ಇದೇ ತಿಂಗಳು 10ರಂದು ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್

ದೇಶದ ಅಗ್ರಗಣ್ಯ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ(Maruti Suzuki) ತನ್ನ ಜನಪ್ರಿಯ ಸೆಲೆರಿಯೊ(Celerio) ಹೊಸ ತಲೆಮಾರಿನ ಆವೃತ್ತಿಯನ್ನು ಬಿಡುಗಡೆ ಮಾಡಲಾಗುತ್ತಿದ್ದು, ಹೊಸ ಕಾರು ಇದೇ ತಿಂಗಳು 10ರಂದು ದೇಶಿಯ ಮಾರುಕಟ್ಟೆ ಪ್ರವೇಶಿಸಲಿದೆ.

ಇದೇ ತಿಂಗಳು 10ರಂದು ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್

ಮಾರುತಿ ಸುಜುಕಿ ಕಂಪನಿಯು ನ್ಯೂ ಜನರೇಷನ್ ಸೆಲೆರಿಯೊ ಹ್ಯಾಚ್‌ಬ್ಯಾಕ್ ಮಾದರಿಯನ್ನು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಖರೀದಿಗೆ ಈಗಾಗಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಕೂಡಾ ಆರಂಭವಾಗಿದೆ. ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚು ಆಕರ್ಷಕವಾಗಿದ್ದು, ಹೊಸ ಕಾರು ಖರೀದಿಗೆ ಭರ್ಜರಿ ಬೇಡಿಕೆ ಹರಿದುಬರುತ್ತಿದೆ.

ಇದೇ ತಿಂಗಳು 10ರಂದು ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್

ಹೊಸ ಸೆಲೆರಿಯೊ ಕಾರು ಖರೀದಿಗೆ ಮಾರುತಿ ಸುಜುಕಿ ಕಂಪನಿಯು ರೂ. 11 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಆರಂಭಿಸಿದ್ದು, ಹೊಸ ಕಾರು ಆರಂಭಿಕ ಪೆಟ್ರೋಲ್ ಮಾದರಿಗಳಲ್ಲಿಯೇ ಅತಿ ಮೈಲೇಜ್ ನೀಡುವುದಾಗಿ ಹೇಳಿಕೊಂಡಿದೆ.

ಇದೇ ತಿಂಗಳು 10ರಂದು ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್

ಆಕರ್ಷಕ ವಿನ್ಯಾಸ ಮತ್ತು ಹೊಸ ಫೀಚರ್ಸ್ ಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿರುವ ಹೊಸ ಸೆಲೆರಿಯೊ ಕಾರು ಹ್ಯಾಚ್‌ಬ್ಯಾಕ್ ಮಾದರಿಗಳಲ್ಲಿಯೇ ಹೆಚ್ಚಿನ ಇಂಧನ ದಕ್ಷತೆ ಹೊಂದಿದ್ದು, ಹೊಸ ಕಾರು ಪೆಟ್ರೋಲ್ ಮತ್ತು ಸಿಎನ್‌ಜಿ ಎರಡು ಮಾದರಿಗಳಲ್ಲೂ ಖರೀದಿಗೆ ಲಭ್ಯವಿರಲಿದೆ.

ಇದೇ ತಿಂಗಳು 10ರಂದು ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್

ಸೆಲೆರಿಯೊ ಮಾದರಿಯಲ್ಲಿ ಮಾರುತಿ ಸುಜುಕಿ ಕಂಪನಿಯು ಸಿಎನ್‌ಜಿ ಆವೃತ್ತಿಯನ್ನು ಮಾರಾಟ ಮಾಡುತ್ತಿದ್ದು, ಸುಧಾರಿತ ತಂತ್ರಜ್ಞಾನದೊಂದಿಗೆ ಉನ್ನತೀಕರಣಗೊಂಡಿರುವ ಕೆ10 1.0-ಲೀಟರ್ ಪೆಟ್ರೋಲ್ ಎಂಜಿನ್‌ ಆಯ್ಕೆಯೊಂದಿಗೆ ಅತ್ಯುತ್ತಮ ಇಂಧನ ದಕ್ಷತೆ ಹೊಂದಿದೆ.

