ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಳ ಮಾಡಿದ ಮಾರುತಿ ಸುಜುಕಿ

ಆಟೋ ಉತ್ಪಾದನಾ ಬಿಡಿಭಾಗಗಳ ಬೆಲೆ ಹೆಚ್ಚಳ ಪರಿಣಾಮ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಮಾರುತಿ ಸುಜುಕಿ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಏರಿಕೆ ಮಾಡಿ ಹೊಸ ದರ ಪಟ್ಟಿ ಬಿಡುಗಡೆ ಮಾಡಿದೆ.

ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಳ ಮಾಡಿದ ಮಾರುತಿ ಸುಜುಕಿ

2021ರ ಅವಧಿಯಲ್ಲೇ ಈಗಾಗಲೇ ಒಂದು ಬಾರಿ ಪ್ರಮುಖ ಕಾರುಗಳ ಬೆಲೆಯಲ್ಲಿ ಹೆಚ್ಚಳವಾಗಿದ್ದು, ಇದೀಗ ಎರಡನೇ ಬಾರಿಗೆ ಏಪ್ರಿಲ್ ತಿಂಗಳಿನಲ್ಲಿ ಮತ್ತೆ ಹೊಸ ವಾಹನಗಳ ಬೆಲೆಯಲ್ಲಿ ಏರಿಕೆ ಮಾಡಲಾಗುತ್ತಿದೆ. ಮಾರುತಿ ಸುಜುಕಿಯು ಕೂಡಾ ಪೂರ್ವ ನಿಗದಿಯೆಂತೆ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯಲ್ಲಿ ಹೆಚ್ಚಳ ಮಾಡಿದ್ದು, ಹೊಸ ದರಪಟ್ಟಿಯ ಪ್ರಮುಖ ಕಾರು ಮಾದರಿಗಳು ಶೇ.1.60ರಷ್ಟು ದುಬಾರಿಯಾಗಿವೆ.

ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಳ ಮಾಡಿದ ಮಾರುತಿ ಸುಜುಕಿ

ಈ ಹಿಂದೆ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಬಿಡಿಭಾಗಗಳ ವೆಚ್ಚವು ನಿರಂತರವಾಗಿ ಹೆಚ್ಚುತ್ತಿರುವ ಪರಿಣಾಮ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬೆಲೆ ಪರಿಷ್ಕರಣೆ ಮಾಡುತ್ತಿದ್ದು, ಹೊಸ ವಾಹನಗಳು ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಬೆಲೆ ಏರಿಕೆ ಕಂಡಿವೆ.

ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಳ ಮಾಡಿದ ಮಾರುತಿ ಸುಜುಕಿ

ಆಟೋ ಕಂಪನಿಗಳು ವಿವಿಧ ಕಾರು ಮಾದರಿಗಳಿಗೆ ಅನುಗುಣವಾಗಿ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಶೇ. 1.50ರಿಂದ ಶೇ.2 ರಷ್ಟು ಬೆಲೆ ಹೆಚ್ಚಳವಾಗುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿಯಾಗಿ ರೂ. 50 ಸಾವಿರದಿಂದ ರೂ.1 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ.

ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಳ ಮಾಡಿದ ಮಾರುತಿ ಸುಜುಕಿ

ಮಧ್ಯಮ ಗಾತ್ರದ ಕಾರುಗಳ ಬೆಲೆಯಲ್ಲಿ ರೂ. 60 ಸಾವಿರದಿಂದ ರೂ. 1 ಲಕ್ಷಕ್ಕೂ ಅಧಿಕ ಬೆಲೆ ಹೆಚ್ಚಳವಾಗಿದ್ದು, ವಿದೇಶಿ ಮಾರುಕಟ್ಟೆಗಳಿಂದ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್‌ಗಳ ಬೆಲೆ ಹೆಚ್ಚಳವಾಗಿರುವ ಪರಿಣಾಮ ಹೊಸ ವಾಹನ ಖರೀದಿಯು ಮತ್ತಷ್ಟು ಹೊರೆಯಾಗುತ್ತಿದೆ. ಹೊಸ ದರಪಟ್ಟಿದಲ್ಲಿ ಮಾರುತಿ ಸುಜುಕಿ ನಿರ್ಮಾಣದ ಅರೆನಾ ಮತ್ತು ನೆಕ್ಸಾ ಎರಡು ಮಾದರಿಗಳು ದರ ಹೆಚ್ಚಳ ಪಡೆದುಕೊಂಡಿವೆ.

ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಳ ಮಾಡಿದ ಮಾರುತಿ ಸುಜುಕಿ

ನೆಕ್ಸಾ ಕಾರು ಮಾದರಿಗಳಾದ ಇಗ್ನಿಸ್, ಬಲೆನೊ, ಸಿಯಾಜ್, ಎಕ್ಸ್ಎಲ್6 ಮತ್ತು ಎಸ್-ಕ್ರಾಸ್ ಮತ್ತು ಅರೆನಾದಲ್ಲಿರುವ ಆಲ್ಟೊ, ಇಕೊ, ಎಸ್‌ಪ್ರೆಸ್ಸೊ, ವ್ಯಾಗನ್ಆರ್, ಸ್ವಿಫ್ಟ್, ಸೆಲೆರಿಯೊ, ಡಿಜೈರ್, ವಿಟಾರಾ ಬ್ರೆಝಾ, ಎರ್ಟಿಗಾ ಕಾರುಗಳ ಬೆಲೆ ಹೆಚ್ಚಳವಾಗಿದ್ದು, ಹೊಸ ದರ ಇಂದಿನಿಂದ ಅನ್ವಯವಾಗಿವೆ.

ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಳ ಮಾಡಿದ ಮಾರುತಿ ಸುಜುಕಿ

ಇನ್ನು ಮಾರುತಿ ಸುಜುಕಿ ಕಂಪನಿಯು ಸದ್ಯ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, ಹೊಸ ಎಮಿಷನ್ ಜಾರಿ ನಂತರ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿ ಪೆಟ್ರೋಲ್ ಮತ್ತು ಸಿಎನ್‌ಜಿ ಆವೃತ್ತಿಗಳನ್ನು ಮಾತ್ರವೇ ಮಾರಾಟ ಮಾಡುತ್ತಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಳ ಮಾಡಿದ ಮಾರುತಿ ಸುಜುಕಿ

ಜನಪ್ರಿಯ ಕಾರು ಮಾದರಿಗಳಾದ ಆಲ್ಟೊ, ವ್ಯಾಗನ್‌ಆರ್, ಸೆಲೆರಿಯೊ, ಎಸ್ ಪ್ರೆಸ್ಸೊ, ಇಕೋ ಮತ್ತು ಎರ್ಟಿಗಾ ಮಾದರಿಯಲ್ಲಿ ಸಿಎನ್‌ಜಿ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಮಾರುತಿ ಸುಜುಕಿ ಕಂಪನಿಯು ಮೊದಲ ಬಾರಿಗೆ ಸಿಎನ್‌ಸಿ ಕಾರುಗಳ ಮಾರಾಟದಲ್ಲಿ ದೊಡ್ಡ ಮಟ್ಟದ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, 2020-21ರ ಅವಧಿಯ ಒಟ್ಟು ಕಾರು ಮಾರಾಟ ಪ್ರಮಾಣದಲ್ಲಿ ಸಿಎನ್‌ಜಿ ಕಾರುಗಳನ್ನು ಮಾರಾಟವು ಶೇ.16.4ರಷ್ಟು ಮುನ್ನಡೆ ಸಾಧಿಸಿದೆ.

ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಳ ಮಾಡಿದ ಮಾರುತಿ ಸುಜುಕಿ

2020ರ ಅವಧಿಯಲ್ಲಿ ಮಾರಾಟವಾದ 8,63,874 ಯುನಿಟ್‌ನಲ್ಲಿ 1,57,954 ಕಾರುಗಳು ಸಿಎನ್‌ಜಿ ಕಾರು ಮಾದರಿಗಳಾಗಿದ್ದು, ಮಾರುತಿ ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ವ್ಯಾಗನ್ಆರ್ ಮಾದರಿಯು ಅಗ್ರಸ್ಥಾನದಲ್ಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಳ ಮಾಡಿದ ಮಾರುತಿ ಸುಜುಕಿ

ವ್ಯಾಗನ್ಆರ್ ನಂತರ ಸೆಲೆರಿಯೊ, ಆಲ್ಟೊ, ಎಸ್‌ಪ್ರೆಸ್ಸೊ, ಇಕೋ, ಎರ್ಟಿಗಾ ಕಾರುಗಳ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಶೀಘ್ರದಲ್ಲೇ ಮತ್ತಷ್ಟು ಕಾರು ಮಾದರಿಗಳಲ್ಲಿ ಸಿಎನ್‌ಜಿ ಮಾದರಿಯನ್ನು ಜೋಡಣೆ ಮಾಡುವ ಯೋಜನೆಯಲ್ಲಿದೆ.

Most Read Articles

Kannada
English summary
Maruti Suzuki Cars Prices Increased On Select Models. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X