ಜನಪ್ರಿಯ ಮಾರುತಿ ಸುಜುಕಿ ಇಗ್ನಿಸ್ ಕಾರಿನ ಮೇಲೆ ಭರ್ಜರಿ ಆಪರ್
ಜನಪ್ರಿಯ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಕಳೆದ ವರ್ಷ ಇಗ್ನಿಸ್ ಫೇಸ್‌ಲಿಫ್ಟ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಮಾರುತಿ ಸುಜುಕಿ ಕಂಫನಿಯು ಇಗ್ನಿಸ್ ಕಾರನ್ನು ಭಾರತದಲ್ಲಿ ನೆಕ್ಸಾ ಪ್ರೀಮಿಯಂ ಡೀಲರ್ ಗಳ ಮೂಲಕ ಮಾರಾಟ ಮಾಡಲಾಗುತ್ತದೆ.

ಬಿಡುಗಡೆಯಾದ ಆರಂಭದಲ್ಲಿ ಇಗ್ನಿಸ್ ಕಾರು ಬಲೆನೊ ಹ್ಯಾಚ್‌ಬ್ಯಾಕ್‌ನಷ್ಟು ದೊಡ್ಡ ಯಶಸ್ಸನ್ನು ಸಾಧಿಸಲು ಸಾಧ್ಯವಾಗಲಿಲ್ಲ. ಆದರೆ ನಂತರದ ದಿನಗಳಲ್ಲಿ ಇಗ್ನಿಸ್ ಫೇಸ್‌ಲಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿತು. ಇದೀಗ ಮಾರುತಿ ಸುಜುಕಿ ಕಂಪನಿಯು 2021ರ ಮಾರ್ಚ್ ತಿಂಗಳಲ್ಲಿ ಇಗ್ನಿಸ್ ಕಾರಿನ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಇಗ್ನಿಸ್ ಕಾರಿನ ಮೇಲೆ ಒಟ್ಟು ರೂ.42,000 ವರೆಗೆ ರಿಯಾಯಿತಿಯನ್ನು ಘೋಷಿಸಲಾಗಿದೆ

ಇದರಲ್ಲಿ ಇಗ್ನಿಸ್ ಕಾರಿನ ಮೇಲೆ ರೂ.20,000 ವರೆಗೂ ನಗದು ರಿಯಾಯಿತಿ ನೀಡಲಾಗಿದೆ. ಇನ್ನು ಆಸಕ್ತ ಖರೀದಿದಾರರು ಹಳೆಯ ವಾಹನದ ವಿನಿಮಯ ಮಾಡಿದಾಗಿ ರೂ.15,000 ವರೆಗೆ ಎಕ್ಸ್‌ಚೇಂಚ್ ಬೋನಸ್ ಅನ್ನು ಪಡೆಯಬಹುದು. ಇನ್ನು ಇದರೊಂದಿಗೆ ಐಎನ್‌ಟಿ ರೂ.7,000 ವರೆಗಿನ ಹೆಚ್ಚುವರಿ ಡೀಲರ್-ಮಟ್ಟದ ಕೊಡುಗೆಗಳಿವೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇನ್ನು ತಿಂಗಳಿಗೊಮ್ಮೆ, ಮಾರುತಿ ಇಗ್ನಿಸ್ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸುತ್ತಿದೆ. ಮಾರುತಿ ಸುಜುಕಿ ಕಂಪನಿಯು ಇಗ್ನಿಸ್ ಹ್ಯಾಚ್‌ಬ್ಯಾಕ್ ಕಾರಿನ ಜೆಟ್ಟಾ ಮ್ಯಾನುವಲ್ ಹಾಗೂ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಗಳನ್ನು ಸ್ಮಾರ್ಟ್‌ಪ್ಲೇ ಇನ್ಫೋಟೇನ್‌ಮೆಂಟ್ ಸಿಸ್ಟಂನೊಂದಿಗೆ ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆಗೊಳಿಸಿತು.

ಮಾರುತಿ ಇಗ್ನಿಸ್ ಕಾರನ್ನು ಮೊದಲ ಬಾರಿಗೆ 2017ರಲ್ಲಿ ಬಿಡುಗಡೆಗೊಳಿಸಲಾಯಿತು. ಈ ಕಾರನ್ನು ಸಿಗ್ಮಾ, ಡೆಲ್ಟಾ, ಜೆಟ್ಟಾ ಮತ್ತು ಆಲ್ಫಾ ಎಂಬ ನಾಲ್ಕು ರೂಪಾಂತರಗಳಲ್ಲಿ ಮಾರಾಟ ಮಾಡಲಾತ್ತದೆ. ಇಗ್ನಿಸ್ ನೆಕ್ಸಾ ಶೋರೂಂನಿಂದ ಮಾರಾಟವಾದ ಮೊದಲ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಹೊಂದಿರುವ ಕಾರು ಇದಾಗಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಮಾರುತಿ ಸುಜುಕಿ ಇಗ್ನಿಸ್ ಫೇಸ್‌ಲಿಫ್ಟ್ ಕಾರಿನಲ್ಲಿ 1.2-ಲೀಟರಿನ ಕೆ 12 ಬಿ ಬಿಎಸ್-6 ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 83 ಬಿಹೆಚ್ ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಮಾರುತಿ ಸುಜುಕಿ ಇಗ್ನಿಸ್ ಫೇಸ್‌ಲಿಫ್ಟ್ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್-ಇಬಿಡಿ, ಡ್ಯುಯಲ್ ಏರ್‌ಬ್ಯಾಗ್ ಹಾಗೂ ಡ್ರೈವರ್ ಸೇಫ್ಟಿ ಅಲರ್ಟ್ ಗಳನ್ನು ನೀಡಲಾಗಿದೆ. ಫೇಸ್ ಲಿಫ್ಟ್ ಕಾರಿನಲ್ಲಿ ಲೈವ್ ಟ್ರಾಫಿಕ್, ವಾಯ್ಸ್ ರೆಕಗ್ನಿಷನ್, ವೆಹಿಕಲ್ ಇನ್ಫಾರ್ಮೆಷನ್ ಅಲರ್ಟ್ ನಂತಹ ಹೊಸ ಫೀಚರ್ ಗಳನ್ನು ನೀಡಲಾಗಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಇದರೊಂದಿಗೆ ಮಾರುತಿ ಸುಜುಕಿ ಕಂಪನಿಯು ತನ್ನ ಬಲೆನೊ ಕಾರಿನ ಮೇಲೆ ಒಟ್ಟು ರೂ.34,000 ವರಗೂ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಇದರಲ್ಲಿ ರೂ.20,000 ವರೆಗೆ ನಗದು ರಿಯಾಯಿತಿ, ರೂ.10,000 ಮೌಲ್ಯದ ವಿನಿಮಯ ಬೋನಸ್ ಮತ್ತು ರೂ.4,000 ವರೆಗೆ ಕಾರ್ಪೊರೇಟ್ ರಿಯಾಯಿತಿಯನ್ನು ನೀಡಿದೆ.

ಬಜೆಟ್ ಆಧಾರಿತ ಹ್ಯಾಚ್‍ಬ್ಯಾಕ್‍ಗಳಿಂದಾಗಿ ಮಾರುತಿ ಸುಜುಕಿ ಕಂಪನಿಯು ಹೆಚ್ಚು ಹೆಸರುವಾಸಿಯಾಗಿದೆ. ಮಾರುತಿ ಸುಜುಕಿ ಇಗ್ನಿಸ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕಂಪನಿಯ ಹ್ಯಾಚ್‍ಬ್ಯಾಕ್‍ಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications