Just In
- 57 min ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 3 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 5 hrs ago
ವಾರದ ಪ್ರಮುಖ ಸುದ್ದಿ: ಏರ್‌ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 15 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- News
ಊಹಾಪೋಹಗಳಿಗೆ ತೆರೆ: ಖ್ಯಾತ ನಟ ಮಿಥುನ್ ಚಕ್ರವರ್ತಿ ಬಿಜೆಪಿ ಸೇರ್ಪಡೆ
- Sports
ಭಾರತದ ಸಾಧನೆಗೆ ಅಭಿನಂದನೆ ಸಲ್ಲಿಸಿದ ಹಸೆಮಣೆಯೇರಲು ಸಿದ್ಧವಾಗಿರುವ ವೇಗಿ ಬೂಮ್ರಾ
- Movies
'ಕೋಟಿಗೊಬ್ಬ' ಸುದೀಪ್ ನೋಡಿ ಅಭಿಮಾನಿಗಳು ಫುಲ್ ಖುಷ್
- Finance
ಕ್ರಿಪ್ಟೋಕರೆನ್ಸಿ ಬಗ್ಗೆ ಕುತೂಹಲದ ಹೇಳಿಕೆ ಕೊಟ್ಟ ಸಚಿವ ಠಾಕೂರ್
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜನವರಿ ತಿಂಗಳಿನಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರು ಮಾರಾಟದಲ್ಲಿ ಶೇ.91ರಷ್ಟು ಹೆಚ್ಚಳ
ಮಾರುತಿ ಸುಜುಕಿ ಎರ್ಟಿಗಾ ಬಹಳ ವರ್ಷಗಳಿಂದ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುತ್ತಿರುವ ಎಂಪಿವಿಗಳಲ್ಲಿ ಒಂದಾಗಿದೆ, ಇದರ ಜನಪ್ರಿಯತೆಯು ನಿರಂತರವಾಗಿ ಬೆಳೆಯುತ್ತಿದ್ದು, ಭಾರತಿಯ ಮಾರುಕಟ್ಟೆಯಲ್ಲಿ ಈ ಎಂಪಿವಿಗೆ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ.

2021ರ ಜನವರಿ ತಿಂಗಳಲ್ಲಿ ಮಾರುತಿ ಸುಜುಕಿ ಎರ್ಟಿಗಾದ 9,565 ಯುನಿಟ್‌ಗಳು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗಿವೆ. ಕಳೆದ ವರ್ಷ ಇದೇ ತಿಂಗಳಲ್ಲಿ ಎರ್ಟಿಗಾದ 4,997 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ವರ್ಷದ ಮಾರಾಟಕ್ಕೆ ಹೋಲಿಸಿದರೆ ಶೇ.91 ರಷ್ಟು ಬಳೆವಣಿಗೆಯನ್ನು ಸಾಧಿಸಿದೆ. ಇನ್ನು ಕಳೆದ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿ ಎರ್ಟಿಗಾ ಆಗಿದೆ.

2020ರ ಡಿಸೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ ಎರ್ಟಿಗಾ 9,177 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಮಾಸಿಕ ಮಾರಾಟದಲ್ಲಿ ಶೇ.4 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.
MOST READ: ಜನವರಿ ತಿಂಗಳಿನಲ್ಲಿ ಮಾರುತಿ ಎಕ್ಸ್‌ಎಲ್6 ಕಾರು ಮಾರಾಟದಲ್ಲಿ ಶೇ.305ರಷ್ಟು ಹೆಚ್ಚಳ

ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಯ ಬಗ್ಗೆ ಹೇಳುವುದಾದರೆ, ಇದರಲ್ಲಿ ಏಕೈಕ 1.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ, ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ನೊಂದಿಗೆ ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ. ಪ್ರಸ್ತುತ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.7.69 ಲಕ್ಷಗಳಾಗಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಮಾರುತಿ ಸುಜುಕಿ ಎರ್ಟಿಗಾ ಕಾರಿನಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಟೈಲ್ ಲ್ಯಾಂಪ್‌ಗಳು, 15 ಇಂಚಿನ ವ್ಹೀಲ್ ಗಳು, ಆಂಡ್ರಾಯ್ಡ್ ಆಟೋ ಮತ್ತು ಕಾರ್‌ಪ್ಲೇಯೊಂದಿಗೆ 7 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ.

ಇದರೊಂದಿಗೆ ಪುಶ್-ಬಟನ್ ಸ್ಟಾರ್ಟ್-ಸ್ಟಾಪ್, ಹಿಂಭಾಗದ ಎಸಿಯೊಂದಿಗೆ ಆಟೋ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಕಪ್ ಹೋಲ್ಡರ್ಸ್ ಮತ್ತು ಸ್ಪೀಕರ್ ಆಡಿಯೊ ಸಿಸ್ಟಂ ಅನ್ನು ಅಳವಡಿಸಲಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇನ್ನು ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಯಲ್ಲಿ ಸುರಕ್ಷತೆಗಾಗಿ, ಎಂಪಿವಿ ಇಬಿಡಿ, ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು, ಇಎಸ್‌ಪಿ, ಹಿಲ್ ಹೋಲ್ಡ್ ಕಂಟ್ರೋಲ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಡ್ಯುಯಲ್ ಫ್ರಂಟಲ್ ಏರ್‌ಬ್ಯಾಗ್ ಮತ್ತು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಆಂಕಾರೇಜ್‌ಗಳೊಂದಿಗೆ ಎಬಿಎಸ್ ಅನ್ನು ಪಡೆಯುತ್ತದೆ.

ಇನ್ನು ಮಾರುತಿ ಸುಜುಕಿ ಎರ್ಟಿಗಾ ಭಾರತೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಮರಾಜೋ ಎಂಪಿವಿಗೆ ಪೈಪೋಟಿ ನೀಡುತ್ತದೆ. ಇನ್ನು ಕುತೂಹಲಕಾರಿ ವಿಷಯ ಅಂದರೆ ಅದೇ ಸರಣಿಯ ಎಕ್ಸ್‌ಎಲ್6 ಪ್ರೀಮಿಯಂ ಮಾದರಿಯ ಮಾರಾಟ ಎರ್ಟಿಗಾದಿಂದ ಕುಸಿತವಾಗಿದೆ.

ಟೊಯೊಟಾ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಎಂಪಿವಿಯನ್ನು ಪರಿಚಯಿಸಲು ಸಜ್ಜಾಗುತ್ತಿದೆ. ಈ ಹೊಸ ಟೊಯೊಟಾ ಎಂಪಿವಿಯು ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಯನ್ನು ಆಧರಿಸಿ ಅಭಿವೃದ್ದಿ ಪಡಿಸಲಾಗುತ್ತದೆ. ಒಟ್ಟಿನಲ್ಲಿ ಎಂಪಿವಿ ವಿಭಾಗದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಮಾರಾಟದಲ್ಲಿ ತನ್ನ ಮಿಂಚಿನ ಓಟ ಮುಂದುವರೆಸಿದೆ.