ಜನವರಿ ತಿಂಗಳಿನಲ್ಲಿ ಮಾರುತಿ ಸುಜುಕಿ ಸಿಯಾಜ್ ಕಾರು ಮಾರಾಟದಲ್ಲಿ ಶೇ.61.ರಷ್ಟು ಹೆಚ್ಚಳ

ಭಾರತದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಕಂಪನಿಯು 2021ರ ಜನವರಿ ತಿಂಗಳ ಮಾರಾಟದ ವರದಿಯನ್ನು ಇತ್ತೀಚೆಗೆ ಬಹಿರಂಗಪಡಿಸಿತು. ಮಾರುತಿ ಸುಜುಕಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಕಾರು ಮಾರಾಟದಲ್ಲಿ ಪ್ರಾಬಲ್ಯವನ್ನು ಮುಂದುವರೆಸಿದೆ.

ಜನವರಿ ತಿಂಗಳಿನಲ್ಲಿ ಮಾರುತಿ ಸುಜುಕಿ ಸಿಯಾಜ್ ಕಾರು ಮಾರಾಟದಲ್ಲಿ ಶೇ.61.ರಷ್ಟು ಹೆಚ್ಚಳ

2021ರ ಜನವರಿ ತಿಂಗಳಲ್ಲಿ ಮಾರುತಿ ಸುಜುಕಿ ಸಿಯಾಜ್ ಕಾರಿನ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ. ಕಳೆದ ತಿಂಗಳು ಮಾರುತಿ ಸುಜುಕಿ ಸಿಯಾಜ್ ಒಟ್ಟು 1,347 ಯುನಿಟ್‌ಗಳು ಮಾರಾಟವಾಗಿವೆ. 2020ರ ಜನವರಿಯಲ್ಲಿ ಸಿಯಾಜ್ 835 ಯುನಿಟ್ ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮರಾಟಕ್ಕೆ ಹೋಲಿಸಿದರೆ ಸಿಯಾಜ್ ಮಾರಾಟದಲ್ಲಿ ಶೇ.61.32 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಜನವರಿ ತಿಂಗಳಿನಲ್ಲಿ ಮಾರುತಿ ಸುಜುಕಿ ಸಿಯಾಜ್ ಕಾರು ಮಾರಾಟದಲ್ಲಿ ಶೇ.61.ರಷ್ಟು ಹೆಚ್ಚಳ

ಇನ್ನು 2020ರ ಡಿಸೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ ಸಿಯಾಜ್ ಒಟ್ಟು 1,270 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಸಿಯಾಜ್ ಮಾರಾಟದಲ್ಲಿ ಶೇ.6.06 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಜನವರಿ ತಿಂಗಳಿನಲ್ಲಿ ಮಾರುತಿ ಸುಜುಕಿ ಸಿಯಾಜ್ ಕಾರು ಮಾರಾಟದಲ್ಲಿ ಶೇ.61.ರಷ್ಟು ಹೆಚ್ಚಳ

ಮಿಡ್ ಸೆಡಾನ್ ಆದ ಮಾರುತಿ ಸಿಯಾಜ್ ಕಾರು ಸಿ ಸೆಗ್‍‍ಮೆಂಟ್‍‍ನಲ್ಲಿ ಹ್ಯುಂಡೈ ವೆರ್ನಾ, ಹೋಂಡಾ ಸಿಟಿ ಮತ್ತು ಸ್ಕೋಡಾ ರ್ಯಾಪಿಡ್ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ. ಈ ಕಾರನ್ನು ಭಾರತದಲ್ಲಿ ಮೊದಲ ಬಾರಿಗೆ 2014ರಲ್ಲಿ ಬಿಡುಗಡೆಗೊಳಿಸಿದ್ದರು.

ಜನವರಿ ತಿಂಗಳಿನಲ್ಲಿ ಮಾರುತಿ ಸುಜುಕಿ ಸಿಯಾಜ್ ಕಾರು ಮಾರಾಟದಲ್ಲಿ ಶೇ.61.ರಷ್ಟು ಹೆಚ್ಚಳ

ಸಿ-ಸೆಗ್‍‍ಮೆಂಟ್ ಸಿಯಾಜ್ ಸೆಡಾನ್ ಹೆಚ್ಚು ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಸಿಯಾಜ್ ಎಸ್ ಕಾರು ಮೂರು ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಅವುಗಳು ಪ್ರೀಮಿಯಂ ಸಿಲ್ವರ್, ಸ್ನೋ ವೈಟ್ ಮತ್ತು ಸಾಂಗ್ರಿಯಾ ರೆಡ್ ಬಣ್ಣಗಳಾಗಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಜನವರಿ ತಿಂಗಳಿನಲ್ಲಿ ಮಾರುತಿ ಸುಜುಕಿ ಸಿಯಾಜ್ ಕಾರು ಮಾರಾಟದಲ್ಲಿ ಶೇ.61.ರಷ್ಟು ಹೆಚ್ಚಳ

ಟಾಪ್ ಸ್ಪೆಕ್ ಸಿಯಾಜ್ ಎಸ್ ಕಾರಿನ ಕಾಸ್ಮೆಟಿಕ್‍ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಇದರಲ್ಲಿ ಬ್ಲ್ಯಾಕ್ ಒಆರ್‍‍ವಿಎಂ‍ಗಳು, ಕಪ್ಪು ಬಣ್ಣದ 16 ಇಂಚಿನ ಅಲಾಯ್ ವ್ಹೀಲ್‍‍ಗಳು, ಬೂಟ್ ಲಿಡ್ ಮತ್ತು ನವೀಕರಿಸಿದ ಫಾಂಗ್ ಲ್ಯಾಂಪ್‍ಗಳನ್ನು ಅಳವಡಿಸಲಾಗಿದೆ.

