ಮಧ್ಯಮ ಗಾತ್ರದ ಕಾರುಗಳಿಗೆ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ

ಹೊಸ ಎಮಿಷನ್ ನಿಯಮ ಅನುಸಾರವಾಗಿ ಡೀಸೆಲ್ ಎಂಜಿನ್ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರು ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿರುವ ಮಾರುತಿ ಸುಜುಕಿ ಇದೀಗ ಮತ್ತೆ ಹೊಸ ಮಾದರಿಯ ಡೀಸೆಲ್ ಎಂಜಿನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿದೆ.

ಮಧ್ಯಮ ಗಾತ್ರದ ಕಾರುಗಳಿಗೆ ಹೊಸ ಡೀಸೆಲ್ ಪರಿಚಯಿಸಲು ಸಜ್ಜಾದ ಮಾರುತಿ

2020ರ ಎಪ್ರಿಲ್ 1ರಿಂದ ಜಾರಿಗೆ ಬಂದ ಹೊಸ ಎಮಿಷನ್ ನಿಯಮ ಅನ್ವಯ 1.3-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಅನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿರುವ ಮಾರುತಿ ಸುಜುಕಿ ಕಂಪನಿಯು ಸದ್ಯ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್ ಪ್ರೇರಿತ ಕಾರುಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದು, ಆಯ್ದ ಕಾರು ಮಾದರಿಯಗಳಲ್ಲಿ ಬಿಎಸ್-6 ನಿಯಮ ಅನುಸಾರವಾಗಿ ಅಭಿವೃದ್ದಿಗೊಳಿಸಲಾದ 1.5-ಲೀಟರ್ ಡೀಸೆಲ್ ಎಂಜಿನ್ ಪರಿಚಯಿಸಲು ಸಿದ್ದತೆಯಲ್ಲಿದೆ.

ಮಧ್ಯಮ ಗಾತ್ರದ ಕಾರುಗಳಿಗೆ ಹೊಸ ಡೀಸೆಲ್ ಪರಿಚಯಿಸಲು ಸಜ್ಜಾದ ಮಾರುತಿ

ಬಿಎಸ್-6 ಜಾರಿ ನಂತರ ಡೀಸೆಲ್ ಎಂಜಿನ್ ಕಾರುಗಳನ್ನು ಮರುಬಿಡುಗಡೆ ಮಾಡುವುದಿಲ್ಲ ಎಂದಿದ್ದ ಮಾರುತಿ ಸುಜುಕಿಯು ಇದೀಗ ಗ್ರಾಹಕರ ಬೇಡಿಕೆಯೆಂತೆ ಮತ್ತೆ ಹೊಸ ಡೀಸೆಲ್ ಮಾದರಿಯನ್ನು ಅಳವಡಿಸಿಕೊಳ್ಳುವ ಸಿದ್ದತೆಯಲ್ಲಿದ್ದು, ಹೊಸ ಡೀಸೆಲ್ ಎಂಜಿನ್ ಮಾದರಿಯನ್ನು ಮೊದಲ ಹಂತವಾಗಿ ವಿಟಾರಾ ಬ್ರೆಝಾ ಮತ್ತು ಎರ್ಟಿಗಾ ಮಾದರಿಗಳಲ್ಲಿ ಅಳವಡಿಸುವ ಸಾಧ್ಯತೆಗಳಿವೆ.

ಮಧ್ಯಮ ಗಾತ್ರದ ಕಾರುಗಳಿಗೆ ಹೊಸ ಡೀಸೆಲ್ ಪರಿಚಯಿಸಲು ಸಜ್ಜಾದ ಮಾರುತಿ

ಭವಿಷ್ಯದ ದೃಷ್ಠಿಯಿಂದ ಡೀಸೆಲ್ ವಾಹನಗಳಿಗೆ ಸಂಪೂರ್ಣವಾಗಿ ಗುಡ್‌ಬೈ ಹೇಳಿದ್ದ ಮಾರುತಿ ಸುಜುಕಿಯು ಇದೀಗ ಗ್ರಾಹಕರ ಬೇಡಿಕೆ ಅನುಸಾರವಾಗಿ ಡೀಸೆಲ್ ಎಂಜಿನ್ ಆಯ್ಕೆಯನ್ನು ಮರಳಿ ಪರಿಚಯಿಸಲಾಗುತ್ತಿದ್ದು, ಹೊಸ ಡೀಸೆಲ್ ಎಂಜಿನ್ ಅನ್ನು ಮಾರುತಿ ಸುಜುಕಿ ಕಂಪನಿಯೇ ಅಭಿವೃದ್ದಿಗೊಳಿಸಿದೆ.

ಮಧ್ಯಮ ಗಾತ್ರದ ಕಾರುಗಳಿಗೆ ಹೊಸ ಡೀಸೆಲ್ ಪರಿಚಯಿಸಲು ಸಜ್ಜಾದ ಮಾರುತಿ

ಈ ಹಿಂದೆ ಪ್ರಮುಖ ಕಾರುಗಳಲ್ಲಿ ಜೋಡಿಸಲಾಗಿದ್ದ 1.3-ಲೀಟರ್ ಡಿಡಿಐಎಸ್ ಡೀಸೆಲ್ ಮಾದರಿಯನ್ನು ಫಿಯೆಟ್‌ ಕಂಪನಿಯಿಂದ ಎರವಲು ಪಡೆದುಕೊಳ್ಳುತ್ತಿದ್ದ ಮಾರುತಿ ಸುಜುಕಿಯು ಪ್ರಮುಖ ಕಾರು ಮಾದರಿಯಲ್ಲಿ ಜೋಡಣೆ ಮಾಡಿ ಮಾರಾಟ ಮಾಡುತ್ತಿತ್ತು. ಆದರೆ ಬಿಎಸ್-6 ಎಮಿಷನ್ ನಿಯಮ ಪಾಲನೆ ಮಾಡುವುದರದಿಂದ ಡೀಸೆಲ್ ಕಾರಿನ ಬೆಲೆ ಹೆಚ್ಚಳವಾಗುವ ಕಾರಣಕ್ಕೆ 1.3-ಲೀಟರ್ ಎಂಜಿನ್ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಯ್ತು.

