2020ರ ಡಿಸೆಂಬರ್‌ ತಿಂಗಳಿನಲ್ಲಿ ಭರ್ಜರಿ ಏರಿಕೆ ಕಂಡ ಮಾರುತಿ ಇಗ್ನಿಸ್ ಕಾರು ಮಾರಾಟ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಈ ವರ್ಷದ ಆರಂಭದಲ್ಲಿ ಇಗ್ನಿಸ್ ಫೇಸ್‌ಲಿಫ್ಟ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಈ ಹೊಸ ಮಾರುತಿ ಇಗ್ನಿಸ್ ಕಾರನ್ನು ಭಾರತದಲ್ಲಿ ನೆಕ್ಸಾ ಪ್ರೀಮಿಯಂ ಡೀಲರ್ ಗಳ ಮೂಲಕ ಮಾರಾಟ ಮಾಡಲಾಗುತ್ತದೆ.

2020ರ ಡಿಸೆಂಬರ್‌ ತಿಂಗಳಿನಲ್ಲಿ ಭರ್ಜರಿ ಏರಿಕೆ ಕಂಡ ಮಾರುತಿ ಇಗ್ನಿಸ್ ಕಾರು ಮಾರಾಟ

ಬಿಡುಗಡೆಯಾದ ಆರಂಭದಲ್ಲಿ ಇಗ್ನಿಸ್ ಕಾರು ಬಲೆನೊ ಹ್ಯಾಚ್‌ಬ್ಯಾಕ್‌ನಷ್ಟು ದೊಡ್ಡ ಯಶಸ್ಸನ್ನು ಸಾಧಿಸಲು ಸಾಧ್ಯವಾಗಲಿಲ್ಲ. ಆದರೆ ನಂತರದ ದಿನಗಳಲ್ಲಿ ಇಗ್ನಿಸ್ ಫೇಸ್‌ಲಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿತು. ಇನ್ನು 2020ರ ಡಿಸೆಂಬರ್‌ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಇಗ್ನಿಸ್ ಮಾದರಿಯ ವಾರ್ಷಿಕ ಮಾರಾಟದಲ್ಲಿ ಶೇ.239 ರಷ್ಟು ಭಾರಿ ಬೆಳವಣಿಗೆಯನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದೆ.

2020ರ ಡಿಸೆಂಬರ್‌ ತಿಂಗಳಿನಲ್ಲಿ ಭರ್ಜರಿ ಏರಿಕೆ ಕಂಡ ಮಾರುತಿ ಇಗ್ನಿಸ್ ಕಾರು ಮಾರಾಟ

ಇನ್ನು 2020ರ ಡಿಸೆಂಬರ್‌ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಇಗ್ನಿಸ್ ಮಾದರಿಯ 3,268 ಯುನಿಟ್‌ಗಳು ಮಾರಾಟ ಮಾಡಿದೆ. ಇನ್ನು 2019ರ ಡಿಸೆಂಬರ್‌ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಇಗ್ನಿಸ್ ಮಾದರಿಯ 964 ಯುನಿಟ್‌ಗಳು ಮಾರಾಟಗೊಳಿಸಿತ್ತು.

MOST READ: 2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

2020ರ ಡಿಸೆಂಬರ್‌ ತಿಂಗಳಿನಲ್ಲಿ ಭರ್ಜರಿ ಏರಿಕೆ ಕಂಡ ಮಾರುತಿ ಇಗ್ನಿಸ್ ಕಾರು ಮಾರಾಟ

ಇನ್ನು ತಿಂಗಳಿಗೊಮ್ಮೆ, ಮಾರುತಿ ಇಗ್ನಿಸ್ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ. ಮಾರುತಿ ಸುಜುಕಿ ಕಂಪನಿಯು ಇಗ್ನಿಸ್ ಹ್ಯಾಚ್‌ಬ್ಯಾಕ್‌ ಕಾರಿನ ಜೆಟ್ಟಾ ಮ್ಯಾನುವಲ್ ಹಾಗೂ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಗಳನ್ನು ಸ್ಮಾರ್ಟ್‌ಪ್ಲೇ ಇನ್ಫೋಟೇನ್‌ಮೆಂಟ್ ಸಿಸ್ಟಂನೊಂದಿಗೆ ಇತ್ತೀಚೆಗೆ ಬಿಡುಗಡೆಗೊಳಿಸಿತು.

