Just In
- 2 hrs ago
ಸಿಟ್ರನ್ 2ನೇ ಕಾರು ಮಾದರಿಯಾಗಿ ಬಿಡುಗಡೆಯಾಗಲಿದೆ ವಿನೂತನ ಮಾದರಿಯ ಕಂಪ್ಯಾಕ್ಟ್ ಎಸ್ಯುವಿ
- 2 hrs ago
ಭಾರತಕ್ಕೆ ಲಗ್ಗೆ ಇಡಲಿದೆ ಐಷಾರಾಮಿ ಫೋಕ್ಸ್ವ್ಯಾಗನ್ ಆರ್ಟಿಯೊನ್ ಕಾರು
- 3 hrs ago
ಎಲೆಕ್ಟ್ರಿಕ್ ವಾಹನಗಳ ಬಗ್ಗೆ ವಿಶೇಷ ಅಭಿಯಾನ ನಡೆಸಲಿದೆ ಆಂಪಿಯರ್ ಎಲೆಕ್ಟ್ರಿಕ್
- 3 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್ವ್ಯಾಗನ್ ವಿರ್ಟಸ್ ಕಾರು
Don't Miss!
- News
ಮಂಗಳ ಗ್ರಹದ ಮೇಲೆ ರಾತ್ರಿ ಆಕಾಶ, 360 ಡಿಗ್ರಿಯಲ್ಲಿ ತಿರುಗಿಸುವ ಅವಕಾಶ..!
- Movies
ಇವರೇ ನೋಡಿ ಭಟ್ಟರ ಎರಡನೇ ಗಾಳಿಪಟದ ನಾಯಕಿಯರು
- Sports
ಐಎಸ್ಎಲ್: ಕೇರಳಕ್ಕೆ ಸೋಲುಣಿಸಿದ ನಾರ್ಥ್ಈಸ್ಟ್ ಯುನೈಟೆಡ್ ಪ್ಲೇ ಆಫ್ ಗೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಫೆ. 26ರ ಮಾರುಕಟ್ಟೆ ದರ ಇಲ್ಲಿದೆ
- Education
RBI Grade B Admit Card 2021: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Lifestyle
ಮಕ್ಕಳಿಗೆ ಪಿಸ್ತಾ ನೀಡಿದರೆ ಬುದ್ಧಿ ಶಕ್ತಿ ಹೆಚ್ಚುವುದರ ಜೊತೆಗೆ ಈ ಪ್ರಯೋಜನಗಳಿವೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಧ್ಯಮ ಗಾತ್ರದ ಕಾರುಗಳಿಗೆ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
ಹೊಸ ಎಮಿಷನ್ ನಿಯಮ ಅನುಸಾರವಾಗಿ ಡೀಸೆಲ್ ಎಂಜಿನ್ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್ಜಿ ಕಾರು ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿರುವ ಮಾರುತಿ ಸುಜುಕಿ ಇದೀಗ ಮತ್ತೆ ಹೊಸ ಮಾದರಿಯ ಡೀಸೆಲ್ ಎಂಜಿನ್ನೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿದೆ.

2020ರ ಎಪ್ರಿಲ್ 1ರಿಂದ ಜಾರಿಗೆ ಬಂದ ಹೊಸ ಎಮಿಷನ್ ನಿಯಮ ಅನ್ವಯ 1.3-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಅನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿರುವ ಮಾರುತಿ ಸುಜುಕಿ ಕಂಪನಿಯು ಸದ್ಯ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್ಜಿ ಎಂಜಿನ್ ಪ್ರೇರಿತ ಕಾರುಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದು, ಆಯ್ದ ಕಾರು ಮಾದರಿಯಗಳಲ್ಲಿ ಬಿಎಸ್-6 ನಿಯಮ ಅನುಸಾರವಾಗಿ ಅಭಿವೃದ್ದಿಗೊಳಿಸಲಾದ 1.5-ಲೀಟರ್ ಡೀಸೆಲ್ ಎಂಜಿನ್ ಪರಿಚಯಿಸಲು ಸಿದ್ದತೆಯಲ್ಲಿದೆ.

ಬಿಎಸ್-6 ಜಾರಿ ನಂತರ ಡೀಸೆಲ್ ಎಂಜಿನ್ ಕಾರುಗಳನ್ನು ಮರುಬಿಡುಗಡೆ ಮಾಡುವುದಿಲ್ಲ ಎಂದಿದ್ದ ಮಾರುತಿ ಸುಜುಕಿಯು ಇದೀಗ ಗ್ರಾಹಕರ ಬೇಡಿಕೆಯೆಂತೆ ಮತ್ತೆ ಹೊಸ ಡೀಸೆಲ್ ಮಾದರಿಯನ್ನು ಅಳವಡಿಸಿಕೊಳ್ಳುವ ಸಿದ್ದತೆಯಲ್ಲಿದ್ದು, ಹೊಸ ಡೀಸೆಲ್ ಎಂಜಿನ್ ಮಾದರಿಯನ್ನು ಮೊದಲ ಹಂತವಾಗಿ ವಿಟಾರಾ ಬ್ರೆಝಾ ಮತ್ತು ಎರ್ಟಿಗಾ ಮಾದರಿಗಳಲ್ಲಿ ಅಳವಡಿಸುವ ಸಾಧ್ಯತೆಗಳಿವೆ.

