Just In
Don't Miss!
- Sports
ಸತತ ಮೂರನೇ ಸೋಲಿಗೆ ಬೇಸತ್ತ ಡೇವಿಡ್ ವಾರ್ನರ್ ಹೇಳಿದ್ದೇನು?
- News
ತೊಂದರೆಗೊಳಗಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಮತ್ತಷ್ಟು ಲಸಿಕೆ: ಕೇಂದ್ರ
- Finance
UMANG APP: ಇಪಿಎಫ್ಗೆ ಸಂಬಂಧಿಸಿದ ಆ್ಯಪ್, ವೈಶಿಷ್ಟ್ಯಗಳೇನು ತಿಳಿಯಿರಿ
- Movies
ಜಾಕಿ ಚಾನ್ ತಮ್ಮ ಮಗನಿಗೆ ಸಾವಿರಾರು ಕೋಟಿ ಆಸ್ತಿಯನ್ನು ಕೊಡುತ್ತಿಲ್ಲವೇಕೆ?
- Lifestyle
ಭಾನುವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜನಪ್ರಿಯ ಬಲೆನೊ ಕಾರಿನ ಆಕರ್ಷಕ ಟಿವಿಸಿ ಬಿಡುಗಡೆಗೊಳಿಸಿದ ಮಾರುತಿ ಸುಜುಕಿ
ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಸರಣಿಯಲ್ಲಿ ವೈವಿಧ್ಯಮಯ ಮಾದರಿಗಳನ್ನು ಹೊಂದಿದ್ದಾರೆ ಮತ್ತು ಮಾರುತಿಯ ಬಹುತೇಕ ಎಲ್ಲಾ ಮಾದರಿಗಳು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿವೆ.

ಇದರಲ್ಲಿ ಬಲೆನೊ ಹ್ಯಾಚ್‌ಬ್ಯಾಕ್ ಮಾರುತಿ ಸುಜುಕಿ ಕಾರುಗಳ ಸರಣಿಯಲ್ಲಿ ಅತ್ಯಂತ ಯಶಸ್ವಿ ಮಾದರಿಗಳಲ್ಲಿ ಒಂದಾಗಿದೆ. ಇದು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದ್ದು, ಈ ವಿಭಾಗದಲ್ಲಿ ಹ್ಯುಂಡೈ ಐ20, ಟಾಟಾ ಆಲ್ಟ್ರೊಜ್, ಹೋಂಡಾ ಜಾಝ್, ಫೋಕ್ಸ್‌ವ್ಯಾಗನ್ ಪೊಲೊ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಮಾರುತಿ ಬಲೆನೊ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.5.90 ಲಕ್ಷ ದಿಂದ 9.10 ಲಕ್ಷಗಳಾಗಿದೆ.

ಮಾರುತಿ ಸುಜುಕಿ ಕಂಪನಿಯು ತಮ್ಮ ನೆಕ್ಸಾ ಎಕ್ಸ್‌ಪೀರಿಯೆನ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಹೊಸ ಟಿವಿಸಿಯನ್ನುಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೊಗೆ ಸಾಂಗ್ ಆಫ್ ದಿ ನೈಟ್ ಎಂದು ಹೆಸರನ್ನು ಇಡಲಾಗಿದೆ. ಇದರಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ನಟಿಸಿದ್ದಾರೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಅವರು ನೆಕ್ಸಾ ಕಾರುಗಳ ಬ್ರ್ಯಾಂಡ್ ಅಂಬಾಸಿಡರ್ ಕೂಡ ಆಗಿದ್ದಾರೆ. ಮಾರುತಿ ಸುಜುಕಿ 2015 ರಲ್ಲಿ ಮೊದಲ ಬಾರಿಗೆ ಬಲೆನೊ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಅಂದಿನಿಂದ ತಯಾರಕರು ಹ್ಯಾಚ್‌ಬ್ಯಾಕ್‌ನಲ್ಲಿ ಸಣ್ಣ ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡುತ್ತಾ ಬಂದಿದ್ದಾರೆ.

