ಕಾರು ಮಾರಾಟದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದ ಆಲ್ಟೊ

2021ರ ಜನವರಿ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾದ ಕಾರುಗಳ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಲಾಗಿದೆ. ಈ ವರದಿಯನ್ವಯ ಮಾರುತಿ ಸುಜುಕಿ ಕಂಪನಿಯ ಏಳು ಕಾರುಗಳು ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರೆ, ಹ್ಯುಂಡೈ ಕಂಪನಿಯ ಮೂರು ಕಾರುಗಳು ಸ್ಥಾನ ಪಡೆದಿವೆ.

ಕಾರು ಮಾರಾಟದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದ ಆಲ್ಟೊ

ಮಾರುತಿ ಸುಜುಕಿ ಕಂಪನಿಯ ಆಲ್ಟೊ ಮತ್ತೆ ಪ್ರಥಮ ಸ್ಥಾನದಲ್ಲಿದೆ. ಅಗ್ರ 5 ಸ್ಥಾನಗಳನ್ನು ಮಾರುತಿ ಸುಜುಕಿ ಕಂಪನಿಯ ಕಾರುಗಳೇ ಪಡೆದಿವೆ. ಹ್ಯುಂಡೈ ಕಂಪನಿಯ ಕ್ರೆಟಾ ಕಾರು ಆರನೇ ಸ್ಥಾನದಲ್ಲಿದೆ. ಮಾರುತಿ ಸುಜುಕಿ ಕಂಪನಿಯ ಆಲ್ಟೊ ಕಾರು ದೇಶದ ಅತಿ ಹೆಚ್ಚು ಮಾರಾಟವಾದ ಕಾರ್ ಆಗಿ ಹೊರಹೊಮ್ಮಿದೆ.

ಕಾರು ಮಾರಾಟದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದ ಆಲ್ಟೊ

ಜನವರಿ ತಿಂಗಳಿನಲ್ಲಿ ಆಲ್ಟೊ ಕಾರಿನ 18,260 ಯುನಿಟ್‌ಗಳು ಮಾರಾಟವಾಗಿವೆ. 2020ರ ಜನವರಿ ತಿಂಗಳಿನಲ್ಲಿ 18,914 ಯುನಿಟ್‌ಗಳು ಮಾರಾಟವಾಗಿದ್ದವು.ಮಾರುತಿ ಸುಜುಕಿ ಕಂಪನಿಯ ಸ್ವಿಫ್ಟ್ ಕಾರು ಎರಡನೇ ಸ್ಥಾನದಲ್ಲಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಕಾರು ಮಾರಾಟದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದ ಆಲ್ಟೊ

2021ರ ಜನವರಿ ತಿಂಗಳಿನಲ್ಲಿ ಈ ಕಾರಿನ 17,180 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷದ ಜನವರಿಯಲ್ಲಿ ಈ ಕಾರಿನ 19,981 ಯುನಿಟ್‌ಗಳು ಮಾರಾಟವಾಗಿದ್ದವು. ಕಳೆದ ವರ್ಷದ ಜನವರಿ ತಿಂಗಳಿಗೆ ಹೋಲಿಸಿದರೆ ಈ ಎರಡೂ ಕಾರುಗಳ ಮಾರಾಟ ಪ್ರಮಾಣವು ಕಡಿಮೆಯಾಗಿದೆ.

ಕಾರು ಮಾರಾಟದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದ ಆಲ್ಟೊ

ಮಾರುತಿ ಸುಜುಕಿ ಕಂಪನಿಯ ವ್ಯಾಗನ್ಆರ್ ಕಾರಿನ ಮಾರಾಟವು 64%ನಷ್ಟು ಏರಿಕೆಯಾಗಿದ್ದು, ಕಳೆದ ತಿಂಗಳು 17,165 ಯುನಿಟ್‌ಗಳು ಮಾರಾಟವಾಗಿವೆ.ಕಳೆದ ವರ್ಷದ ಜನವರಿಯಲ್ಲಿ ವ್ಯಾಗನ್ಆರ್ ಕಾರಿನ 15,232 ಯುನಿಟ್‌ಗಳು ಮಾರಾಟವಾಗಿದ್ದವು.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಕಾರು ಮಾರಾಟದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದ ಆಲ್ಟೊ

ಮಾರುತಿ ಸುಜುಕಿ ಕಂಪನಿಯ ಬಲೆನೊ ಸಹ ಮಾರಾಟದಲ್ಲಿ ಸ್ಪರ್ಧಾತ್ಮಕವಾಗಿ ಉಳಿದಿದೆ. ಕಳೆದ ತಿಂಗಳು ಈ ಕಾರಿನ 16,648 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಕಾರಿನ ಮಾರಾಟದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ 18.37%ನಷ್ಟು ಕುಸಿತ ಉಂಟಾಗಿದೆ.

