Just In
- 41 min ago Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- 13 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 15 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 15 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನಪ್ರಿಯ ಮಾರುತಿ ಸುಜುಕಿ ಬಲೆನೊ ಕಾರಿನ ಮೇಲೆ ಭರ್ಜರಿ ರಿಯಾಯಿತಿ
ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಸರಣಿಯಲ್ಲಿ ವೈವಿಧ್ಯಮಯ ಮಾದರಿಗಳನ್ನು ಹೊಂದಿದ್ದಾರೆ. ಮಾರುತಿ ಸುಜುಕಿ ಕಂಪನಿಯ ಬಹುತೇಕ ಎಲ್ಲಾ ಮಾದರಿಗಳು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿವೆ.
ಇದರಲ್ಲಿ ಬಲೆನೊ ಹ್ಯಾಚ್ಬ್ಯಾಕ್ ಮಾರುತಿ ಸುಜುಕಿ ಕಾರುಗಳ ಸರಣಿಯಲ್ಲಿ ಅತ್ಯಂತ ಯಶಸ್ವಿ ಮಾದರಿಗಳಲ್ಲಿ ಒಂದಾಗಿದೆ. ಮಾರುತಿ ಸುಜುಕಿ ಕಂಪನಿಯು 2015ರಲ್ಲಿ ಮೊದಲ ಬಾರಿಗೆ ಬಲೆನೊ ಕಾರನ್ನು ಬಿಡುಗಡೆಗೊಳಿಸಿತ್ತು. ಇದು ಪ್ರೀಮಿಯಂ ಹ್ಯಾಚ್ಬ್ಯಾಕ್ ವಿಭಾಗದಲ್ಲಿ ಹೆಚ್ಚು ಮಾರಾಟವಾದ ಕಾರುಗಳಲ್ಲಿ ಒಂದಾಗಿದೆ. ಕಳೆದ ತಿಂಗಳಿನಲ್ಲಿ ದೇಶದಲ್ಲಿ ಹೆಚ್ಚು ಮಾರಾಟವಾದ ಟಾಪ್ 10 ಕಾರುಗಳ ಪಟ್ಟಿಯಲ್ಲಿ ಬಲೆನೊ ಕಾರು ಎರಡನೇ ಸ್ಥಾನವನ್ನು ಪಡೆದುಕೊಂಡಿದೆ
ಬಲೆನೊ ಪ್ರೀಮಿಯಂ ಹ್ಯಾಚ್ಬ್ಯಾಕ್ ಆಗಿದ್ದು, ಈ ವಿಭಾಗದಲ್ಲಿ ಹ್ಯುಂಡೈ ಐ20, ಟಾಟಾ ಆಲ್ಟ್ರೊಜ್, ಹೋಂಡಾ ಜಾಝ್, ಫೋಕ್ಸ್ವ್ಯಾಗನ್ ಪೊಲೊ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಮಾರುತಿ ಬಲೆನೊ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.5.90 ಲಕ್ಷ ದಿಂದ 9.10 ಲಕ್ಷಗಳಾಗಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್ಯುವಿ300
ಇದೀಗ ಮಾರುತಿ ಸುಜುಕಿ ಕಂಪನಿಯು ತನ್ನ ಬಲೆನೊ ಕಾರಿನ ಮೇಲೆ ಒಟ್ಟು ರೂ.34,000 ವರಗೂ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಇದರಲ್ಲಿ ರೂ.20,000 ವರೆಗೆ ನಗದು ರಿಯಾಯಿತಿ, ರೂ.10,000 ಮೌಲ್ಯದ ವಿನಿಮಯ ಬೋನಸ್ ಮತ್ತು ರೂ.4,000 ವರೆಗೆ ಕಾರ್ಪೊರೇಟ್ ರಿಯಾಯಿತಿಯನ್ನು ನೀಡಿದೆ.
ಇನ್ನು ಮಾರುತಿ ಸುಜುಕಿ ಕಂಪನಿಯು ತಮ್ಮ ನೆಕ್ಸಾ ಎಕ್ಸ್ಪೀರಿಯೆನ್ಸ್ ಯೂಟ್ಯೂಬ್ ಚಾನೆಲ್ನಲ್ಲಿ ಹೊಸ ಟಿವಿಸಿಯನ್ನು ಇತ್ತೀಚೆಗೆ ಹಂಚಿಕೊಂಡಿದ್ದಾರೆ. ಈ ವೀಡಿಯೊಗೆ ಸಾಂಗ್ ಆಫ್ ದಿ ನೈಟ್ ಎಂದು ಹೆಸರನ್ನು ಇಡಲಾಗಿದೆ. ಇದರಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ನಟಿಸಿದ್ದಾರೆ.