2020ರ ಡಿಸೆಂಬರ್‌ ತಿಂಗಳಿನಲ್ಲಿ ಭರ್ಜರಿ ಏರಿಕೆ ಕಂಡ ಮಾರುತಿ ಇಗ್ನಿಸ್ ಕಾರು ಮಾರಾಟ

ಮಾರುತಿ ಇಗ್ನಿಸ್ ಕಾರನ್ನು ಮೊದಲ ಬಾರಿಗೆ 2017ರಲ್ಲಿ ಬಿಡುಗಡೆಗೊಳಿಸಲಾಯಿತು. ಈ ಕಾರನ್ನು ಸಿಗ್ಮಾ, ಡೆಲ್ಟಾ, ಜೆಟ್ಟಾ ಮತ್ತು ಆಲ್ಫಾ ಎಂಬ ನಾಲ್ಕು ಮಾದರಿಗಳಲ್ಲಿ ಮಾರಾಟ ಮಾಡಲಾತ್ತದೆ. ಇಗ್ನಿಸ್ ನೆಕ್ಸಾ ಶೋರೂಂನಿಂದ ಮಾರಾಟವಾದ ಮೊದಲ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಹೊಂದಿರುವ ಕಾರು ಇದಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

2020ರ ಡಿಸೆಂಬರ್‌ ತಿಂಗಳಿನಲ್ಲಿ ಭರ್ಜರಿ ಏರಿಕೆ ಕಂಡ ಮಾರುತಿ ಇಗ್ನಿಸ್ ಕಾರು ಮಾರಾಟ

ಇಗ್ನಿಸ್ ಫೇಸ್‌ಲಿಫ್ಟ್ ಕಾರಿನಲ್ಲಿ 1.2-ಲೀಟರಿನ ಕೆ 12 ಬಿ ಬಿಎಸ್-6 ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 83 ಬಿಹೆಚ್ ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

2020ರ ಡಿಸೆಂಬರ್‌ ತಿಂಗಳಿನಲ್ಲಿ ಭರ್ಜರಿ ಏರಿಕೆ ಕಂಡ ಮಾರುತಿ ಇಗ್ನಿಸ್ ಕಾರು ಮಾರಾಟ

ಈ ಮಾರುತಿ ಸುಜುಕಿ ಇಗ್ನಿಸ್ ಫೇಸ್‌ಲಿಫ್ಟ್ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್-ಇಬಿಡಿ, ಡ್ಯುಯಲ್ ಏರ್‌ಬ್ಯಾಗ್ ಹಾಗೂ ಡ್ರೈವರ್ ಸೇಫ್ಟಿ ಅಲರ್ಟ್ ಗಳನ್ನು ನೀಡಲಾಗಿದೆ. ಫೇಸ್ ಲಿಫ್ಟ್ ಕಾರಿನಲ್ಲಿ ಲೈವ್ ಟ್ರಾಫಿಕ್, ವಾಯ್ಸ್ ರೆಕಗ್ನಿಷನ್, ವೆಹಿಕಲ್ ಇನ್ಫಾರ್ಮೆಷನ್ ಅಲರ್ಟ್ ನಂತಹ ಹೊಸ ಫೀಚರ್ ಗಳನ್ನು ಅಳವಡಿಸಲಾಗಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

2020ರ ಡಿಸೆಂಬರ್‌ ತಿಂಗಳಿನಲ್ಲಿ ಭರ್ಜರಿ ಏರಿಕೆ ಕಂಡ ಮಾರುತಿ ಇಗ್ನಿಸ್ ಕಾರು ಮಾರಾಟ

ಭಾರತದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ 2020ರ ಡಿಸೆಂಬರ್ ತಿಂಗಳಲ್ಲಿ ಒಟ್ಟಾರೆ ಮಾರಾಟದಲ್ಲಿ ಕಂಪನಿಯು ಶೇ.20.2 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. 2020ರ ಡಿಸೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಒಟ್ಟು 1,60,226 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

2020ರ ಡಿಸೆಂಬರ್‌ ತಿಂಗಳಿನಲ್ಲಿ ಭರ್ಜರಿ ಏರಿಕೆ ಕಂಡ ಮಾರುತಿ ಇಗ್ನಿಸ್ ಕಾರು ಮಾರಾಟ

ಬಜೆಟ್ ಆಧಾರಿತ ಹ್ಯಾಚ್‍‍ಬ್ಯಾಕ್‍‍ಗಳಿಂದಾಗಿ ಮಾರುತಿ ಸುಜುಕಿ ಕಂಪನಿಯು ಹೆಚ್ಚು ಹೆಸರುವಾಸಿಯಾಗಿದೆ. ಮಾರುತಿ ಸುಜುಕಿ ಇಗ್ನಿಸ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕಂಪನಿಯ ಹ್ಯಾಚ್‍‍ಬ್ಯಾಕ್‍ಗಳಿಗೆ ಪೈಪೋಟಿ ನೀಡಲಿದೆ.

Article Published On: Friday, January 15, 2021, 20:04 [IST]
English summary
Maruti Suzuki Ignis Registers 239% Sales Growth In December 2020. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+