ಕಾರು ಮಾರಾಟದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದ ಆಲ್ಟೊ

ಡಿಜೈರ್ ಕಾರಿನ ಮಾರಾಟದಲ್ಲಿಯೂ ಇಳಿಕೆ ಕಂಡುಬಂದಿದೆ. 2021ರ ಜನವರಿ ತಿಂಗಳಿನಲ್ಲಿ ಡಿಜೈರ್ ಕಾರಿನ 15,125 ಯುನಿಟ್‌ಗಳು ಮಾರಾಟವಾಗಿವೆ. ಮೊದಲ ಐದು ಸ್ಥಾನಗಳನ್ನು ಮಾರುತಿ ಸುಜುಕಿ ಕಾರುಗಳೇ ಪಡೆದಿರುವುದು ವಿಶೇಷ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಕಾರು ಮಾರಾಟದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದ ಆಲ್ಟೊ

ಹ್ಯುಂಡೈ ಕಂಪನಿಯ ಕ್ರೆಟಾ ಕಾರು ಈ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಕಳೆದ ತಿಂಗಳು ಈ ಕಾರಿನ 12,284 ಯುನಿಟ್‌ಗಳು ಮಾರಾಟವಾಗಿವೆ. ಹ್ಯುಂಡೈ ಕಂಪನಿಯ ವೆನ್ಯೂ ಕಾರು ಏಳನೇ ಸ್ಥಾನದಲ್ಲಿದೆ.

ಕಾರು ಮಾರಾಟದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದ ಆಲ್ಟೊ

ಈ ಕಾರಿನ ಮಾರಾಟದಲ್ಲಿ 74%ನಷ್ಟು ಹೆಚ್ಚಳವಾಗಿದ್ದು , ಕಳೆದ ತಿಂಗಳು ಈ ಕಾರಿನ 11,779 ಯುನಿಟ್‌ಗಳು ಮಾರಾಟವಾಗಿವೆ. ಮಾರುತಿ ಸುಜುಕಿ ಕಂಪನಿಯ ಇಕೋ ಎಂಪಿವಿ ಎಂಟನೇ ಸ್ಥಾನದಲ್ಲಿದ್ದು, ಮಾರಾಟದಲ್ಲಿ 5%ನಷ್ಟು ಕುಸಿತವನ್ನು ದಾಖಲಿಸಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಕಾರು ಮಾರಾಟದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದ ಆಲ್ಟೊ

ಕಳೆದ ತಿಂಗಳು ಇಕೋ ಎಂಪಿವಿಯ 11,680 ಯುನಿಟ್‌ಗಳು ಮಾರಾಟವಾಗಿವೆ. ಒಂಭತ್ತನೇ ಸ್ಥಾನದಲ್ಲಿರುವ ಹ್ಯುಂಡೈ ನಿಯೋಸ್ ಕಾರಿನ 10,865 ಯುನಿಟ್‌ಗಳುಜನವರಿ ತಿಂಗಳಿನಲ್ಲಿ ಮಾರಾಟವಾಗಿವೆ. ಮಾರುತಿ ಸುಜುಕಿ ಕಂಪನಿಯ ವಿಟಾರಾ ಬ್ರೆಝಾದ 10,623 ಯುನಿಟ್‌ಗಳು ಜನವರಿ ತಿಂಗಳಿನಲ್ಲಿ ಮಾರಾಟವಾಗಿವೆ.

ಕಾರು ಮಾರಾಟದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದ ಆಲ್ಟೊ

ಈ ಕಾರಿನ ಮಾರಾಟದಲ್ಲಿ 4%ನಷ್ಟು ಹೆಚ್ಚಳವಾಗಿದೆ. ಕೆಲವು ಕಾರುಗಳ ಮಾರಾಟವು ಕಡಿಮೆಯಾಗಿದ್ದರೆ ಇನ್ನು ಕೆಲವು ಕಾರುಗಳ ಮಾದರಿಗಳ ಮಾರಾಟವು ಹೆಚ್ಚಳವಾಗಿದೆ. ಮುಂದಿನ ತಿಂಗಳು ಈ ಮಾರಾಟ ಪ್ರಮಾಣವು ಹೇಗಿರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Article Published On: Tuesday, February 2, 2021, 19:04 [IST]
English summary
Maruti Alto remains No 1 in top selling cars list for January 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+