ಜುಲೈ ತಿಂಗಳಿನಲ್ಲಿ 1.62 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಕೋವಿಡ್ 2ನೇ ಅಲೆಯ ಪರಿಣಾಮ ಕುಸಿತವಾಗಿದ್ದ ಆರ್ಥಿಕ ಚಟುವಟಿಕೆಗಳು ಇದೀಗ ನಿಧಾನವಾಗಿ ಚೇತರಿಕೆ ಕಾಣುತ್ತಿದ್ದು, ಹೊಸ ವಾಹನಗಳ ಮಾರಾಟದಲ್ಲಿ ಅತಿ ವೇಗವಾಗಿ ಬೆಳವಣಿಗೆ ಕಂಡುಬರುತ್ತಿದೆ.

ಜುಲೈ ತಿಂಗಳಿನಲ್ಲಿ 1.62 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಕಳೆದ ಮೇ ಮತ್ತು ಜೂನ್ ಅವಧಿಯಲ್ಲಿ ಸಾಕಷ್ಟು ಇಳಿಕೆ ಕಂಡಿದ್ದ ಹೊಸ ವಾಹನ ಮಾರಾಟವು ಇದೀಗ ಸಾಕಷ್ಟು ಸುಧಾರಿಸಿದ್ದು, ಮಾರುತಿ ಸುಜುಕಿ ಕಂಪನಿಯು ಕೂಡಾ ಆರ್ಥಿಕ ಸಂಕಷ್ಟದ ಅವಧಿಯಲ್ಲೂ ಜುಲೈ ತಿಂಗಳಿನಲ್ಲಿ 1.62 ಲಕ್ಷ ಯುನಿಟ್ ಕಾರುಗಳನ್ನು ಮರಾಟ ಮಾಡಿ ಶೇ. 36 ರಷ್ಟು ಬೆಳವಣಿಗೆ ಸಾಧಿಸಿದೆ.

ಜುಲೈ ತಿಂಗಳಿನಲ್ಲಿ 1.62 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿಯು ಜುಲೈನಲ್ಲಿ ಒಟ್ಟು 1,62,462 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಮಿನಿ ಕಾರುಗಳು, ಕಂಪ್ಯಾಕ್ಟ್ ಕಾರುಗಳು ಮತ್ತು ಯುಟಿಲಿಟಿ ಕಾರುಗಳ ವಿಭಾಗದಲ್ಲಿ ತನ್ನದೆ ಆದ ಜನಪ್ರಿಯತೆಯನ್ನು ಮುಂದುವರಿಸಿದೆ.

ಜುಲೈ ತಿಂಗಳಿನಲ್ಲಿ 1.62 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

2020ರ ಜುಲೈ ಅವಧಿಯಲ್ಲಿ 1.08 ಲಕ್ಷ ಕಾರುಗಳನ್ನು ಮಾರಾಟ ಮಾಡಿದ್ದ ಮಾರುತಿ ಸುಜುಕಿ ಕಂಪನಿಯು ಈ ವರ್ಷದ ಜುಲೈನಲ್ಲಿ ಶೇ.36 ರಷ್ಟು ಬೆಳವಣಿಗೆ ಸಾಧಿಸಿದ್ದು, ಆರ್ಥಿಕ ಸಂಕಷ್ಟದ ನಡುವೆಯೂ ಹೊಸ ವಾಹನ ಖರೀದಿ ಹೆಚ್ಚಿಸಲು ಹಲವಾರು ಯೋಜನೆಗಳನ್ನು ರೂಪಿಸಿದ ಪರಿಣಾಮ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ನೆರವಾಗಿದೆ.

ಜುಲೈ ತಿಂಗಳಿನಲ್ಲಿ 1.62 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಮಿನಿ ಕಾರು ವಿಭಾಗದಲ್ಲಿ ಆಲ್ಟೊ, ಎಸ್-ಪ್ರೆಸ್ಸೊ ಕಂಪ್ಯಾಕ್ಟ್ ಕಾರುಗಳ ವಿಭಾಗದಲ್ಲಿ ವ್ಯಾಗನ್‌ಆರ್, ಸೆಲೆರಿಯೊ, ಸ್ವಿಫ್ಟ್, ಇಗ್ನಿಸ್, ಬಲೆನೊ, ಡಿಜೈರ್ ಮಾರಾಟವಾಗುತ್ತಿದ್ದರೆ ಯುಟಿಲಿಟಿ ವಿಭಾಗದಲ್ಲಿ ಎರ್ಟಿಗಾ, ಎಸ್-ಕ್ರಾಸ್, ವಿಟಾರಾ ಬ್ರೆಝಾ, ಎಕ್ಸ್‌ಎಲ್ 6 ಮಾದರಿಗಳಿವೆ.

ಜುಲೈ ತಿಂಗಳಿನಲ್ಲಿ 1.62 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಾರು ಮಾರಾಟ ಬೆಳವಣಿಗೆಗೆ ಮಿನಿ ಮತ್ತು ಕಂಪ್ಯಾಕ್ಟ್ ವಿಭಾಗಗಳ ಕಾರುಗಳೇ ಪ್ರಮುಖ ಕೊಡುಗೆ ನೀಡುತ್ತಿದ್ದು, ಇತ್ತೀಚೆಗೆ ಕಂಪನಿಯು ದೇಶಾದ್ಯಂತ ಪರಿಚಯಿಸಿರುವ ಸ್ಮಾರ್ಟ್ ಫೈನಾನ್ಸ್ ಸೇವೆಗಳು ಗ್ರಾಹಕರನ್ನು ಸೆಳೆಯುತ್ತಿವೆ.

