ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡ ಮಾರುತಿ ವ್ಯಾಗನ್ಆರ್ ಸಿಎನ್‌ಜಿ ಕಾರು

ಮಾರುತಿ ಸುಜುಕಿ ಕಾರುಗಳ ಸರಣಿಯಲ್ಲಿ ವ್ಯಾಗನ್ಆರ್ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ. ಅಲ್ಲದೇ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಇದು ಕೂಡ ಒಂದಾಗಿದೆ. ಈ ರೀತಿ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದ್ದ ವ್ಯಾಗನ್ಆರ್ ಅನ್ನು ಮಾರುತಿ ಸುಜುಕಿ ಸಿಎನ್‌ಜಿ ಆವೃತ್ತಿಯಲ್ಲಿಯು ಬಿಡುಗಡೆಗೊಳಿಸಿದ್ದರು.

ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡ ಮಾರುತಿ ವ್ಯಾಗನ್ಆರ್ ಸಿಎನ್‌ಜಿ ಕಾರು

ಮಾರುತಿ ಸುಜುಕಿ ಕಂಪನಿಯು ಈ ವ್ಯಾಗನ್ಆರ್ ಸಿಎನ್‌ಜಿ ಕಾರನ್ನು ಕಳೆದ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಬಿಎಸ್ 6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಳಿಸಿತ್ತು. ಈ ಕಾರು 3 ಲಕ್ಷ ಮಾರಾಟ ಮೈಲಿಗಲ್ಲನ್ನು ಸಾಧಿಸಿದೆ. ಆರಂಭದಲ್ಲಿ ಈ ಕಾರನ್ನು ವೈಟ್, ಗ್ರೇ ಮತ್ತು ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಹೊಸ ಮೂರು ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿದೆ. ಇದು ಪೂಲ್ಸೈಡ್ ಬ್ಲೂ, ನಟ್ಮ್ಯಾಗ್ ಬ್ರೌನ್ ಮತ್ತು ಅಟ್ಮನ್ ಆರೆಂಜ್ ಬಣ್ಣಗಳಾಗಿವೆ.

ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡ ಮಾರುತಿ ವ್ಯಾಗನ್ಆರ್ ಸಿಎನ್‌ಜಿ ಕಾರು

ಮಾರುತಿ ಸುಜುಕಿ ವ್ಯಾಗನ್ಆರ್ ಸಿಎನ್‌ಜಿ ಕಾರು ಭಾರತೀಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ. ಇದರಿಂದ ಮತ್ತಷ್ಟು ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ವ್ಯಾಗನ್ಆರ್ ಸಿಎನ್‌ಜಿ ಕಾರಿಗೆ ಹೊಸ ಮೂರು ಬಣ್ಣಗಳ ಆಯ್ಕೆಯನ್ನು ಹೊಸದಾಗಿ ಸೇರಿಸಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡ ಮಾರುತಿ ವ್ಯಾಗನ್ಆರ್ ಸಿಎನ್‌ಜಿ ಕಾರು

ಈ ಮಾರುತಿ ಸುಜುಕಿ ವ್ಯಾಗನ್ಆರ್ ಸಿಎನ್‌ಜಿ ಕಾರು ಎಲ್‌ಎಕ್ಸ್‌ಐ ಮತ್ತು ಎಲ್‌ಎಕ್ಸ್‌ಐ(ಒ) ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಈ ಎರಡು ರೂಪಾಂತರಗಳಲ್ಲಿ 1.0-ಲೀಟರ್ 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡ ಮಾರುತಿ ವ್ಯಾಗನ್ಆರ್ ಸಿಎನ್‌ಜಿ ಕಾರು

ಈ ಎಂಜಿನ್ 58 ಬಿಹೆಚ್‌ಪಿ ಪವರ್ ಮತ್ತು 78 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ ಜೋಡಿಸಲಾಗಿದೆ.

