ವರ್ಷದಲ್ಲಿ ನಾಲ್ಕನೇ ಬಾರಿಗೆ ಕಾರುಗಳ ಬೆಲೆ ಹೆಚ್ಚಳಕ್ಕೆ ಸಜ್ಜಾದ Maruti Suzuki

ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ Maruti Suzuki ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸುವ ಸಿದ್ದತೆಯಲ್ಲಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಕಾರುಗಳ ಬೆಲೆ ಹೆಚ್ಚಳಕ್ಕೆ ಸಜ್ಜಾದ Maruti Suzuki

ಕೋವಿಡ್‌ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ಕೊರತೆಯು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದ್ದು, ಹೆಚ್ಚುತ್ತಿರುವ ವೆಚ್ಚಗಳ ನಿರ್ವಹಣೆಗಾಗಿ ಆಟೋ ಕಂಪನಿಗಳು ನಿರಂತರವಾಗಿ ಬೆಲೆ ಪರಿಷ್ಕರಣೆ ಮಾಡುತ್ತಿವೆ. Maruti Suzuki ಸಹ ಸೆಪ್ಟೆಂಬರ್ 1ರಿಂದ ಬೆಲೆ ಹೆಚ್ಚಳ ಮಾಡುತ್ತಿದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ವಾಹನ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಕಾರುಗಳ ಬೆಲೆ ಹೆಚ್ಚಳಕ್ಕೆ ಸಜ್ಜಾದ Maruti Suzuki

ಕೋವಿಡ್‌ಗೂ ಮುನ್ನ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ದರ ಹೆಚ್ಚಿಸುತ್ತಿದ್ದು, 2021ರಲ್ಲೇ Maruti Suzuki ಕಂಪನಿಯು ನಾಲ್ಕನೇ ಬಾರಿಗೆ ದರ ಹೆಚ್ಚಿಸುತ್ತಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಕಾರುಗಳ ಬೆಲೆ ಹೆಚ್ಚಳಕ್ಕೆ ಸಜ್ಜಾದ Maruti Suzuki

ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬಹುತೇಕ ವಾಹನ ತಯಾರಕ ಕಂಪನಿಗಳು ತಮ್ಮ ವಾಹನಗಳ ಮೂಲ ಬೆಲೆಯಲ್ಲಿ ಶೇ.1 ರಿಂದ ಶೇ.2 ರಷ್ಟು ಬೆಲೆ ಹೆಚ್ಚಿಸುತ್ತಿದ್ದು, ಕಳೆದ ಕೆಲ ತಿಂಗಳಿನಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿ ರೂ. 60 ಸಾವಿರದಿಂದ ರೂ.1.20 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಕಾರುಗಳ ಬೆಲೆ ಹೆಚ್ಚಳಕ್ಕೆ ಸಜ್ಜಾದ Maruti Suzuki

ಮಧ್ಯಮ ಗಾತ್ರದ ಕಾರುಗಳ ಬೆಲೆಯಲ್ಲಿ ರೂ. 80 ಸಾವಿರದಿಂದ ರೂ. 1.50 ಲಕ್ಷದವರೆಗೆ ಬೆಲೆ ಹೆಚ್ಚಳವಾಗಿದ್ದು, ವಿದೇಶಿ ಮಾರುಕಟ್ಟೆಗಳಿಂದ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್‌ಗಳ ಬೆಲೆ ಹೆಚ್ಚಳವಾಗುತ್ತಿರುವ ಪರಿಣಾಮವೇ ಹೊಸ ವಾಹನ ಖರೀದಿಯು ಮತ್ತಷ್ಟು ಹೊರೆಯಾಗುತ್ತಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಕಾರುಗಳ ಬೆಲೆ ಹೆಚ್ಚಳಕ್ಕೆ ಸಜ್ಜಾದ Maruti Suzuki

ಬಿಡಿಭಾಗಗಳ ಬೆಲೆ ಹೆಚ್ಚಳ ಪರಿಣಾಮ ಕಳೆದ ಜನವರಿ, ಏಪ್ರಿಲ್‌ ಮತ್ತು ಜೂನ್‌ನಲ್ಲಿ ಬೆಲೆ ಏರಿಕೆ ಮಾಡಿದ್ದ ಮಾರುತಿ ಸುಜುಕಿಯು ಇದೀಗ ಮತ್ತೊಮ್ಮೆ ದರ ಹೆಚ್ಚಿಸುತ್ತಿದ್ದು, ಸೆಪ್ಟೆಂಬರ್ 1ರಿಂದಲೇ ಅನ್ವಯವಾಗುವಂತೆ ಹೊಸ ದರ ಪಟ್ಟಿ ಬಿಡುಗಡೆ ಮಾಡಲು ಸಿದ್ದವಾಗಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಕಾರುಗಳ ಬೆಲೆ ಹೆಚ್ಚಳಕ್ಕೆ ಸಜ್ಜಾದ Maruti Suzuki

