸ್‌ಯುವಿ700

7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, 5 ಸೀಟರ್ ಮಾದರಿಯು 7 ಸೀಟರ್ ಮಾದರಿಗಿಂತಲೂ ಹೆಚ್ಚಿನ ಸ್ಥಳವಾಕಾಶದೊಂದಿಗೆ ಅರಾಮದಾಯ ಆಸನ ಸೌಲಭ್ಯದೊಂದಿಗೆ ಹೆಚ್ಚಿನ ಮತ್ತು ಬೂಟ್‌ಸ್ಪೆಸ್ ಹೊಂದಿರಲಿದೆ.

ವಿನೂತನ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಇನ್ನು ಹೊಸ ಕಾರಿನಲ್ಲಿ ಮಹೀಂದ್ರಾ ಕಂಪನಿಯು ಹಲವಾರು ಹೊಸ ಮಾದರಿಯ ತಂತ್ರಜ್ಞಾನ ಸೌಲಭ್ಯಗಳನ್ನು ನೀಡಿದ್ದು, 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ವಿನೂತನ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಎಂಜಿನ್ ಮತ್ತು ಫರ್ಪಾಮೆನ್ಸ್

ಮಹೀಂದ್ರಾ ಕಂಪನಿಯು ಹೊಸ ಎಕ್ಸ್‌ಯುವಿ700 ಮಾದರಿಯಲ್ಲಿ 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ. 2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(ಎಂಟಿ),450-ಎನ್ಎಂ ಟಾರ್ಕ್(ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ವಿನೂತನ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳು ಲಭ್ಯವಿದ್ದು, ಹೈ ಎಂಡ್ ಮಾದರಿಗಳಲ್ಲಿ ಮಹೀಂದ್ರಾ ಕಂಪನಿಯು 4x4 ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಜೋಡಣೆ ಮಾಡಿದೆ.

ವಿನೂತನ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಕಾರಿನ ಪರ್ಫಾಮೆನ್ಸ್‌ಗೆ ಪೂರಕವಾಗಿ ಜಿಪ್, ಜಾಪ್, ಜೂಮ್ ಮತ್ತು ಕಸ್ಟಮ್ ಎನ್ನುವ ನಾಲ್ಕು ಡ್ರೈವ್ ಮೋಡ್‌ಗಳಿದ್ದು, ಹೊಸ ಕಾರು ಐಷಾರಾಮಿ ಕಾರುಗಳಲ್ಲಿ ಕಂಡುಬರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ(ಎಡಿಎಎಸ್) ತಂತ್ರಜ್ಞಾನ ಹೊಂದಿದೆ.

ವಿನೂತನ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

ವಿನೂತನ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅನಾವರಣಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಈ ಮೂಲಕ ಹೊಸ ಎಕ್ಸ್‌ಯುವಿ700 ಮಾದರಿಯು ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳಾದ ಹ್ಯುಂಡೈ ಅಲ್ಕಾಜರ್, ಟಾಟಾ ಸಫಾರಿ, ಎಂಜಿ ಹೆಕ್ಟರ್ ಪ್ಲಸ್ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಮುಂಬರುವ ಅಕ್ಟೋಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರಿನ ಖರೀದಿದಾಗಿ ಕಂಪನಿಯು ಈಗಾಗಲೇ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಿದೆ.

Most Read Articles

Kannada
English summary
Mahindra xuv700 unveiled ahead of india launch details.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X