MOST READ: ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಡೀಸೆಲ್ ಕಾರುಗಳಿವು

ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡ ಮಾರುತಿ ವ್ಯಾಗನ್ಆರ್ ಸಿಎನ್‌ಜಿ ಕಾರು

ಮಾರುತಿ ಸುಜುಕಿ ವ್ಯಾಗನ್ಆರ್ ಸಿಎನ್‌ಜಿ ಆವೃತ್ತಿಯಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ, ಇದರಲ್ಲಿ ಸುರಕ್ಷತೆಗಾಗಿ ಡ್ರೈವರ್-ಸೈಡ್ ಏರ್‌ಬ್ಯಾಗ್, ಎಬಿಎಸ್ ವಿಥ್ ಇಬಿಡಿ, ಹೈಸ್ಪೀಡ್ ಅಲರ್ಟ್, ಸೀಟ್‌ಬೆಲ್ಟ್ ರಿಮೈಂಡರ್, ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ಇತರ ಪೀಚರ್ ಗಳನ್ನು ನೀಡಲಾಗಿದೆ.

ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡ ಮಾರುತಿ ವ್ಯಾಗನ್ಆರ್ ಸಿಎನ್‌ಜಿ ಕಾರು

ಇನ್ನು ಎಲ್‌ಎಕ್ಸ್‌ಐ(ಒ) ರೂಪಾಂತರದಲ್ಲಿ ಪ್ರಯಾಣಿಕರ ಬದಿಯ ಏರ್‌ಬ್ಯಾಗ್ ಮತ್ತು ಹೊಸ ಫೀಚರ್ ಗಳನ್ನು ಹೊಂದಿದೆ. ಮಾರುತಿ ಸುಜುಕಿ ವ್ಯಾಗನ್ಆರ್ ಸಿಎನ್‌ಜಿ ಕಾರು 33.54 ಕಿಮೀ ಮೈಲೇಜ್ ಅನ್ನು ನೀಡುತ್ತದೆ.

ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡ ಮಾರುತಿ ವ್ಯಾಗನ್ಆರ್ ಸಿಎನ್‌ಜಿ ಕಾರು

ಇನ್ನು ವ್ಯಾಗನ್ಆರ್ ಸಿಎನ್‌ಜಿ ಕಾರಿನಲ್ಲಿ ಇಂಟೆಲಿಜೆಂಟ್ ಇಂಜೆಕ್ಷನ್ ಸಿಸ್ಟಂನೊಂದಿಗೆ ಡ್ಯುಯಲ್ ಇಸಿಯುಗಳನ್ನು ಒಳಗೊಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಸಿಎನ್‌ಜಿ ಆವೃತ್ತಿಗಳಲ್ಲಿ ವ್ಯಾಗನ್ಆರ್ ಸಿಎನ್‌ಜಿ ಕೂಡ ಒಂದಾಗಿದೆ.

ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡ ಮಾರುತಿ ವ್ಯಾಗನ್ಆರ್ ಸಿಎನ್‌ಜಿ ಕಾರು

ದೇಶ ಅತಿ ದೊಡ್ಡ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ ತನ್ನ ಉತ್ಪಾದನಾ ಘಟಕದಲ್ಲಿ ತಾತ್ಕಾಲಿಕ ಆಕ್ಸಿಜನ್ ಉತ್ಪಾದನಾ ಘಟಕ ತೆರೆಯಲು ಅವಕಾಶ ನೀಡಿದೆ. ಮುಂದಿನ ಕೆಲ ದಿನಗಳ ತನಕ ಕಾರು ಉತ್ಪಾದನೆಯ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಮಾರುತಿ ಸುಜುಕಿ ಕಂಪನಿಯು ಗರಿಷ್ಠ ಪ್ರಮಾಣದ ಮೆಡಿಕಲ್ ಆಕ್ಸಿಜನ್ ಉತ್ಪಾದನಾ ಮಾಡಲು ನಿರ್ಧರಿಸಿದೆ.

Most Read Articles

Kannada
English summary
Maruti WagonR CNG Gets More Colours. Read In Kannada.
Story first published: Thursday, April 29, 2021, 15:29 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X