ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯ ವಿಶೇಷತೆಗಳು

ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ತನ್ನ ಬಹುನಿರೀಕ್ಷಿತ ಹೊಸ ಟೈಗನ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯನ್ನು ಈ ವರ್ಷದ ಮೇ ತಿಂಗಳಲ್ಲಿ ಅಧಿಕೃತವಾಗಿ ಅನಾವರಣಗೊಳಿಸಲಾಯಿತು.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯ ವಿಶೇಷತೆಗಳು

ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ. ವಿಡಬ್ಲ್ಯೂ ಟೈಗನ್ ಎಸ್‌ಯುವಿಯ ಉತ್ಪಾದನೆಯನ್ನು ಆಗಸ್ಟ್ 18 ರಂದು ಪ್ರಾರಂಭಿಸಲಾಗಿದೆ. ನಂತರ ಈ ಎಸ್‍ಯುವಿ ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಕೂಡ ಆರಂಭವಾಗುತ್ತದೆ. ಈ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯು ಆಕರ್ಷಕ ವಿನ್ಯಾಸ, ನೂತನ ಫೀಚರ್ಸ್, ಗರಿಷ್ಠ ಸುರಕ್ಷತೆ ಮತ್ತು ಅತ್ಯಾಧುನಿಕ ತಂತ್ರಜ್ಙಾನಗಳನ್ನು ಹೊಂದಿರುವ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯ ವಿಶೇಷತೆಗಳು ಇಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯ ವಿಶೇಷತೆಗಳು

ಫೋಕ್ಸ್‌ವ್ಯಾಗನ್ ಕಂಪನಿಯು ಈ ಹೊಸ ಟೈಗನ್ ಎಸ್‌ಯುವಿಯನ್ನು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಿದ್ದರು. ಫೋಕ್ಸ್‌ವ್ಯಾಗನ್ 2.0 ಯೋಜನೆಯಡಿಯಲ್ಲಿ ಈ ಬಹುನಿರೀಕ್ಷಿತ ಎಸ್‍ಯುವಿಯು ಭಾರತದಲ್ಲಿ ಬಿಡುಗಡೆಯಾಗಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯ ವಿಶೇಷತೆಗಳು

ವಿನ್ಯಾಸ

ಈ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿಯ ಮುಂಭಾಗದಲ್ಲಿ ಡ್ಯುಯಲ್-ಸ್ಲ್ಯಾಟ್ ಕ್ರೋಮ್ ಗ್ರಿಲ್ ಅನ್ನು ಡ್ಯುಯಲ್-ಲೆನ್ಸ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು ಮತ್ತು ಅಡ್ಡಲಾಗಿರುವ ಎಲ್ಇಡಿ ಡಿಆರ್‌ಎಲ್‌ಗಳಿಂದ ಸುತ್ತುವರೆದಿದೆ. ಈ ಎಸ್‍ಯುವಿಯ ಬಂಪರ್, ಕ್ರೋಮ್ ಸರೌಂಡ್ ಫಾಗ್ ಲ್ಯಾಂಪ್‌ಗಳು ಮತ್ತು ಕಾಂಟ್ರಾಸ್ಟ್ ಕಲರ್ ಸ್ಕಿಡ್ ಪ್ಲೇಟ್‌ನ ಕೆಳಗಿನ ಭಾಗದಲ್ಲಿ ಕ್ರೋಮ್ ಅಂಶಗಳನ್ನು ಹೊಂದಿದ್ದು,

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯ ವಿಶೇಷತೆಗಳು

ಇದು ಈ ಹೊಸ ಎಸ್‍ಯುವಿಗೆ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ಈ ಎಸ್‍ಯುವಿಯಲ್ಲಿ 17 ಇಂಚಿನ ಡ್ಯುಯಲ್ ಟೋನ್ ಅಲಾಯ್ ವ್ಹೀಲ್‌ಗಳು, ಬೋಲ್ಡ್ ಕ್ರೀಸ್‌ಗಳು, ಸಿಲ್ವರ್ ರೂಫ್ ರೈಲ್ಗಳು ಮತ್ತು ಶಾರ್ಕ್ ಫಿನ್ ಆಂಟೆನಾಗಳನ್ನು ಹೊಂದಿರುತ್ತದೆ. ಎಲ್‌ಇಡಿ ಟೈಲ್‌ಲ್ಯಾಂಪ್ ಕ್ಲಸ್ಟರ್ ಟೈಲ್‌ಗೇಟ್‌ನ ಉದ್ದಕ್ಜೂ ಚಲಿಸುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯ ವಿಶೇಷತೆಗಳು

