ಹೊಸ ದರ ಪ್ರಕಟ- ಮಾರುತಿ ಸುಜುಕಿ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಆಟೋ ಬಿಡಿಭಾಗಗಳ ಬೆಲೆ ಹೆಚ್ಚಳವಾಗಿರುವ ಪರಿಣಾಮ ಬಹುತೇಕ ಕಾರು ಕಂಪನಿಗಳು ಬೆಲೆ ಹೆಚ್ಚಳ ಮಾಡುತ್ತಿದ್ದು, ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಮಾರುತಿ ಸುಜುಕಿ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಏರಿಕೆ ಮಾಡಿ ಹೊಸ ದರ ಪಟ್ಟಿ ಪ್ರಕಟಿಸಿದೆ.

ಹೊಸ ದರ ಪ್ರಕಟ- ಮಾರುತಿ ಸುಜುಕಿ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಕೋವಿಡ್‌ಗೂ ಮುನ್ನ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಬಿಡಿಭಾಗಗಳ ಕೊರತೆ ಮತ್ತು ದುಬಾರಿಯಾಗುತ್ತಿರುವುದರಿಂದ ವೆಚ್ಚಗಳನ್ನು ನಿರ್ವಹಿಸಲು ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬೆಲೆ ಪರಿಷ್ಕರಣೆ ಮಾಡುತ್ತಿದ್ದು, ಹೊಸ ವಾಹನಗಳು ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಬೆಲೆ ಏರಿಕೆ ಕಂಡಿರುವುದು ಕೂಡಾ ವಾಹನ ಖರೀದಿಯಲ್ಲಿ ಇಳಿಕೆಯಾಗಿದೆ.

ಹೊಸ ದರ ಪ್ರಕಟ- ಮಾರುತಿ ಸುಜುಕಿ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬಹುತೇಕ ವಾಹನಗಳು ಮೂಲ ಬೆಲೆಯಲ್ಲಿ ಶೇ. 1.50ರಿಂದ ಶೇ.2 ರಷ್ಟು ಬೆಲೆ ಹೆಚ್ಚಳವಾಗುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿಯಾಗಿ ರೂ. 50 ಸಾವಿರದಿಂದ ರೂ.1 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ.

ಹೊಸ ದರ ಪ್ರಕಟ- ಮಾರುತಿ ಸುಜುಕಿ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಮಧ್ಯಮ ಗಾತ್ರದ ಕಾರುಗಳ ಬೆಲೆಯಲ್ಲಿ ರೂ. 60 ಸಾವಿರದಿಂದ ರೂ. 1 ಲಕ್ಷಕ್ಕೂ ಅಧಿಕ ಬೆಲೆ ಹೆಚ್ಚಳವಾಗಿದ್ದು, ವಿದೇಶಿ ಮಾರುಕಟ್ಟೆಗಳಿಂದ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್‌ಗಳ ಬೆಲೆ ಹೆಚ್ಚಳವಾಗಿರುವ ಪರಿಣಾಮ ಹೊಸ ವಾಹನ ಖರೀದಿಯು ಮತ್ತಷ್ಟು ಹೊರೆಯಾಗುತ್ತಿದೆ.

ಹೊಸ ದರ ಪ್ರಕಟ- ಮಾರುತಿ ಸುಜುಕಿ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಹೊಸ ದರಪಟ್ಟಿದಲ್ಲಿ ಮಾರುತಿ ಸುಜುಕಿ ನಿರ್ಮಾಣದ ಅರೆನಾ ಮತ್ತು ನೆಕ್ಸಾ ಎರಡು ಮಾದರಿಗಳು ಕೂಡಾ ದರ ಹೆಚ್ಚಳ ಪಡೆದುಕೊಂಡಿದ್ದು, ವಿವಿಧ ಮಾದರಿಗಳಿಗೆ ಅನುಗುಣವಾಗಿ ರೂ.9 ಸಾವಿರದಿಂದ ಗರಿಷ್ಠ ರೂ.34 ಸಾವಿರದಷ್ಟು ಗರಿಷ್ಠ ಏರಿಕೆಯಾಗಿದೆ. ನೆಕ್ಸಾ ಕಾರು ಮಾದರಿಗಳಾದ ಇಗ್ನಿಸ್, ಬಲೆನೊ, ಸಿಯಾಜ್, ಎಕ್ಸ್ಎಲ್6 ಮತ್ತು ಎಸ್-ಕ್ರಾಸ್ ಮತ್ತು ಅರೆನಾದಲ್ಲಿರುವ ಆಲ್ಟೊ, ಇಕೊ, ಎಸ್‌ಪ್ರೆಸ್ಸೊ, ವ್ಯಾಗನ್ಆರ್, ಸ್ವಿಫ್ಟ್, ಸೆಲೆರಿಯೊ, ಡಿಜೈರ್, ವಿಟಾರಾ ಬ್ರೆಝಾ, ಎರ್ಟಿಗಾ ಕಾರುಗಳ ಬೆಲೆ ಹೆಚ್ಚಳವಾಗಿದ್ದು, ಹೊಸ ದರ 16ರಿಂದಲೇ ಅನ್ವಯವಾಗಿವೆ.

ಹೊಸ ದರ ಪ್ರಕಟ- ಮಾರುತಿ ಸುಜುಕಿ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಇನ್ನು ಮಾರುತಿ ಸುಜುಕಿ ಕಂಪನಿಯು ಸದ್ಯ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, ಹೊಸ ಎಮಿಷನ್ ಜಾರಿ ನಂತರ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿ ಪೆಟ್ರೋಲ್ ಮತ್ತು ಸಿಎನ್‌ಜಿ ಆವೃತ್ತಿಗಳನ್ನು ಮಾತ್ರವೇ ಮಾರಾಟ ಮಾಡುತ್ತಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಹೊಸ ದರ ಪ್ರಕಟ- ಮಾರುತಿ ಸುಜುಕಿ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಜನಪ್ರಿಯ ಕಾರು ಮಾದರಿಗಳಾದ ಆಲ್ಟೊ, ವ್ಯಾಗನ್‌ಆರ್, ಸೆಲೆರಿಯೊ, ಎಸ್ ಪ್ರೆಸ್ಸೊ, ಇಕೋ ಮತ್ತು ಎರ್ಟಿಗಾ ಮಾದರಿಯಲ್ಲಿ ಸಿಎನ್‌ಜಿ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಮಾರುತಿ ಸುಜುಕಿ ಕಂಪನಿಯು ಮೊದಲ ಬಾರಿಗೆ ಸಿಎನ್‌ಸಿ ಕಾರುಗಳ ಮಾರಾಟದಲ್ಲಿ ದೊಡ್ಡ ಮಟ್ಟದ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, 2020-21ರ ಅವಧಿಯ ಒಟ್ಟು ಕಾರು ಮಾರಾಟ ಪ್ರಮಾಣದಲ್ಲಿ ಸಿಎನ್‌ಜಿ ಕಾರುಗಳನ್ನು ಮಾರಾಟವು ಶೇ.16.4ರಷ್ಟು ಮುನ್ನಡೆ ಸಾಧಿಸಿದೆ.

ಹೊಸ ದರ ಪ್ರಕಟ- ಮಾರುತಿ ಸುಜುಕಿ ಕಾರುಗಳ ಖರೀದಿ ಮತ್ತಷ್ಟು ದುಬಾರಿ

2020ರ ಅವಧಿಯಲ್ಲಿ ಮಾರಾಟವಾದ 8,63,874 ಯುನಿಟ್‌ನಲ್ಲಿ 1,57,954 ಕಾರುಗಳು ಸಿಎನ್‌ಜಿ ಕಾರು ಮಾದರಿಗಳಾಗಿದ್ದು, ಮಾರುತಿ ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ವ್ಯಾಗನ್ಆರ್ ಮಾದರಿಯು ಅಗ್ರಸ್ಥಾನದಲ್ಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ದರ ಪ್ರಕಟ- ಮಾರುತಿ ಸುಜುಕಿ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ವ್ಯಾಗನ್ಆರ್ ನಂತರ ಸೆಲೆರಿಯೊ, ಆಲ್ಟೊ, ಎಸ್‌ಪ್ರೆಸ್ಸೊ, ಇಕೋ, ಎರ್ಟಿಗಾ ಕಾರುಗಳ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಶೀಘ್ರದಲ್ಲೇ ಮತ್ತಷ್ಟು ಕಾರು ಮಾದರಿಗಳಲ್ಲಿ ಸಿಎನ್‌ಜಿ ಮಾದರಿಯನ್ನು ಜೋಡಣೆ ಮಾಡುವ ಯೋಜನೆಯಲ್ಲಿದೆ.

Article Published On: Saturday, April 17, 2021, 23:46 [IST]
English summary
Maruti Suzuki Car Prices Hike Upto Rs. 34,000. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+