ಜನವರಿ ತಿಂಗಳಿನಲ್ಲಿ ಮಾರುತಿ ಸುಜುಕಿ ಸಿಯಾಜ್ ಕಾರು ಮಾರಾಟದಲ್ಲಿ ಶೇ.61.ರಷ್ಟು ಹೆಚ್ಚಳ

ಹೊಸ ಸಿಯಾಜ್ ಕಾರಿನ ಇಂಟಿರಿಯರ್‍‍ನಲ್ಲಿ ಕೂಡ ಹಲವಾರು ಸ್ಪೋರ್ಟಿ ನವೀಕರಣಗಳನ್ನು ಮಾಡಲಾಗಿದೆ. ಇದರಲ್ಲಿ ಡ್ಯಾಶ್‍‍ಬೋರ್ಡ್‍ನಲ್ಲಿ ಬ್ಲ್ಯಾಕ್ ಮತ್ತು ಸಿಲ್ವರ್ ಆಕ್ಸೆಂಟ್‍‍ಗಳು, ಡೋರ್ ಟ್ರಿಮ್ಸ್ ಮತ್ತು ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಕೂಡ ಸೇರಿವೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಜನವರಿ ತಿಂಗಳಿನಲ್ಲಿ ಮಾರುತಿ ಸುಜುಕಿ ಸಿಯಾಜ್ ಕಾರು ಮಾರಾಟದಲ್ಲಿ ಶೇ.61.ರಷ್ಟು ಹೆಚ್ಚಳ

ಮಾರುತಿ ಸಿಯಾಜ್ ಬಿಎಸ್-6 ಎಂಜಿನ್ ಅನ್ನು ಹೊಂದಿದೆ. ಮಾರುತಿ ಸಿಯಾಜ್ ಎಸ್ ಕಾರಿನಲ್ಲಿ ಬಿಎಸ್-6, 1.5 ಲೀಟರ್ ಕೆ 15 ಸೀರಿಸ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಜನವರಿ ತಿಂಗಳಿನಲ್ಲಿ ಮಾರುತಿ ಸುಜುಕಿ ಸಿಯಾಜ್ ಕಾರು ಮಾರಾಟದಲ್ಲಿ ಶೇ.61.ರಷ್ಟು ಹೆಚ್ಚಳ

ಈ ಎಂಜಿನ್ 104 ಬಿ‍‍ಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 5 ಸ್ಫೀಡ್ ಮ್ಯಾನುವಲ್ ಮತ್ತು 4 ಸ್ಪೀಡ್ ಟಾರ್ಕ್ ಕನ್ವಟರ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಆಯ್ಜೆಯನ್ನು ನೀಡಲಾಗಿದೆ. ಈ ಎಂಜಿನ್ ಮಾರುತಿ ಸುಜುಕಿಯ ಎಸ್‍‍ಹೆಚ್‍ವಿಎಸ್ ಸ್ಮಾರ್ಟ್ ಮೈಲ್ಡ್-ಹೈಬ್ರಿಡ್ ತಂತ್ರಜ್ಞಾನವನ್ನು ಹೊಂದಿದೆ.

ಜನವರಿ ತಿಂಗಳಿನಲ್ಲಿ ಮಾರುತಿ ಸುಜುಕಿ ಸಿಯಾಜ್ ಕಾರು ಮಾರಾಟದಲ್ಲಿ ಶೇ.61.ರಷ್ಟು ಹೆಚ್ಚಳ

ಮಾರುತಿ ಸುಜುಕಿ ಸಿಯಾಜ್‍‍ನಲ್ಲಿ ದೊಡ್ಡ ಟಚ್‍‍ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ, ಕೀ ಲೆಸ್ ಎಂಟ್ರಿ, ಮಲ್ಟಿಪಲ್ ಏರ್‍‍ಬ್ಯಾಗ್‍, ಇಬಿ‍ಡಿಯೊಂದಿಗೆ ಎಬಿಎಸ್, ಆಟೋಮ್ಯಾಟಿಕ್ ಕ್ಲೈಮೆಂಟ್ ಮತ್ತು ಇತರ ಫೀಚರ್ಸ್‍‍ಗಳನ್ನು ಹೊಂದಿದೆ.

Most Read Articles

Kannada
English summary
Maruti Suzuki Ciaz Sales Up By 61%. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X