ಭವಿಷ್ಯದ ದೃಷ್ಠಿಯಿಂದ ಡೀಸೆಲ್ ವಾಹನಗಳಿಗೆ ಸಂಪೂರ್ಣವಾಗಿ ಗುಡ್ಬೈ ಹೇಳಿದ್ದ ಮಾರುತಿ ಸುಜುಕಿಯು ಇದೀಗ ಗ್ರಾಹಕರ ಬೇಡಿಕೆ ಅನುಸಾರವಾಗಿ ಡೀಸೆಲ್ ಎಂಜಿನ್ ಆಯ್ಕೆಯನ್ನು ಮರಳಿ ಪರಿಚಯಿಸಲಾಗುತ್ತಿದ್ದು, ಹೊಸ ಡೀಸೆಲ್ ಎಂಜಿನ್ ಅನ್ನು ಮಾರುತಿ ಸುಜುಕಿ ಕಂಪನಿಯೇ ಅಭಿವೃದ್ದಿಗೊಳಿಸಿದೆ.

ಈ ಹಿಂದೆ ಪ್ರಮುಖ ಕಾರುಗಳಲ್ಲಿ ಜೋಡಿಸಲಾಗಿದ್ದ 1.3-ಲೀಟರ್ ಡಿಡಿಐಎಸ್ ಡೀಸೆಲ್ ಮಾದರಿಯನ್ನು ಫಿಯೆಟ್ ಕಂಪನಿಯಿಂದ ಎರವಲು ಪಡೆದುಕೊಳ್ಳುತ್ತಿದ್ದ ಮಾರುತಿ ಸುಜುಕಿಯು ಪ್ರಮುಖ ಕಾರು ಮಾದರಿಯಲ್ಲಿ ಜೋಡಣೆ ಮಾಡಿ ಮಾರಾಟ ಮಾಡುತ್ತಿತ್ತು. ಆದರೆ ಬಿಎಸ್-6 ಎಮಿಷನ್ ನಿಯಮ ಪಾಲನೆ ಮಾಡುವುದರದಿಂದ ಡೀಸೆಲ್ ಕಾರಿನ ಬೆಲೆ ಹೆಚ್ಚಳವಾಗುವ ಕಾರಣಕ್ಕೆ 1.3-ಲೀಟರ್ ಎಂಜಿನ್ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಯ್ತು.

ಇದೀಗ ಹೊಸ ಎಮಿಷನ್ಗೆ ಅನುಗುಣವಾಗಿ ಮಾರುತಿ ಸುಜುಕಿ ಕಂಪನಿಯೇ 1.5-ಲೀಟರ್ ಎಂಜಿನ್ ಮಾದರಿಯನ್ನು ಅಭಿವೃದ್ದಿಪಡಿಸುತ್ತಿದ್ದು, ಹೊಸ ಡೀಸೆಲ್ ಮಾದರಿಯನ್ನು ಆರಂಭಿಕವಾಗಿ ವಿಟಾರ್ ಬ್ರೆಝಾ ಮತ್ತು ಎರ್ಟಿಗಾ ಮಾದರಿಗಳಲ್ಲಿ ಅಳವಡಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಮಾರುತಿ ಸಜುಕಿಯು ಡೀಸೆಲ್ ಎಂಜಿನ್ ಮಾರಾಟ ಸ್ಥಗಿತಗೊಳಿಸಿದ ನಂತರ ಪ್ರತಿಸ್ಪರ್ಧಿ ಕಂಪನಿಗಳಾದ ಮಹೀಂದ್ರಾ, ಕಿಯಾ ಮೋಟಾರ್ಸ್ ಮತ್ತು ಟಾಟಾ ಡೀಸೆಲ್ ಎಂಜಿನ್ ಕಾರುಗಳ ಮಾರಾಟದಲ್ಲಿ ಭಾರೀ ಹೆಚ್ಚಳವಾಗಿರುವುದೇ ಹೊಸ ಎಂಜಿನ್ ಬಿಡುಗಡೆಗೆ ಸಿದ್ದತೆ ನಡೆಸಲಾಗಿದ್ದು, ಹೊಸ ಡೀಸೆಲ್ ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಕಾರುಗಳು ಮುಂಬರುವ ಮಾರ್ಚ ಅಂತ್ಯದೊಳಗೆ ಮಾರುಕಟ್ಟೆ ಪ್ರವೇಶಿಸಲಿವೆ.

1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ನೊಂದಿಗೆ 94-ಬಿಎಚ್ಪಿ ಮತ್ತು 225-ಎನ್ಎಂ ಟಾರ್ಕ್ ಉತ್ಪಾದಿಸಲಿದ್ದು, ವಿಟಾರಾ ಬ್ರೆಝಾ ಮತ್ತು ಎರ್ಟಿಗಾ ನಂತರ ಹೊಸ ಎಂಜಿನ್ ಅನ್ನು ಸಿಯಾಜ್ ಸೆಡಾನ್ ಮಾದರಿಯಲ್ಲೂ ಅಳವಡಿಸಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಇನ್ನುಳಿದಂತೆ ಕ್ರಾಸ್ ಓವರ್ ಹ್ಯಾಚ್ಬ್ಯಾಕ್ ಮಾದರಿಯಾದ ಎಸ್-ಕ್ರಾಸ್ ಪ್ರೀಮಿಯಂ ಕಾರು ಮಾದರಿಗಾಗಿ 118-ಬಿಎಚ್ಪಿ ಮತ್ತು 320-ಎನ್ಎಂ ಟಾರ್ಕ್ ಉತ್ಪಾದಿತ 1.6-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲು ನಿರ್ಧರಿಸಲಾಗಿದ್ದು, ಮಾರುತಿ ಸುಜುಕಿ ಹೊಸ ಡೀಸೆಲ್ ಎಂಜಿನ್ ಮಾದರಿಗಳು ಮತ್ತೊಮ್ಮೆ ಸದ್ದು ಮಾಡುವ ನೀರಿಕ್ಷೆಯಲ್ಲಿವೆ.