ಇದೇ ತಿಂಗಳು 10ರಂದು ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್

ಹೊಸ ಕಾರು ಮಾರುಕಟ್ಟೆಯಲ್ಲಿರುವ ಇತರೆ ಪೆಟ್ರೋಲ್ ಮಾದರಿಗಿಂತಲೂ ಹೆಚ್ಚು ಮೈಲೇಜ್ ಖಾತ್ರಿಪಡಿಸಲಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ ಹೊಸ ಕಾರು 26 ಕಿ.ಮೀ ಮೈಲೇಜ್ ಅನ್ನು ಒದಗಿಸುವ ಭರವಸೆ ನೀಡಲಾಗಿದೆ.

ಇದೇ ತಿಂಗಳು 10ರಂದು ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್

ಸೆಲೆರಿಯೊ ಮಾದರಿಯು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಎರಡು ಮಾದರಿಯಲ್ಲೂ ಮಾರಾಟಗೊಳ್ಳಲಿದ್ದು, ಮ್ಯಾನುವಲ್ ಮಾದರಿಯು ಗರಿಷ್ಠ ಮೈಲೇಜ್ ಹೊಂದಿದ್ದರೆ ಆಟೋಮ್ಯಾಟಿಕ್ ಆವೃತ್ತಿಯು ತುಸು ಕಡಿಮೆ ಇಂಧನ ದಕ್ಷತೆ ಹೊಂದಿದ್ದರೂ ನಗರಪ್ರದೇಶದಲ್ಲಿನ ಸಂಚಾರಕ್ಕೆ ಅತ್ಯುತ್ತಮ ಆಯ್ಕೆಯಾಗಿರಲಿದೆ.

ಇದೇ ತಿಂಗಳು 10ರಂದು ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್

ಬಜೆಟ್ ಬೆಲೆಯ ಆಟೋಮ್ಯಾಟಿಕ್ ಕಾರು ಎಂಬ ಹೆಗ್ಗಳಿಕೆ ಹೊಂದಿರುವ ಸೆಲೆರಿಯೊ ಕಾರು ಮಾದರಿಯು 2014ರಿಂದ ಉತ್ತಮ ಬೇಡಿಕೆ ಹೊಂದಿದ್ದು, ಇತ್ತೀಚೆಗೆ ಪ್ರತಿಸ್ಪರ್ಧಿ ಮಾದರಿಗಳ ಅಬ್ಬರದ ನಡುವೆ ಬೇಡಿಕೆಯಲ್ಲಿ ಕುಸಿತ ಕಂಡಿದೆ.

ಇದೇ ತಿಂಗಳು 10ರಂದು ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್

ಹೀಗಾಗಿ ಹೊಸ ತಲೆಮಾರಿನ ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಮಹತ್ವದ ಬದಲಾವಣೆ ಪರಿಚಯಿಸುತ್ತಿರುವ ಮಾರುತಿ ಸುಜುಕಿಯು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಹೊಸ ಕಾರು ಈ ಬಾರಿ ಆಕರ್ಷಕ ವಿನ್ಯಾಸ, ಪ್ರೀಮಿಯಂ ಫೀಚರ್ಸ್‌ಗಳು ಮತ್ತು ಹೆಚ್ಚು ಇಂಧನ ದಕ್ಷತೆಯೊಂದಿಗೆ ಗ್ರಾಹಕರ ಆಯ್ಕೆ ಮತ್ತೆ ಮುಂಚೂಣಿ ಸಾಧಿಸಲಿದೆ.

ಇದೇ ತಿಂಗಳು 10ರಂದು ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್

ಹೊಸ ಕಾರು ಒಟ್ಟು ಏಳು ವೆರಿಯೆಂಟ್‌ಗಳನ್ನು ಹೊಂದಿರಲಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗ ಆರ್ಕ್ಟಿಕ್ ವೈಟ್, ಸಿಲ್ಕಿ ಸಿಲ್ವರ್, ಗ್ಲಿಸ್ಟೆನಿಂಗ್ ಗ್ರೇ, ಸಾಲಿಡ್ ಫೈರ್ ರೆಡ್, ಸ್ಪೀಡಿ ಬ್ಲೂ ಮತ್ತು ಕೆಫೀನ್ ಬ್ರೌನ್ ಎಂಬ ಸಿಂಗಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದೆ.