ಜುಲೈ ತಿಂಗಳಿನಲ್ಲಿ 1.62 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿಯು ವಿವಿಧ ಕಾರು ಮಾದರಿಗಳಿಗೆ ಅನುಗುಣವಾಗಿ ಎರಡು ಮಾದರಿಯ ಮಾರಾಟ ಸೌಲಭ್ಯವನ್ನು ಹೊಂದಿದ್ದು, ಸಾಮಾನ್ಯ ಕಾರು ಮಾದರಿಗಳನ್ನು ಅರೆನಾ ಮಾರಾಟ ಮಳಿಗೆಗಳಲ್ಲಿ ಮತ್ತು ಪ್ರೀಮಿಯಂ ಕಾರು ಮಾದರಿಗಳನ್ನು ನೆಕ್ಸಾ ಮಳಿಗೆಗಳಲ್ಲಿ ಮಾರಾಟ ಮಾಡುತ್ತದೆ.

ಜುಲೈ ತಿಂಗಳಿನಲ್ಲಿ 1.62 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಅರೆನಾದಲ್ಲಿ ಎಸ್-ಪ್ರೆಸ್ಸೊ, ಸ್ವಿಫ್ಟ್, ವಿಟಾರಾ ಬ್ರೆಝಾ, ಆಲ್ಟೊ, ವ್ಯಾಗನ್ಆರ್, ಡಿಸೈರ್, ಇಕೋ, ಸೆಲೆರಿಯೊ, ಎರ್ಟಿಗಾ ಕಾರುಗಳ ಮಾರಾಟ ಹೊಂದಿದ್ದರೆ ನೆಕ್ಸಾದಲ್ಲಿ ಇಗ್ನಿಸ್, ಬಲೆನೊ, ಎರ್ಟಿಗಾ ಎಕ್ಸ್6, ಎಸ್-ಕ್ರಾಸ್ ಮತ್ತು ಸಿಯಾಜ್ ಕಾರುಗಳ ಮಾರಾಟ ಸೌಲಭ್ಯ ಹೊಂದಿದೆ.

ಜುಲೈ ತಿಂಗಳಿನಲ್ಲಿ 1.62 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿಯು ಪರಿಚಯಿಸಿರುವ ಹೊಸ ಡಿಜಿಟಲ್ ಫೈನಾನ್ಸ್ ಪ್ಲ್ಯಾಟ್‌ಫಾರ್ಮ್ ಸೇವೆಗಳು ನೆಕ್ಸಾ ಮತ್ತು ಅರೆನಾದಲ್ಲಿನ ಎಲ್ಲಾ ಕಾರು ಮಾದರಿಗಳಿಗೂ ಅನ್ವಯವಾಗಲಿದ್ದು, ಹೊಸ ಕಾರು ಖರೀದಿದಾರರಿಗೆ ಎಂಡ್-ಟು-ಎಂಡ್ ಮತ್ತು ಲೈವ್ ಕಾರ್ ಫೈನಾನ್ಸ್ ಸೇವೆ ಒದಗಿಸುವ ಗುರಿ ಹೊಂದಿದೆ.

ಜುಲೈ ತಿಂಗಳಿನಲ್ಲಿ 1.62 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಕಾರ್ ಫೈನಾನ್ಸ್ ಆಯ್ಕೆಯನ್ನು ಸರಳಗೊಳಿಸುವ ಉದ್ದೇಶದಿಂದ ಸಂಪೂರ್ಣ ಆಟೋ ಫೈನಾನ್ಸ್ ಅಗತ್ಯಗಳಿಗಾಗಿ ‘ಒನ್ ಸ್ಟಾಪ್ ಶಾಪ್' ಸಿದ್ದಗೊಳಿಸಲಾಗಿದ್ದು, ಗ್ರಾಹಕರು ತಮ್ಮ ಅಗತ್ಯತೆ ಮತ್ತು ಅನುಕೂಲಕ್ಕೆ ತಕ್ಕಂತೆ ಫೈನಾನ್ಸ್ ಆಯ್ಕೆಗಳನ್ನು ಪಡೆದುಕೊಳ್ಳಬಹುದು.

ಜುಲೈ ತಿಂಗಳಿನಲ್ಲಿ 1.62 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿಯು ಸದ್ಯ ಎಚ್‌ಡಿಎಫ್‌ಸಿ ಬ್ಯಾಂಕ್, ಯೆಸ್ ಬ್ಯಾಂಕ್, ಐಸಿಸಿಐ ಬ್ಯಾಂಕ್, ಇಂಡಸ್ಇಂಡ್ ಬ್ಯಾಂಕ್, ಚೋಳಮಂಡಲಂ ಫೈನಾನ್ಸ್, ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್, ಮಹೀಂದ್ರಾ ಫೈನಾನ್ಸ್ ಮತ್ತು ಕೊಟಕ್ ಮಹೀಂದ್ರಾ ಪ್ರೈಮ್ ಜೊತೆ ಪಾಲುದಾರಿಕೆ ಹೊಂದಿದ್ದು, ಸಾಕಷ್ಟು ಹಣಕಾಸು ಸಂಸ್ಥೆಗಳ ವಿವಿಧ ಸಾಲದ ಆಯ್ಕೆಗಳು ಗ್ರಾಹಕರಿಗೆ ಲಭ್ಯವಿದೆ.

Most Read Articles

Kannada
English summary
Maruti Car Sales July 2021. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X