ಸಿಎನ್‌ಜಿ ಕಾರು ಮಾದರಿಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ಮೈಲಿಗಲ್ಲು

ಮಾರುತಿ ಸುಜುಕಿ(Maruti Suzuki) ಕಂಪನಿಯು ಸದ್ಯ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, ಹೊಸ ಎಮಿಷನ್ ಜಾರಿ ನಂತರ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿ ಪೆಟ್ರೋಲ್ ಮತ್ತು ಸಿಎನ್‌ಜಿ ಆವೃತ್ತಿಗಳನ್ನು ಮಾತ್ರವೇ ಮಾರಾಟ ಮಾಡುತ್ತಿದೆ.

ಸಿಎನ್‌ಜಿ ಕಾರು ಮಾದರಿಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ಮೈಲಿಗಲ್ಲು

ಜನಪ್ರಿಯ ಕಾರು ಮಾದರಿಗಳಾದ ಆಲ್ಟೊ, ವ್ಯಾಗನ್‌ಆರ್, ಸೆಲೆರಿಯೊ, ಎಸ್ ಪ್ರೆಸ್ಸೊ, ಇಕೋ ಮತ್ತು ಎರ್ಟಿಗಾ ಮಾದರಿಯಲ್ಲಿ ಸಿಎನ್‌ಜಿ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಮಾರುತಿ ಸುಜುಕಿ ಕಂಪನಿಯು ಮೊದಲ ಬಾರಿಗೆ ಸಿಎನ್‌ಸಿ ಕಾರುಗಳ ಮಾರಾಟದಲ್ಲಿ ದೊಡ್ಡ ಮಟ್ಟದ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, 2020-21ರ ಅವಧಿಯ ಒಟ್ಟು ಕಾರು ಮಾರಾಟ ಪ್ರಮಾಣದಲ್ಲಿ ಸಿಎನ್‌ಜಿ ಕಾರುಗಳನ್ನು ಮಾರಾಟವು ಶೇ.30ರಷ್ಟು ಮುನ್ನಡೆ ಸಾಧಿಸಿದೆ.

ಸಿಎನ್‌ಜಿ ಕಾರು ಮಾದರಿಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ಮೈಲಿಗಲ್ಲು

2021ರ ಅವಧಿಯಲ್ಲಿ ಮಾರಾಟವಾದ ಮಾರುತಿ ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ವ್ಯಾಗನ್ಆರ್ ಸಿಎನ್‌ಜಿ ಮಾದರಿಯು ಅಗ್ರಸ್ಥಾನದಲ್ಲಿದ್ದು, ವ್ಯಾಗನ್ಆರ್ ನಂತರ ಸೆಲೆರಿಯೊ, ಆಲ್ಟೊ, ಎಸ್‌ಪ್ರೆಸ್ಸೊ, ಇಕೋ, ಎರ್ಟಿಗಾ ಕಾರುಗಳ ಉತ್ತಮ ಬೇಡಿಕೆ ಪಡೆದುಕೊಂಡಿವೆ.

ಸಿಎನ್‌ಜಿ ಕಾರು ಮಾದರಿಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ಮೈಲಿಗಲ್ಲು

ಸದ್ಯ ಮಾರುತಿ ಸುಜುಕಿ ಕಂಪನಿಯು 2.80 ಲಕ್ಷ ಕಾರುಗಳಿಗೆ ಬುಕ್ಕಿಂಗ್ ಸ್ವಿಕರಿಸಿದ್ದು, ಇದರಲ್ಲಿ 1.20 ಲಕ್ಷ ಗ್ರಾಹಕರು ಸಿಎನ್‌ಜಿ ಮಾದರಿಗಳ ಖರೀದಿಗೆ ಬುಕ್ಕಿಂಗ್ ಸಲ್ಲಿಸಿದ್ದಾರೆ. ಆದರೆ ಸೆಮಿಕಂಡಕ್ಟರ್ ಕೊರತೆಯ ನಡುವೆಯೂ ಬೇಡಿಕೆ ಪೂರೈಕೆಯನ್ನು ಸಮರ್ಪಕವಾಗಿ ಪೂರೈಸುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಕಾರು ಮಾದರಿಗಳಲ್ಲಿ ಸಿಎನ್‌ಜಿ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಸಿಎನ್‌ಜಿ ಕಾರು ಮಾದರಿಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ಮೈಲಿಗಲ್ಲು

ಮಾಲಿನ್ಯ ತಗ್ಗಿಸುವ ಉದ್ದೇಶದಿಂದಾಗಿ ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮಾರಾಟವನ್ನು ತಗ್ಗಿಸಲಾಗುತ್ತಿದ್ದು, ಪರಿಸರಕ್ಕೆ ಪೂರಕರವಾದ ಸಿಎನ್‌ಜಿ, ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಹೆಚ್ಚು ಅಭಿವೃದ್ದಿಗೊಳಿಸಲಾಗುತ್ತಿದೆ.