ಇದೇ ತಿಂಗಳು 10ರಂದು ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್

ಹೊಸ ಸೆಲೆರಿಯೊ ಕಾರಿನ ಮುಂಭಾಗವು ಆಕರ್ಷಕವಾದ ಗ್ರಿಲ್ ಮತ್ತು ರಿಫ್ರೆಶ್‌ ಫ್ರಂಟ್ ಫಾಸಿಯಾವನ್ನು ಹೊಂದಿದ್ದು, ಪರಿಷ್ಕೃತ ಮುಂಭಾಗದ ಬಂಪರ್, ವೃತ್ತಾಕಾರವಾಗಿರುವ ಹೊಸ ವಿನ್ಯಾಸಗೊಳಿಸಲಾದ ಹೆಡ್‌ಲ್ಯಾಂಪ್‌ಗಳು, ಕ್ರೋಮ್ ಸ್ಟ್ರಿಪ್ ಮೂಲಕ ಸಂಪರ್ಕ ಹೊಂದುವ ಸಿಗ್ನೇಚರ್ ಲೋಗೋ ಪಡೆದುಕೊಂಡಿದೆ.

ಇದೇ ತಿಂಗಳು 10ರಂದು ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್

ಸೆಲೆರಿಯೊ ಕಾರಿನ ಲೋ ಟ್ರಿಮ್‌ಗಳು ಸಾಧಾರಣ ಅಲಾಯ್ ವ್ಹೀಲ್ ಗಳನ್ನು ಪಡೆದುಕೊಂಡಿದ್ದು, ಉನ್ನತ ರೂಪಾಂತರಗಳನ್ನು ಬ್ಲ್ಯಾಕ್ ಬಣ್ಣದ 14-ಇಂಚಿನ ಅಲಾಯ್ ವ್ಹೀಲ್ ಗಳನ್ನು ಪ್ರತ್ಯೇಕವಾಗಿ ನೀಡಲಿದೆ.

ಇದೇ ತಿಂಗಳು 10ರಂದು ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್

ಹೊಸ ಸೆಲೆರಿಯೊ ಒಂದು ಪ್ರಮುಖ ಬದಲಾವಣೆಯೆಂದರೆ ಹಿಯರ್‌ಟೆಕ್ಟ್ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಇದನ್ನು ತಯಾರಿಸಲಾಗಿದ್ದು, ಹೊಸ ಕಾರಿನ ಹೊರಭಾಗದಲ್ಲಿ ಮಾತ್ರವಲ್ಲ ಒಳಭಾಗದ ವಿನ್ಯಾಸವು ಕೂಡಾ ಸಾಕಷ್ಟು ಸುಧಾರಣೆ ಕಂಡಿದೆ.

ಇದೇ ತಿಂಗಳು 10ರಂದು ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್

ಸೆಲೆರಿಯೊ ಹ್ಯಾಚ್‌ಬ್ಯಾಕ್ ಒಳಭಾಗದಲ್ಲಿ 7.0-ಇಂಚಿನ ಸ್ಮಾರ್ಟ್‌ಪ್ಲೇ ಸ್ಟುಡಿಯೋ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಪಡೆಯುತ್ತದೆ. ಈ ಸಿಸ್ಟಂ ಆಪಲ್ ಕಾರ್ ಪ್ಲೇ ಮತ್ತು ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ ಅನ್ನು ಕೂಡಾ ಒಳಗೊಂಡಿರುತ್ತದೆ.

ಇದೇ ತಿಂಗಳು 10ರಂದು ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್

ಹೊಸ ಕಾರಿನ ಡ್ಯಾಶ್‌ಬೋರ್ಡ್, ಸ್ಟೀರಿಂಗ್ ವ್ಹೀಲ್ ಮತ್ತು ಸೆಂಟರ್ ಕನ್ಸೋಲ್ ಅನ್ನು ಪರಿಷ್ಕರಿಸಲಾಗಿದ್ದು, ಹೊಸದಾಗಿ ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ಸ್ಟೀಯರಿಂಗ್ ಮೌಂಟೆಡ್ ಕಂಟ್ರೋಲ್ ಮತ್ತು ಇತೆರ ಪ್ರೀಮಿಯಂ ಫೀಚರ್ ಗಳನ್ನು ಕೂಡಾ ಒಳಗೊಂಡಿರಲಿದ್ದು, ಹೊಸ ಫೀಚರ್ಸ್‌ಗಳಿಂದಾಗಿ ಹೊಸ ಕಾರಿನ ಬೆಲೆಯು ಹಳೆಯ ಮಾದರಿಗಿಂತ ರೂ. 30 ಸಾವಿರದಿಂದ ರೂ. 80 ಸಾವಿರದಷ್ಟು ದುಬಾರಿಯಾಗಿರಲಿದೆ.

Most Read Articles

Kannada
English summary
Maruti suzuki announced all new celerio launch date details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X