ಎಂಜಿನ್

ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯಲ್ಲಿ 1.0-ಲೀಟರ್, ಮೂರು ಸಿಲಿಂಡರ್ ಟಿಎಸ್‌ಐ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್, ನಾಲ್ಕು ಸಿಲಿಂಡರ್ ಟಿಎಸ್‌ಐ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯ ವಿಶೇಷತೆಗಳು

ಇದರಲ್ಲಿ 1.0-ಲೀಟರ್ ಎಂಜಿನ್ 115 ಬಿಹೆಚ್‍ಪಿ ಪವರ್ ಮತ್ತು 175 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 150 ಬಿಹೆಚ್‍ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯ ವಿಶೇಷತೆಗಳು

ಈ ಎಂಜಿನ್ ಗಳೊಂದಿಗ್ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಸ್ಟ್ಯಾಂಡರ್ಡ್, 6-ಸ್ಪೀಡ್ ಟಾರ್ಕ್ ಕಾರ್ನ್ವಾಟರ್ (1.0 ಎಲ್ ಪೆಟ್ರೋಲ್ ಮಾತ್ರ) ಮತ್ತು 7-ಸ್ಪೀಡ್ ಡಿಸಿಟಿ ಆಟೋಮ್ಯಾಟಿಕ್ (1.5 ಎಲ್ ಪೆಟ್ರೋಲ್ ಮಾತ್ರ) ಗೇರ್ ಬಾಕ್ಸ್ ಅನ್ನು ನೀಡಲಾಗುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯ ವಿಶೇಷತೆಗಳು

ಇನ್ನು ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿಯ ಎಂಕ್ಯೂಬಿ-ಎ0-ಇನ್ ಪ್ಲಾಟ್‌ಫಾರ್ಮ್‌ ಅನ್ನು ಆಧರಿಸಿದೆ. ಇನ್ನು ಈ ಎಸ್‍ಯುವಿಯಲ್ಲಿ ಹಲವಾರು ಅತ್ಯಾಧುನಿಕ ಸುರಕ್ಷತಾ ಫೀಚರ್ ಗಳನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯ ವಿಶೇಷತೆಗಳು

ಫೀಚರ್ಸ್

ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಈ ವಿಭಾಗದ ಕಾರುಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಆಧುನಿಕ ಫಿಚರ್ ಗಳೊಂದಿಗೆ ಪ್ರೀಮಿಯಂ ಕಾಣುವ ಕ್ಯಾಬಿನ್ ಪಡೆಯಲಿದೆ. ಇದರಲ್ಲಿ 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು 0.2 ಇಂಚಿನ ಸಂಪೂರ್ಣ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯ ವಿಶೇಷತೆಗಳು

ಇದರೊಂದಿಗೆ ಎಲೆಕ್ಟ್ರಿಕ್ ಸನ್‌ರೂಫ್, ಮಲ್ಟಿ ಫಂಕ್ಷನ್ ಸ್ಟೀಯರಿಂಗ್ ವ್ಹೀಲ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಸ್ಮಾರ್ಟ್‌ಫೋನ್ ವೈರ್‌ಲೆಸ್, ವೆಂಟಿಲೇಟೆಡ್ ಸೀಟ್‌ಗಳು, ಕಾರ್ ಟೆಕ್ ಮತ್ತು ಇತರ ಫೀಚರ್ ಗಳನ್ನು ಹೊಂದಿರುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯ ವಿಶೇಷತೆಗಳು

ಪ್ರತಿಸ್ಪರ್ಧಿಗಳು

ಫೋಕ್ಸ್‌ವ್ಯಾಗನ್ ಟೈಗನ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಪ್ರಬಲ ಪೈಪೋಟಿ ನೀಡುತ್ತದೆ. ಈ ಹೊಸ ಎಸ್‍ಯುವಿಯು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ.

More from DriveSpark

Article Published On: Thursday, August 5, 2021, 10:11 [IST]
English summary
Major highlights of new volkswagen taigun suv details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+