ಸೆಪ್ಟೆಂಬರ್ ಅವಧಿಯಲ್ಲಿ Maruti Suzuki ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿರುವ ಮಾರುತಿ ಸುಜುಕಿ(Maruti Suzuki) ಕಂಪನಿಯು ಹೊಸ ವಾಹನಗಳ ಮಾರಾಟವನ್ನು ಉತ್ತೇಜಿಸಲು ಪ್ರಮುಖ ಕಾರುಗಳ ಮೇಲೆ ಸೆಪ್ಟೆಂಬರ್ ಅವಧಿಗಾಗಿ ವಿವಿಧ ಆಫರ್‌ಗಳನ್ನು ನೀಡುತ್ತಿದ್ದು, ಅರೆನಾ ಕಾರು ಮಾದರಿಗಳ ಮೇಲೆ ವಿಶೇಷ ರಿಯಾಯ್ತಿ ಘೋಷಣೆ ಮಾಡಿದೆ.

ಸೆಪ್ಟೆಂಬರ್ ಅವಧಿಯಲ್ಲಿ Maruti Suzuki ಕಾರುಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಕೋವಿಡ್ ಪರಿಣಾಮ ಹೆಚ್ಚುತ್ತಿರುವ ಸ್ವಂತ ವಾಹನಗಳ ಬಳಕೆಯ ಪರಿಣಾಮ ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಕಾರು ಮಾರಾಟವನ್ನು ಉತ್ತೇಜಿಸಲು ವಿವಿಧ ಕೊಡುಗೆಗಳೊಂದಿಗೆ ನಗದು ರಿಯಾಯಿತಿಗಳನ್ನು ಘೋಷಣೆ ಮಾಡಿದೆ. ಮಾರುತಿ ಸುಜುಕಿಯ ಅರೆನಾ(Maruti Suzuki Arena) ಪ್ಲಾಟ್‌ಫಾರಂ ಅಡಿಯಲ್ಲಿರುವ ಕಾರು ಮಾದರಿಗಳ ಮೇಲೆ ವಿಶೇಷ ರಿಯಾಯಿತಿ ನೀಡುತ್ತಿದೆ.

ಸೆಪ್ಟೆಂಬರ್ ಅವಧಿಯಲ್ಲಿ Maruti Suzuki ಕಾರುಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಮಾರುತಿ ಸುಜುಕಿ ಅರೆನಾ ಕಾರುಗಳ ಹೊಸ ಆಫರ್‌ಗಳಲ್ಲಿ ನಗದು ರಿಯಾಯ್ತಿ, ವಿನಿಯಮ ಬೋನಸ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯವರೆಗೆ ಲಭ್ಯವಿರಲಿವೆ.

ಸೆಪ್ಟೆಂಬರ್ ಅವಧಿಯಲ್ಲಿ Maruti Suzuki ಕಾರುಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಎಂಟ್ರಿ ಲೆವೆಲ್ ಕಾರು ಮಾದರಿಯಾಗಿರುವ ಆಲ್ಟೊ ಆರಂಭಿಕ ಮಾದರಿಯ ಖರೀದಿ ಮೇಲೆ ಕಂಪನಿಯು ರೂ.15 ಸಾವಿರ ನಗದು ರಿಯಾಯಿತಿ ಹಾಗೂ ರೂ.18 ಸಾವಿರ ವಿನಿಮಯ ಬೋನಸ್ ನೀಡುತ್ತಿದ್ದು, ಆಲ್ಟೊ ಇತರೆ ವೆರಿಯೆಂಟ್‌ಗಳ ಖರೀದಿ ಮೇಲೆ ರೂ. 20 ಸಾವಿರ ತನಕ ನಗದು ರಿಯಾಯ್ತಿ ಮತ್ತು ರೂ. 18 ಸಾವಿರ ತನಕ ವಿನಿಮಯ ಬೋನಸ್ ಪಡೆಯಬಹುದಾಗಿದೆ.