ಸಿಎನ್‌ಜಿ ಕಾರು ಮಾದರಿಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ಮೈಲಿಗಲ್ಲು

ಈ ನಿಟ್ಟಿನಲ್ಲಿ ಹಂತ-ಹಂತವಾಗಿ ಎಲ್ಲಾ ಕಾರು ಮಾದರಿಗಳಲ್ಲೂ ಅಧಿಕ ಮೈಲೇಜ್ ಪ್ರೇರಿತ ಸಿಎನ್‌ಜಿ ಆಯ್ಕೆಯನ್ನು ನೀಡುತ್ತಿರುವ ಮಾರುತಿ ಸುಜುಕಿಯು ಸದ್ಯಕ್ಕೆ ಪೆಟ್ರೋಲ್ ಮತ್ತು ಸಿಎನ್‌‌ಜಿ ಕಾರುಗಳನ್ನು ಮಾತ್ರ ಮಾರಾಟ ಮಾಡುತ್ತಿದೆ.

ಸಿಎನ್‌ಜಿ ಕಾರು ಮಾದರಿಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ಮೈಲಿಗಲ್ಲು

2030ರ ವೇಳೆಗೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಹಲವಾರು ಕಠಿಣ ಕ್ರಮಗಳನ್ನು ಪ್ರಕಟಿಸುತ್ತಿದ್ದು, ಪರಿಸರ ಸ್ನೇಹಿ ಹೈಬ್ರಿಡ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಬಳಕೆ ಮಾಡುವಂತೆ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ.

ಸಿಎನ್‌ಜಿ ಕಾರು ಮಾದರಿಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ಮೈಲಿಗಲ್ಲು

ದುಬಾರಿ ಇಂಧನ ದರ ಮತ್ತು ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳಿಗೆ ಜಾರಿಗೆ ತಂದಿದ್ದು, ವಿವಿಧ ರಾಜ್ಯ ಸರ್ಕಾರಗಳು ಸಿಎನ್‌ಜಿ ಹೆಚ್ಚಿನ ಬಳಕೆಯೊಂದಿಗೆ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಹೆಚ್ಚಿಸಲು ಹೊಸ ಇವಿ ವಾಹನ ನೀತಿಯನ್ನು ಅಳವಡಿಸಿಕೊಂಡಿವೆ.

ಸಿಎನ್‌ಜಿ ಕಾರು ಮಾದರಿಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ಮೈಲಿಗಲ್ಲು

ಹೊಸ ಇವಿ ವಾಹನ ನೀತಿ ಮೂಲಕ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಒತ್ತು ನೀಡಲು ಮತ್ತಷ್ಟು ಹೊಸ ಕ್ರಮ ಪ್ರಕಟಿಸಲಾಗುತ್ತಿದೆ.

ಸಿಎನ್‌ಜಿ ಕಾರು ಮಾದರಿಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ಮೈಲಿಗಲ್ಲು

ಜೊತೆಗೆ ಸಿಎನ್‌ಜಿ ವಾಹನ ಮಾರಾಟವು ಕೂಡಾ ಪ್ರಸ್ತುತ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವುದು ಉತ್ತಮ ಬೆಳವಣಿಯಾಗಿದ್ದು, ಭವಿಷ್ಯದ ವಾಹನ ಮಾರಾಟದಲ್ಲಿ ಮಾರುತಿ ಸುಜುಕಿಯು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಸಿಎನ್‌ಜಿ ಕಾರು ಮಾದರಿಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ಮೈಲಿಗಲ್ಲು

ಮಾರುತಿ ಸುಜುಕಿಯು ಹೊಸ ಸಿಎನ್‌ಜಿ ಕಾರುಗಳನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆಲ್ಟೊ ಮಾದರಿಯನ್ನು ಆರಂಭಿಕವಾಗಿ ರೂ.4.43 ಲಕ್ಷಕ್ಕೆ, ಸೆಲೆರಿಯೊ ಮಾದರಿಯನ್ನು ರೂ.5.72 ಲಕ್ಷಕ್ಕೆ, ವ್ಯಾಗನ್‌ಆರ್ ಮಾದರಿಯನ್ನು ರೂ.5.45 ಲಕ್ಷಕ್ಕೆ, ಇಕೋ ವಾಹನವನ್ನು ರೂ.5.18 ಲಕ್ಷಕ್ಕೆ, ಎಸ್‌ಪ್ರೆಸ್ಸೊ ಮಾದರಿಯನ್ನು ರೂ.4.89 ಲಕ್ಷಕ್ಕೆ ಮತ್ತು ಎರ್ಟಿಗಾ ಮಾದರಿಯನ್ನು 9.14 ಲಕ್ಷಕ್ಕೆ ಮಾರಾಟ ಮಾಡುತ್ತಿದೆ.