ಹೊಸ ಕಾರುಗಳಿಗೆ ಬೇಡಿಕೆ ಹೆಚ್ಚಿದ್ದರೂ ಕೂಡಾ ಬಿಡಿಭಾಗಗಳ ಕೊರತೆ ಹಿನ್ನಲೆಯಲ್ಲಿ ವಾಹನ ಮಾರಾಟದಲ್ಲಿ ಪ್ರಮುಖ ಕಾರು ಕಂಪನಿಗಳು ಹಿನ್ನಡೆ ಅನುಭವಿಸುತ್ತಿದ್ದು, ಜಾಗತಿಕ ಮಾರುಕಟ್ಟೆಯಲ್ಲಿನ ಎಲೆಕ್ಟ್ರಾನಿಕ್ ಚಿಪ್ ಕೊರತೆಯು ಕಾರಿನ ಬೆಲೆ ಹೆಚ್ಚಳಕ್ಕೆ ಕಾರಣವಾಗಿರುವುದಲ್ಲದೆ ವಿತರಣೆ ಅವಧಿಯಲ್ಲೂ ಹೆಚ್ಚಳಕ್ಕೆ ಕಾರಣವಾಗಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಕಾರುಗಳ ಬೆಲೆ ಹೆಚ್ಚಳಕ್ಕೆ ಸಜ್ಜಾದ Maruti Suzuki

ಎಲೆಕ್ಟ್ರಾನಿಕ್ ಚಿಪ್(ಸೆಮಿ ಕಂಡಕ್ಟರ್) ಕೊರತೆಯು ಆಟೋ ಉತ್ಪಾದನಾ ಕಂಪನಿಗಳಿಗೆ ಸಂಕಷ್ಟಕ್ಕಿಡು ಮಾಡಿದ್ದು, ಹೊಸ ವಾಹನಗಳಿಗೆ ಹೆಚ್ಚಿನ ಬೇಡಿಕೆಯಿದ್ದರೂ ಉತ್ಪಾದನೆಯನ್ನು ತೀವ್ರಗೊಳಿಸಲು ಅಗತ್ಯವಾಗಿರುವ ಎಲೆಕ್ಟ್ರಾನಿಕ್ ಚಿಪ್ ಕೊರತೆಯು ಕಾಡುತ್ತಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಕಾರುಗಳ ಬೆಲೆ ಹೆಚ್ಚಳಕ್ಕೆ ಸಜ್ಜಾದ Maruti Suzuki

ಕಳೆದ ವರ್ಷದ ಕೋವಿಡ್ ಅವಧಿಯಲ್ಲಿ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ವಾಹನ ಬಿಡಿಭಾಗಗಳ ಪೂರೈಕೆ ಸರಪಳಿಯಲ್ಲಿ ಆದ ಅಸ್ತವ್ಯಸ್ತವು ಇದೀಗ ಹೊಸ ವಾಹಗಳ ಉತ್ಪಾದನೆ ಕುಂಠಿತಗೊಳ್ಳಲು ಪ್ರಮುಖ ಕಾರಣವಾಗಿದ್ದು, ಸೆಮಿ ಕಂಡಕ್ಟರ್‌ಗಳಿಗಾಗಿ ಭಾರತೀಯ ಆಟೋ ಉದ್ಯಮವು ಸಂಪೂರ್ಣವಾಗಿ ವಿದೇಶಿ ಕಂಪನಿಗಳನ್ನೇ ಅವಲಂಬಿಸಿವೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಕಾರುಗಳ ಬೆಲೆ ಹೆಚ್ಚಳಕ್ಕೆ ಸಜ್ಜಾದ Maruti Suzuki

ಕೋವಿಡ್ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ ಆಟೋಮೊಬೈಲ್ ಜೊತೆಗೆ ಪ್ರಮುಖ ಎಲೆಕ್ಟ್ರಾನಿಕ್ ಸಾಧನಗಳಾದ ಲ್ಯಾಪ್‌ಟಾಪ್‌, ಮೊಬೈಲ್‌ಗಳು ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನಗಳಿಗೆ ಭಾರೀ ಬೇಡಿಕೆ ಹರಿದುಬರುತ್ತಿದ್ದು, ಆಟೋಮೊಬೈಲ್ ವಲಯಕ್ಕೆ ಹೆಚ್ಚಿನ ಮಟ್ಟದಲ್ಲಿ ಪೂರೈಕೆಯಾಗುತ್ತಿದ್ದ ಸೆಮಿ ಕಂಡಕ್ಟರ್ ಪೂರೈಕೆಯು ಎಲೆಕ್ಟ್ರಾನಿಕ್ ಸಾಧನ ಉತ್ಪಾದನಾ ಕಂಪನಿಗಳಿಗೆ ಹೆಚ್ಚಿನ ಮಟ್ಟದಲ್ಲಿ ಪೂರೈಕೆಯಾಗುತ್ತಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಕಾರುಗಳ ಬೆಲೆ ಹೆಚ್ಚಳಕ್ಕೆ ಸಜ್ಜಾದ Maruti Suzuki

ಹೀಗಾಗಿ ಸೆಮಿ ಕಂಡಕ್ಟರ್ ಪೂರೈಕೆ ತಗ್ಗಿರುವುದಿಂದ ಆಟೋ ಮೊಬೈಲ್ ಕ್ಷೇತ್ರದ ಮೇಲೆ ಪರಿಣಾಮ ಉಂಟು ಮಾಡುತ್ತಿದ್ದು, ಎಲೆಕ್ಟ್ರಾನಿಕ್ ಚಿಪ್ ಕೊರತೆಯು ಕೇವಲ ಭಾರತದಲ್ಲಿ ಮಾತ್ರವಲ್ಲ ಯುರೋಪ್, ಅಮೆರಿಕಾ ಹಾಗೂ ಏಷ್ಯಾದ ಪ್ರಮುಖ ದೇಶಗಳಲ್ಲಿನ ವಾಹನ ಉತ್ಪಾದನೆಯು ಮೇಲೂ ಪರಿಣಾಮ ಉಂಟುಮಾಡುತ್ತಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಕಾರುಗಳ ಬೆಲೆ ಹೆಚ್ಚಳಕ್ಕೆ ಸಜ್ಜಾದ Maruti Suzuki

ಇದರಿಂದ ಸೆಮಿ ಕಂಡಕ್ಟರ್ ಕೊರತೆಯೂ ವಾಹನ ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತಿದ್ದು, Maruti Suzuki ಸೇರಿದಂತೆ ಪ್ರಮುಖ ಕಾರು ಕಂಪನಿಗಳು ಸೆಪ್ಟೆಂಬರ್‌ನಲ್ಲಿ ಬೆಲೆ ಹೆಚ್ಚಳಕ್ಕೆ ಸಿದ್ದವಾಗುತ್ತಿವೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಕಾರುಗಳ ಬೆಲೆ ಹೆಚ್ಚಳಕ್ಕೆ ಸಜ್ಜಾದ Maruti Suzuki

ಹೊಸ ದರಪಟ್ಟಿಯಲ್ಲಿ ಅರೆನಾ ಮತ್ತು ನೆಕ್ಸಾ ಎರಡು ಮಾದರಿಗಳಲ್ಲೂ ದರ ಹೆಚ್ಚಿಸಲಾಗುತ್ತಿದ್ದು, ವಿವಿಧ ಮಾದರಿಗಳಿಗೆ ಅನುಗುಣವಾಗಿ ಕಂಪನಿಯು ರೂ. 5 ಸಾವಿರದಿಂದ ರೂ. 20 ಸಾವಿರ ತನಕ ಬೆಲೆ ಏರಿಕೆ ಮಾಡಬಹುದಾಗಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಕಾರುಗಳ ಬೆಲೆ ಹೆಚ್ಚಳಕ್ಕೆ ಸಜ್ಜಾದ Maruti Suzuki

Maruti Suzuki ವಿವಿಧ ಕಾರು ಮಾದರಿಗಳಿಗೆ ಅನುಗುಣವಾಗಿ ಎರಡು ಮಾದರಿಯ ಮಾರಾಟ ಸೌಲಭ್ಯವನ್ನು ಹೊಂದಿದ್ದು, ಸಾಮಾನ್ಯ ಕಾರು ಮಾದರಿಗಳನ್ನು ಅರೆನಾ ಮಾರಾಟ ಮಳಿಗೆಗಳಲ್ಲಿ ಮತ್ತು ಪ್ರೀಮಿಯಂ ಕಾರು ಮಾದರಿಗಳನ್ನು ನೆಕ್ಸಾ ಮಾರಾಟ ಮಳಿಗೆಗಳಲ್ಲಿ ಮಾರಾಟ ಮಾಡುತ್ತದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಕಾರುಗಳ ಬೆಲೆ ಹೆಚ್ಚಳಕ್ಕೆ ಸಜ್ಜಾದ Maruti Suzuki

ಅರೆನಾ ಮಾರಾಟ ಮಳಿಗೆಯಲ್ಲಿ ಎಸ್-ಪ್ರೆಸ್ಸೊ, ಸ್ವಿಫ್ಟ್, ವಿಟಾರಾ ಬ್ರೆಝಾ, ಆಲ್ಟೊ, ವ್ಯಾಗನ್ಆರ್, ಡಿಸೈರ್, ಇಕೋ, ಸೆಲೆರಿಯೊ, ಎರ್ಟಿಗಾ ಕಾರುಗಳ ಮಾರಾಟ ಸೌಲಭ್ಯ ಹೊಂದಿದ್ದರೆ ನೆಕ್ಸಾದಲ್ಲಿ ಇಗ್ನಿಸ್, ಬಲೆನೊ, ಎರ್ಟಿಗಾ ಎಕ್ಸ್6, ಎಸ್-ಕ್ರಾಸ್ ಮತ್ತು ಸಿಯಾಜ್ ಕಾರುಗಳ ಮಾರಾಟ ಸೌಲಭ್ಯ ಹೊಂದಿದೆ.

Article Published On: Monday, August 30, 2021, 14:57 [IST]
English summary
Maruti suzuki cars prices to increase fourth time hike in 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+