ಸೆಪ್ಟೆಂಬರ್ ಅವಧಿಯಲ್ಲಿ Maruti Suzuki ಕಾರುಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಮೈಕ್ರೊ ಎಸ್‌ಯುವಿ ಮಾದರಿಯಾದ ಎಸ್ ಪ್ರೆಸ್ಸೊ(S-Presso) ಕಾರಿನ ಮೇಲೆ ಕಂಪನಿಯು ರೂ.25 ಸಾವಿರ ನಗದು ರಿಯಾಯಿತಿ ಹಾಗೂ ರೂ.18 ಸಾವಿರ ವಿನಿಮಯ ಬೋನಸ್ ನೀಡುತ್ತಿದ್ದು, ಸೆಲೆರಿಯೊ ಕಾರು ಮಾದರಿಗಾಗಿ ರೂ. 18 ಸಾವಿರ ವಿನಿಮಯ ಬೋನಸ್ ನೀಡುತ್ತಿದೆ.

ಸೆಪ್ಟೆಂಬರ್ ಅವಧಿಯಲ್ಲಿ Maruti Suzuki ಕಾರುಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಜನಪ್ರಿಯ ಹ್ಯಾಚ್‌ಬ್ಯಾಕ್ ಕಾರು ಮಾದರಿಯಾದ ವ್ಯಾಗನ್ಆರ್ ಕಾರು ಖರೀದಿಯ ಮೇಲೆ ರೂ.10 ಸಾವಿರ ನಗದು ರಿಯಾಯತಿ ಮತ್ತು ರೂ.18 ಸಾವಿರ ವಿನಿಮಯ ಬೋನಸ್ ನೀಡುತ್ತಿದ್ದು, ಮಿನಿ ವ್ಯಾನ್ ಇಕೊ ಆವೃತ್ತಿಯ ಮೇಲೆ ರೂ.5 ಸಾವಿರ ನಗದು ರಿಯಾಯಿತಿ ಹಾಗೂ ರೂ.18 ಸಾವಿರ ವಿನಿಮಯ ಬೋನಸ್ ನೀಡಲಾಗುತ್ತದೆ.

ಸೆಪ್ಟೆಂಬರ್ ಅವಧಿಯಲ್ಲಿ Maruti Suzuki ಕಾರುಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಹೊಸ ಆಫರ್‌ಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಸ್ವಿಫ್ಟ್‌ ಕಾರಿನ ವಿವಿಧ ರೂಪಾಂತರಗಳಿಗೆ ಅನುಗುಣವಾಗಿ ರೂ. 10 ಸಾವಿರ ತನಕ ನಗದು ರಿಯಾಯಿತಿ ನೀಡುತ್ತಿದ್ದು, ವಿಟಾರಾ ಬ್ರೆಝಾ ಮೇಲೆ ಕಂಪನಿಯು ರೂ. 10 ಸಾವಿರ ನಗದು ರಿಯಾಯಿತಿ ಮತ್ತು ರೂ. 18 ಸಾವಿರ ತನಕ ವಿನಿಮಯ ಬೋನಸ್ ಘೋಷಣೆ ಮಾಡಿದೆ.

ಸೆಪ್ಟೆಂಬರ್ ಅವಧಿಯಲ್ಲಿ Maruti Suzuki ಕಾರುಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಡಿಜೈರ್ ಕಾರು ಖರೀದಿಯ ಮೇಲೆ ಮಾರುತಿ ಸುಜುಕಿ ಕಂಪನಿಯು ರೂ. 10 ಸಾವಿರ ನಗದು ರಿಯಾಯಿತಿ ಮತ್ತು ರೂ. 18 ಸಾವಿರ ತನಕ ವಿನಿಮಯ ಬೋನಸ್ ಘೋಷಣೆ ಮಾಡಿದ್ದು, ಎರ್ಟಿಗಾ ಎಂಪಿವಿ ಮೇಲೆ ಯಾವುದೇ ಆಫರ್ ನೀಡುತ್ತಿಲ್ಲ.

ಸೆಪ್ಟೆಂಬರ್ ಅವಧಿಯಲ್ಲಿ Maruti Suzuki ಕಾರುಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಇನ್ನು ಮಾರುತಿ ಸುಜುಕಿ ಕಂಪನಿಯು ತನ್ನ ಸರಣಿಯಲ್ಲಿರುವ ಎಲ್ಲಾ ಕಾರುಗಳ ಬೆಲೆಯನ್ನು ಇದೇ ತಿಂಗಳು ಹೆಚ್ಚಳ ಮಾಡಲು ನಿರ್ಧರಿಸಿದ್ದು, ಹೊಸ ದರಪಟ್ಟಿಯು ಶೀಘ್ರದಲ್ಲೇ ಪ್ರಕಟಿಸಲಿದೆ.