MOST READ: ಜನವರಿ ತಿಂಗಳಿನಲ್ಲಿ ಮಾರುತಿ ಎಕ್ಸ್ಎಲ್6 ಕಾರು ಮಾರಾಟದಲ್ಲಿ ಶೇ.305ರಷ್ಟು ಹೆಚ್ಚಳ
ಮಾರುತಿ ಸುಜುಕಿ 2015 ರಲ್ಲಿ ಬಿಡುಗಡೆಯಾದಗಿನಿಂದ ತಯಾರಕರು ಹ್ಯಾಚ್ಬ್ಯಾಕ್ನಲ್ಲಿ ಸಣ್ಣ ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಬಿಎಸ್ 6 ಮಾಲಿನ್ಯ ನಿಮಕ್ಕೆ ಅನುಗುಣವಾಗಿ ನವೀಕರಣಗೊಂಡ ಮೊದಲ ಹ್ಯಾಚ್ಬ್ಯಾಕ್ ಬಲೆನೊ ಆಗಿದೆ.
ಈ ಸಂದರ್ಭದಲ್ಲಿ ಬಲೆನೊ ಕಾರಿನಲ್ಲಿ ಕೆಲವು ಕಾಸ್ಮೆಟಿಕ್ ಬದಲಾವೆಣೆಗಳನ್ನು ಮಾಡಲಾಗಿತ್ತು. ಇದು ಈಗ ದೊಡ್ಡ ಲೋವರ್ ಗ್ರಿಲ್ನೊಂದಿಗೆ ಪರಿಷ್ಕೃತ ಮುಂಭಾಗದ ಬಂಪರ್ ಅನ್ನು ಪಡೆಯುತ್ತದೆ. ಮುಂಭಾಗದ ಗ್ರಿಲ್ನಲ್ಲಿನ ವಿನ್ಯಾಸವು ಬಿಎಸ್ 4 ಮಾದರಿಯಿಂದ ಭಿನ್ನವಾಗಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ
ಬಲೆನೊ ಕಾರಿನಲ್ಲಿ ಪ್ರೊಜೆಕ್ಟರ್ ಹೆಡ್ಲ್ಯಾಂಪ್ಗಳು, ಎಲ್ಇಡಿ ಡಿಆರ್ಎಲ್ಗಳು (ಟಾಪ್-ಎಂಡ್ ಟ್ರಿಮ್ನೊಂದಿಗೆ ಲಭ್ಯವಿದೆ)ಮತ್ತು ಬಲೆನೊದಲ್ಲಿನ ಇತರ ಪೀಚರ್ ಗಳನ್ನು ಒಳಗೊಂಡಿದ್ದಾರೆ. ಸೈಡ್ ಪ್ರೊಫೈಲ್ಗೆ ಬರುತ್ತಿರುವಾಗ ಡೋರುಗಳ ಹ್ಯಾಂಡಲ್ಗಳಲ್ಲಿ ಕ್ರೋಮ್ ಅಲಂಕರಿಸಲು ಕಂಡುಬರುತ್ತದೆ ಮತ್ತು ಇದು ಸ್ಪೋರ್ಟಿ ಆಗಿ ಕಾಣುವ 16 ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಗಳನ್ನು ಸಹ ಪಡೆಯುತ್ತದೆ.
ಅದರೆ ಮಾರುತಿ ಬಲೆನೊ ಕಾರಿನ ಬಹಳ ವಿಶಾಲವಾದ ಕ್ಯಾಬಿನ್ ಪಡೆಯುತ್ತಾನೆ. ಇದು ಫ್ಯಾಬ್ರಿಕ್ ಸೀಟುಗಳನ್ನು ಪಡೆಯುತ್ತದೆ ಮತ್ತು ಅಪ್ಹೋಲ್ಸ್ಟರಿ ಬ್ಲೂ ಮತ್ತು ಬ್ಲ್ಯಾಕ್ ಥೀಮ್ ಅನ್ನು ಪಡೆಯುತ್ತದೆ. ಇದರಲ್ಲಿ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸ್ಕ್ರೀನ್ ಅನ್ನು ನೀಡಲಾಗಿದೆ.
ಇನ್ನು ಇದರಲ್ಲಿ ಮಧ್ಯದಲ್ಲಿ ಡಿಜಿಟಲ್ ಎಂಐಡಿಯೊಂದಿಗೆ ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಪಡೆಯುತ್ತದೆ. ಇದರೊಂದಿಗೆ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ ಮತ್ತು ಕ್ಲೈಮೇಟ್ ಕಂಟ್ರೋಲ್ ನಂತರಹ ಫೀಚರ್ ಗಳನ್ನು ಕೂಡ ನೀಡಿದ್ದಾರೆ.
ಮಾರುತಿ ಬಲೆನೊ ಕಾರಿನಲ್ಲಿ 1.2 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 82 ಬಿಎಚ್ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಮ್ಯಾನುವಲ್ ಮತ್ತು ಸಿವಿಟಿ ಗೇರ್ ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.
ಮಾರುತಿ ಬಲೆನೊ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿತ್ತು. ಆದರೆ ಬಿಎಸ್ 6 ಮಾಲಿನ್ಯ ನಿಯಮ ಜಾರಿಯಾಗುವ ವೇಳೆ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಲಾಗಿತ್ತು. ಮಾರುತಿ ಸುಜುಕಿ ಕಂಪನಿಯು ಎಲ್ಲಾ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ.