ಲಾಕ್‌ಡೌನ್ ಹಿನ್ನೆಲೆಯಲ್ಲಿ ಫ್ರೀ ಸರ್ವೀಸ್, ವಾರಂಟಿ ಅವಧಿಯನ್ನು ವಿಸ್ತರಿಸಿದ ಮಾರುತಿ ಸುಜುಕಿ

ದೇಶಾದ್ಯಂತ ಕರೋನಾ ವೈರಸ್ ಎರಡನೇ ಅಲೆಯ ಆರ್ಭಟ ಹೆಚ್ಚಾಗಿದೆ. ಪ್ರತಿ ದಿನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ದೇಶದ ಹಲವು ಭಾಗಗಳಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಈ ಕಾರಣದಿಂದಾಗಿ ಬಹುತೇಕ ವಾಹನ ತಯಾರಕ ಕಂಪನಿಗಳು ತಮ್ಮ ಸರ್ವೀಸ್ ಸೆಂಟರ್ ಹಾಗೂ ಶೋರೂಂಗಳನ್ನು ಮುಚ್ಚಿವೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಫ್ರೀ ಸರ್ವೀಸ್, ವಾರಂಟಿ ಅವಧಿಯನ್ನು ವಿಸ್ತರಿಸಿದ ಮಾರುತಿ ಸುಜುಕಿ

ಈ ಪರಿಸ್ಥಿತಿಯಲ್ಲಿ ಕೆಲವು ವಾಹನ ತಯಾರಕ ಕಂಪನಿಗಳು ಫ್ರೀ ಸರ್ವೀಸ್ ಅವಧಿಯನ್ನು ವಿಸ್ತರಿಸುತ್ತಿವೆ. ಈಗ ಮಾರುತಿ ಸುಜುಕಿ ಕಂಪನಿಯು ಸಹ ತನ್ನ ಫ್ರೀ ಸರ್ವೀಸ್ ಅವಧಿಯನ್ನು ವಿಸ್ತರಿಸಿದೆ. ಕಂಪನಿಯು ಮಾರ್ಚ್ 15ರಿಂದ ಮೇ 31ರವರೆಗೆ ಇದ್ದ ಫ್ರೀ ಸರ್ವೀಸ್ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಿದೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಫ್ರೀ ಸರ್ವೀಸ್, ವಾರಂಟಿ ಅವಧಿಯನ್ನು ವಿಸ್ತರಿಸಿದ ಮಾರುತಿ ಸುಜುಕಿ

ಇದರಿಂದ ಮಾರುತಿ ಸುಜುಕಿ ಗ್ರಾಹಕರಿಗೆ ಅನುಕೂಲವಾಗಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಮಾರುತಿ ಸುಜುಕಿ ಕಂಪನಿಯು ಗ್ರಾಹಕರ ಅನುಕೂಲಕ್ಕಾಗಿ ಫ್ರೀ ಸರ್ವೀಸ್, ವಾರಂಟಿ ಹಾಗೂ ಎಕ್ಸ್'ಟೆಂಟೆಡ್ ವಾರಂಟಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದೆ.

MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್‌ಟಿಒ ಫಾರಂಗಳಿವು!

ಲಾಕ್‌ಡೌನ್ ಹಿನ್ನೆಲೆಯಲ್ಲಿ ಫ್ರೀ ಸರ್ವೀಸ್, ವಾರಂಟಿ ಅವಧಿಯನ್ನು ವಿಸ್ತರಿಸಿದ ಮಾರುತಿ ಸುಜುಕಿ

ಈ ವಿಸ್ತರಣೆಯು ಮಾರ್ಚ್ 15ರಿಂದ ಮೇ 31ರವರೆಗೆ ಕೊನೆಗೊಳ್ಳುವ ಫ್ರೀ ಸರ್ವೀಸ್ ಹಾಗೂ ವಾರಂಟಿಗಳಿಗೆ ಅನ್ವಯವಾಗಲಿದೆ. ಈ ಬಗ್ಗೆ ಮಾರುತಿ ಸುಜುಕಿ ಇಂಡಿಯಾದ ಹಿರಿಯ ಕಾರ್ಯನಿರ್ವಾಹಕ ನಿರ್ದೇಶಕ ಪಾರ್ಥೋ ಬ್ಯಾನರ್ಜಿ ಮಾಹಿತಿ ನೀಡಿದ್ದಾರೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಫ್ರೀ ಸರ್ವೀಸ್, ವಾರಂಟಿ ಅವಧಿಯನ್ನು ವಿಸ್ತರಿಸಿದ ಮಾರುತಿ ಸುಜುಕಿ

ಗ್ರಾಹಕರ ಅನುಕೂಲಕ್ಕಾಗಿ ಫ್ರೀ ಸರ್ವೀಸ್, ವಾರಂಟಿ ಹಾಗೂ ಎಕ್ಸ್'ಟೆಂಟೆಡ್ ವಾರಂಟಿಯನ್ನು ಜೂನ್ 30ರವರೆಗೆ ವಿಸ್ತರಿಸಲು ನಾವು ನಿರ್ಧರಿಸಿದ್ದೇವೆ. ಈಗ ಹಲವು ರಾಜ್ಯಗಳಲ್ಲಿ ಲಾಕ್‌ಡೌನ್ ಜಾರಿಗೊಳಿಸಿರುವುದರಿಂದ ಜನರು ಮನೆಯಿಂದ ಹೊರ ಬರಲು ಸಾಧ್ಯವಾಗುತ್ತಿಲ್ಲ.

MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಲಾಕ್‌ಡೌನ್ ಹಿನ್ನೆಲೆಯಲ್ಲಿ ಫ್ರೀ ಸರ್ವೀಸ್, ವಾರಂಟಿ ಅವಧಿಯನ್ನು ವಿಸ್ತರಿಸಿದ ಮಾರುತಿ ಸುಜುಕಿ

ಈ ವಿಸ್ತರಣೆಯು ನಮ್ಮ ಗ್ರಾಹಕರಿಗೆ ಪರಿಹಾರ ನೀಡಲಿದೆ. ಲಾಕ್‌ಡೌನ್'ನಿಂದ ವಿನಾಯಿತಿ ಪಡೆದ ನಂತರ ಅವರು ಈ ಸೇವೆಗಳನ್ನು ಪಡೆಯಬಹುದು ಎಂದು ಹೇಳಿದ್ದಾರೆ. ಮಾರುತಿ ಸುಜುಕಿ ಕಂಪನಿಯ ಈ ಕ್ರಮದಿಂದಾಗಿ ದೇಶಾದ್ಯಂತವಿರುವ ಸಹಸ್ರಾರು ಗ್ರಾಹಕರಿಗೆ ಅನುಕೂಲವಾಗಲಿದೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಫ್ರೀ ಸರ್ವೀಸ್, ವಾರಂಟಿ ಅವಧಿಯನ್ನು ವಿಸ್ತರಿಸಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯು ಇತ್ತೀಚೆಗೆ ಮೇ 16ರವರೆಗೆ ತನ್ನ ಉತ್ಪಾದನಾ ಘಟಕಗಳನ್ನು ಮುಚ್ಚುವುದಾಗಿ ಘೋಷಿಸಿತ್ತು. ಹರಿಯಾಣದಲ್ಲಿರುವ ಕಂಪನಿಯ ಎರಡು ಉತ್ಪಾದನಾ ಘಟಕಗಳನ್ನು ಮುಚ್ಚಲಾಗುವುದು ಎಂದು ಕಂಪನಿ ತಿಳಿಸಿತ್ತು.

MOST READ:10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಲಾಕ್‌ಡೌನ್ ಹಿನ್ನೆಲೆಯಲ್ಲಿ ಫ್ರೀ ಸರ್ವೀಸ್, ವಾರಂಟಿ ಅವಧಿಯನ್ನು ವಿಸ್ತರಿಸಿದ ಮಾರುತಿ ಸುಜುಕಿ

ಹರಿಯಾಣದಲ್ಲಿರುವ ಮಾರುತಿ ಸುಜುಕಿ ಉತ್ಪಾದನಾ ಘಟಕದಲ್ಲಿ ಕಳೆದ ವಾರ ಹೊಸ ವಾಹನ ಉತ್ಪಾದನೆಯನ್ನು ಸ್ಥಗಿತಗೊಳಿಸಿ ಮೆಡಿಕಲ್ ಆಕ್ಸಿಜನ್ ಉತ್ಪಾದನೆಗೆ ಅವಕಾಶ ನೀಡಲಾಗಿತ್ತು.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಫ್ರೀ ಸರ್ವೀಸ್, ವಾರಂಟಿ ಅವಧಿಯನ್ನು ವಿಸ್ತರಿಸಿದ ಮಾರುತಿ ಸುಜುಕಿ

ಒಂದು ವಾರದ ಬಳಿಕೆ ಹೊಸ ಸುರಕ್ಷತಾ ಮಾರ್ಗಸೂಚಿಗಳನ್ವಯ ಕಾರು ಉತ್ಪಾದನೆ ಆರಂಭಿಸುವ ಯೋಜನೆಯಲ್ಲಿದ್ದ ಕಂಪನಿಯು ಈಗ ಉತ್ಪಾದನಾ ಪ್ರಕ್ರಿಯೆ ಆರಂಭಿಸುವ ಯೋಜನೆಯಿಂದ ಹಿಂದೆ ಸರಿದಿದ್ದು, ಮೂರು ಘಟಕದಲ್ಲೂ ಮೆಡಿಕಲ್ ಆಕ್ಸಿಜನ್ ಉತ್ಪಾದನೆಗೆ ಅವಕಾಶ ನೀಡಿದೆ.

MOST READ:ವರ್ಷಗಳ ಕಾಲ ಉಪ್ಪು ನೀರಿನಲ್ಲಿದ್ದರೂ ಹಡಗುಗಳ ಆಂಕರ್‌ಗಳಿಗೆ ತುಕ್ಕು ಹಿಡಿಯದಿರಲು ಕಾರಣಗಳಿವು

ಲಾಕ್‌ಡೌನ್ ಹಿನ್ನೆಲೆಯಲ್ಲಿ ಫ್ರೀ ಸರ್ವೀಸ್, ವಾರಂಟಿ ಅವಧಿಯನ್ನು ವಿಸ್ತರಿಸಿದ ಮಾರುತಿ ಸುಜುಕಿ

ಮುಂದಿನ ಒಂದು ವಾರ ದೇಶಾದ್ಯಂತವಿರುವ ಕಂಪನಿಯ ಪ್ರಮುಖ ಮೂರು ಉತ್ಪಾದನಾ ಘಟಕಗಳಲ್ಲೂ ಆಕ್ಸಿಜನ್ ಉತ್ಪಾದಿಸಲು ನಿರ್ಧರಿಸಿರುವ ಮಾರುತಿ ಸುಜುಕಿ ಕಂಪನಿಯು ಮೆಡಿಕಲ್ ಆಕ್ಸಿಜನ್ ಉತ್ಪಾದನೆಗಾಗಿ ಪ್ರತ್ಯೇಕ ಸ್ಥಳಾವಕಾಶ ಕಲ್ಪಿಸಿದೆ.

Most Read Articles

Kannada
English summary
Maruti Suzuki extends free service and warranty period till June 30. Read in Kannada.
Story first published: Wednesday, May 12, 2021, 19:02 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X