ಸೆಪ್ಟೆಂಬರ್ ಅವಧಿಯಲ್ಲಿ Maruti Suzuki ಕಾರುಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಈ ಹಿಂದೆ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಳು ಇದೀಗ ಬಿಡಿಭಾಗಗಳ ವೆಚ್ಚವು ನಿರಂತರವಾಗಿ ಹೆಚ್ಚುತ್ತಿರುವ ಪರಿಣಾಮ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬೆಲೆ ಪರಿಷ್ಕರಣೆ ಮಾಡುತ್ತಿದ್ದು, ಹೊಸ ವಾಹನಗಳು ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಬೆಲೆ ಏರಿಕೆ ಕಂಡಿವೆ.

ಸೆಪ್ಟೆಂಬರ್ ಅವಧಿಯಲ್ಲಿ Maruti Suzuki ಕಾರುಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಆಟೋ ಕಂಪನಿಗಳು ವಿವಿಧ ಕಾರು ಮಾದರಿಗಳಿಗೆ ಅನುಗುಣವಾಗಿ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಶೇ. 1.50ರಿಂದ ಶೇ.2 ರಷ್ಟು ಬೆಲೆ ಹೆಚ್ಚಳ ಮಾಡುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿಯಾಗಿ ರೂ. 60 ಸಾವಿರದಿಂದ ರೂ.1 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ.

ಸೆಪ್ಟೆಂಬರ್ ಅವಧಿಯಲ್ಲಿ Maruti Suzuki ಕಾರುಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಮಧ್ಯಮ ಗಾತ್ರದ ಕಾರುಗಳ ಬೆಲೆಯಲ್ಲಿ ರೂ. 60 ಸಾವಿರದಿಂದ ರೂ. 1 ಲಕ್ಷಕ್ಕೂ ಅಧಿಕ ಬೆಲೆ ಹೆಚ್ಚಳವಾಗಿದ್ದು, ವಿದೇಶಿ ಮಾರುಕಟ್ಟೆಗಳಿಂದ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್‌ಗಳ ಬೆಲೆ ಹೆಚ್ಚಳವಾಗಿರುವ ಪರಿಣಾಮ ಹೊಸ ವಾಹನ ಖರೀದಿಯು ಮತ್ತಷ್ಟು ಹೊರೆಯಾಗುತ್ತಿದೆ.

ಸೆಪ್ಟೆಂಬರ್ ಅವಧಿಯಲ್ಲಿ Maruti Suzuki ಕಾರುಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಕೋವಿಡ್ ಪರಿಣಾಮ ವಾಹನ ಉತ್ಪಾದನೆ ಮತ್ತು ಮಾರಾಟದಲ್ಲಿ ನಿರಂತರವಾಗಿ ಏರಿಳಿತ ಉಂಟಾಗುತ್ತಿದ್ದು, ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆ ಆಟೋ ಉದ್ಯಮಕ್ಕೆ ಭಾರೀ ಹೊಡೆತ ನೀಡುತ್ತಿದೆ.

ಸೆಪ್ಟೆಂಬರ್ ಅವಧಿಯಲ್ಲಿ Maruti Suzuki ಕಾರುಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಹೊಸ ವಾಹನಗಳ ಉತ್ಪಾದನೆಗೆ ಅವಶ್ಯವಾಗಿರುವ ಎಲೆಕ್ಟ್ರಾನಿಕ್ ಚಿಪ್(ಸೆಮಿಕಂಡಕ್ಟರ್) ಕೊರತೆಯು ಜಾಗತಿಕ ಆಟೋ ಉದ್ಯಮದ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದೆ. ಎಲೆಕ್ಟ್ರಾನಿಕ್ ಚಿಪ್ ಕೊರತೆಯಿಂದಾಗಿ ಭಾರತ ಮಾತ್ರವಲ್ಲ ವಿಶ್ವದ ಪ್ರಮುಖ ವಾಹನ ಉತ್ಪಾದನಾ ಕಂಪನಿಗಳಿಗೂ ಬಿಸಿ ತಟ್ಟಿದ್ದು, ಪ್ರಮುಖ ವಾಹನಗಳ ಉತ್ಪಾದನಾ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವುದು ಆಟೋ ಉತ್ಪಾದನಾ ಕಂಪನಿಗಳ ಆದಾಯಕ್ಕೆ ಹೊಡೆತ ನೀಡುತ್ತದೆ.

Most Read Articles

Kannada
English summary
Maruti suzuki announced attractive discounts in september details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X