ಮಧ್ಯಮ ಗಾತ್ರದ ಕಾರುಗಳಿಗೆ ಹೊಸ ಡೀಸೆಲ್ ಪರಿಚಯಿಸಲು ಸಜ್ಜಾದ ಮಾರುತಿ

ಇದೀಗ ಹೊಸ ಎಮಿಷನ್‌ಗೆ ಅನುಗುಣವಾಗಿ ಮಾರುತಿ ಸುಜುಕಿ ಕಂಪನಿಯೇ 1.5-ಲೀಟರ್ ಎಂಜಿನ್ ಮಾದರಿಯನ್ನು ಅಭಿವೃದ್ದಿಪಡಿಸುತ್ತಿದ್ದು, ಹೊಸ ಡೀಸೆಲ್ ಮಾದರಿಯನ್ನು ಆರಂಭಿಕವಾಗಿ ವಿಟಾರ್ ಬ್ರೆಝಾ ಮತ್ತು ಎರ್ಟಿಗಾ ಮಾದರಿಗಳಲ್ಲಿ ಅಳವಡಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಮಧ್ಯಮ ಗಾತ್ರದ ಕಾರುಗಳಿಗೆ ಹೊಸ ಡೀಸೆಲ್ ಪರಿಚಯಿಸಲು ಸಜ್ಜಾದ ಮಾರುತಿ

ಮಾರುತಿ ಸಜುಕಿಯು ಡೀಸೆಲ್ ಎಂಜಿನ್ ಮಾರಾಟ ಸ್ಥಗಿತಗೊಳಿಸಿದ ನಂತರ ಪ್ರತಿಸ್ಪರ್ಧಿ ಕಂಪನಿಗಳಾದ ಮಹೀಂದ್ರಾ, ಕಿಯಾ ಮೋಟಾರ್ಸ್ ಮತ್ತು ಟಾಟಾ ಡೀಸೆಲ್ ಎಂಜಿನ್ ಕಾರುಗಳ ಮಾರಾಟದಲ್ಲಿ ಭಾರೀ ಹೆಚ್ಚಳವಾಗಿರುವುದೇ ಹೊಸ ಎಂಜಿನ್ ಬಿಡುಗಡೆಗೆ ಸಿದ್ದತೆ ನಡೆಸಲಾಗಿದ್ದು, ಹೊಸ ಡೀಸೆಲ್ ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಕಾರುಗಳು ಮುಂಬರುವ ಮಾರ್ಚ ಅಂತ್ಯದೊಳಗೆ ಮಾರುಕಟ್ಟೆ ಪ್ರವೇಶಿಸಲಿವೆ.

ಮಧ್ಯಮ ಗಾತ್ರದ ಕಾರುಗಳಿಗೆ ಹೊಸ ಡೀಸೆಲ್ ಪರಿಚಯಿಸಲು ಸಜ್ಜಾದ ಮಾರುತಿ

1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 94-ಬಿಎಚ್‌ಪಿ ಮತ್ತು 225-ಎನ್ಎಂ ಟಾರ್ಕ್ ಉತ್ಪಾದಿಸಲಿದ್ದು, ವಿಟಾರಾ ಬ್ರೆಝಾ ಮತ್ತು ಎರ್ಟಿಗಾ ನಂತರ ಹೊಸ ಎಂಜಿನ್ ಅನ್ನು ಸಿಯಾಜ್ ಸೆಡಾನ್ ಮಾದರಿಯಲ್ಲೂ ಅಳವಡಿಸಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಮಧ್ಯಮ ಗಾತ್ರದ ಕಾರುಗಳಿಗೆ ಹೊಸ ಡೀಸೆಲ್ ಪರಿಚಯಿಸಲು ಸಜ್ಜಾದ ಮಾರುತಿ

ಇನ್ನುಳಿದಂತೆ ಕ್ರಾಸ್ ಓವರ್ ಹ್ಯಾಚ್‌ಬ್ಯಾಕ್ ಮಾದರಿಯಾದ ಎಸ್-ಕ್ರಾಸ್ ಪ್ರೀಮಿಯಂ ಕಾರು ಮಾದರಿಗಾಗಿ 118-ಬಿಎಚ್‌ಪಿ ಮತ್ತು 320-ಎನ್ಎಂ ಟಾರ್ಕ್ ಉತ್ಪಾದಿತ 1.6-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲು ನಿರ್ಧರಿಸಲಾಗಿದ್ದು, ಮಾರುತಿ ಸುಜುಕಿ ಹೊಸ ಡೀಸೆಲ್ ಎಂಜಿನ್ ಮಾದರಿಗಳು ಮತ್ತೊಮ್ಮೆ ಸದ್ದು ಮಾಡುವ ನೀರಿಕ್ಷೆಯಲ್ಲಿವೆ.

Most Read Articles

Kannada
English summary
Maruti Suzuki New BS6 1.5 Litre Diesel Engine Launching Soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X