ಸಿಎನ್‌ಜಿ ಕಾರು ಮಾದರಿಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ಮೈಲಿಗಲ್ಲು

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಹಲವಾರು ಕಾರು ಮಾದರಿಗಳ ಮಾರಾಟವನ್ನು ಹೊಂದಿರುವ ಮಾರುತಿ ಸುಜುಕಿಯು ಟಾಪ್ 10 ಕಾರುಗಳ ಮಾರಾಟ ಪಟ್ಟಿಯಲ್ಲಿ ಒಟ್ಟು 7 ಕಾರು ಮಾದರಿಗಳು ಮುಂಚೂಣಿಯಲ್ಲಿದ್ದು, ಮುಂದಿನ ಎರಡು ವರ್ಷಗಳ ಅವಧಿಗಾಗಿ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗಾಗಿ ಸಿದ್ದತೆ ನಡೆಸುತ್ತಿದೆ.

ಸಿಎನ್‌ಜಿ ಕಾರು ಮಾದರಿಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ಮೈಲಿಗಲ್ಲು

ಮಾಹಿತಿಗಳ ಪ್ರಕಾರ ಮಾರುತಿ ಕಂಪನಿಯು ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಒಟ್ಟು ಆರು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಎಸ್‌ಯುವಿ ಕಾರುಗಳ ಪಟ್ಟಿಯಲ್ಲಿ ಮೆಡ್ ಇನ್ ಇಂಡಿಯಾ ಜಿಮ್ನಿ ಮತ್ತು ವಿಟಾರಾ ಫುಲ್ ಸೈಜ್ ಎಸ್‌ಯುವಿ ಸೇರಿದಂತೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಿಟಾರಾ ಬ್ರೆಝಾ, ಬಲೆನೊ, ಆಲ್ಟೊ ಮತ್ತು ಸ್ವಿಫ್ಟ್ ಕಾರುಗಳ ಹೊಸ ತಲೆಮಾರಿನ ಆವೃತ್ತಿಗಳನ್ನು ಬಿಡುಗಡೆ ಮಾಡಲಿದೆ.

ಸಿಎನ್‌ಜಿ ಕಾರು ಮಾದರಿಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ಮೈಲಿಗಲ್ಲು

ಪ್ರತಿ ಆರು ತಿಂಗಳಿಗೆ ಒಂದರಂತೆ ಹೊಸ ಕಾರುಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿರುವ ಮಾರುತಿ ಸುಜುಕಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಕಿಯಾ ಸೆಲ್ಟೊಸ್ ಮತ್ತು ಹ್ಯುಂಡೈ ಕ್ರೆಟಾ ಕಾರಿಗೆ ಪೈಪೋಟಿಯಾಗಿ ಹೊಸ ವಿಟಾರಾ ಬ್ರೆಝಾ ಕಾರು ಮಾದರಿಯನ್ನು ಭಾರೀ ಬದಲಾವಣೆಗಳೊಂದಿಗೆ ಅಭಿವೃದ್ದಿಗೊಳಿಸುತ್ತಿದೆ.

ಸಿಎನ್‌ಜಿ ಕಾರು ಮಾದರಿಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ಮೈಲಿಗಲ್ಲು

ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿರುವ ಹೊಸ ವಿಟಾರಾ ಬ್ರೆಝಾ ಮಾದರಿಯು 2022ರ ಮಧ್ಯಂತರದಲ್ಲಿ ಬಿಡುಗಡೆಯಾಗಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಎಂಜಿನ್ ನವೀಕರಣದೊಂದಿಗೆ ಹೊಸ ಎಂಜಿನ್ ಆಯ್ಕೆಯನ್ನು ಸಹ ಪಡೆದುಕೊಳ್ಳುವ ಸಾಧ್ಯತೆಗಳಿವೆ.

Article Published On: Tuesday, December 28, 2021, 14:30 [IST]
English summary
Maruti suzuki getting huge demand for cng models details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+