ಬಿಎಸ್ 6 ಮಾಲಿನ್ಯ ನಿಮಕ್ಕೆ ಅನುಗುಣವಾಗಿ ನವೀಕರಣಗೊಂಡ ಮೊದಲ ಹ್ಯಾಚ್‌ಬ್ಯಾಕ್ ಕೂಡ ಬಲೆನೊ ಆಗಿದೆ. ಈ ಸಂದರ್ಭದಲ್ಲಿ ಬಲೆನೊ ಕಾರಿನಲ್ಲಿ ಕೆಲವು ಕಾಸ್ಮೆಟಿಕ್ ಬದಲಾವೆಣೆಗಳನ್ನು ಮಾಡಲಾಗಿತ್ತು. ಇದು ಈಗ ದೊಡ್ಡ ಲೋವರ್ ಗ್ರಿಲ್‌ನೊಂದಿಗೆ ಪರಿಷ್ಕೃತ ಮುಂಭಾಗದ ಬಂಪರ್ ಅನ್ನು ಪಡೆಯುತ್ತದೆ. ಮುಂಭಾಗದ ಗ್ರಿಲ್‌ನಲ್ಲಿನ ವಿನ್ಯಾಸವು ಬಿಎಸ್ 4 ಮಾದರಿಯಿಂದ ಭಿನ್ನವಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಟಿವಿಸಿ ವೀಡಿಯೋದಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು (ಟಾಪ್-ಎಂಡ್ ಟ್ರಿಮ್‌ನೊಂದಿಗೆ ಲಭ್ಯವಿದೆ)ಮತ್ತು ಬಲೆನೊದಲ್ಲಿನ ಇತರ ಪೀಚರ್ ಗಳನ್ನು ಪ್ರದರ್ಶಿಸಿದ್ದಾರೆ.

ಸೈಡ್ ಪ್ರೊಫೈಲ್‌ಗೆ ಬರುತ್ತಿರುವಾಗ ಡೋರುಗಳ ಹ್ಯಾಂಡಲ್‌ಗಳಲ್ಲಿ ಕ್ರೋಮ್ ಅಲಂಕರಿಸಲು ಕಂಡುಬರುತ್ತದೆ ಮತ್ತು ಇದು ಸ್ಪೋರ್ಟಿ ಆಗಿ ಕಾಣುವ 16 ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಸಹ ಪಡೆಯುತ್ತದೆ. ವೀಡಿಯೋದಲ್ಲಿ ಒಳಭಾಗವನ್ನು ಪ್ರದರ್ಶಿಸಲಾಗಿಲ್ಲ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಅದರೆ ಮಾರುತಿ ಬಲೆನೊ ಕಾರಿನ ಬಹಳ ವಿಶಾಲವಾದ ಕ್ಯಾಬಿನ್ ಪಡೆಯುತ್ತಾನೆ. ಇದು ಫ್ಯಾಬ್ರಿಕ್ ಸೀಟುಗಳನ್ನು ಪಡೆಯುತ್ತದೆ ಮತ್ತು ಅಪ್ಹೋಲ್ಸ್ಟರಿ ಬ್ಲೂ ಮತ್ತು ಬ್ಲ್ಯಾಕ್ ಥೀಮ್ ಅನ್ನು ಪಡೆಯುತ್ತದೆ. ಇದರಲ್ಲಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್ ಅನ್ನು ನೀಡಲಾಗಿದೆ.
ಇನ್ನು ಇದರಲ್ಲಿ ಮಧ್ಯದಲ್ಲಿ ಡಿಜಿಟಲ್ ಎಂಐಡಿಯೊಂದಿಗೆ ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಪಡೆಯುತ್ತದೆ. ಇದರೊಂದಿಗೆ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ ಮತ್ತು ಕ್ಲೈಮೇಟ್ ಕಂಟ್ರೋಲ್ ನಂತರಹ ಫೀಚರ್ ಗಳನ್ನು ಕೂಡ ನೀಡಿದ್ದಾರೆ.

ಮಾರುತಿ ಬಲೆನೊ ಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿತ್ತು. ಆದರೆ ಬಿಎಸ್ 6 ಮಾಲಿನ್ಯ ನಿಯಮ ಜಾರಿಯಾಗುವ ವೇಳೆ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಲಾಗಿತ್ತು. ಮಾರುತಿ ಸುಜುಕಿ ಕಂಪನಿಯು ಎಲ್ಲಾ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ.

ಮಾರುತಿ ಬಲೆನೊ ಕಾರಿನಲ್ಲಿ 1.2 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 82 ಬಿಎಚ್‌ಪಿ ಮತ್ತು 113 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಮ್ಯಾನುವಲ್ ಮತ್ತು ಸಿವಿಟಿ ಗೇರ್ ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.